Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*
  • *ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*
  • *ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*
  • *ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*
  • *ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*
  • *ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*
  • *ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*
  • *ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*
  • *ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬೆಳ್ಳಿ ಪರದೆಯ ಮೇಲೆ ಮೂಡಿ ಬರುತ್ತಿದೆ ಸ್ಕ್ವಾಡ್ರನ್‌ ಲೀಡರ್ ಅಜ್ಜಮಾಡ ದೇವಯ್ಯ ಸಾಹಸಗಾಥೆ : ಜ.24 ರಂದು ಬಾಲಿವುಡ್ ಸಿನಿಮಾ “ಸ್ಕೈ ಫೋರ್ಸ್” ಬಿಡುಗಡೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಭಾರತ

*ಬೆಳ್ಳಿ ಪರದೆಯ ಮೇಲೆ ಮೂಡಿ ಬರುತ್ತಿದೆ ಸ್ಕ್ವಾಡ್ರನ್‌ ಲೀಡರ್ ಅಜ್ಜಮಾಡ ದೇವಯ್ಯ ಸಾಹಸಗಾಥೆ : ಜ.24 ರಂದು ಬಾಲಿವುಡ್ ಸಿನಿಮಾ “ಸ್ಕೈ ಫೋರ್ಸ್” ಬಿಡುಗಡೆ*

ಜನವರಿ 12, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜ.12 : 1965ರಲ್ಲಿ ಭಾರತ-ಪಾಕ್ ನಡುವೆ ನಡೆದ ಯುದ್ಧದಲ್ಲಿ ಶತ್ರುಗಳ ವಿಮಾನವನ್ನು ಹೊಡೆದುರುಳಿಸಿ ದೇಶಕ್ಕಾಗಿ ಬಲಿದಾನಗೈದ ಕೊಡಗಿನ ವೀರ  ಸ್ಕ್ವಾಡ್ರನ್‌  ಲೀಡರ್ ಅಜ್ಜಮಾಡ ದೇವಯ್ಯ ಅವರ ಸಾಹಸಗಾಥೆಯ “ಸ್ಕೈ ಫೋರ್ಸ್” ಬಾಲಿವುಡ್ ಸಿನಿಮಾ ಜ.24 ರಂದು ಬಿಡುಗಡೆಯಾಗುತ್ತಿದೆ. ಬೊಳ್ಳಜಿರ ಬಿ.ಅಯ್ಯಪ್ಪ ನೇತೃತ್ವದ ಕೊಡವ ಮಕ್ಕಡ ಕೂಟ ಹೊರತಂದಿರುವ ಪತ್ರಕರ್ತ ಹಾಗೂ ಸಾಹಿತಿ ಐತಿಚಂಡ ರಮೇಶ್ ಉತ್ತಪ್ಪ ಅವರು ಬರೆದಿರುವ “1965ರ ಯುದ್ಧ ಹಾಗೂ ಮಹಾವೀರ ಚಕ್ರ ಪುರಸ್ಕೃತ  ಸ್ಕ್ವಾಡ್ರನ್‌  ಅಜ್ಜಮಾಡ ಬಿ.ದೇವಯ್ಯ ಅವರ ಜೀವನಾಧರಿತ ಪುಸ್ತಕವನ್ನು ಆಧರಿಸಿ “ಸ್ಕೈ ಫೋರ್ಸ್” ಚಿತ್ರವನ್ನು ತಯಾರಿಸಲಾಗಿದೆ. ಮ್ಯಾಡಾಕ್ ಫಿಲ್ಮ್ಸ್ ಮತ್ತು ಜಿಯೋ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ದಿನೇಶ್ ವಿಜನ್, ಅಮರ್ ಕೌಶಿಕ್ ಹಾಗೂ ಜ್ಯೋತಿ ದೇಶಪಾಂಡೆ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಸಂದೀಪ್ ಕೇವಾಲಾನಿ ಹಾಗೂ ಅಭಿಷೇಕ್ ಅನಿಲ್ ಕಪೂರ್ ಜಂಟಿಯಾಗಿ ಸಿನಿಮಾ ನಿರ್ದೇಶಿಸಿದ್ದಾರೆ. ಅಕ್ಷಯ್ ಕುಮಾರ್ ಹಾಗೂ ವೀರ್ ಪಹಾಡಿಯಾ ಪ್ರಮುಖ ಪಾತ್ರಗಳಲ್ಲಿದ್ದಾರೆ. ಸಾರಾ ಅಲಿ ಖಾನ್, ನಿಮ್ರತ್ ಕೌರ್ ಮತ್ತು ಶರದ್ ಕೇಳ್ಕರ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಚಿತ್ರ ಜ.24ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಚಿತ್ರದ ಟ್ರೈಲರ್ ಬಿಡುಗಡೆಯಾಗಿ ದೇಶಪ್ರೇಮದ ಕಿಚ್ಚನ್ನು ಹಚ್ಚಿದೆ, ಚಿತ್ರಾಭಿಮಾನಿಗಳು “ಸ್ಕೈ ಫೋರ್ಸ್” ಕ್ಕಾಗಿ ಎದುರು ನೋಡುತ್ತಿದ್ದಾರೆ.
1965ರಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧದ ನೈಜ ಘಟನೆಯನ್ನು ಆಧರಿಸಿ ಚಿತ್ರದ ಕಥೆಯನ್ನು ಹೆಣೆಯಲಾಗಿದೆ. ಪಾಕಿಸ್ತಾನದ ಸರ್ಗೋಧಾ ವಾಯುನೆಲೆ ಮೇಲೆ ಭಾರತೀಯ ವಾಯುಸೇನೆ ವೈಮಾನಿಕ ದಾಳಿ ನಡೆಸಿತು. ಇದು ಭಾರತೀಯ ವಾಯುಪಡೆಯ ಮೊದಲ ಮತ್ತು ಅತ್ಯಂತ ಮಾರಣಾಂತಿಕ ದಾಳಿ ಎಂದು ಪರಿಗಣಿಸಲಾಗಿದೆ. ಚಿತ್ರದಲ್ಲಿ ದೇಶಪ್ರೇಮದ ಜೊತೆಗೆ ಸಾಹಸ ದೃಶ್ಯಗಳಿಗೆ ಆದ್ಯತೆ ನೀಡಲಾಗಿದ್ದು, ಭಾರತೀಯ ವಾಯುಪಡೆಯ ಧೈರ್ಯದ ಪ್ರತೀಕ ಎಂಬಂತೆ ಚಿತ್ರಿಸಲಾಗಿದೆ.