Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*
  • *ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*
  • *ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*
  • ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ
  • *ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*
  • *ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*
  • *ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*
  • *ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*
  • *7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*
  • *ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಕೊಡಗಾಗಿ ಉಳಿಯಬೇಕಾದರೆ ಎಲ್ಲರೂ ಒಗ್ಗೂಡಿ ಮುನ್ನಡೆಯಬೇಕು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಕೊಡಗಾಗಿ ಉಳಿಯಬೇಕಾದರೆ ಎಲ್ಲರೂ ಒಗ್ಗೂಡಿ ಮುನ್ನಡೆಯಬೇಕು*

ಜನವರಿ 10, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.10 NEWS DESK : ಕೊಡಗಿನಲ್ಲಿರುವ ಗೌಡರು ತಲೆತಲಾಂತರಗಳಿಂದ ಇಲ್ಲೇ ಹುಟ್ಟಿ ಬೆಳೆದವರಾಗಿದ್ದು, ಎಲ್ಲಾ ಜಾತಿ ಜನಾಂಗಗಳೊಂದಿಗೆ ಅನ್ಯೋನ್ಯತೆಯಿಂದ ಬದುಕು ಸಾಗಿಸುತ್ತಿದ್ದಾರೆ. ಆದರೆ ಸಂಘಟನೆಯೊಂದು ಕೊಡಗಿನ ಗೌಡರನ್ನು ಆಂಧ್ರದಿಂದ ಬಂದವರು ಎಂದು ನಿಂದನೆ ಮಾಡುವ ಮೂಲಕ ಸಮಾಜದಲ್ಲಿ ವಿಷಬೀಜ ಬಿತ್ತುವ ಕಾರ್ಯವನ್ನು ಮಾಡುತ್ತಿದೆ ಎಂದು ಚೇರಂಬಾಣೆ ಗೌಡ ಸಮಾಜದ ಅಧ್ಯಕ್ಷ ಕೊಡಪಾಲು ಗಣಪತಿ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಾತಿ ಜಾತಿಗಳ ಮಧ್ಯೆ ವಿಷಬೀಜ ಬಿತ್ತುವ ಕಾರ್ಯ ಮುಂದುವರೆದರೆ ಮುಂದಿನ ದಿನಗಳಲ್ಲಿ ಕೊಡಗು ಕೊಡಗಾಗಿ ಉಳಿಯುವುದಿಲ್ಲ. ತಲೆತಲಾಂತರಗಳಿಂದ ಕೊಡಗಿನಲ್ಲೇ ಹುಟ್ಟಿ ಬೆಳೆದ ಗೌಡರು ಎಲ್ಲರೊಂದಿಗೆ ಸಾಮರಸ್ಯದಿಂದ ಜೀವನ ನಡೆಸುತ್ತಿದ್ದಾರೆ. ಕೊಡವರು ಹಾಗೂ ಗೌಡರು ಒಗ್ಗಟ್ಟಿನಿಂದ ಇದ್ದಾರೆ, ಆದರೆ ಸಂಘನೆಯೊಂದು