Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*
  • *ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*
  • *ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*
  • ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ
  • *ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*
  • *ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*
  • *ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*
  • *ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*
  • *7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*
  • *ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎಸ್.ಆರ್.ವಿ ಫುಟ್ಬಾಲ್ ಚಾಂಪಿಯನ್ ಲೀಗ್ : ಟೀಮ್ ಭಗವತಿ ಚಾಂಪಿಯನ್ : ಕೂರ್ಗ್ ಚಾರ್ಮಾರ್ಸ್ ರನ್ನರ್ಸ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎಸ್.ಆರ್.ವಿ ಫುಟ್ಬಾಲ್ ಚಾಂಪಿಯನ್ ಲೀಗ್ : ಟೀಮ್ ಭಗವತಿ ಚಾಂಪಿಯನ್ : ಕೂರ್ಗ್ ಚಾರ್ಮಾರ್ಸ್ ರನ್ನರ್ಸ್*

ಜನವರಿ 15, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.15 NEWS DESK : ಮಡಿಕೇರಿಯ ಶ್ರೀ ರಾಜೇಶ್ವರಿ ವಿದ್ಯಾಲಯ ವತಿಯಿಂದ ನಡೆದ ಎಸ್.ಆರ್.ವಿ ಫುಟ್ಬಾಲ್ ಕಪ್  ಹೊನಲು ಬೆಳಕಿನ ಫುಟ್ಬಾಲ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಟೀಮ್ ಭಗವತಿ ಚಾಂಪಿಯನ್ ಆಗಿ ಹೊರಹೊಮ್ಮಿದರೆ , ಕೂರ್ಗ್ ಚಾರ್ಮಾರ್ಸ್ ರನ್ನರ್ಸ್ ಸ್ಥಾನಕ್ಕೆ ತೃಪ್ತಿಪಟ್ಟು ಕೊಂಡಿತು. ತೃತೀಯ ಹಾಗೂ ನಾಲ್ಕನೇ ಸ್ಥಾನವನ್ನು ಫಿನಿಕ್ಸ್ ಎಫ್ ಸಿ ಮತ್ತು ಆರ್ ಆರ್ ಎಫ್ ಸಿ ತಂಡ ಪಡೆದು ಕೊಂಡಿತು.  