Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*
  • *ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*
  • *ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*
  • ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ
  • *ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*
  • *ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*
  • *ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*
  • *ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*
  • *7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*
  • *ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರತಿಭಟನೆ ಕೈಬಿಡಲು ಎರಡೂ ಜನಾಂಗದವರಿಗೆ ಅಖಿಲ ಕೊಡವ ಸಮಾಜ ಮನವಿ : ಶಾಂತಿ ಸಂಧಾನಕ್ಕೆ ಬೆಂಬಲ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರತಿಭಟನೆ ಕೈಬಿಡಲು ಎರಡೂ ಜನಾಂಗದವರಿಗೆ ಅಖಿಲ ಕೊಡವ ಸಮಾಜ ಮನವಿ : ಶಾಂತಿ ಸಂಧಾನಕ್ಕೆ ಬೆಂಬಲ*

ಜನವರಿ 18, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ  NEWS DESK ಜ.18 : ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ದೇವಾಲಯದಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ನಡೆಸುವ ಶಾಂತಿ ಸಂಧಾನ ಪ್ರಕ್ರಿಯೆಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಘೋಷಿಸಿರುವ ಅಖಿಲ ಕೊಡವ ಸಮಾಜ, ಎರಡೂ ಜನಾಂಗದವರು ಪರಸ್ಪರ ಪ್ರತಿಭಟನೆ ನಡೆಸದಂತೆ ಮನವಿ ಮಾಡಿದೆ. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಅವರು ಕಹಿ ಘಟನೆಯನ್ನು ಮರೆತು ಶಾಂತಿಯನ್ನು ಕಾಪಾಡಬೇಕಾಗಿದೆ, ದೇವಾಲಯದಲ್ಲಿ ನಡೆದ ಘಟನೆಯ ಬಗ್ಗೆ ಎರಡೂ ಕಡೆಯವರಲ್ಲಿ “ಹೀಗಾಗಬಾರದಾಗಿತ್ತು” ಎನ್ನುವ ಬೇಸರವಿದೆ. ಒಬ್ಬರು ಪ್ರತಿಭಟನೆ ನಡೆಸಿದರೆ, ಮತ್ತೊಬ್ಬರು ಪ್ರತಿಭಟನೆಗೆ ಮುಂದಾಗುತ್ತಾರೆ, ಇದರಿಂದ ಯಾರಿಗೂ ಲಾಭವಿಲ್ಲ. ಆದ್ದರಿಂದ ಆದಷ್ಟು ಬೇಗ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಸಂಧಾನಕ್ಕೆ ವೇದಿಕೆ ಸಿದ್ಧಗೊಳಿಸಬೇಕು ಎಂದು ಒತ್ತಾಯಿಸಿದರು.
