Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ಫೋನಿಕ್ಸ್ ಮಾಡೆಲ್ ಹಂಟ್ ನಲ್ಲಿ ಪ್ರಥಮ ಸ್ಥಾನ ಪಡೆದ ಪಾಲೆಯಂಡ ಕುಶಾಲ್ ನಾಣಯ್ಯ*
  • *ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ಭರತನಾಟ್ಯ ಪ್ರದರ್ಶನ ನೀಡಿದ ವಿರಾಜಪೇಟೆಯ ಭರತನಾಟ್ಯ ಪ್ರತಿಭೆ ಲಾವಣ್ಯ ಬೋರ್ಕರ್*
  • *ಸೋಮವಾರಪೇಟೆಯಲ್ಲಿ ತಡೆಗೋಡೆ ಕಾಮಗಾರಿ ಕಳಪೆ ಆರೋಪ: ಅಪ್ಪಚ್ಚು ರಂಜನ್ ಪರಿಶೀಲನೆ*
  • *ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ 61ನೇ ಪುಣ್ಯಸ್ಮರಣೆ : ಮಹಾನ್ ಯೋಧನ ಸಾಹಸ ಯುವ ಸಮೂಹಕ್ಕೆ ಪ್ರೇರಣಾದಾಯಕ : ನಿವೃತ್ತ ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ ಅಭಿಮತ*
  • *ಕೊಡವ ಮಕ್ಕಡ ಕೂಟದ 127ನೇ ಪುಸ್ತಕ ‘ಆಟ್-ಪಾಟ್ ಪಡಿಪು’ ಲೋಕಾರ್ಪಣೆ*
  • *ಶ್ರೀ ತಿರುಮಲ ದೇವಸ್ಥಾನದ ಗದ್ದೆಯಲ್ಲಿ ಗ್ರಾಮಸ್ಥರಿಂದ ಸಾಮೂಹಿಕ ನಾಟಿ*
  • *ಯುವ ನಾಯಕರ ಭವಿಷ್ಯ ರೂಪಿಸುವಲ್ಲಿ ಜೆಸಿಐ ಭಾರತ ವಿಶ್ವದಲ್ಲೇ ನಂ.1: ಭರತ್ ಆಚಾರ್ಯ*
  • *ರೋಟರಿ ಮಡಿಕೇರಿಯಲ್ಲಿ ನ್ಯಾಷನಲ್ ಬಿಲ್ಡರ್ಸ್ ಅವಾರ್ಡ್ ಪ್ರದಾನ ಶಿಕ್ಷಕರು ರಾಷ್ಟ್ರ ನಿರ್ಮಾಣದ ಶಿಲ್ಪಿಗಳು : ಮನೋಹರ್ ಕಾಮತ್*
  • *ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವ ಮುಸ್ಲಿಂ ಕೌಟುಂಬಿಕ ವಾಲಿಬಾಲ್ ಕಪ್‍ಗೆ ಚಾಲನೆ : ಕೊಡಗು ಕ್ರೀಡಾ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಲಿ : ಸೂಫಿ ಹಾಜಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವ ಮುಸ್ಲಿಂ ಕೌಟುಂಬಿಕ ವಾಲಿಬಾಲ್ ಕಪ್‍ಗೆ ಚಾಲನೆ : ಕೊಡಗು ಕ್ರೀಡಾ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಲಿ : ಸೂಫಿ ಹಾಜಿ

