Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*
  • *ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*
  • *ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*
  • *ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡಕಂಡಿ ಓಂಶ್ರೀ ದಯಾನಂದಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡಕಂಡಿ ಓಂಶ್ರೀ ದಯಾನಂದಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಜನವರಿ 15, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.15 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನೀಡಲಾಗುವ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿಗೆ  ಕೂಡಕಂಡಿ ಓಂಶ್ರೀ ದಯಾನಂದ ಭಜನರಾಗಿದ್ದಾರೆ. ಜಿಲ್ಲೆಯ ಹಿರಿಯ ಮೂರು ಸಾಹಿತಿಗಳನ್ನು ತೀರ್ಪುಗಾರರನ್ನಾಗಿಸಿ ಅವರು ಎಲ್ಲ ಪುಸ್ತಕಗಳನ್ನು ಪರಮಾರ್ಶಿಸಿ‌ ಕೂಡಕಂಡಿ ಓಂಶ್ರೀ ದಯಾನಂದ ಬರೆದ  “ಪುಟಾಣಿ ರೈಲು – ಅಂದದ ಕಥೆಗಳ ಲೋಕದಲ್ಲೊಂದು ಸುಂದರ ಪಯಣ” ಕಥಾ ಸಂಕಲನಕ್ಕೆ ಈ ಪ್ರಶಸ್ತಿ ಲಭ್ಯವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿಪ್ರಶಸ್ತಿಗಳಲ್ಲಿ ಅತ್ಯಂತ ಪ್ರತಿಷ್ಟಿತವಾದ ದತ್ತಿ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ. ಈ ದತ್ತಿಯನ್ನು ಗೌರಮ್ಮ ಅವರ ಪುತ್ರ ಬಿ.ಜಿ.ವಸಂತ ಕೊಡಗಿನ ಮಹಿಳಾ ಲೇಖಕಿಯರು ಪ್ರಕಟ ಪಡಿಸಿದ ಉತ್ತಮ ‌ಕೃತಿಗೆ ಪ್ರಶಸ್ತಿ ನೀಡಿ ಗೌರವಿಸುವ ಸಲುವಾಗಿ ಸ್ಥಾಪಿಸಲಾಗಿದೆ. ಇಲ್ಲಿಯವರೆಗೆ 20 ಲೇಖಕಿಯರಿಗೆ ಈ ಪ್ರಶಸ್ತಿ ನೀಡಲಾಗಿದೆ. 2024-25ನೇ ಸಾಲಿನ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದ್ದು 15 ಲೇಖಕಿಯರು ತಮ್ಮ ಕೃತಿಗಳನ್ನು ಪ್ರಶಸ್ತಿಗಾಗಿ ಪ್ರಸ್ತುತ ಪಡಿಸಿದ್ದರು ಎಂದು ಎಂ.ಪಿ. ಕೇಶವ ಕಾಮತ್  ತಿಳಿಸಿದರು.
:: ಕೂಡಕಂಡಿ ಓಂಶ್ರೀ ದಯಾನಂದ :: ಇವರು ಭಾಗಮಂಡಲ ನಾಡು ತಾವೂರು ಗ್ರಾಮದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿವೃತ್ತ ಉಪನಿರ್ದೇಶಕರಾದ ಅಮೆ ಮಾದಪ್ಪ ಮತ್ತು ವನಜ ದಂಪತಿಗಳ ಮಗಳಾಗಿ 1989ರ ಏಪ್ರಿಲ್ 27ರಂದು ಜನಿಸಿದರು. ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣವನ್ನು ಮಡಿಕೇರಿಯ ಸಂತ ಜೋಸೆಫರ ಆಂಗ್ಲ ಮಾಧ್ಯಮ ಶಾಲೆಯಲ್ಲಿ, ಪದವಿ ಪೂರ್ವ ಶಿಕ್ಷಣವನ್ನು ಪುತ್ತೂರಿನ ಸಂತ ಫಿಲೋಮಿನ ಕಾಲೇಜಿನಲ್ಲಿ ಪೂರೈಸಿರುವರು. ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಿಂದ ಬಿ.ಎಸ್ಸಿ ಪದವಿಯನ್ನು ಮತ್ತು ಕುವೆಂಪು ವಿಶ್ವವಿದ್ಯಾನಿಲಯದಿಂದ ಗಣಿತಶಾಸ್ತ್ರದಲ್ಲಿ ಎಂ.