ಕೊಡವರಿಗೆ ಎಲ್ಲಾ ಜನಾಂಗದವರ ಮೇಲೆ ಗೌರವವಿದೆ, ಹಲವು ದೇವಸ್ಥಾನಗಳಲ್ಲಿ ಭಂಡಾರ ತಕ್ಕರಾಗಿ ಅರೆಭಾಷಿಕ ಜನಾಂಗ ಬಾಂಧವರು ಕೊಡವ ಜನಾಂಗದವರೊAದಿಗೆ ಸೇರಿ ಶಾಂತಿಯುತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೊಡಗಿನ ಜನಜೀವನದಲ್ಲಿ ಅವರು ಕೂಡ ಅವಿಭಾಜ್ಯ ಅಂಗವಾಗಿದ್ದಾರೆ. ಒಂದಿಬ್ಬರು ಮಾಡಿದ ತಪ್ಪಿಗೆ ಇಡೀ ಜನಾಂಗವನ್ನು ಅವಹೇಳನ ಮಾಡುವುದು ಅಥವಾ ದೂಷಿಸುವುದು ಸರಿಯಲ್ಲ ಮತ್ತು ಸಮಂಜಸವಲ್ಲ ಎಂದು ಅಭಿಪ್ರಾಯಪಟ್ಟರು.
ಒಂದು ಜನಾಂಗದವರು ಪ್ರತಿಭಟನೆಯನ್ನು ಶಾಂತಿಯುತವಾಗಿ ಮಾಡಿದರೂ ಅದಕ್ಕೆ ಪ್ರತಿಯಾಗಿ ಇನ್ನೊಂದು ಸಮುದಾಯ ಪ್ರತಿಭಟನೆ ನಡೆಸುವುದು ಸ್ವಾಭಾವಿಕವಾಗಿದೆ. ಇದು ಕೊಡಗು ಜಿಲ್ಲೆಯ ಸ್ವಾಸ್ಥö್ಯದ ದೃಷ್ಟಿಯಿಂದ ಆರೋಗ್ಯಕರವಲ್ಲ. ಕೊಡವರು, ಕೊಡವ ಭಾಷಿಕ ಜನಾಂಗದವರು ಹಾಗೂ ಕೊಡವ ಭಾಷೆಯ ಅಭಿಮಾನಿಗಳು ಬೃಹತ್ ಪ್ರತಿಭಟನೆ ಆಯೋಜಿಸುವುದಕ್ಕೆ ತಯಾರಿ ನಡೆಸಬಹುದು. ಇದರಿಂದ ಯಾರಿಗೂ ಲಾಭವಿಲ್ಲವೆಂದು ಬೇಸರ ವ್ಯಕ್ತಪಡಿಸಿದ ಪರದಂಡ ಸುಬ್ರಮಣಿ ಅವರು, ಶಾಂತಿ ಸಂಧಾನದ ಮೂಲಕ ಕಾರ್ಮೋಡದ ನಡುವೆ ಬೆಳ್ಳಿಗೆರೆ ಮೂಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ::: ಯಾವುದೇ ಕ್ರಮವಾಗಿಲ್ಲ ::: ಶ್ರೀ ಮಹಾ ಮೃತ್ಯುಂಜಯ ದೇವಾಲಯದಲ್ಲಿ ಡಿ.27 ರಂದು ಸಂಜೆ ಎದುರಾದ ಭಿನ್ನಾಭಿಪ್ರಾಯದ ಸಂದರ್ಭ ಕೊಡವರ ಮೇಲೆ ಕೆಲವರು ಹಲ್ಲೆ ನಡೆಸಿದ್ದು, ಇವರ ವಿರುದ್ಧ ದೂರು ನೀಡಿದ್ದರೂ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಅಖಿಲ ಕೊಡವ ಸಮಾಜದ ಕಾರ್ಯದರ್ಶಿ ಕೀತಿಯಂಡ ವಿಜಯ ಕುಮಾರ್ ಮಾತನಾಡಿ ಶಾಂತಿ ಸಂಧಾನಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ, ಆದರೆ ಹಲ್ಲೆ ನಡೆಸಿದವರ ವಿರುದ್ಧ ಯಾವ ರೀತಿಯ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎನ್ನುವುದನ್ನು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಕೊಡವ ಸಮಾಜದ ಸದಸ್ಯ ಚನ್ನಪಂಡ ದರ್ಶನ್ ಹಾಗೂ ಕನೆಕ್ಟಿಂಗ್ ಕೊಡವಾಸ್ ಸಂಘಟನೆಯ ಅಧ್ಯಕ್ಷ ಶಾಂತೆಯಂಡ ನಿರನ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*

ಅಕ್ಟೋಬರ್ 2, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.1 NEWS DESK : ಗೋವಾದ ಚೌಗುಲೇ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ಯೂತ್ ಸ್ಪೋರ್ಟ್ಸ್ ಎಜುಕೇಷನ್ ಫೆಡರೇಷನ್ ಇಂಡಿಯಾ ವತಿಯಿಂದ…

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026

*ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*

ಅಕ್ಟೋಬರ್ 1, 2026

*ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*

ಅಕ್ಟೋಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.