ಜನವರಿ 18, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಪೊನ್ನಂಪೇಟೆ ಜ.18 NEWS DESK : ಕ್ರೀಡೆಯ ತವರು ಎಂದು ಕರೆಸಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ವಿವಿಧ ಕ್ರೀಡಾಕೂಟಗಳು ನಿರಂತರವಾಗಿ ನಡೆಯುತ್ತಿದೆ. ಈ ರೀತಿಯ ಕ್ರೀಡಾಕೂಟಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೊಡಗು ಕ್ರೀಡಾ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲು ಸರಕಾರ ಮುಂದಾಗಬೇಕು ಎಂದು ಆಗ್ರಹಿಸಿರುವ ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ಅಧ್ಯಕ್ಷರಾದ ವಿರಾಜಪೇಟೆಯ ದುದ್ದಿಯಂಡ ಹೆಚ್. ಸೂಫಿ ಹಾಜಿ, ಇದರಿಂದ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯುವುದಲ್ಲದೆ ಜಿಲ್ಲೆಯಿಂದ ಹೆಚ್ಚಿನ ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ಉತ್ಪಾದಿಸಬಹುದಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ವಿರಾಜಪೇಟೆ ಸಮೀಪದ ಬೇಟೋಳಿ ಗ್ರಾಮದಲ್ಲಿರುವ ಚಿಟ್ಟಡೆಯ ಜುಮ್ಮಾ ಮಸೀದಿ ಮೈದಾನದಲ್ಲಿ ಚಿಟ್ಟಡೆಯ ಕೂವಲೆರ ಕುಟುಂಬಸ್ಥರ ಆತಿಥ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಕೊಡವ ಮುಸ್ಲಿಂ ಮನೆತನಗಳ ನಡುವಿನ ಪ್ರಥಮ ವರ್ಷದ ಹೊನಲು ಬೆಳಕಿನ ಕೌಟುಂಬಿಕ ವಾಲಿಬಾಲ್ ಪಂದ್ಯಾವಳಿ “ಕೂವಲೆರ ಚಿಟ್ಟಡೆ ಕಪ್ -2025″ಅನ್ನು ವಿದ್ಯುಕ್ತವಾಗಿ ಉದ್ಘಾಟಿಸಿ ಮಾತನಾಡಿದ ಅವರು, ಕೊಡಗಿನಲ್ಲಿ ಮಳೆಗಾಲದ ಮೂರು ತಿಂಗಳನ್ನು ಹೊರತುಪಡಿಸಿದರೆ ಉಳಿದ ಎಲ್ಲಾ ಅವಧಿಯಲ್ಲೂ ಬೇರೆ ಬೇರೆ ರೀತಿಯ ಕ್ರೀಡಾಕೂಟಗಳು ನಿರಂತರವಾಗಿ ಜರುಗುತ್ತಿರುತ್ತವೆ. ಇದರಿಂದಾಗಿ ಕ್ರೀಡಾಕೂಟಗಳನ್ನು ಆಯೋಜಿಸುವ ತಂಡಗಳಿಗೆ ಸಹಜವಾಗಿಯೇ ಆರ್ಥಿಕ ಕೊರತೆ ಎದುರಾಗುತ್ತದೆ. ಇದನ್ನು ನೀಗಿಸಲು ಸರಕಾರ ಕೊಡಗು ಕ್ರೀಡಾ ಅಭಿವೃದ್ಧಿ ಪ್ರಾಧಿಕಾರ ರಚಿಸಿ ಅದರ ಮೂಲಕ ಕ್ರೀಡಾಕೂಟಗಳಿಗೆ ಅನುದಾನ ಒದಗಿಸಿದರೆ ಅದು ಕ್ರೀಡೆಯ ತವರಾದ ಕೊಡಗು ಜಿಲ್ಲೆಗೆ ದೊರೆಯುವ ಮನ್ನಣೆಯಾಗಲಿದೆ ಎಂದು  ಹೇಳಿದರು. ದೇಶದ ಹಾಕಿ ಸೇರಿದಂತೆ ವಿವಿಧ ಕ್ರೀಡೆಗಳಿಗೆ ಕೊಡಗು ಜಿಲ್ಲೆ ನೀಡಿದ ಕೊಡುಗೆ ಇಡೀ ಭಾರತವೇ ಹೆಮ್ಮೆಪಡುವ ಮಟ್ಟಿಗಿದೆ. ಈ ಹಿನ್ನೆಲೆಯಲ್ಲಾದರೂ ಕ್ರೀಡಾ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಬೇಕು. ಅಲ್ಲದೆ ಪ್ರತಿ ವರ್ಷದ ಬಜೆಟ್ಟಿನಲ್ಲಿ ಇದಕ್ಕಾಗಿ ಹಣವನ್ನು ಮೀಸಲಿಟ್ಟು ಕೊಡಗಿನಲ್ಲಿ ನಡೆಯುವ ಕ್ರೀಡಾಕೂಟಗಳನ್ನು ಸರ್ಕಾರ ಉತ್ತೇಜಿಸಬೇಕು. ಇದಕ್ಕಾಗಿ ಕೊಡಗಿನ ಜನಪ್ರತಿನಿಧಿಗಳು