Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ವಿರಾಜಪೇಟೆ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ವಾರ್ಷಿಕೋತ್ಸವ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ವಾರ್ಷಿಕೋತ್ಸವ

ಜನವರಿ 13, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ವಿರಾಜಪೇಟೆ ಜ.13 NEWS DESK : ವಾರ್ಷಿಕೋತ್ಸವ ಎಂಬುವುದು ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳಿಸುವ ಅವಿಸ್ಮರಣೀಯ ದಿನವಾಗಿದ್ದು, ಪೋಷಕರು ಶಿಕ್ಷಕರೊಂದಿಗೆ ಹೊಂದಿಕೊಂಡು ತಮ್ಮ ಮಕ್ಕಳ ಧನಾತ್ಮಕ ಬೆಳವಣಿಗೆಗೆ ಪೂರಕವಾಗಿ ನಿಲ್ಲಬೇಕು ಎಂದು ವಿರಾಜಪೇಟೆ ತಹಶೀಲ್ದಾರ್ ರಾಮಚಂದ್ರ ಸಲಹೆ ನೀಡಿದರು. ವಿರಾಜಪೇಟೆಯ ಸಂತ ಅನ್ನಮ್ಮ ಸಭಾ ಭವನದಲ್ಲಿ ನಡೆದ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳ ಪಠ್ಯ ಹಾಗೂ ಪಠ್ಯೇತರ ಪ್ರತಿಭೆ ಪೋಷಕರ ಮುಂದೆ ಪ್ರದರ್ಶನಗೊಳ್ಳುವ  ದಿನ ವಿದ್ಯಾರ್ಥಿ ಜೀವನದ ಮಹತ್ವದ ದಿನವಾಗಿರುತ್ತದೆ. ಲಿಟಲ್ ಸ್ಕಾಲರ್ಸ್ ಅಕಾಡೆಮಿ ವಿದ್ಯಾರ್ಥಿಗಳಿಗೆ ಕೇವಲ ಶಿಕ್ಷಣವನ್ನು ಮಾತ್ರ ನೀಡುತ್ತಿಲ್ಲ. ಬದಲಾಗಿ ಶಿಕ್ಷಣದೊಂದಿಗೆ ಜೀವನದ ಮೌಲ್ಯಗಳನ್ನು ಕಲಿಸಿಕೊಡುವ ಕೆಲಸವನ್ನು ಮಾಡುತ್ತಿದೆ. ಅದೇ ರೀತಿಯಾಗಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಕರೊಂದಿಗೆ ಪೋಷಕರು ಸಹ ಸದಾ ಪೂರಕವಾಗಿ ಶ್ರಮಿಸಬೇಕೆಂದರು. ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮಾತನಾಡಿ, ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ವಿದ್ಯಾರ್ಥಿಗಳ ಪ್ರತಿಭೆಗೆ ಅನುಗುಣವಾಗಿ ಕ್ರಿಯಾಶೀಲತೆಯೊಂದಿಗೆ ಭಾಗವಹಿಸಲು ಪ್ರೋತ್ಸಾಹವನ್ನು ನೀಡಲಾಗುತ್ತಿದೆ. ಕೇವಲ ಶೈಕ್ಷಣಿಕ ಮಾತ್ರವಲ್ಲ ಶೈಕ್ಷಣಿಕೇತರ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಪ್ರೋತ್ಸಾಹವನ್ನು ನೀಡಿ ಪ್ರಾಯೋಗಿಕವಾಗಿ ಕಲಿಸಲಾಗುತ್ತಿದೆ. ಈ ಸಂಸ್ಥೆಯು ರವೀಂದ್ರನಾಥ ಟಾಗೋರ್ ಪರಿಕಲ್ಪನೆಯಂತೆ ಶೈಕ್ಷಣಿಕ ಹಾಗೂ ಶೈಕ್ಷಣಿಕೇತರ ಎರಡು ಕ್ಷೇತ್ರದಲ್ಲೂ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡುತಿದೆ. ಈ ರೀತಿಯ ಶಿಕ್ಷಣ ಕೇವಲ ವಿದ್ಯಾರ್ಥಿಗಳಿಗೆ ಜ್ಞಾನವನ್ನು ಮಾತ್ರ ನೀಡುವುದಿಲ್ಲ. ಅವರ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಾಯಕವಾಗಿದೆ ಎಂದರು. ಬಿಗ್ ಬಾಸ್ ಖ್ಯಾತಿಯ ನಟ ಶೈನ್ ಶೆಟ್ಟಿ ಮಾತನಾಡಿ, ಸಂಸ್ಥೆಯು ವಿವಿಧತೆಯಲ್ಲಿ ಏಕತೆಯನ್ನು ಬಿಂಬಿಸುವ ಕೆಲಸವನ್ನು ಮಾಡುತ್ತಿದೆ. ಆರಂಭಿಕ ಹಂತದಲ್ಲಿ ವಿದ್ಯಾರ್ಥಿಗಳನ್ನು ಎಲ್ಲಾ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುತ್ತಿರುವ ಕಾರ್ಯ ಶ್ಲಾಘನೀಯ. ಈ ಶಿಕ್ಷಣ ಸಂಸ್ಥೆ ಕೇವಲ ಶಿಕ್ಷಣವನ್ನು ಮಾತ್ರ ನೀಡುತ್ತಿಲ್ಲ.