Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*
  • *ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*
  • *ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*
  • ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ
  • *ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*
  • *ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*
  • *ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*
  • *ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*
  • *7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*
  • *ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*‘ಭೂ ಗುತ್ತಿಗೆ ಆದೇಶ’ವನ್ನು ಹಿಂಪಡೆಯಲು ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*‘ಭೂ ಗುತ್ತಿಗೆ ಆದೇಶ’ವನ್ನು ಹಿಂಪಡೆಯಲು ಒತ್ತಾಯ*

ಜನವರಿ 13, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.13 NEWS DESK : ಸ್ವಂತ ನೆಲೆ ಇಲ್ಲದೆ ಸಂಕಷ್ಟದ ಬದುಕು ನಡೆಸುತ್ತಿರುವ ಶೋಷಿತ ಸಮಾಜವನ್ನು ಕಡೆಗಣಿಸಿ, ಉಳ್ಳವರಿಗೆ ಅನುಕೂಲ ಕಲ್ಪಿಸಲು ಜಾರಿಗೆ ತಂದಿರುವ ‘ಭೂ ಗುತ್ತಿಗೆ ಆದೇಶ’ವನ್ನು ರಾಜ್ಯ ಸರಕಾರ ಹಿಂತೆಗೆದುಕೊಳ್ಳಬೇಕೆಂದು ಭೂ ಗುತ್ತಿಗೆ ವಿರೋಧಿ ಹೋರಾಟ ಸಮಿತಿ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಡಿ.ಎಸ್.ನಿರ್ವಾಣಪ್ಪ  ಸರಕಾರದ ಆದೇಶವನ್ನು ವಿರೋಧಿಸಿ ಜ.17ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಅಂದು ಬೆಳಗ್ಗೆ 11 ಗಂಟೆಗೆ ನಗರದ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ನಂತರ ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು. ಭೂ ಗುತ್ತಿಗೆ ಆದೇಶವನ್ನು ಸರಕಾರ ಹಿಂತೆಗೆದುಕೊಳ್ಳದಿದ್ದಲ್ಲಿ ಮುಖ್ಯಮಂತ್ರಿಗಳ ಮನೆಗೆ ಕಾಲ್ನಡಿಗೆ ಜಾಥಾ ನಡೆಸಲಾಗುವುದು. ನಿವೇಶನ ರಹಿತರಿಗೆ ನಿವೇಶನ ಒದಗಿಸಲು ಸರಕಾರ ಅಗತ್ಯ ಕ್ರಮ ಕೈಗೊಳ್ಳುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ತಿಳಿಸಿದರು. ಕಳೆದ ಹಲವು ದಶಕಗಳಿಂದ ನಿವೇಶನ ರಹಿತರು ತಮಗೆ ಭೂಮಿ ನೀಡುವಂತೆ ನಡೆಸುತ್ತಿರುವ ಹೋರಾಟಕ್ಕೆ ಸ್ಪಂದಿಸದ ಸರಕಾರ, ಭೂ ಗುತ್ತಿಗೆ ಆದೇಶದಂತೆ ಉಳ್ಳವರಿಗೆ ಕೇವಲ 1 ಸಾವಿರ ರೂ.ಗಳಂತೆ 30 ವರ್ಷಗಳಿಗೆ ಗುತ್ತಿಗೆ ನೀಡಲು ಮುಂದಾಗುತ್ತಿದ್ದು, ಇದು ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದರು.  ಉಳ್ಳವರಿಗೆ ಭೂ ಗುತ್ತಿಗೆ ಆದೇಶದಂತೆ ಸರಕಾರಿ ಜಾಗವನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಮುಂದಾಗುವ ಮೂಲಕ, ನಿವೇಶನ ರಹಿತರನ್ನು ಕಡೆಗಣಿಸಿದೆ. ಬಹುಸಂಖ್ಯಾತ ದುಡಿಯುವ ವರ್ಗವಾಗಿರುವ ಶೋಷಿತ ಸಮೂಹ ಕಳೆದ ಚುನಾವಣೆಯಲ್ಲಿ ತನ್ನ ಮತಗಳ ಮೂಲಕ ಕಾಂಗ್ರೆಸ್‍ನ್ನು ಬೆಂಬಲಿಸಿದೆ. ಇದೀಗ ನಮ್ಮ ಬೆಂಬಲದಿಂದ ಆಯ್ಕೆಯಾದ ಜಿಲ್ಲೆಯ ಇಬ್ಬರು ಶಾಸಕರು ಶೋಷಿತ ಸಮೂಹದ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿದರು. ಬಡವರ, ಮಧ್ಯಮ ವರ್ಗದ ಸಾಗುವಳಿಗೆ ಹಕ್ಕುಪತ್ರ ನೀಡಿ, ಫಾರಂ 57, 94 ರಡಿ ಅರ್ಜಿಗಳನ್ನು ಪರಿಗಣಿಸಿ ತಕ್ಷಣ ಹಕ್ಕುಪತ್ರವನ್ನು ನೀಡಬೇಕು. ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ಸರಕಾರಿ ಜಾಗವನ್ನು ತೆರವುಗೊಳಿಸಿ ಭೂ ಹೀನರಿಗೆ ಮಂಜೂರು ಮಾಡಬೇಕೆಂದು ನಿರ್ವಾಣಪ್ಪ ಆಗ್ರಹಿಸಿದರು. ಹೋರಾಟ ಸಮಿತಿಯ ಸಂಚಾಲಕರು ಹಾಗೂ ಬಹುಜನ ಕಾರ್ಮಿಕ ಸಂಘದ ಪ್ರಮುಖ ಕೆ.ಮೊಣ್ಣಪ್ಪ ಮಾತನಾಡಿ, ಶೋಷಿತ ಸಮೂಹದ ಮೇಲಿನ ದಬ್ಬಾಳಿಕೆ ನಿಂತಿಲ್ಲ, ಬಡವರ್ಗದ ಮಂದಿಗೆ ಮತದಾನದ ಹಕ್ಕೊಂದನ್ನು ಮಾತ್ರ ನೀಡಲಾಗಿದೆ. ಜಿಲ್ಲೆಯಲ್ಲಿ ಸರಕಾರಿ ಭೂಮಿಯ ಲಭ್ಯತೆಯ ಬಗ್ಗೆ ಇಲ್ಲಿಯವರೆಗು ಸಭೆ ನಡೆಸಿಲ್ಲವೆಂದು ಆರೋಪಿಸಿದರು. ದಲಿತರು ಹಾಗೂ ಶೋಷಿತ ಸಮೂಹದ ನಿವೇಶನದ ಬೇಡಿಕೆಯ ವಿಚಾರ ವಿಧಾನಸಭೆಯಲ್ಲಿ ಚರ್ಚೆಯಾಗಬೇಕೆಂದು ಒತ್ತಾಯಿಸಿದರು. ಸಮಿತಿಯ ಸಂಚಾಲಕರು ಹಾಗೂ ಭಾರತೀಯ ಕಮ್ಯೂನಿಸ್ಟ್ ಪಕ್ಷದ ಪ್ರಮುಖ  ರಮೇಶ್ ಮಾಯಮುಡಿ ಮಾತನಾಡಿ, ಜಿಲ್ಲೆಯಲ್ಲಿ 16 ಸಾವಿರ ನಿವೇಶನ ರಹಿತರಿದ್ದು, ಇವರಿಗೆ ಭೂ ಗುತ್ತಿಗೆ ಆದೇಶ ಮಾರಕವಾಗಿದೆ. ಈ ಆದೇಶವನ್ನು ಹಿಂದಕ್ಕೆ ಪಡೆಯಬೇಕೆಂದರು. ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪ್ರಮುಖರು ಹಾಗೂ ದಸಂಸ(ಕೃಷ್ಣಪ್ಪ ಸ್ಥಾಪಿತ) ರಾಜ್ಯ ಸಂಘಟನಾ ಸಂಚಾಲಕ ಟಿ.ಎನ್.ಗೋವಿಂದಪ್ಪ, ಸಂಚಾಲಕರು ಹಾಗೂ ಕಿಸಾನ್ ಸಭಾಧ ಜಿಲ್ಲಾಧ್ಯಕ್ಷ ಹೆಚ್.ಎ.ಪ್ರಕಾಶ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*

ಅಕ್ಟೋಬರ್ 2, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.1 NEWS DESK : ಗೋವಾದ ಚೌಗುಲೇ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ಯೂತ್ ಸ್ಪೋರ್ಟ್ಸ್ ಎಜುಕೇಷನ್ ಫೆಡರೇಷನ್ ಇಂಡಿಯಾ ವತಿಯಿಂದ…

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026

*ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*

ಅಕ್ಟೋಬರ್ 1, 2026

*ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*

ಅಕ್ಟೋಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.