ನಗರದ ಗಾಂಧಿ ಮೈದಾನದಲ್ಲಿ ನಡೆದ ಎಸ್.ಆರ್.ವಿ ಚಾಂಪಿಯನ್ ಲೀಗ್ ಹೊನಲು ಬೆಳಕಿನ ಪಂದ್ಯಾವಳಿಯಲ್ಲಿ ಒಟ್ಟು ಹನ್ನೆರಡು ತಂಡಗಳು ಚಾಂಪಿಯನ್ ಟ್ರೋಫಿಗಾಗಿ ಸೆಣಸಾಡಿದವು. ಇದಕ್ಕೂ ಮೊದಲು ನಡೆದ ಮೊದಲ ಕ್ವಾಲಿಫಯರ್ ಪಂದ್ಯದಲ್ಲಿ ಕೂರ್ಗ್ ಚಾರ್ಮಾರ್ಸ್ ತಂಡವು ಟೀಮ್ ಭಗವತಿ ವಿರುದ್ಧ ಪೆನಲ್ಟಿಯಲ್ಲಿ 3-1 ರ ಜಯ ಸಾದಿಸಿ ನೇರವಾಗಿ ಫೈನಲ್ ಗೆ ಅರ್ಹತೆ ಪಡೆದುಕೊಂಡಿತು. ಎಲಿಮಿನೇಟರ್ ಪಂದ್ಯವು ಫಿನಿಕ್ಸ್ ಎಫ್ ಸಿ ಹಾಗೂ ಆರ್ ಆರ್ ಎಫ್ ಸಿ ತಂಡದ ನಡುವೆ ನಡೆದ ಪಂದ್ಯದಲ್ಲಿ ಫಿನಿಕ್ಸ್ ಎಫ್ ಸಿ ತಂಡವು ಪೆನಲ್ಟಿ ಶೂಟ್ ಔಟ್ ನಲ್ಲಿ 3-2 ರ ಜಯ ಪಡೆದು ಕೊಂಡು ಕ್ವಾಲಿಫಯರ್ ಗೆ ಲಗ್ಗೆ ಇಟ್ಟಿತು. ದ್ವಿತೀಯ ಕ್ವಾಲಿಫಯರ್ ಪಂದ್ಯವು ಫಿನಿಕ್ಸ್ ಎಫ್ ಸಿ ಹಾಗೂ ಟೀಮ್ ಭಗವತಿ ತಂಡದ ನಡುವೆ ನಡೆದ ರೋಚಕ ಹಣಹಣಿ ಯಲ್ಲಿ ಟೀಮ್ ಭಗವತಿ ತಂಡವು 1-0 ಗೊಲುಗಳ ಅಂತರದಲ್ಲಿ ಗೆದ್ದು ಫೈನಲ್ ಗೆ ದ್ವಿತೀಯ ಅರ್ಹತೆ ಪಡೆದುಕೊಂಡಿತು. ಫೈನಲ್ ಪಂದ್ಯವು ಟೀಮ್ ಭಗವತಿ ಹಾಗೂ ಕೂರ್ಗ್ ಚಾರ್ಮಾರ್ಸ್ ತಂಡದ ನಡುವೆ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಟೀಮ್ ಭಗವತಿ ತಂಡವು ಕೂರ್ಗ್ ಚಾರ್ಮಾರ್ಸ್ ವಿರುದ್ಧ 2-0 ಅಂತರದಲ್ಲಿ ಗೆದ್ದು ಎಸ್ ಆರ್ ವಿ ಫುಟ್ಬಾಲ್ ಚಾಂಪಿಯನ್ ಲೀಗ್ ಸೀಸನ್-2 ರ ಚಾಂಪಿಯನ್ ಪಟ್ಟ ಅಲಂಕರಿಸಿತು. ಕ್ರೀಡಾಕೂಟದಲ್ಲಿ ಹೈ ಸ್ಕೋರರ್ ಆಗಿ ಟೀಮ್ ಭಗವತಿ ತಂಡದ ಲೋಹಿತ್ ಪಿಕ ಪಡೆದು ಕೊಂಡರೆ ಬೆಸ್ಟ್ ಡಿಫೆಂಡರ್ ಪ್ರಶಸ್ತಿಯನ್ನು ಟೀಮ್ ಭಗವತಿ ತಂಡದ ವಿನೋದ್ ಪಡೆದು ಕೊಂಡರು,ಉತ್ತಮ ಗೋಲ್ ಕೀಪರ್ ಪ್ರಶಸ್ತಿ ಯನ್ನು ಫಿನಿಕ್ಸ್ ಎಫ್ ಸಿ ತಂಡದ ಶಾಹಿದ್ ಪಡೆದು ಕೊಂಡರೆ , ಉದಯೋನ್ಮೋಕ ಆಟಗಾರ ಪ್ರಶಸ್ತಿಯನ್ನು ಕೂರ್ಗ್ ಚಾರ್ಮಾರ್ಸ್ ತಂಡದ ಪೊಣ್ಣನ್ನ ಪಡೆದರೆ, ಸರಣಿ ಪುರುಷೋತ್ತಮ ಪ್ರಶಸ್ತಿಯನ್ನು ಕೂರ್ಗ್ ಚಾರ್ಮಾರ್ಸ್ ತಂಡದ ಮಹೇಶ್ ಪಡೆದು ಕೊಂಡರು.