ಅದರೊಂದಿಗೆ ವಿದ್ಯಾರ್ಥಿಗಳಿಗೆ ಇತರೆ ಜ್ಞಾನವನ್ನು ಹಂಚುವ ಸಮಾಜಮುಖಿ ಕೆಲಸವನ್ನು ಮಾಡುತ್ತಿದೆ. ವಿದ್ಯಾರ್ಥಿಗಳೊಂದಿಗೆ ಸೇರಿ ಸಂಸ್ಥೆಯ ಮುಖ್ಯಸ್ಥರಾದ ಪೂಜಾ ರವರು ವಿವಿಧ ಕಡೆಗಳಲ್ಲಿ ಸಮಾಜ ಸೇವೆಯ ಕೆಲಸವನ್ನು ಮಾಡಿರುವುದು ಶ್ಲಾಘನೀಯವಾಗಿದ್ದು. ಸಂಸ್ಥೆಯ ಮುಖ್ಯಸ್ಧೆಯಾಗಿ ಅವರು ನಿರ್ವಹಿಸುತ್ತಿರುವ ಜವಾಬ್ದಾರಿ ಸಮಾಜವೇ ಹೆಮ್ಮೆ ಪಡುವಂತಹದಾಗಿದೆ ಎಂದರು. ಸಂಸ್ಥೆಯ ಮುಖ್ಯಸ್ಥರಾದ ಪೂಜಾ ಸಜೇಶ್ ಮಾತನಾಡಿ, ಇದೊಂದು ವಿದ್ಯಾರ್ಥಿಗಳನ್ನು ಪೋಷಕರನ್ನು ಒಗ್ಗೂಡಿಸುವ ಒಂದು ಸಮಾರಂಭವಾಗಿದ್ದು, ನಮ್ಮ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಮಾತ್ರ ಮಹತ್ವವನ್ನು ನೀಡದೆ ಶಿಕ್ಷಣದೊಂದಿಗೆ ಜೀವನದ ಮೌಲ್ಯ, ಕ್ರೀಡೆ , ಸಂಗೀತ, ಕರಾಟೆಗಳಂತಹ ಚಟುವಟಿಕೆಗಳನ್ನು ಕಲಿಸಲಾಗುತ್ತದೆ. ಇದರಿಂದ ವಿದ್ಯಾರ್ಥಿಗಳನ್ನು ಜ್ಞಾನವಂತರನ್ನಾಗಿ ಮಾಡುವುದು ಮಾತ್ರವಲ್ಲದೆ ಭವಿಷ್ಯದಲ್ಲಿ ಉತ್ತಮ ಸಮಾಜವನ್ನು ನಿರ್ಮಿಸುವ ಪ್ರಜೆ ಗಳನ್ನು ನಿರ್ಮಿಸುವ ಕೆಲಸವನ್ನು ಮಾಡುತ್ತಿದ್ದೇವೆ ಎಂದರು. ಕಾರ್ಯಕ್ರಮದಲ್ಲಿ ಅರಮೇರಿ ಕಳಂಚೇರಿ ಮಠದ ಮಠಾಧಿಪತಿ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ , ಸಂತ ಅನ್ನಮ್ಮ ಚರ್ಚ್ ನ ಪ್ರಧಾನ ಗುರುಗಳಾದ ರೆ. ಫಾ .ಜೇಮ್ಸ್ ಡೊಮಿನಿಕ್, ಪುರಸಭಾ ಸದಸ್ಯ ಮಹಮ್ಮದ್ ರಫಿ, ವಿರಾಜಪೇಟೆ ಡಿವೈಎಸ್ಪಿ ಮೋಹನ್ ಕುಮಾರ್, ಸಿ.ಆರ್.ಪಿ ಗಳಾದ ಸಿಂಧು, ಸುಷ್ಮಾ, ಲಿಟಲ್ ಸ್ಕಾಲರ್ ಅಕಾಡೆಮಿಯ ಮುಖ್ಯ ಶಿಕ್ಷಕಿ ಮೀರಾ ಪೂಣಚ್ಚ, ಚೊಂದಮ್ಮ ಪ್ರದೀಪ್, ಬಿ.ಆರ್.ಸಿ, ಬಿಂದು , ಬಿ.ಆರ್.ಪಿ ರುಕ್ಮಿಣಿ , ಶೈಲ, ಸಿ.ಆರ್.ಪಿ ಸುಷ , ಹಿಂದೂ ಮಹಿಳಾ ಅಸೋಸಿಯೇಷನ್ ಅಧ್ಯಕ್ಷೆ ಶಿಬಾ ಪೃಥ್ವಿನಾಥ್,  ವಿದ್ಯಾರ್ಥಿಗಳು, ಪೋಷಕರು,ಲಿಟಲ್ ಸ್ಕಾಲರ್ಸ್ ಅಕಾಡೆಮಿ ಸಂಸ್ಥೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು. ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಐಕ್ಯಂ ಎಂಬ ವಿಷಯವಾಧಾರಿತವಾದ ವಿಶೇಷ ನೃತ್ಯವನ್ನು ಪ್ರದರ್ಶಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