ಎಸ್ಸಿ ಸ್ನಾತಕೋತ್ತರ ಪದವಿಯನ್ನು ಪಡೆದಿರುವರು. ವಿರಾಜಪೇಟೆಯ ಸರ್ವೋದಯ ಕಾಲೇಜಿನಲ್ಲಿ ಬಿ.ಇಡಿ ಪದವಿಯನ್ನು ಪೂರೈಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವರು. ಭಾರತ ಸರ್ಕಾರದ ಮಾನವ ಸಂಪನ್ಮೂಲ ಮಾಜಿ ಸಚಿವೆ ಸ್ಮೃತಿ ಇರಾನಿಯವರಿಂದ ಅತ್ಯುತ್ತಮ ಶಿಕ್ಷಕಿ ಎಂಬ ಪ್ರಶಂಸನೆಗೆ ಪಾತ್ರರಾಗಿರುವರು. ಶಾಲಾ ಕಾಲೇಜು ಹಂತದಲ್ಲಿ ಬಹುಮುಖ ಪ್ರತಿಭಾವಂತಳಾಗಿದ್ದು, ವಿವಿಧ ಸ್ಪರ್ಧಾ ಚಟುವಟಿಕೆಗಳಲ್ಲಿ ಹಲವಾರು ಬಹುಮಾನಗಳನ್ನು ಪಡೆದಿರುವರು. 2009-10 ಶೈಕ್ಷಣಿಕ ಸಾಲಿನಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ Best Outstanding Student of the year (ಬೆಸ್ಟ್ ಔಟ್ ಸ್ಟ್ಯಾಂಡಿಂಗ್ ಸ್ಟುಡೆಂಟ್ ಅಫ್ ದಿ ಯಿಯರ್) ಬಹುಮಾನಕ್ಕೆ ಭಾಜನರಾಗಿದ್ದರು. ಪ್ರಸ್ತುತ ವೃತ್ತಿಯಲ್ಲಿ ಗೃಹಿಣಿಯಾಗಿದ್ದು, ಪ್ರವೃತ್ತಿಯಲ್ಲಿ ಕಥೆ, ಕವನ ಮತ್ತು ಲೇಖನಗಳನ್ನು ಬರೆಯುವುದು ಮತ್ತು ಓದುವುದು ಇವರ ಹವ್ಯಾಸವಾಗಿರುತ್ತದೆ. ಇವರು ಹಲವಾರು ಕಥೆ, ಕವನ, ಮಕ್ಕಳ ಕಥೆ ಮತ್ತು ಲೇಖನಗಳನ್ನು ಕನ್ನಡ ಮತ್ತು ಅರೆಭಾಷೆಯಲ್ಲಿ ಪ್ರಕಟಿಸಿರುವರು. ಹಲವಾರು ಕಡೆ ಏರ್ಪಡಿಸಿದ ವಿವಿಧ ಕಥಾ ಸ್ಪರ್ಧೆಗಳಲ್ಲಿ ಬಹುಮಾನಗಳನ್ನು ಪಡೆದಿರುವರು. ಹಲವಾರು ಕವಿಗೋಷ್ಠಿಗಳಲ್ಲಿ ಕವನ ವಾಚನ ಮಾಡಿರುವರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯವರು ಹೊರತರುವ ಹಿಂಗಾರ ತ್ರೈಮಾಸಿಕ ಪುಸ್ತಕದಲ್ಲಿ ಕಥೆ, ಕವನ ಮತ್ತು ಲೇಖನಗಳನ್ನು ಪ್ರಕಟಿಸಿರುವರು. ವಿವಿಧ ಕಥಾ ಮತ್ತು ಕವನ ವಾಚನ ಸ್ಪರ್ಧೆಯಲ್ಲಿ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ಇವರು ಭಾಗಮಂಡಲ ನಾಡು ತಾವೂರು ಗ್ರಾಮದ ಕೂಡಕಂಡಿ ಚಂದ್ರಹಾಸ ಮತ್ತು ಹರಿಣಾಕ್ಷಿ ದಂಪತಿಗಳ ಪುತ್ರ, ವಿರಾಜಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ದಯಾನಂದ ಕೂಡಕಂಡಿಯವರ ಪತ್ನಿ. ಇವರಿಗೆ  ವೈಷ್ಣವಿ ಮತ್ತು ಧನ್ವಿ ಎಂಬ ಇರ್ವರು ಪುತ್ರಿಯರು. ಪ್ರಸ್ತುತ ಇವರು ಮಡಿಕೇರಿಯ ಕಾವೇರಿ ಲೇಔಟ್ ನಲ್ಲಿ ವಾಸಿಸುತ್ತಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*

ಮೇ 11, 2026

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*

ಮೇ 11, 2026

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 11 NEWS DESK : ಜಿಲ್ಲೆಗೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅವರು ಅಧಿಕಾರ ಸ್ವೀಕರಿಸಿದ್ದಾರೆ. 2014…

*ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*

ಮೇ 11, 2026

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.