ಸಮಾರೋಪ ಸಮಾರಂಭ :: ಶ್ರೀ ರಾಜೇಶ್ವರಿ ವಿದ್ಯಾಲಯದ ಕಾರ್ಯದರ್ಶಿ ಸಚಿನ್ ವಾಸುದೇವ್  ಸಮ್ಮುಖದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಎಸ್ ಆರ್ ವಿ ಆಯೋಜಕರಿಂದ ಮಿನಿ ವಲಂಪಿಕ್ ವಯೋಮಿತಿ 14 ವರ್ಷದ ಫುಟ್ಬಾಲ್ ಪಂದ್ಯವಳಿಯಲ್ಲಿ ಕೊಡಗು ಜಿಲ್ಲೆ ರನ್ನರ್ಸ್ ಸ್ಥಾನ ಪಡೆಯುವಲ್ಲಿ ಯಶಸ್ವಿಗೆ ಪ್ರಮುಖ ಕಾರಣರಾದ ತರಬೇತುದಾರ ಕ್ರಿಸ್ಟೋಫರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಕ್ರೀಡೆ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ಕ್ರೀಡೆಯಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಲು ಸಾಧ್ಯ. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಹೊಂದಾಣಿಕೆ ಮನೋಭಾವ ಬರುತ್ತದೆ. ಪ್ರತಿನಿತ್ಯ ಅತ್ಯಂತ ಕ್ರಿಯಾಶೀಲರಾಗಿ ಕರ್ತವ್ಯನಿರ್ವಹಿಸಲು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಎಂ ಸಿ ಸಿ ಅಧ್ಯಕ್ಷ ಕ್ರಿಸ್ಟೋಫರ್ ಮಾತನಾಡಿ, ದ್ವಿತೀಯ ಬಾರಿಗೆ ಹೊನಲು ಬೆಳಕಿನ ಪಂದ್ಯ ಆಯೋಜನೆ ಗೊಂಡಿರುವುದು ಸಂತೋಷದ ವಿಷಯ. ಕ್ರೀಡೆ ಎಂದ ಕೂಡಲೇ ಬಾಲ್ಯದ ಜೀವನ ಮತ್ತೆ ಮರುಕಳಿಸುತ್ತದೆ. ಕ್ರೀಡಾ ಮನೋಭಾವನೆಯಿಂದ ಆಟವಾಡಬೇಕು. ಕ್ರೀಡೆಯನ್ನು ಸ್ಪರ್ಧಾ ಮನೋಭಾವದಿಂದ ಸ್ವೀಕರಿಸಿದಾಗ ಮಾತ್ರ ಸೋಲು- ಗೆಲುವನ್ನು ಸಮಾನವಾಗಿ ಕಾಣಬಹುದು ಎಂದು ಹೇಳಿದರು. ಶ್ರೀ ರಾಜೇಶ್ವರಿ ವಿದ್ಯಾಲಯದ ಅಧ್ಯಕ್ಷರು ಆಗಿರುವ ಗೋವಿಂದ ರಾಜು ರವರು ಮಾತನಾಡಿ ದ್ವಿತೀಯ ಬಾರಿಗೆ ನೇರ ಪ್ರಸಾರದ ಫುಟ್ಬಾಲ್ ಕ್ರೀಡಾಕೂಟವನ್ನು ಆಯೋಜಿಸುವುದು ಸಣ್ಣ ಕೆಲಸವಲ್ಲ. ಸಂಘಟನಾ ಮನೋಭಾವನೆ ಮತ್ತು ಆರ್ಥಿಕ ಸ್ಥಿತಿಗತಿ ಸದೃಢವಾಗಿರಬೇಕು. ದ್ವಿತೀಯ ವರ್ಷದ ಕ್ರೀಡಾಕೂಟವನ್ನು ಆಯೋಜಿಸಿರುವುದು ಶ್ಲಾಘನೀಯ ಎಂದರು. ಕ್ರೀಡಾ ಕೂಟದ ಅಧ್ಯಕ್ಷತೆಯನ್ನು ವಹಿಸಿಕೊಂಡ ಶ್ರೀ ರಾಜೇಶ್ವರಿ ವಿದ್ಯಾಲಯದ ಕಾರ್ಯದರ್ಶಿ ಸಚಿನ್ ವಾಸುದೇವ್ ಮಾತನಾಡಿ ಇಂದಿನ ಯುವ ಜನಾಂಗ ಕ್ರೀಡಾ ಮನೋಭಾವನೆ ಬೆಳಿಸಿಕೊಳ್ಳಬೇಕು, ಮೊಬೈಲ್‌ ಬಳಕೆ ಕಡಿಮೆಮಾಡಿಕೊಂಡು ಅದರಿಂದ ಆಗುವ ದುಷ್ಪರಿಣಾಮಯಿಂದ ದೂರವಿರಿ ಎಂದು ತಿಳಿಸಿದರು. ಯುವಕ, ಯುವತಿಯರು ದುಶ್ಚಟಗಳಿಗೆ ಬಲಿಯಾಗಿ, ಕಾಲಹರಣ ಮಾಡುವುದನ್ನು ಬಿಟ್ಟು ಬಿಡುವಿನ ಸಮಯದಲ್ಲಿ ಕ್ರೀಡಾ ಮನೋಭಾವನೆ ಬೆಳೆಸಿಕೊಂಡು ಆರೋಗ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಈ ಸಂದರ್ಭ ಎಸ್ ಆರ್ ವಿ ಫುಟ್ಬಾಲ್ ಪಂದ್ಯಕ್ಕೆ ಟೈಟಲ್ ಸ್ಪೋನ್ಸರ್ ಮಾಡಿದ ಸೋನಾ ಟಿ ವಿ ಎಸ್ ನ ದೀಪ, ರಾಜೇಶ್ವರಿ ವಿದ್ಯಾಲಯದ ಪ್ರಾಂಶುಪಾಲರಾದ ಶ್ರೀ ಲಕ್ಷ್ಮಿ ಸಚಿನ್ , ಉಪಪ್ರಾಂಶುಪಾಲರು ಉಪಪ್ರಾಂಶುಪಾಲ ಮಂದಣ್ಣ, ಸದಸ್ಯರುಗಳಾದ ಕಿರಣ್ ಕುಮಾರ್, ಪ್ರಶಾಂತ್ ಪಾಲ್ಗೊಂಡಿದ್ದರು.

