Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*
  • *ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*
  • *ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*
  • ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ
  • *ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*
  • *ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*
  • *ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*
  • *ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*
  • *7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*
  • *ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸರಕಾರದ ಕೋಟಿ ಕೋಟಿ ಅನುದಾನ ಬೇಡ, ನಮ್ಮನ್ನು ಸ್ವಚ್ಛಂದವಾಗಿ ಬದುಕಲು ಬಿಡಿ : ಆದಿವಾಸಿಗಳ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸರಕಾರದ ಕೋಟಿ ಕೋಟಿ ಅನುದಾನ ಬೇಡ, ನಮ್ಮನ್ನು ಸ್ವಚ್ಛಂದವಾಗಿ ಬದುಕಲು ಬಿಡಿ : ಆದಿವಾಸಿಗಳ ಆಗ್ರಹ*

ಜನವರಿ 17, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.17 NEWS DESK : ಆದಿವಾಸಿಗಳ ಹೆಸರಿನಲ್ಲಿ ಸರಕಾರಗಳು ಕೋಟಿ ಕೋಟಿ ಅನುದಾನ ಘೋಷಣೆ ಮಾಡುತ್ತಿವೆ, ಆದರೆ ಯಾವುದೇ ಸೌಲಭ್ಯಗಳು ನೈಜ ಆದಿವಾಸಿಗಳ ಪಾಲಾಗುತ್ತಿಲ್ಲ. ನಮ್ಮನ್ನು ಮೊದಲಿನಂತೆ ಗಾಳಿ ಬೆಳಕಿನೊಂದಿಗೆ ಸ್ವಚ್ಛಂದವಾಗಿ ಬದುಕಲು ಬಿಡಿ ಎಂದು ಅರಣ್ಯ ಹಕ್ಕು ಸಮಿತಿ ಹಾಗೂ ಕೊಡಗಿನ ಆದಿವಾಸಿ ಮುಖಂಡರು ಆಗ್ರಹಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಜಿಲ್ಲಾ ಆದಿವಾಸಿ ಮುಖಂಡ ಆರ್.ಕೆ.ಚಂದ್ರು ದೇಶಕ್ಕೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳೇ ಕಳೆದಿದ್ದರೂ ಆದಿವಾಸಿಗಳಿಗೆ ಇಂದಿಗೂ ಟಾರ್ಪಲ್ ಗಳನ್ನು ವಿತರಿಸಲಾಗುತ್ತಿದೆ. ನಮಗೆ ಟಾರ್ಪಲ್ ನ ಅವಶ್ಯಕತೆ ಇಲ್ಲ, ಈ ಸೌಲಭ್ಯವನ್ನು ರದ್ದುಗೊಳಿಸಿ ಎಂದು ಒತ್ತಾಯಿಸಿದರೂ ರದ್ದುಗೊಳಿಸುತ್ತಿಲ್ಲ. ಇರುವ ಗುಡಿಸಲುಗಳಿಗೆ ವಿದ್ಯುತ್ ಬೆಳಕಿನ ವ್ಯವಸ್ಥೆಯಿಲ್ಲ. ಪ್ರತಿವರ್ಷ ಸರಕಾರಗಳು ಆದಿವಾಸಿಗಳ ಹೆಸರಿನಲ್ಲಿ ಕೋಟಿ ಕೋಟಿ ಅನುದಾನದ ಮಾತನಾಡುತ್ತವೆ. ಆದರೆ ನಮಗೇನು ದೊರೆಯುತ್ತಿಲ್ಲ, ಸರಕಾರದ ಯಾವುದೇ ಅನುದಾನ ನಮಗೆ ಬೇಕಿಲ್ಲ. ನಾವಿರುವ ಅರಣ್ಯ ಮತ್ತು ಅರಣ್ಯದ ಅಂಚಿನಲ್ಲಿ ಪ್ರಕೃತಿಯ ಗಾಳಿ, ಬೆಳಕಿನೊಂದಿಗೆ ನೆಮ್ಮದಿಯಾಗಿ ಜೀವಿಸಲು ಅವಕಾಶ ನೀಡಲಿ. ಸರಕಾರದ ನಿರ್ಲಕ್ಷ್ಯದಿಂದ ನಮಗೆ ಕಣ್ಣೀರು ಹಾಕಲು ಕೂಡ ಕಣ್ಣಿನಲ್ಲಿ ನೀರು ಇಲ್ಲದಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಅರಣ್ಯದಲ್ಲಿ ಹೋಂಸ್ಟೇಗಳನ್ನು ನಿರ್ಮಿಸಲು ಅವಕಾಶ ನೀಡುವ ಆಡಳಿತ ವ್ಯವಸ್ಥೆ ತಲೆತಲಾಂತರಗಳಿಂದ ಅರಣ್ಯದಲ್ಲೇ ಹುಟ್ಟಿ ಬೆಳೆದ ನಮಗೆ ಬದುಕಲು ಅವಕಾಶ ನೀಡುತ್ತಿಲ್ಲ. 2006 ರಲ್ಲಿ ಜಾರಿಗೆ ಬಂದ ಅರಣ್ಯ ಹಕ್ಕು ಮಸೂದೆ ಇನ್ನೂ ಕೂಡ ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಂಡಿಲ್ಲ. ಭೂಮಿಯ ಹಕ್ಕುಪತ್ರವನ್ನು ಮಾತ್ರ ನೀಡಲಾಗಿದ್ದು, ಆರ್‍ಟಿಸಿ ಮಂಜೂರು ಮಾಡದೆ ಇರುವುದರಿಂದ ಜೇನು ಕುರುಬ ಸೇರಿದಂತೆ ಆದಿವಾಸಿ ಸಮುದಾಯಕ್ಕೆ ಸರಕಾರ ಮತ್ತು ಬ್ಯಾಂಕ್ ನ ಯಾವುದೇ ಸೌಲಭ್ಯ ದೊರೆಯುತ್ತಿಲ್ಲ. ಹಣ ಇರುವವರು ಆರ್‍ಟಿಸಿ ಮಾಡಿಕೊಂಡಿದ್ದಾರೆ, ಹಣವಿಲ್ಲದ ಆದಿವಾಸಿಗಳು ಅತಂತ್ರ ಬದುಕು ಸಾಗಿಸುತ್ತಿದ್ದಾರೆ. ಆದಿವಾಸಿಗಳ ಮಕ್ಕಳು ಪಿಯುಸಿ, ಪದವಿ ಶಿಕ್ಷಣ ಪಡೆದಿದ್ದರೂ ಯಾರೊಬ್ಬರಿಗೂ ಇಲ್ಲಿಯವರೆಗೆ ಸರಕಾರಿ ಹುದ್ದೆ ದೊರೆತ್ತಿಲ್ಲ. ಚುನಾವಣೆ ಸಂದರ್ಭ ಮಾತ್ರ ರಾಜಕಾರಣಿಗಳು ನಮ್ಮ ಬಳಿ ಬರುತ್ತಾರೆ. ಇತ್ತೀಚೆಗೆ ಮುಖ್ಯಮಂತ್ರಿಗಳು ಅಧಿಕಾರಿಗಳ ಸಭೆ ನಡೆಸಿ ಆದಿವಾಸಿಗಳಿಗೆ ಎಲ್ಲಾ ಸೌಲಭ್ಯಗಳನ್ನು ನೀಡಬೇಕೆಂದು ಸೂಚನೆ ನೀಡಿದ್ದಾರೆ. ಆದರೆ ಅಧಿಕಾರಿಗಳು ಇಂದಿಗೂ ಸೌಲಭ್ಯ ನೀಡಲು ಮುಂದಾಗಿಲ್ಲ. ನಕಲಿ ಜಾತಿ ಪ್ರಮಾಣ ಪತ್ರ ಇರುವವರಿಗೆ ಎಲ್ಲಾ ಸೌಲಭ್ಯ ದೊರೆಯುತ್ತಿದೆ ಎಂದು ಆರ್.ಕೆ.ಚಂದ್ರು ಆರೋಪಿಸಿದರು.
::: ಅರಣ್ಯ ಹಕ್ಕು ಗ್ರಾಮಸಭೆ :::
ಅರಣ್ಯ ಹಕ್ಕು ಮಸೂದೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಆಡಳಿತ ವ್ಯವಸ್ಥೆಯ ಗಮನ ಸೆಳೆಯಲು ಜ.21 ರಂದು ಕುಶಾಲನಗರ ತಾಲ್ಲೂಕಿನ ಚಿಕ್ಲಿಹೊಳೆ ಕಟ್ಟೆಹಾಡಿಯಲ್ಲಿ ಗ್ರಾಮಸಭೆಯನ್ನು ಆಯೋಜಿಸಲಾಗಿದೆ. ಈ ಸಭೆಗೆ ಸಂಬಂಧಪಟ್ಟ ಅಧಿಕಾರಿಗಳು ಖುದ್ದು ಹಾಜರಾಗಬೇಕೆಂದು ಒತ್ತಾಯ ಮಾಡುತ್ತೇವೆಯೇ ಹೊರತು ಮನವಿ ಮಾಡುವುದಿಲ್ಲ. ಒಂದು ವೇಳೆ ಹಾಜರಾಗದಿದ್ದಲ್ಲಿ ಜಿಲ್ಲಾವ್ಯಾಪಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಜೇನು ಕುರುಬರ ಅಭಿವೃದ್ಧಿ ಸಂಘದ ಸಂಘಟನಾ ಕಾರ್ಯದರ್ಶಿ ಜೆ.