ಅ.27ರಂದು 24ನೇ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಡಾ. ಲಲಿತ ಕೆ.ಪಿ. ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 25, 2026

ವಿರಾಜಪೇಟೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ; ಸ್ವಾವಲಂಬಿ ಬದುಕಿಗೆ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಮುಖ್ಯ: ಆನಂದ ಸುವರ್ಣ

ಅಕ್ಟೋಬರ್ 25, 2026

48ನೇ ಗೋಣಿಕೊಪ್ಪ ದಸರಾ ಜನೋತ್ಸವದಲ್ಲಿ ಭರತನಾಟ್ಯ ಮತ್ತು ಸಂಗೀತ ಪ್ರದರ್ಶನ

ಅಕ್ಟೋಬರ್ 25, 2026

ವಿರಾಜಪೇಟೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ; ಸ್ವಾವಲಂಬಿ ಬದುಕಿಗೆ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಮುಖ್ಯ: ಆನಂದ ಸುವರ್ಣ

ಅಕ್ಟೋಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.25: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಜ್ಞಾನವಿಕಾಸ ಕಾರ್ಯಕ್ರಮದಡಿ ವಿರಾಜಪೇಟೆಯ…

48ನೇ ಗೋಣಿಕೊಪ್ಪ ದಸರಾ ಜನೋತ್ಸವದಲ್ಲಿ ಭರತನಾಟ್ಯ ಮತ್ತು ಸಂಗೀತ ಪ್ರದರ್ಶನ

ಅಕ್ಟೋಬರ್ 25, 2026

ಕಿವುಡ ಕ್ರೀಡಾಪಟುಗಳಿಗೆ ಪ್ರಾಯೋಜಕತ್ವದ ನೆರವಿಗೆ ಕೊಡಗು ಜಿಲ್ಲಾ ಕಿವುಡರ ಸಂಘದ ಮನವಿ; ರಾಜ್ಯಮಟ್ಟದ ಕ್ರಿಕೆಟ್, ವಾಲಿಬಾಲ್ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಸಜ್ಜು; ದಾನಿಗಳ ಸಹಕಾರಕ್ಕೆ ಅಧ್ಯಕ್ಷ ಸ್ಯಾಮ್ ಜೋಸೆಫ್ ಮನವಿ

ಅಕ್ಟೋಬರ್ 25, 2026

ನ. 2–3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ; 23 ಜಿಲ್ಲೆಗಳ ಪತ್ರಕರ್ತರ ತಂಡಗಳು ಭಾಗಿ; ಮಡಿಕೇರಿಯಲ್ಲಿ ಆಯೋಜನೆ

ಅಕ್ಟೋಬರ್ 25, 2026

ಮಾದಕ ದ್ರವ್ಯಗಳಿಂದ ದೂರವಿದ್ದು ವ್ಯಸನಮುಕ್ತ ಭಾರತ ನಿರ್ಮಾಣಕ್ಕೆ ಪಣ ತೊಡಿ: ಎ.ಎಸ್.ಐ. ಸುಮತಿ; ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್ನೆಸ್ಸೆಸ್ ಶಿಬಿರ

ಅಕ್ಟೋಬರ್ 25, 2026

ಕೊಡಗಿನಲ್ಲಿ ಶೀಘ್ರ ಸಚಿವ ಸಂಪುಟ ಸಭೆ ನಡೆಸಲು ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ

ಅಕ್ಟೋಬರ್ 25, 2026

ಮಂಗಳೂರು ವಲಯದ ಅಂಡರ್-15 ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಆಯ್ಕೆ

ಅಕ್ಟೋಬರ್ 24, 2026

ಕುಶಾಲನಗರ : ಮಳೆಯಿಂದ ಮನೆಗಳಿಗೆ ಹಾನಿ

ಅಕ್ಟೋಬರ್ 24, 2026

ಮಳೆಯಿಂದ ಕೊಡಗಿನ ವಿವಿಧೆಡೆ ಹಾನಿ : ಕುಸಿದು ಬಿದ್ದ ಮನೆಗಳ ಗೋಡೆ, ಮೇಲ್ಛಾವಣಿ, ಕೊಟ್ಟಿಗೆ

ಅಕ್ಟೋಬರ್ 24, 2026

ಮಡಿಕೇರಿಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.