Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*
  • *ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*
  • *ಕೊಡಗು: ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*
  • *ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕೋರಿ ಸಂಸದರಿಗೆ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕೋರಿ ಸಂಸದರಿಗೆ ಮನವಿ*

ಜನವರಿ 11, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.11 NEWS DESK : ಕೊಡಗು ಜಿಲ್ಲೆಯನ್ನು ಕಾಡುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಕೇಂದ್ರ ಸರಕಾರದ ಮೂಲಕ ಶಾಶ್ವತ ಪರಿಹಾರ ಕೋರಿ ಮಾನವ ಹಕ್ಕುಗಳ ಅಂತರಾಷ್ಟ್ರೀಯ ಒಕ್ಕೂಟದ ರಾಜ್ಯ ಸಮಿತಿ ಮೈಸೂರು- ಕೊಡಗು ಕ್ಷೇತ್ರದ ಲೋಕಸಭಾ ಸದಸ್ಯ ಯದುವೀರ್ ಒಡೆಯರ್ ಅವರಿಗೆ ಮನವಿ ಸಲ್ಲಿಸಿದೆ. ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾಗೂ ಮಾನವ ಸಂಘರ್ಷದಿಂದ ಅನೇಕ ಜೀವಗಳು ಬಲಿಯಾಗುತ್ತಿದ್ದು, ಕೃಷಿ ಫಸಲು ನಾಶವಾಗುತ್ತಿದೆ. ತಕ್ಷಣ ಕೇಂದ್ರ ಸರಕಾರದ ಮೂಲಕ ಕಾಡಾನೆ ಹಾವಳಿ ತಡೆಗೆ ಶಾಶ್ವತ ಯೋಜನೆ ರೂಪಿಸಬೇಕು. ಕೃಷಿ ಫಸಲು ನಷ್ಟಕ್ಕೆ ಕೇಂದ್ರದಿಂದಲೂ ಪರಿಹಾರ ನೀಡಬೇಕು. ಹುಲಿ, ಚಿರತೆ, ಕಾಡೆಮ್ಮೆ, ಕಾಡುಹಂದಿ, ಮಂಗಗಳು ಸೇರಿದಂತೆ ವನ್ಯಜೀವಿಗಳ ಉಪಟಳ ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಅರಣ್ಯ ಪ್ರದೇಶದಲ್ಲಿ ವನ್ಯಜೀವಿಗಳಿಗೆ ಆಹಾರ ಮತ್ತು ನೀರು ಕೊರತೆಯಾಗದಂತೆ ನೋಡಿಕೊಳ್ಳಲು ಯೋಜನೆ ಜಾರಿಗೆ ತರಬೇಕು. ಕಾವೇರಿಯ ಉಗಮ ಸ್ಥಾನ ತಲಕಾವೇರಿಗೆ ತೆರಳುವ ಭಾಗಮಂಡಲ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಭಕ್ತರ ಪ್ರಯಾಣ ಕಷ್ಟಕರವಾಗಿದೆ. ಇದು ಹೆದ್ದಾರಿಯಾಗಿದ್ದು, ತಕ್ಷಣ ರಸ್ತೆ ವಿಸ್ತರಣೆ ಮತ್ತು ರಸ್ತೆಯ ಅಭಿವೃದ್ಧಿ ಕಾರ್ಯವನ್ನು ಕೈಗೊಳ್ಳಬೇಕು. ಕೊಡಗು ಜಿಲ್ಲೆಯ ಬಹುತೇಕ ಯುವ ಸಮೂಹ ಪ್ರವಾಸೋದ್ಯಮವನ್ನೇ ನಂಬಿ ಜೀವನ ಸಾಗಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಕೈಗಾರಿಕೋದ್ಯಮ ಇಲ್ಲದೆ ಇರುವುದರಿಂದ ಪ್ರವಾಸೋದ್ಯಮದ ಮೂಲಕವೇ ಉದ್ಯೋಗ ಸೃಷ್ಟಿಯಾಗಬೇಕಿದೆ. ಆದ್ದರಿಂದ ಪ್ರವಾಸೋದ್ಯಮದ ಅಭಿವೃದ್ಧಿಗೆ ಕೇಂದ್ರ ಸರಕಾರದಿಂದ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಪ್ರತಿವರ್ಷ ಮಳೆಗಾಲದಲ್ಲಿ ಕೊಡಗು ಜಿಲ್ಲೆಯ ಹಲವು ಗ್ರಾಮಗಳು ಮತ್ತು ಪಟ್ಟಣಗಳು ಪ್ರವಾಹದಿಂದ ಜಲಾವೃತಗೊಂಡು ಕಷ್ಟನಷ್ಟಗಳು ಸಂಭವಿಸುತ್ತದೆ. ಸಾರ್ವಜನಿಕ ಆಸ್ತಿಪಾಸ್ತಿ, ಜೀವಹಾನಿ ಮತ್ತು ಕೃಷಿ ಫಸಲು ನಷ್ಟವಾಗುತ್ತದೆ. ಆದ್ದರಿಂದ ಕೊಡಗು ಜಿಲ್ಲೆಗೆ ಸೀಮಿತವಾಗಿ ಪ್ರಾಕೃತಿಕ ವಿಕೋಪದ ವಿಶೇಷ ಪ್ಯಾಕೇಜ್ ವಾರ್ಷಿಕ ಶಾಶ್ವತ ಅನುದಾನ ಘೋಷಣೆ ಮಾಡಬೇಕು. ಕೊಡಗು ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿಯಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಇನ್ನೂ ಕೂಡ ಸ್ಥಾಪನೆಯಾಗಿಲ್ಲ. ಇದರಿಂದ ಕಸ ಸಂಗ್ರಹ ಮತ್ತು ಶುಚಿತ್ವಕ್ಕೆ ಆದ್ಯತೆ ನೀಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕೇಂದ್ರದ ಅನುದಾನದಲ್ಲಿ ಸುಸಜ್ಜಿತ ಮತ್ತು ವೈಜ್ಞಾನಿಕ ರೂಪದ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಬೀದಿನಾಯಿಗಳ ದಾಳಿ ಮಾರಣಾಂತಿಕವಾಗಿದೆ. ಅಸಂಖ್ಯಾತ ಬೀದಿನಾಯಿಗಳು ಜೀವಭಯ ಹುಟ್ಟಿಸುತ್ತಿವೆ. ಇವುಗಳನ್ನು ನಿಗ್ರಹಿಸಲು ಅಥವಾ ಸ್ಥಳಾಂತರಿಸಲು ಕಾನೂನಿನ ಕೆಲವು ನಿಯಮಗಳು ಮತ್ತು ಪ್ರಾಣಿ ಪ್ರಿಯರ ನಿಲುವುಗಳು ಅಡ್ಡಿಯಾಗುತ್ತಿದೆ. ಆದ್ದರಿಂದ ಕಾನೂನಿಗೆ ತಿದ್ದುಪಡಿ ತಂದು ಇದಕ್ಕೊಂದು ಶಾಶ್ವತ ಪರಿಹಾರ ಸೂಚಿಸುವ ಮೂಲಕ ಮಾನವರ ಮೇಲಾಗುತ್ತಿರುವ ಬೀದಿನಾಯಿಗಳ ದಾಳಿಯನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು. ಅಲ್ಲದೆ ಪ್ರತಿ ಜಿಲ್ಲೆಯಲ್ಲಿ ಬೀದಿ ನಾಯಿಗಳ ಸಂರಕ್ಷಣಾ ಕೇಂದ್ರ ಸ್ಥಾಪಿಸಿ ಬೀದಿನಾಯಿ ಮುಕ್ತ ಸಮಾಜವನ್ನು ನಿರ್ಮಿಸಲು ಕೇಂದ್ರ ಸರಕಾರದ ಮೂಲಕ ಯೋಜನೆ ರೂಪಿಸಬೇಕು. ಬೀಡಾಡಿ ಹಸುಗಳು ಕಟುಕರ ಪಾಲಾಗುತ್ತಿರುವುದರಿಂದ ಅನಾಥ ಹಸುಗಳ ಸಂರಕ್ಷಣೆ ಮತ್ತು ನಿರ್ವಹಣೆಗಾಗಿ ಕೇಂದ್ರ ಸರಕಾರದ ಮೂಲಕ ವಿಶೇಷ ಯೋಜನೆ ಜಾರಿಗೆ ತರಬೇಕು ಮತ್ತು ಗೋಸಂರಕ್ಷಣಾ ಕೇಂದ್ರ ಸ್ಥಾಪಿಸಿ ಅನುದಾನ ಮಂಜೂರು ಮಾಡಬೇಕು ಎಂದು ಮಾನವ ಹಕ್ಕುಗಳ ಅಂತರಾಷ್ಟ್ರೀಯ ಒಕ್ಕೂಟದ ರಾಜ್ಯಾಧ್ಯಕ್ಷ ಹರೀಶ್ ಜಿ. ಆಚಾರ್ಯ ಅವರು ಮನವಿ ಮಾಡಿದ್ದಾರೆ. ಮಡಿಕೇರಿಯಲ್ಲಿರುವ ಸಂಸದರ ಕಚೇರಿಯ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಮೂಲಕ ಸಂಸದ ಯದುವೀರ್ ಅವರಿಗೆ ಹರೀಶ್ ಜಿ.ಆಚಾರ್ಯ ಅವರು ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭ ಜಿಲ್ಲಾ ಉಪಾಧ್ಯಕ್ಷ ರವಿ ಗುರುಸ್ವಾಮಿ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*

ಮೇ 11, 2026

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026

*ಕೊಡಗು: ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮೇ 11 :  ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ 2026 ರ ಕೊಡಗು ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ…

*ಕೊಡಗು: ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.