Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಶರಣ ಸಾಹಿತ್ಯ ಸಮ್ಮೇಳನ ಕಚೇರಿ ಉದ್ಘಾಟನೆ*
  • *ಮಿತಿ ಮೀರಿದ ವನ್ಯಜೀವಿ ದಾಳಿ : ಐದು ಜಿಲ್ಲೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ : ಬಿಜೆಪಿ ನಿರ್ಧಾರ*
  • *ಶರಣ ಸಾಹಿತ್ಯ ಸಮ್ಮೇಳನ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ*
  • *ಕೊಡಗು ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಆರ್‌ಎಫ್ ಅಡಿಯಲ್ಲಿ ರೂ.22 ಕೋಟಿ ಮಂಜೂರು : ಸಂಸದ  ಯದುವೀರ್ ಒಡೆಯರ್*
  • *ಜೂ.14ಕ್ಕೆ ಮರಾಠ-ಮರಾಟಿ ಸಮಾಜದ ವಾರ್ಷಿಕ ಮಹಾಸಭೆ*
  • *ಮಡಿಕೇರಿಯಲ್ಲಿ ಫಿಟ್ ಇಂಡಿಯಾ ಆಂದೋಲನಕ್ಕೆ ಚಾಲನೆ*
  • *ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ-ಶಿಕ್ಷಕರ ಸಭೆ*
  • *ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ : ಪ್ರಕೃತಿ, ವನ್ಯಜೀವಿಗಳ ಮೇಲೆ ಕಾಳಜಿ ಅಗತ್ಯ : ಸಂಸದ ಯದುವೀರ್ ಒಡೆಯರ್*
  • *ಬಿಜೆಪಿ ಪಕ್ಷದ ವಿರಾಜಪೇಟೆ ಮಂಡಲ ಕಚೇರಿಯನ್ನು ಉದ್ಘಾಟಿಸಿದ ಸಂಸದ ಯದುವೀರ್ ಒಡೆಯರ್*
  • *ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ ಆಚರಣೆ : ಮಾದಕ ವ್ಯಸನದಿಂದ ದೂರವಿರಲು ಎನ್.ಜೆ.ಲತಾ ಕರೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*

ಜನವರಿ 16, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.20 NEWS DESK : ಕೊಡಗು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 2025-26ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರವು ಸ್ಥಾಪಿಸಿರುವ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 6 ರಿಂದ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ ನೀಡಲಾಗುತ್ತಿದೆ. ಈ ಶಾಲೆಗಳಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಅಂದರೆ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರವೇಶ ಲಭ್ಯವಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ರೂ.2.50 ಲಕ್ಷಗಳು ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ರವರಿಗೆ ರೂ. 1 ಲಕ್ಷಗಳ ಆದಾಯ ಮಿತಿ ಇರುತ್ತದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಶೇ.50 ರಷ್ಟು ಸೀಟುಗಳು ವಿದ್ಯಾರ್ಥಿನಿಯರಿಗೆ ಲಭ್ಯವಿರುತ್ತದೆ. ಒಮ್ಮೆ ಈ ವಸತಿ ಶಾಲೆಗಳಿಗೆ ವಿದ್ಯಾರ್ಥಿ ಸೇರಿದಲ್ಲಿ 10ನೇ ತರಗತಿಯವರೆಗೆ ಉಚಿತವಾಗಿ ವಿದ್ಯಾಭ್ಯಾಸ ಮಾಡಬಹುದು. ಈ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 2025-26ನೇ ಸಾಲಿನಲ್ಲಿ 6ನೇ ತರಗತಿಗೆ 50 ವಿದ್ಯಾರ್ಥಿಗಳನ್ನು ಅಟಲ್ ಬಿಹಾರಿ ವಾಜಪೇಯಿ ಶಾಲೆಗಳಲ್ಲಿ 6ನೇ ತರಗತಿಗೆ 80 ವಿದ್ಯಾರ್ಥಿಗಳನ್ನು ಮಾತ್ರ ಸೇರಿಸಿಕೊಳ್ಳಲಾಗುವುದು. ಪ್ರಸ್ತುತ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಬಗ್ಗೆ ತಾಲ್ಲೂಕು ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು. ಈ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಅರ್ಹತೆ ಮತ್ತು ಮೀಸಲಾತಿಯಂತೆ ಪಟ್ಟಿ ತಯಾರಿಸಿ, ಮೆರಿಟ್ ಆಧಾರದ ಮೇಲೆ ಮೀಸಲಾತಿ ಅನ್ವಯ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಯು ತನ್ನ ಸ್ವಂತ ಜಿಲ್ಲೆಯಲ್ಲಿರುವ ಎಲ್ಲಾ ವಸತಿ ಶಾಲೆಗಳಿಗೆ ಪ್ರವೇಶ ಪಡೆಯಲು ಮೀಸಲಾತಿಗನುಗುಣವಾಗಿ ಅರ್ಹರಾಗಿರುತ್ತಾನೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಯು ಪ್ರಾಧಿಕಾರದ ವೆಬ್‍ಸೈಟ್ http://kea.kar.nic.in ಹಾಗೂ www.kreis.kar.nic.in ಅಲ್ಲಿ ಅರ್ಜಿ ಸಲ್ಲಿಸಬಹುದು. ಪ್ರವೇಶ ಪರೀಕ್ಷೆಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಜನವರಿ, 25 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು 2025 ರ ಫೆಬ್ರವರಿ, 06 ರ ನಂತರ ಅರ್ಜಿ ಸಲ್ಲಿಸಿದ ವಸತಿ ಶಾಲೆಯಲ್ಲಿ ಡೌನ್‍ಲೋಡ್ ಮಾಡಿಕೊಳ್ಳುವುದು. ಪ್ರವೇಶ ಪರೀಕ್ಷೆಯು 2025 ರ ಫೆಬ್ರವರಿ, 15 ರಂದು ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ಶರಣ ಸಾಹಿತ್ಯ ಸಮ್ಮೇಳನ ಕಚೇರಿ ಉದ್ಘಾಟನೆ*