‌ 1965ರ ಭಾರತ-ಪಾಕ್ ಯುದ್ಧದಲ್ಲಿ  ಸ್ಕ್ವಾಡ್ರನ್‌  ಲೀಡರ್ ಅಜ್ಜಮಾಡ ದೇವಯ್ಯ ಅವರು ಬದುಕಿ ಹಿಂದಕ್ಕೆ ಬರುವ ಅವಕಾಶಗಳಿತ್ತು. ಆದರೆ, ಈ ಅವಕಾಶವನ್ನು ಕೈಬಿಟ್ಟು ಶತ್ರು ರಾಷ್ಟ್ರ ಪಾಕ್‌ನ ಅತ್ಯಾಧುನಿಕ ಯುದ್ಧವಿಮಾನವನ್ನು ಕೆಚ್ಚೆದೆಯ ಸಾಹಸದ ಮೂಲಕ ಹೊಡೆದುರುಳಿಸಿ ಹುತಾತ್ಮರಾದರು. ಅವರ ಈ ಮಹಾನ್ ಬಲಿದಾನ ಹಲವಾರು ವರ್ಷಗಳ ಬಳಿಕ ಪಾಕ್ ಸೇನೆಯ ಅಧಿಕಾರಿಯೊಬ್ಬರನ್ನು ಬಿಬಿಸಿಯವರು ಸಂದರ್ಶನ ಮಾಡಿದ ಸಂದರ್ಭ ಬೆಳಕಿಗೆ ಬಂದಿತು. ಶೌರ್ಯ ಮೆರೆದು ಹುತಾತ್ಮರಾದ  ಸ್ಕ್ವಾಡ್ರನ್‌   ಲೀಡರ್ ಅಜ್ಜಮಾಡ ದೇವಯ್ಯ ಅವರಿಗೆ ಮರಣೋತ್ತರವಾಗಿ ಮಹಾವೀರ ಚಕ್ರ ಪುರಸ್ಕಾರ ನೀಡಲಾಯಿತು. ಇವರ ಸಾಹಸಗಾಥೆಯನ್ನು ಸಾಹಿತಿ ಐತಿಚಂಡ ರಮೇಶ್ ಉತ್ತಪ್ಪ ಅವರು ತಮ್ಮ ಪುಸ್ತಕದಲ್ಲಿ ಮನೋಜ್ಞವಾಗಿ ಚಿತ್ರಿಸಿದ್ದಾರೆ. ವೀರ ಸೇನಾನಿಯ ಪುಸ್ತಕ ರಚನೆಗೆ ಪ್ರೇರಣೆ ನೀಡಿದ ಮತ್ತು ಪುಸ್ತಕವನ್ನು ಹೊರತಂದ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಸತತ ಪರಿಶ್ರಮದ ಮೂಲಕ ಮಡಿಕೇರಿಯ ಹೃದಯ ಭಾಗದಲ್ಲಿ ಸ್ಕಾ÷್ವಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಪ್ರತಿಮೆಯನ್ನು ಸ್ಥಾಪಿಸಿದ್ದಾರೆ.  ಅಲ್ಲದೆ ಪ್ರತಿವರ್ಷ ಗೌರವ ಅರ್ಪಿಸುವ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದಾರೆ.
::: ಹೆಮ್ಮೆ ತಂದಿದೆ :::
1965ರ ಭಾರತ-ಪಾಕ್ ಯುದ್ಧದಲ್ಲಿ ಶೌರ್ಯ ಮೆರೆದ  ಸ್ಕ್ವಾಡ್ರನ್‌  ಲೀಡರ್ ಅಜ್ಜಮಾಡ ದೇವಯ್ಯ ಅವರ ಸಾಹಸಗಾಥೆ ಚಲನಚಿತ್ರವಾಗಿ “ಸ್ಕೈ ಫೋರ್ಸ್” ಹೆಸರಿನಲ್ಲಿ ತೆರೆಗೆ ಬರುತ್ತಿರುವುದು ಹೆಮ್ಮೆ ಎನಿಸಿದೆ. ಸೈನಿಕರ ನಾಡು ಕೊಡಗಿನ ಸೇನಾಧಿಕಾರಿಯೊಬ್ಬರ ವೀರತ್ವದ ಕಥೆ ಬಾಲಿವುಡ್ ಚಿತ್ರವಾಗಿ ತೆರೆ ಕಾಣುತ್ತಿರುವುದು ಇದೇ ಮೊದಲಾಗಿದೆ. ಸಾಹಿತಿ ರಮೇಶ್ ಉತ್ತಪ್ಪ ಅವರು ಬರೆದ ದೇವಯ್ಯ ಅವರ ಸಾಹಸದ ಪುಸ್ತಕವನ್ನು ಕೊಡವ ಮಕ್ಕಡ ಕೂಟ ಬಿಡುಗಡೆ ಮಾಡಿತ್ತು. ಇದೇ ಪುಸ್ತಕವನ್ನು ಆಧರಿಸಿ ಹಿಂದಿ ಚಿತ್ರ ತಯಾರಿಸಲಾಗಿದೆ. ಚಿತ್ರತಂಡ ಕಳೆದ 5 ವರ್ಷಗಳಿಂದ ನಮ್ಮೊಂದಿಗೆ ಹಾಗೂ ದೇವಯ್ಯ ಅವರ ಕುಟುಂಬದ ಸದಸ್ಯರೊಂದಿಗೆ ಸಂಪರ್ಕದಲ್ಲಿದ್ದು, ಚಿತ್ರ ತಯಾರಿಕೆ ಮಾಡಿದ್ದಾರೆ. ದೇಶದ ವೀರ ಸೇನಾನಿಗೆ ಚಲನಚಿತ್ರದ ಮೂಲಕ ಗೌರವ ನೀಡುತ್ತಿರುವುದು ಕೊಡಗಿನ ಮಟ್ಟಿಗೆ ಹೆಗ್ಗಳಿಕೆಯಾಗಿದೆ. (ಬೊಳ್ಳಜಿರ ಬಿ.ಅಯ್ಯಪ್ಪ, ಅಧ್ಯಕ್ಷರು, ಕೊಡವ ಮಕ್ಕಡ ಕೂಟ)
::: ಅಪ್ರತಿಮ ಸೇನಾನಿಗೆ ಸಂದ ಗೌರವ :::
ತನ್ನ ಪ್ರಾಣವನ್ನೂ ಲೆಕ್ಕಿಸದೆ ತನ್ನೊಂದಿಗಿದ್ದ ಭಾರತೀಯ ಸೈನಿಕರ ವಿಮಾನಗಳನ್ನು ರಕ್ಷಣೆ ಮಾಡುತ್ತಲೇ ದೇಶಪ್ರೇಮವನ್ನು ಮೆರೆದು ಪ್ರಾಣತ್ಯಾಗ ಮಾಡಿದ  ಸ್ಕ್ವಾಡ್ರನ್‌  ಲೀಡರ್ ಅಜ್ಜಮಾಡ ದೇವಯ್ಯ ಅವರ ಸಾಹಸಗಾಥೆ ಚಲನಚಿತ್ರವಾಗಿ ತೆರೆ ಕಾಣುತ್ತಿರುವುದು ಅಪ್ರತಿಮ ಸೇನಾನಿಗೆ ಸಂದ ಗೌರವವಾಗಿದೆ. ದೇವಯ್ಯ ಅವರ ಕುರಿತು ಪುಸ್ತಕ ಬರೆದ ನನಗೆ ಇದು ಹೆಮ್ಮೆಯ ವಿಚಾರವಾಗಿದೆ, ಈ ಪುಸ್ತಕವನ್ನು ಆಧರಿಸಿ ಚಿತ್ರವಾಗಿರುವುದು ಕೊಡಗಿಗೂ ಹೆಮ್ಮೆ ಎನಿಸಿದೆ. ದೇಶಭಕ್ತ, ಅಪ್ರತಿಮ ವೀರ ದೇವಯ್ಯ ಅವರು ಕುರಿತು ಬಹಳ ಹಿಂದೆಯೇ ಸಿನಿಮಾ ಮೂಡಿ ಬರಬೇಕಾಗಿತ್ತು. ತಡವಾಗಿಯಾದರೂ “ಸ್ಕೈ ಫೋರ್ಸ್” ಹೆಸರಿನಲ್ಲಿ ಚಿತ್ರ ತೆರೆ ಕಾಣುತ್ತಿರುವುದು ಖುಷಿ ತಂದಿದೆ. ದೇವಯ್ಯ ಅವರ ಕುರಿತು ನಾನು ಬರೆದ ಪುಸ್ತಕವನ್ನು ಬಿಡುಗಡೆ ಮಾಡಿದ ಕೊಡವ ಮಕ್ಕಡ ಕೂಟಕ್ಕೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ಪುಸ್ತಕ ರಚನೆಯ ಸಂದರ್ಭ ನಾನು ಭಾರತ- ಪಾಕ್ ಗಡಿಗೆ ಭೇಟಿ ನೀಡಿ 1965ರಲ್ಲಿ ನಡೆದ ಯುದ್ಧದ ಕುರಿತು ಮಾಹಿತಿ ಸಂಗ್ರಹಿಸಿದ್ದೇನೆ. ಅಧಿಕಾರಿಗಳು ಹಾಗೂ ತಜ್ಞರಿಂದ ಮಾಹಿತಿ ಪಡೆದು ಅಧ್ಯಯನದ ರೂಪದಲ್ಲಿ ಶ್ರಮ ವಹಿಸಿ “1965ರ ಯುದ್ಧ ಹಾಗೂ ಕೊಡಗಿನ ಮಹಾವೀರ” ಪುಸ್ತಕವನ್ನು ರಚನೆ ಮಾಡಿದ್ದೇನೆ. ಈ ಪುಸ್ತಕ ರಾಜ್ಯ ಮಟ್ಟದಲ್ಲಿ ಪ್ರಚಾರ ಪಡೆದಿದ್ದರೆ ಪ್ರಶಸ್ತಿ ಲಭಿಸುತ್ತಿತ್ತು. ಆದರೆ ಇದೀಗ ಬಾಲಿವುಡ್ ಸಿನಿಮಾವಾಗಿ ತೆರೆಗೆ ಬರುತ್ತಿರುವುದೇ ದೊಡ್ಡ ಪ್ರಶಸ್ತಿಯಾಗಿದ್ದು, ಹೆಚ್ಚು ಸಂತೋಷವಾಗಿದೆ. (ಐತಿಚಂಡ ರಮೇಶ್ ಉತ್ತಪ್ಪ, ಸಾಹಿತಿ, “1965ರ ಯುದ್ಧ ಹಾಗೂ ಕೊಡಗಿನ ಮಹಾವೀರ” ಪುಸ್ತಕದ ರಚನೆಕಾರರು) ‌