ಶಾಲಾ ಮಕ್ಕಳಿಗೆ ಆಯೋಜನೆ ಮಾಡಿದ ಪಂದ್ಯ ::  ಎಸ್ ಆರ್ ವಿ ಫುಟ್ಬಾಲ್ ವತಿಯಿಂದ ಮಡಿಕೇರಿ ಶಾಲಾ ಮಕ್ಕಳಿಗೆ ಫುಟ್ಬಾಲ್ ಪಂದ್ಯವನ್ನು ಆಯೋಜನೆ ಮಾಡಲಾಗಿತ್ತು. ಪಂದ್ಯದಲ್ಲಿ ಒಟ್ಟು ಹತ್ತು ತಂಡಗಳು ಪಾಲ್ಗೊಂಡಿದ್ದವು ಈ ಪಂದ್ಯದಲ್ಲಿ ಜನರಲ್ ತಿಮ್ಮಯ್ಯ ಶಾಲೆ ಚಾಂಪಿಯನ್ ಪಟ್ಟ ಅಲಂಕರಿಸಿದರೆ ಸಂತ ಮೈಕಲರ ಶಾಲೆ ರನ್ನರ್ಸ್ ಸ್ಥಾನಕ್ಕೆ ತೃಪ್ತಿಪಟ್ಟು ಕೊಂಡಿತು. ಪಂದ್ಯದಲ್ಲಿ ಹೈ ಸ್ಕೋರರ್ ಆಗಿ ಮಡಿಕೇರಿ ಪ್ರೌಢ ಶಾಲೆಯ ವಿಶ್ವಾಸ್ ಸಿಂಗ್, ಉತ್ತಮ ಗೋಲ್ ಕೀಪರ್ ಆಗಿ ರಾಜೇಶ್ವರಿ ವಿದ್ಯಾಲಯದ ಮಹಸ್ವಿನ್ ಸ್ವಾಮಿ ಪಡೆದರೆ, ಉತ್ತಮ ಆಟಗಾರನಾಗಿ ಜನರಲ್ ತಿಮ್ಮಯ್ಯ ಶಾಲೆಯ ತರುಣ್ ಪಡೆದು ಕೊಂಡರು. ಕ್ರೀಡಾ ಕೂಟಕ್ಕೆ ತೀರ್ಪುಗಾರಿಕಯಾಗಿ ದೈಹಿಕ ಶಿಕ್ಷಣ ಶಿಕ್ಷಕ ಉನ್ನೈಸ್ ಎಂ.ಎಂ., ಇಕ್ರಾ ಪಬ್ಲಿಕ್ ಸ್ಕೂಲ್ ಸಿದ್ದಾಪುರ, ಚೆಟ್ಟಳ್ಳಿಯ ಅಜಿತ್ ಹಾಗೂ ಬೆಂಗಳೂರಿನ ನರಸಿಂಹ (ನಾಣಿ )ಕಾರ್ಯನಿರ್ವಹಿಸಿದರೆ, ವೀಕ್ಷಕ ವಿವರಣೆಯನ್ನು ಚಿಕ್ಕಮಗಳೂರುವಿನ ವೀಕ್ಷಕ ವಿವರಣೆಗಾರ ದಿನೇಶ್ ಹಾಗೂ ಹೆಬ್ಬಟ್ಟಗೇರಿಯ ರಮೇಶ್ ನಡೆಸಿಕೊಟ್ಟರು. ಲೈವ್ ಸ್ಕೋರರ್ ಆಗಿ ಅಶೋಕ್ ಮಡಿಕೇರಿ ಹಾಗೂ ಅಜಿತ್ ನಡೆಸಿಕೊಟ್ಟರು.
ಕ್ರೀಡಾ ಕೂಟದ ಬಹುಮಾನ ವಿತರಣೆ : ಸೋನಾ ಟಿ ವಿ ಎಸ್ ನ, ದೀಪ , ಲಕ್ಷ್ಮಿ ಸಚಿನ್, ಕ್ರಿಸ್ಟೋಫರ್, ,, ಪವನ್, ಅಚ್ಚಯ್ಯ, ಧ್ಯಾನ್, ಉಮೇಶ್ ಹಾಗೂ ಎಸ್ ಆರ್ ವಿ ಫುಟ್ಬಾಲ್ ಚಾಂಪಿಯನ್ ಲೀಗ್ ನ ಆಯೋಜಕರಾದ, ಸಚಿನ್ ವಾಸುದೇವ್, ಲೋಹಿತ್ (ಪಿಕ), ಸುರ್ಜಿತ್, ಮನೋಜ್, ಅಶೋಕ್, ಲಿಖಿತ್, ಬಿಬ್ಲ, ದಿನೇಶ್, ಮನೋಜ್, ಶಮಂತ್ ಪಾಲ್ಗೊಂಡಿದ್ದರು.

ವರದಿ : ಅಶೋಕ್ ಮಡಿಕೇರಿ 

Follow us Follow us
Share. WhatsApp Facebook Twitter Email Telegram Copy Link

Related Posts

*ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*

ಅಕ್ಟೋಬರ್ 2, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.1 NEWS DESK : ಗೋವಾದ ಚೌಗುಲೇ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ಯೂತ್ ಸ್ಪೋರ್ಟ್ಸ್ ಎಜುಕೇಷನ್ ಫೆಡರೇಷನ್ ಇಂಡಿಯಾ ವತಿಯಿಂದ…

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026

*ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*

ಅಕ್ಟೋಬರ್ 1, 2026

*ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*

ಅಕ್ಟೋಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.