ಜೂನ್ 10, 2026

*ಮಿತಿ ಮೀರಿದ ವನ್ಯಜೀವಿ ದಾಳಿ : ಐದು ಜಿಲ್ಲೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ : ಬಿಜೆಪಿ ನಿರ್ಧಾರ*

ಜೂನ್ 10, 2026

*ಶರಣ ಸಾಹಿತ್ಯ ಸಮ್ಮೇಳನ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ*

ಜೂನ್ 10, 2026

*ಮಿತಿ ಮೀರಿದ ವನ್ಯಜೀವಿ ದಾಳಿ : ಐದು ಜಿಲ್ಲೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ : ಬಿಜೆಪಿ ನಿರ್ಧಾರ*

ಜೂನ್ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಜೂ.10 : ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದ 5 ಜಿಲ್ಲೆಗಳಲ್ಲಿ ವನ್ಯಜೀವಿಗಳ ಹಾವಳಿ ಮಿತಿ ಮೀರಿದೆ.…

*ಶರಣ ಸಾಹಿತ್ಯ ಸಮ್ಮೇಳನ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ*

ಜೂನ್ 10, 2026

*ಕೊಡಗು ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಆರ್‌ಎಫ್ ಅಡಿಯಲ್ಲಿ ರೂ.22 ಕೋಟಿ ಮಂಜೂರು : ಸಂಸದ  ಯದುವೀರ್ ಒಡೆಯರ್*

ಜೂನ್ 10, 2026

*ಜೂ.14ಕ್ಕೆ ಮರಾಠ-ಮರಾಟಿ ಸಮಾಜದ ವಾರ್ಷಿಕ ಮಹಾಸಭೆ*

ಜೂನ್ 9, 2026

*ಮಡಿಕೇರಿಯಲ್ಲಿ ಫಿಟ್ ಇಂಡಿಯಾ ಆಂದೋಲನಕ್ಕೆ ಚಾಲನೆ*

ಜೂನ್ 9, 2026

*ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ-ಶಿಕ್ಷಕರ ಸಭೆ*

ಜೂನ್ 9, 2026

*ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ : ಪ್ರಕೃತಿ, ವನ್ಯಜೀವಿಗಳ ಮೇಲೆ ಕಾಳಜಿ ಅಗತ್ಯ : ಸಂಸದ ಯದುವೀರ್ ಒಡೆಯರ್*

ಜೂನ್ 9, 2026

*ಬಿಜೆಪಿ ಪಕ್ಷದ ವಿರಾಜಪೇಟೆ ಮಂಡಲ ಕಚೇರಿಯನ್ನು ಉದ್ಘಾಟಿಸಿದ ಸಂಸದ ಯದುವೀರ್ ಒಡೆಯರ್*

ಜೂನ್ 9, 2026

*ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ ಆಚರಣೆ : ಮಾದಕ ವ್ಯಸನದಿಂದ ದೂರವಿರಲು ಎನ್.ಜೆ.ಲತಾ ಕರೆ*

ಜೂನ್ 9, 2026

*ಸೋಮವಾರಪೇಟೆ : ಕಾರ್ಯಕರ್ತರ ಸಮಸ್ಯೆ ಆಲಿಸಿದ ಶಾಸಕ ಡಾ.ಮಂತರ್ ಗೌಡ*

ಜೂನ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.