ಸರ್ಕಾರದ ಉನ್ನತ ಮಟ್ಟದಲ್ಲಿ ಒತ್ತಡ ಹೇರಬೇಕು. ಮುಂಬರುವ ಬಜೆಟ್ಟಿನಲ್ಲೇ ಈ ಪ್ರಾಧಿಕಾರವನ್ನು ಘೋಷಿಸಲು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಬೇಕು ಎಂದು ಒತ್ತಾಯಿಸಿದ ಸೂಫಿ ಹಾಜಿ, ಕೊಡಗಿನ ಕ್ರೀಡಾ ಚಟುವಟಿಕೆಗಳಿಗೆ ಸರಕಾರ ಸೂಕ್ತವಾಗಿ ಉತ್ತೇಜನ ನೀಡದಿದ್ದಲ್ಲಿ ಕೊಡಗನ್ನು ಕ್ರೀಡೆಯ ತವರು ಎಂದು ಕರೆಸಿಕೊಳ್ಳುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಹೇಳಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿದ್ದ ಹೊದ್ದೂರು ಗ್ರಾ. ಪಂ. ಅಧ್ಯಕ್ಷರಾದ ಹೆಚ್.ಎ. ಹಂಸ, ಕೊಡಗು ಗ್ಯಾರೆಂಟಿ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎ. ನಾಸರ್, ಕೆ. ಎಂ. ಎ. ಸಂಘಟನಾ ಕಾರ್ಯದರ್ಶಿ ಮೀತಲತಂಡ ಎಂ. ಇಸ್ಮಾಯಿಲ್ ಮೊದಲಾದವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಕೆ. ಎಂ. ಎ. ಅಧ್ಯಕ್ಷರಾದ ದುದ್ದಿಯಂಡ ಸೂಫಿ ಹಾಜಿ, ಹೊದ್ದೂರು ಗ್ರಾ. ಪಂ. ಅಧ್ಯಕ್ಷರಾದ ಹೆಚ್.ಎ. ಹಂಸ, ಕರ್ನಾಟಕ ಪೊಲೀಸ್ ವಾಲಿಬಾಲ್ ತಂಡದ ಕೂವಲೆರ ಅಬ್ದುಲ್ ಘನಿ ಸೇರಿದಂತೆ ಹಲವು ಸಾಧಕರನ್ನು ಕೂವಲೆರ ಕುಟುಂಬದ ಪರವಾಗಿ ಸನ್ಮಾನಿಸಲಾಯಿತು. ಚಿಟ್ಟಡೆ ಕೂವಲೆರ ಕುಟುಂಬದ ಅಧ್ಯಕ್ಷರಾದ ಉಮ್ಮರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಮದ ತಕ್ಕರು ಮತ್ತು ಕೂವಲೆರ ಕುಟುಂಬದ ಹಿರಿಯರಾದ ಶಾದುಲಿ, ಗ್ರಾ. ಪಂ. ಸದಸ್ಯರಾದ ಸಣ್ಣು ಚಂಗಪ್ಪ, ಚಿಟ್ಟಡೆ ಜಮಾಅತ್ ಅಧ್ಯಕ್ಷರಾದ ಕೂವಲೆರ ಫಕ್ರುದ್ದೀನ್, ಗ್ರಾಮದ ಹಿರಿಯರಾದ ಸಿ. ಯು. ಮೊಹಮ್ಮದ್, ಕೀಪಡ ಮುಹಮ್ಮದ್, ಎ. ಎ. ಇಬ್ರಾಹಿಂ, ಗ್ರಾ. ಪಂ. ಮಾಜಿ ಸದಸ್ಯರಾದ ವೈ. ಇ. ಮುಸ್ತಫಾ, ಕಾಫಿ ಬೆಳೆಗಾರರಾದ ವೈ. ಎ. ಉಮ್ಮರ್, ಮಾಳೆಟಿರ ಚಂಗಪ್ಪ, ಸಿ. ಎಸ್. ಉಮ್ಮರ್, ಕೆ. ಎಂ. ಹಸೈನಾರ್, ಕೆಎಂಎ ಆಡಳಿತ ಮಂಡಳಿ ಪದಾಧಿಕಾರಿಗಳಾದ ಪುದಿಯತ್ತಂಡ ಹೆಚ್. ಶಂಸುದ್ದೀನ್, ಚಿಮ್ಮಿಚ್ಚಿರ ಕೆ. ಇಬ್ರಾಹಿಂ ಹಾಜಿ, ಪುದಿಯಾಣೆರ ಎಂ.ಹನೀಫ್, ಕೋಳುಮಂಡ ರಫೀಕ್, ಮಂಡೇಂಡ ಎ. ಮೊಯ್ದು, ಕರತೋರೆರ ಮುಸ್ತಫಾ, ದುದ್ದಿಯಂಡ ಹೆಚ್. ಮೊಯ್ದು ಹಾಜಿ, ಕತ್ತಣಿರ ಅಂದಾಯಿ, ಪ್ರಮುಖರಾದ ಸಿ.ಯು. ಶಾದುಲಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.ಪಂದ್ಯಾವಳಿಯ ಉದ್ಘಾಟನೆಯ ಅಂಗವಾಗಿ ರಜಿತ್ ಫ್ರೆಂಡ್ಸ್ ಮತ್ತು ಲಿಂಬ್ರ ಫ್ರೆಂಡ್ಸ್ ತಂಡಗಳ ನಡುವೆ ನಡೆದ ಸೌಹಾರ್ದ ಪಂದ್ಯದಲ್ಲಿ ರಜಿತ್ ಫ್ರೆಂಡ್ಸ್ ತಂಡ ಗೆಲುವು ಸಾಧಿಸಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 7, 2026