ಟಿ.ಕಾಳಿಂಗ ಮಾತನಾಡಿ 2006ರಲ್ಲಿ ಅರಣ್ಯ ಹಕ್ಕು ಕಾಯ್ದೆ ಜಾರಿಯಾಗಿದೆ, ವೈಯಕ್ತಿಕ ಹಕ್ಕು ಹಾಗೂ ಸಮುದಾಯದ ಹಕ್ಕಿಗಾಗಿ ಎಲ್ಲಾ ದಾಖಲೆಗಳನ್ನು ನೀಡಿದ್ದರೂ ಕೂಡ ಹಕ್ಕುಪತ್ರ ವಿತರಿಸದೆ ಸತಾಯಿಸಲಾಗುತ್ತಿದೆ. ಸರಕಾರದ ನಿರಾಸಕ್ತಿಯಿಂದ ಆದಿವಾಸಿ ಕುಟುಂಬಗಳು ಸಂಕಷ್ಟದ ಬದುಕು ಸಾಗಿಸುತ್ತಿವೆ ಎಂದು ಆರೋಪಿಸಿದರು. ಅರಣ್ಯ ಹಕ್ಕುಪತ್ರ ಜಮೀನನ್ನು ಕಂದಾಯ ಜಮೀನಾಗಿ ಪರಿವರ್ತಿಸಿ ಭೂ ಒಡೆತನ ನೀಡಬೇಕು. ಪಿಯುಸಿ ಮತ್ತು ಪದವಿ ವ್ಯಾಸಂಗ ಮಾಡಿರುವ ಆದಿವಾಸಿ ವಿದ್ಯಾರ್ಥಿಗಳಿಗೆ ಸರಕಾರಿ ಉದ್ಯೋಗ ನೀಡಬೇಕು. ಎಲ್ಲಾ ಹಾಡಿಗಳಿಗೆ ಸಮುದಾಯದ ಹಕ್ಕು ಒದಗಿಸಬೇಕು. ಆದಿವಾಸಿ ಸಮುದಾಯಗಳ ಹೆಸರಿನಲ್ಲಿ ಬರುವ ಕಾಮಗಾರಿಗಳು ದುರುಪಯೋಗವಾಗದಂತೆ ಕ್ರಮ ಕೈಗೊಳ್ಳಬೇಕು. ಸೇರಿದಂತೆ ಆದಿವಾಸಿಗಳ ಎಲ್ಲಾ ಬೇಡಿಕೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಈಡೇರಿಸದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಅರಣ್ಯ ಹಕ್ಕು ಸಮಿತಿಯಿಂದ ಜಿಲ್ಲೆಯ ಎಲ್ಲಾ ಭಾಗಗಳಲ್ಲಿ ತೀವ್ರ ರೀತಿಯ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾವಿನಹಳ್ಳ ಅರಣ್ಯ ಹಕ್ಕು ಸಮಿತಿ ಅಧ್ಯಕ್ಷ ಜೆ.ಎಂ.ನಾಗೇಶ, ಉಪಾಧ್ಯಕ್ಷ ಜೆ.ಪಿ.ಚಂದ್ರಪ್ಪ ಹಾಗೂ ಕಟ್ಟೆಹಾಡಿ ಅಧ್ಯಕ್ಷ ಜೆ.ಕೆ.ಅಪ್ಪು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*

ಅಕ್ಟೋಬರ್ 2, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.1 NEWS DESK : ಗೋವಾದ ಚೌಗುಲೇ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ಯೂತ್ ಸ್ಪೋರ್ಟ್ಸ್ ಎಜುಕೇಷನ್ ಫೆಡರೇಷನ್ ಇಂಡಿಯಾ ವತಿಯಿಂದ…

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026

*ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*

ಅಕ್ಟೋಬರ್ 1, 2026

*ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*

ಅಕ್ಟೋಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.