ಒಡಕು ಮೂಡಿಸುವ ಕಾರ್ಯವನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇತ್ತೀಚೆಗೆ ಚೇರಂಬಾಣೆಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರುಗಳನ್ನು ಒಂದು ಸಮುದಾಯಕ್ಕೆ ಸೀಮಿತ ಮಾಡಿ ಘೋಷಣೆ ಕೂಗಿದ್ದಾರೆ. ಇಡೀ ವಿಶ್ವವೇ ಹೆಮ್ಮೆ ಪಡುವ ಈ ಇಬ್ಬರು ಅಪ್ರತಿಮ ಸೇನಾಧಿಕಾರಿಗಳ ಬಗ್ಗೆ ಗೌಡರಿಗೂ ಅಪಾರ ಅಭಿಮಾನ ಮತ್ತು ಗೌರವವಿದೆ. ಇವರನ್ನು ಒಂದು ಸಮುದಾಯಕ್ಕೆ ಸೀಮಿತ ಮಾಡುವುದು ಸರಿಯಲ್ಲವೆಂದರು. ಕೊಡಗಿನಲ್ಲೇ ಹುಟ್ಟಿ ಬೆಳೆದ ಸರ್ವ ಜನಾಂಗದವರು ಒಗ್ಗಟ್ಟಿನಿಂದ ಜೀವನ ಸಾಗಿಸಿದಾಗ ಮಾತ್ರ ಕೊಡಗು ಕೊಡಗಾಗಿ ಉಳಿಯಲು ಸಾಧ್ಯವೆಂದು ಕೊಡಪಾಲು ಗಣಪತಿ ಅಭಿಪ್ರಾಯಪಟ್ಟರು. ಗೌಡ ಸಮಾಜಗಳ ಒಕ್ಕೂಟದ ನಿರ್ದೇಶಕ ಕೊಡಗನ ತೀರ್ಥ ಪ್ರಸಾದ್ ಮಾತನಾಡಿ ದೇಶದ ಸಂವಿಧಾನದ ಮೇಲೆ ಗೌರವವಿಲ್ಲದ ಸಂಘಟನೆಯೊಂದು ಕನ್ನಡ ರಾಜ್ಯೋತ್ಸವದ ದಿನವನ್ನು ಕರಾಳ ದಿನವನ್ನಾಗಿ ಆಚರಿಸುತ್ತದೆ. ಈ ಸಂಘಟನೆಯ ಒತ್ತಡಕ್ಕೆ ಮಣಿದು ಪೊನ್ನಂಪೇಟೆ ಭಾಗದ ಕೆಲವರು ಅರೆಭಾಷೆ ಗೌಡರನ್ನು ನಿಂದಿಸಿರುವುದು ಖಂಡನೀಯ. ಒಕ್ಕಲಿಗ ಗೌಡ ಜನಾಂಗ ಮತ್ತು ಅರೆಭಾಷೆ ಜನಾಂಗದ ಮಂದಿ ಅತ್ಯಂತ ಅನ್ಯೋನ್ಯತೆಯಿಂದ ಇದ್ದಾರೆ. ಈ ಎರಡು ಜನಾಂಗಗಳ ನಡುವಿನ ಬಾಂಧವ್ಯದ ಮಹತ್ವವನ್ನು ಅರಿಯದವರು ವಿನಾಕಾರಣ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸಮಾಜವನ್ನು ಒಡೆಯುವ ಮತ್ತು ಶಾಂತಿ ಕದಡುವ ಯತ್ನ ಮಾಡಿದರೆ ಗೌಡರ ಸ್ವಾಭಿಮಾನ ಹೆಚ್ಚಾಗುತ್ತದೆಯೇ ಹೊರತು ಕಡಿಮೆಯಾಗುವುದಿಲ್ಲ ಎಂದು ತಿಳಿಸಿದರು. ಜಾತಿ ಜಾತಿಗಳ ನಡುವೆ ವಿಷಬೀಜ ಬಿತ್ತುವವರ ಮಾತಿಗೆ ಮರುಳಾಗದೆ ಕೊಡಗಿನಲ್ಲಿರುವ ಎಲ್ಲಾ ಜನಾಂಗದವರು ಒಗ್ಗಟ್ಟಿನಿಂದ ಇರಬೇಕು ಎಂದು ಮನವಿ ಮಾಡಿದರು.
ಕುಶಾಲನಗರ ಗೌಡ ಯುವಕ ಸಂಘದ ಅಧ್ಯಕ್ಷ ಕೊಡಗನ ಹರ್ಷ ಮಾತನಾಡಿ ಕಟ್ಟೆಮಾಡು ಶ್ರೀ ಮೃತ್ಯುಂಜಯ ದೇವಸ್ಥಾನದ ವಸ್ತ್ರ ಸಂಹಿತೆ ವಿಚಾರ ದೇವಸ್ಥಾನ ಮತ್ತು ಆ ಗ್ರಾಮಕ್ಕೆ ಮಾತ್ರ ಸೀಮಿತವಾಗಿದೆ. ಜಿಲ್ಲಾಧಿಕಾರಿಗಳು ಗೊಂದಲ ನಿವಾರಣೆಗೆ ದೇವಸ್ಥಾನ ಸಮಿತಿಗೆ ಫೇ.10ರವರೆಗೆ ಕಾಲಾವಕಾಶವನ್ನು ನೀಡಿದ್ದಾರೆ. ಆದರೆ ಇದರ ನಡುವೆಯೇ ಮತ್ತೆ ಮತ್ತೆ ಗೌಡ ಜನಾಂಗವನ್ನು ಮತ್ತು ಸಂಪ್ರದಾಯವನ್ನು ನಿಂದಿಸುತ್ತಿರುವುದು ಖಂಡನೀಯ ಎಂದರು. ಜಿಲ್ಲೆಯಲ್ಲಿರುವ ಎಲ್ಲಾ ಕೊಡವರು ಹಾಗೂ ಗೌಡರು ಒಗಟ್ಟಿನಿಂದ ಜೀವನ ಸಾಗಿಸುತ್ತಿದ್ದಾರೆ. ಬೆರಳೆಣಿಕೆಯಷ್ಟು ಕಿಡಿಗೇಡಿಗಳು ಮಾತ್ರ ಒಡಕು ಮೂಡಿಸುತ್ತಿದ್ದು, ಈ ಕಿಡಿಗೇಡಿಗಳ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಯಾವುದೇ ಜಾತಿ ಅಥವಾ ವ್ಯಕ್ತಿಯನ್ನು ಯಾರೇ ನಿಂದಿಸಿದರೂ ನೇರವಾಗಿ ಪೊಲೀಸ್ ಠಾಣೆಗಳಿಗೆ ಅಥವಾ ಆನ್ ಲೈನ್ ಮೂಲಕ ದೂರು ನೀಡುವಂತೆ ಮನವಿ ಮಾಡಿದರು. ಗೌಡ ಮುಖಂಡ ಪಿ.ಎಲ್.ಸುರೇಶ್ ಮಾತನಾಡಿ ಒಕ್ಕಲಿಗರು ಹಾಗೂ ಅರೆಭಾಷೆ ಗೌಡರ ಮಧ್ಯೆ ಒಡಕು ಮೂಡಿಸಿ ಬೇಳೆ ಬೇಯಿಸಿಕೊಳ್ಳುವ ಪ್ರಯತ್ನಗಳು ನಡೆಯುತ್ತಿದ್ದು, ಇದು ಫಲಿಸುವುದಿಲ್ಲ. ಒಕ್ಕಲಿಗರು ಹಾಗೂ ಅರೆಭಾಷೆ ಗೌಡರಿಗೆ ಅವಿನಾಭಾವ ಸಂಬಂಧವಿದೆ. ಈ ಕುರಿತು ಮಾಹಿತಿ ಇಲ್ಲದವರು ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಒಕ್ಕಲಿಗ ಮಠಗಳಲ್ಲಿ ಅರೆಭಾಷೆ ಗೌಡರು ಸ್ಥಾನ ಪಡೆದುಕೊಂಡಿದ್ದಾರೆ, ಒಕ್ಕಲಿಗ ಸಂಘಗಳಲ್ಲಿ ಪ್ರತಿನಿಧಿಗಳಾಗಿದ್ದಾರೆ. ಅರೆಭಾಷೆ ಗೌಡರು ಕೊಡಗಿನಲ್ಲೇ ಹುಟ್ಟಿ ಬೆಳೆದವರಾಗಿದ್ದು, ಹೊರಗಿನವರಲ್ಲ ಎಂದರು. ಸುದ್ದಿಗೋಷ್ಠಿಯಲ್ಲಿ ಗೌಡ ಸಮಾಜಗಳ ಒಕ್ಕೂಟದ ನಿರ್ದೇಶಕ ತಳೂರು ದಿನೇಶ್ ಕರುಂಬಯ್ಯ ಹಾಗೂ ಗಣೇಶ ಪರ್ಮಾಲೆ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*

ಅಕ್ಟೋಬರ್ 2, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.1 NEWS DESK : ಗೋವಾದ ಚೌಗುಲೇ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ಯೂತ್ ಸ್ಪೋರ್ಟ್ಸ್ ಎಜುಕೇಷನ್ ಫೆಡರೇಷನ್ ಇಂಡಿಯಾ ವತಿಯಿಂದ…

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026

*ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*

ಅಕ್ಟೋಬರ್ 1, 2026

*ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*

ಅಕ್ಟೋಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.