*ಫೋನಿಕ್ಸ್ ಮಾಡೆಲ್ ಹಂಟ್ ನಲ್ಲಿ ಪ್ರಥಮ ಸ್ಥಾನ ಪಡೆದ ಪಾಲೆಯಂಡ ಕುಶಾಲ್ ನಾಣಯ್ಯ*

ಸೆಪ್ಟೆಂಬರ್ 7, 2026

*ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ಭರತನಾಟ್ಯ ಪ್ರದರ್ಶನ ನೀಡಿದ ವಿರಾಜಪೇಟೆಯ ಭರತನಾಟ್ಯ ಪ್ರತಿಭೆ ಲಾವಣ್ಯ ಬೋರ್ಕರ್*

ಸೆಪ್ಟೆಂಬರ್ 7, 2026

*ಫೋನಿಕ್ಸ್ ಮಾಡೆಲ್ ಹಂಟ್ ನಲ್ಲಿ ಪ್ರಥಮ ಸ್ಥಾನ ಪಡೆದ ಪಾಲೆಯಂಡ ಕುಶಾಲ್ ನಾಣಯ್ಯ*

ಸೆಪ್ಟೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.7: ಮಡಿಕೇರಿಯ ಯುವ ಪ್ರತಿಭೆ ಪಾಲೆಯಂಡ ಕುಶಾಲ್ ನಾಣಯ್ಯ ಬೆಂಗಳೂರಿನಲ್ಲಿ ಆಯೋಜಿತ ಫ್ಯಾಷನ್ ಶೋನಲ್ಲಿ ಫೋನಿಕ್ಸ್…

*ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ಭರತನಾಟ್ಯ ಪ್ರದರ್ಶನ ನೀಡಿದ ವಿರಾಜಪೇಟೆಯ ಭರತನಾಟ್ಯ ಪ್ರತಿಭೆ ಲಾವಣ್ಯ ಬೋರ್ಕರ್*

ಸೆಪ್ಟೆಂಬರ್ 7, 2026

*ಸೋಮವಾರಪೇಟೆಯಲ್ಲಿ ತಡೆಗೋಡೆ ಕಾಮಗಾರಿ ಕಳಪೆ ಆರೋಪ: ಅಪ್ಪಚ್ಚು ರಂಜನ್ ಪರಿಶೀಲನೆ*

ಸೆಪ್ಟೆಂಬರ್ 7, 2026

*ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ 61ನೇ ಪುಣ್ಯಸ್ಮರಣೆ : ಮಹಾನ್ ಯೋಧನ ಸಾಹಸ ಯುವ ಸಮೂಹಕ್ಕೆ ಪ್ರೇರಣಾದಾಯಕ : ನಿವೃತ್ತ ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ ಅಭಿಮತ*

ಸೆಪ್ಟೆಂಬರ್ 7, 2026

*ಕೊಡವ ಮಕ್ಕಡ ಕೂಟದ 127ನೇ ಪುಸ್ತಕ ‘ಆಟ್-ಪಾಟ್ ಪಡಿಪು’ ಲೋಕಾರ್ಪಣೆ*

ಸೆಪ್ಟೆಂಬರ್ 7, 2026

*ಶ್ರೀ ತಿರುಮಲ ದೇವಸ್ಥಾನದ ಗದ್ದೆಯಲ್ಲಿ ಗ್ರಾಮಸ್ಥರಿಂದ ಸಾಮೂಹಿಕ ನಾಟಿ*

ಸೆಪ್ಟೆಂಬರ್ 7, 2026

*ಯುವ ನಾಯಕರ ಭವಿಷ್ಯ ರೂಪಿಸುವಲ್ಲಿ ಜೆಸಿಐ ಭಾರತ ವಿಶ್ವದಲ್ಲೇ ನಂ.1: ಭರತ್ ಆಚಾರ್ಯ*

ಸೆಪ್ಟೆಂಬರ್ 7, 2026

*ರೋಟರಿ ಮಡಿಕೇರಿಯಲ್ಲಿ ನ್ಯಾಷನಲ್ ಬಿಲ್ಡರ್ಸ್ ಅವಾರ್ಡ್ ಪ್ರದಾನ ಶಿಕ್ಷಕರು ರಾಷ್ಟ್ರ ನಿರ್ಮಾಣದ ಶಿಲ್ಪಿಗಳು : ಮನೋಹರ್ ಕಾಮತ್*

ಸೆಪ್ಟೆಂಬರ್ 7, 2026

*ಶಾಸಕ ಡಾ.ಮಂತರ್ ಗೌಡರಿಗೆ ಅಭಿನಂದನಾ ಸಮಾರಂಭ : ಗೌಡ ಸಮಾಜಕ್ಕೆ ಅಗತ್ಯ ಸಹಕಾರ : ಶಾಸಕರ ಭರವಸೆ*

ಸೆಪ್ಟೆಂಬರ್ 6, 2026

*ಡಾ.ಅಂಬೇಡ್ಕರ್ ಕುರಿತು ಅವಹೇಳನ : ಆರೋಪಿಯ ಬಂಧನಕ್ಕೆ ಆಗ್ರಹ*

ಸೆಪ್ಟೆಂಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.