Follow us Follow us
Share. WhatsApp Facebook Twitter Email Telegram Copy Link

Related Posts

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಕುರಿತು ಶಾಸಕರೊಂದಿಗೆ ಚರ್ಚೆ*

ಅಕ್ಟೋಬರ್ 6, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 6, 2026

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಭಾಗಮಂಡಲದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿದ ‘ಆಜ್ಞಾ ಮುಹೂರ್ತ’; ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರೆಗೆ ಸಿದ್ಧತೆ*

ಅಕ್ಟೋಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.06: ಪವಿತ್ರ ಕಾವೇರಿ ತುಲಾ ಸಂಕ್ರಮಣ ಹಾಗೂ ತೀರ್ಥೋದ್ಭವ ಜಾತ್ರಾ ಮಹೋತ್ಸವದ ಅಂಗವಾಗಿ ಭಾಗಮಂಡಲದ ಐತಿಹಾಸಿಕ…

*ಚೇರಂಬಾಣೆಯಲ್ಲಿ ಕೊಡವಲ್ಯಾಂಡ್ 5ನೇ ಶಾಂತಿಯುತ ಮಾನವ ಸರಪಳಿ; ಕೊಡವರ ಭೂಮಿ, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ ಸ್ವಾಯತ್ತತೆ ಅಗತ್ಯ: ಎನ್.ಯು. ನಾಚಪ್ಪ*

ಅಕ್ಟೋಬರ್ 6, 2026

*ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ; ನಳಿನ್ ಕುಮಾರ್ ಕಟೀಲ್ ಭಾಷಣ; ಪ್ರಧಾನಿ ಮೋದಿ ಭಾಷಣ ನೇರ ಪ್ರಸಾರ*

ಅಕ್ಟೋಬರ್ 6, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಅ.7ರಂದು ಬೃಹತ್ ವಾಹನ ಜಾಥಾ; ರೂ.11.50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ*

ಅಕ್ಟೋಬರ್ 6, 2026

*ಕೆಸರು ಗದ್ದೆಯಲ್ಲಿ ಮರಾಟಿ ಬಾಂಧವರ ಸಂಭ್ರಮ; ನಮ್ಮ ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್*

ಅಕ್ಟೋಬರ್ 6, 2026

*ಮಡಿಕೇರಿಯಲ್ಲಿ ಇಂಡಿಯಾ ಒಕ್ಕೂಟದ ಸಭೆ : ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ*

ಅಕ್ಟೋಬರ್ 6, 2026

*ಗೋಣಿಗದ್ದೆ ಹಾಡಿ ನಿವಾಸಿಗಳ ಪುನರ್ವಸತಿಗೆ ಮನವಿ*

ಅಕ್ಟೋಬರ್ 6, 2026

*ವಿರಾಜಪೇಟೆಯಲ್ಲಿ ಯೋಗದಾ ಸತ್ಸಂಗ ಸೊಸೈಟಿಯಿಂದ ಮಾರ್ಗದರ್ಶಿತ ಧ್ಯಾನ ಮತ್ತು ಸತ್ಸಂಗ*

ಅಕ್ಟೋಬರ್ 6, 2026

*ಏಷ್ಯನ್ ಗೇಮ್ಸ್ ಪದಕ ವಿಜೇತ ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಡಿಕೆಶಿ ಸನ್ಮಾನ; ಚಿನ್ನದ ಪದಕಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ, ಕಂಚಿಗೆ ₹50 ಲಕ್ಷ ನಗದು ಪುರಸ್ಕಾರ ಘೋಷಣೆ

ಅಕ್ಟೋಬರ್ 6, 2026

*ವಾಲ್ಮೀಕಿ ಜಯಂತಿ ಸಾರ್ವತ್ರಿಕ ರಜೆ ದಿನಾಂಕ ಬದಲಾವಣೆ: ಅ.26ಕ್ಕೆ ರಜೆ ಘೋಷಿಸಿದ ಸರ್ಕಾರ; ಸಿಗಲಿದೆ 3 ದಿನ ಸರಣಿ ರಜೆ*

ಅಕ್ಟೋಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.