Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಆರೋಗ್ಯ ಮಾಹಿತಿ ಕಾರ್ಯಾಗಾರ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಅಗತ್ಯ : ಡಾ.ಸತೀಶ್ ಕುಮಾರ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಆರೋಗ್ಯ ಮಾಹಿತಿ ಕಾರ್ಯಾಗಾರ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಅಗತ್ಯ : ಡಾ.ಸತೀಶ್ ಕುಮಾರ್

ಜನವರಿ 16, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement


ಮಡಿಕೇರಿ ಜ.16 NEWS DESK : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೂಲಕ 48ಕ್ಕೂ ಹೆಚ್ಚು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ನಡೆಯುತ್ತಿದ್ದು, ಇವುಗಳ ಬಗ್ಗೆ ಪ್ರತಿಯೊಬ್ಬರಲ್ಲಿಯೂ ಸಹ ಜಾಗೃತಿ ಅಗತ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ತಿಳಿಸಿದ್ದಾರೆ. ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದ ಡಿಎಚ್‍ಒ ಅವರ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಹಾಗೂ ಯೋಜನೆಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಏರ್ಪಡಿಸಲಾಗಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಸಾರ್ವಜನಿಕರಿಗೆ ಪರಿಣಾಮಕಾರಿಯಾಗಿ ತಲುಪಿಸಲು ಪ್ರಯತ್ನಿಸಲಾಗಿದೆ ಎಂದು ಅವರು ಹೇಳಿದರು. ‘ಜಿಲ್ಲೆಯಲ್ಲಿ ಜನವರಿಯಿಂದ ನವೆಂಬರ್ ಅಂತ್ಯದವರೆಗೆ ನಾಯಿ ಕಡಿತ 4015 ಪ್ರಕರಣಗಳು, ಹಾವು ಕಡಿತ 307 ಪ್ರಕರಣಗಳು, ಭೇದಿ 2292 ಪ್ರಕರಣಗಳು, ಟೈಪಾಯಿಡ್ 846 ಪ್ರಕರಗಣಗಳು, ಡೆಂಗ್ಯೂ 274 ಪ್ರಕರಣಗಳು, ಕಾಲರಾ 3 ಪ್ರಕರಣ, ಮಲೇರಿಯಾ 3, ಇಲಿಜ್ವರ 13 ಪ್ರಕರಣಗಳು ವರದಿಯಾಗಿದ್ದು, ಯಾವುದೇ ರೀತಿಯ ಸಾವು ಸಂಭವಿಸಿಲ್ಲ ಎಂದು ತಿಳಿಸಿದರು.’ ಜಿಲ್ಲೆಯಲ್ಲಿ ನವೆಂಬರ್ ಅಂತ್ಯದ ವರೆಗೆ ತಾಯಿ ಮರಣ ಸಂಭವಿಸಿಲ್ಲ. ಆದರೆ ಡಿಸೆಂಬರ್ ತಿಂಗಳಲ್ಲಿ ಒಬ್ಬ ತಾಯಿ ಮರಣ ಹೊಂದಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ಶಾಲಾ-ಕಾಲೇಜು ವ್ಯಾಪ್ತಿಯಲ್ಲಿ ತಂಬಾಕು ಮುಕ್ತಗೊಳಿಸುವಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ. ಏಪ್ರಿಲ್‍ನಿಂದ ನವೆಂಬರ್ ವರೆಗೆ 53 ಶಾಲೆಗಳಲ್ಲಿ, 30 ಕಾಲೇಜುಗಳಲ್ಲಿ ತಂಬಾಕು ಸಂಬಂಧ ಜಾಗೃತಿ ಮೂಡಿಸಲಾಗಿದೆ ಎಂದು ಹೇಳಿದರು. ‘ಕೋವಿಡ್ ಸಂದರ್ಭ ಹಾಗೂ ಇತರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಸಂಬಂಧಿಸಿದಂತೆ ಹೆಚ್ಚಿನ ಅರಿವು ಮೂಡಿಸುವಲ್ಲಿ ಮಾಧ್ಯಮಗಳ ಪಾತ್ರ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜೊತೆ ಕೈಜೋಡಿಸಿ ಹೆಚ್ಚಿನ ಅರಿವು ಮೂಡಿಸುವಲ್ಲಿ ಸಹಕರಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಸರ್ಕಾರದ ಆಶಯದಂತೆ ‘ಎಲ್ಲೆಡೆ ಆರೋಗ್ಯ, ಎಲ್ಲರಿಗೂ ಆರೋಗ್ಯ’ ಎಂಬಂತೆ, ಆರೋಗ್ಯ ಸೇವೆ ಕಲ್ಪಿಸುವಲ್ಲಿ ಶ್ರಮಿಸಲಾಗುತ್ತಿದೆ ಎಂದು ಡಾ.ಸತೀಶ್ ಕುಮಾರ್ ನುಡಿದರು.’ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಅವರು ಮಾತನಾಡಿ ಕುಟುಂಬ ಯೋಜನೆ ಕಾಪಾಡುವ ನಿಟ್ಟಿನಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸೆಯನ್ನು ಏರ್ಪಡಿಸಲಾಗುತ್ತಿದೆ. ಆ ನಿಟ್ಟಿನಲ್ಲಿ ಪುರುಷರ ಸಹಭಾಗಿತ್ವ ಅತ್ಯಗತ್ಯ ಎಂದರು. ಪ್ರಸಕ್ತ ವರ್ಷದಲ್ಲಿ 18 ಗುರಿಯಲ್ಲಿ 10 ಮಂದಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವ ಪುರುಷರಿಗೆ 1100 ರೂ. ಪ್ರೋತ್ಸಾಹ ಧನ ನೀಡಲಾಗುತ್ತದೆ ಎಂದು ತಿಳಿಸಿದರು. ಪ್ರಸವ ಪೂರ್ವ ಲಿಂಗಪತ್ತೆ ಕಾರ್ಯವು ಕಾನೂನು ಬಾಹಿರವಾಗಿದ್ದು, ಸ್ಕ್ಯಾನಿಂಗ್ ಸೆಂಟರ್‍ಗಳು ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು. ನೋಂದಣಿ ಮಾಡಿಸಿಕೊಳ್ಳದಿದ್ದಲ್ಲಿ ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಸಿದರು. ಮೂರು ತಿಂಗಳಿಗೊಮ್ಮೆ ಸ್ಕ್ಯಾನಿಂಗ್ ಸೆಂಟರ್‍ಗಳಿಗೆ ದಿಢೀರ್ ಭೇಟಿ ನೀಡಿ ಮಾಹಿತಿ ಪಡೆಯಲಾಗುತ್ತಿದೆ. ಒಂದು ಪ್ರಕರಣ ನ್ಯಾಯಾಲಯ ಹಂತದಲ್ಲಿದೆ ಎಂದು ಡಾ.ಆನಂದ್ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಖಾಸಗಿ ಆರೋಗ್ಯ ಸಂಸ್ಥೆಗಳು 200ಕ್ಕೂ ಹೆಚ್ಚು ನೋಂದಣಿಯಾಗಿವೆ. ನೋಂದಣಿಯಾಗದಿದ್ದಲ್ಲಿ ಹತ್ತಿರದವರು ಮಾಹಿತಿ ನೀಡುವಂತಾಗಬೇಕು ಎಂದು ಕೋರಿದರು. ಶ್ರವಣದೋಷ ನಿವಾರಣಾ ಕಾರ್ಯಕ್ರಮದಲ್ಲಿ ಶ್ರವಣ ಉಪಕರಣ ನೀಡಲಾಗುತ್ತದೆ. ಕ್ಷಯರೋಗ ನಿಯಂತ್ರಣಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ. ಉಚಿತ ಔಷಧಿ ನೀಡಲಾಗುತ್ತದೆ ಎಂದರು. ಹೆಚ್‍ಐವಿ ಬಗ್ಗೆ ಆಪ್ತ ಸಮಾಲೋಚನೆ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯಲ್ಲಿ 11 ಐಸಿಟಿಸಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ ಎಂದರು. ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಮಧುಸೂದನ ಮಾತನಾಡಿ, ಜನನಿ ಸುರಕ್ಷಾ ಯೋಜನೆ, ಜನನಿ ಶಿಶು ಸುರಕ್ಷಾ ಕಾರ್ಯಕ್ರಮ, ಅಪೌಷ್ಟಿಕ ಮಕ್ಕಳ ಪಾಲನಾ ಕೇಂದ್ರ, ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಯೋಜನೆ, ನ್ಯೂಮೋನೀಯಾ ತಡೆಗಟ್ಟುವಿಕೆ, ಸಾಮಾಜಿಕ ಜಾಗೃತಿ ಮೂಡಿಸುವುದು, ಶುಚಿ ಕಾರ್ಯಕ್ರಮ, ವೈಪ್ಸ್, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ, ರಾಷ್ಟ್ರೀಯ ಕಿಶೋರಿ ಸ್ವಾಸ್ಥ್ಯ ಕಾರ್ಯಕ್ರಮ(ಸ್ನೇಹ ಕ್ಲಿನಿಕ್), ರಾಷ್ಟ್ರೀಯ ಅತಿಸಾರ ಭೇದಿ ನಿಯಂತ್ರಣ, ರಾಷ್ಟ್ರೀಯ ಜಂತುಹುಳು ನಿವಾರಣೆ ಹೀಗೆ ಹಲವು ಕಾರ್ಯಕ್ರಮಗಳು ಇವೆ ಎಂದರು. ಜಿಲ್ಲಾ ಸರ್ವೇಕ್ಷಣಾ ಘಟಕದ ಅಧಿಕಾರಿ ಡಾ.ಶ್ರೀನಿವಾಸ್ ಮಾತನಾಡಿ, ಎನ್‍ಪಿಎನ್‍ಸಿಡಿ, ಸಮಗ್ರ ರೋಗಗಳ ಕಣ್ಗಾವಲು ಯೋಜನೆ, ರಾಷ್ಟ್ರೀಯ ಕೀಟ ಜನ್ಯ ರೋಗಗಳ ನಿಯಂತ್ರಣ, ರಾಷ್ಟ್ರೀಯ ಅಯೋಡಿನ್ ಕೊರತೆ ರೋಗಗಳ ನಿಯಂತ್ರಣ, ರೇಬಿಸ್ ನಿಯಂತ್ರಣ, ಹವಾಮಾನ ಬದಲಾವಣೆ ಮತ್ತು ಮಾನವ ಆರೋಗ್ಯ ರಾಷ್ಟ್ರೀಯ ಕಾರ್ಯಕ್ರಮ, ಆರೋಗ್ಯ ಮತ್ತು ಕ್ಷೇಮ ಕೇಂದ್ರ, ಎನ್‍ಪಿಎನ್‍ಸಿಡಿ ಕಾರ್ಯಕ್ರಮ, ಎನ್‍ಪಿಪಿಸಿ ಕಾರ್ಯಕ್ರಮ, ಎನ್‍ಪಿಎಚ್‍ಸಿಇ ಕಾರ್ಯಕ್ರಮ, ರಾಷ್ಟ್ರೀಯ ತಂಬಾಕು ನಿಯಂತ್ರಣ ಹೀಗೆ ವಿವಿಧ ಕಾರ್ಯಕ್ರಮ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಅವರು ಕಾರ್ಯಕ್ರಮದ ಉದ್ದೇಶ ಕುರಿತು ಮಾಹಿತಿ ನೀಡಿದರು. ದೇವರಾಜು, ಮಾಹಿತಿ ಶಿಕ್ಷಣ ವಿಭಾಗದ ಪಾಲಾಕ್ಷ, ಮಂಜುಳ, ಜ್ಯೋತಿ, ಸುನಿತಾ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಅ.27ರಂದು 24ನೇ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಡಾ. ಲಲಿತ ಕೆ.ಪಿ. ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 25, 2026

ವಿರಾಜಪೇಟೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ; ಸ್ವಾವಲಂಬಿ ಬದುಕಿಗೆ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಮುಖ್ಯ: ಆನಂದ ಸುವರ್ಣ

ಅಕ್ಟೋಬರ್ 25, 2026

48ನೇ ಗೋಣಿಕೊಪ್ಪ ದಸರಾ ಜನೋತ್ಸವದಲ್ಲಿ ಭರತನಾಟ್ಯ ಮತ್ತು ಸಂಗೀತ ಪ್ರದರ್ಶನ

ಅಕ್ಟೋಬರ್ 25, 2026

ವಿರಾಜಪೇಟೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ; ಸ್ವಾವಲಂಬಿ ಬದುಕಿಗೆ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಮುಖ್ಯ: ಆನಂದ ಸುವರ್ಣ

ಅಕ್ಟೋಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.25: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಜ್ಞಾನವಿಕಾಸ ಕಾರ್ಯಕ್ರಮದಡಿ ವಿರಾಜಪೇಟೆಯ…

48ನೇ ಗೋಣಿಕೊಪ್ಪ ದಸರಾ ಜನೋತ್ಸವದಲ್ಲಿ ಭರತನಾಟ್ಯ ಮತ್ತು ಸಂಗೀತ ಪ್ರದರ್ಶನ

ಅಕ್ಟೋಬರ್ 25, 2026

ಕಿವುಡ ಕ್ರೀಡಾಪಟುಗಳಿಗೆ ಪ್ರಾಯೋಜಕತ್ವದ ನೆರವಿಗೆ ಕೊಡಗು ಜಿಲ್ಲಾ ಕಿವುಡರ ಸಂಘದ ಮನವಿ; ರಾಜ್ಯಮಟ್ಟದ ಕ್ರಿಕೆಟ್, ವಾಲಿಬಾಲ್ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಸಜ್ಜು; ದಾನಿಗಳ ಸಹಕಾರಕ್ಕೆ ಅಧ್ಯಕ್ಷ ಸ್ಯಾಮ್ ಜೋಸೆಫ್ ಮನವಿ

ಅಕ್ಟೋಬರ್ 25, 2026

ನ. 2–3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ; 23 ಜಿಲ್ಲೆಗಳ ಪತ್ರಕರ್ತರ ತಂಡಗಳು ಭಾಗಿ; ಮಡಿಕೇರಿಯಲ್ಲಿ ಆಯೋಜನೆ

ಅಕ್ಟೋಬರ್ 25, 2026

ಮಾದಕ ದ್ರವ್ಯಗಳಿಂದ ದೂರವಿದ್ದು ವ್ಯಸನಮುಕ್ತ ಭಾರತ ನಿರ್ಮಾಣಕ್ಕೆ ಪಣ ತೊಡಿ: ಎ.ಎಸ್.ಐ. ಸುಮತಿ; ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್ನೆಸ್ಸೆಸ್ ಶಿಬಿರ

ಅಕ್ಟೋಬರ್ 25, 2026

ಕೊಡಗಿನಲ್ಲಿ ಶೀಘ್ರ ಸಚಿವ ಸಂಪುಟ ಸಭೆ ನಡೆಸಲು ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ

ಅಕ್ಟೋಬರ್ 25, 2026

ಮಂಗಳೂರು ವಲಯದ ಅಂಡರ್-15 ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಆಯ್ಕೆ

ಅಕ್ಟೋಬರ್ 24, 2026

ಕುಶಾಲನಗರ : ಮಳೆಯಿಂದ ಮನೆಗಳಿಗೆ ಹಾನಿ

ಅಕ್ಟೋಬರ್ 24, 2026

ಮಳೆಯಿಂದ ಕೊಡಗಿನ ವಿವಿಧೆಡೆ ಹಾನಿ : ಕುಸಿದು ಬಿದ್ದ ಮನೆಗಳ ಗೋಡೆ, ಮೇಲ್ಛಾವಣಿ, ಕೊಟ್ಟಿಗೆ

ಅಕ್ಟೋಬರ್ 24, 2026

ಮಡಿಕೇರಿಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.