Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*
  • *ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*
  • *ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*
  • *ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*
  • *ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*
  • *ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*
  • *ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*
  • *ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಟ್ಟಡ ಹಾಗೂ ಇತರೆ ನಿರ್ಮಾಣ ಕಾಯ್ದೆ : ಕೊಡಗಿನಲ್ಲಿ 12,367 ಮಂದಿ ಹೆಸರು ನೋಂದಣಿ : ಕಾರ್ಮಿಕ ಅಧಿಕಾರಿ ಕಾವೇರಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಟ್ಟಡ ಹಾಗೂ ಇತರೆ ನಿರ್ಮಾಣ ಕಾಯ್ದೆ : ಕೊಡಗಿನಲ್ಲಿ 12,367 ಮಂದಿ ಹೆಸರು ನೋಂದಣಿ : ಕಾರ್ಮಿಕ ಅಧಿಕಾರಿ ಕಾವೇರಿ*

ಜನವರಿ 18, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.18 NEWS DESK : ಕಾರ್ಮಿಕ ಇಲಾಖೆ ವತಿಯಿಂದ ಅಸಂಘಟಿತ ಕಟ್ಟಡ ಕಾರ್ಮಿಕರಿಗೆ ಹಲವು ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದೆ. ಕೊಡಗು ಜಿಲ್ಲೆಯ ವ್ಯಾಪ್ತಿಯಲ್ಲಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾಯ್ದೆಯಡಿ ನೋಂದಣಿಯಾಗಿರುವ ಕಾರ್ಮಿಕರಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಜಿಲ್ಲೆಯಲ್ಲಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾಯ್ದೆಯಡಿ ಇದುವರೆಗೆ 12,367 ಮಂದಿ ಹೆಸರು ನೋಂದಾಯಿಸಿದ್ದಾರೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಕಾವೇರಿ ಅವರು ಮಾಹಿತಿ ನೀಡಿದ್ದಾರೆ. ಇವರಲ್ಲಿ 9,740 ಮಂದಿ ಪುರುಷರು ಹಾಗೂ 2,627 ಮಂದಿ ಮಹಿಳೆಯರು ಕಟ್ಟಡ ಹಾಗೂ ಇತರೆ ನಿರ್ಮಾಣ ಕಾಯ್ದೆಯಡಿ ನೋಂದಣಿಯಾಗಿದ್ದಾರೆ. ಮಡಿಕೇರಿ ತಾಲ್ಲೂಕಿನಲ್ಲಿ 3,035 ಮಂದಿ, ಸೋಮವಾರಪೇಟೆ ತಾಲ್ಲೂಕಿನಲ್ಲಿ 4,037 ಮಂದಿ, ವಿರಾಜಪೇಟೆ ತಾಲ್ಲೂಕಿನ 5295 ಮಂದಿ ಹೆಸರು ನೋಂದಾಯಿಸಿದ್ದಾರೆ. ಪ್ರಸಕ್ತ ವರ್ಷದಲ್ಲಿ ಡಿಸೆಂಬರ್ ಅಂತ್ಯದವರೆಗೆ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಧನಸಹಾಯ ವಿತರಿಸಲಾಗಿದೆ. ಹೆರಿಗೆ ಧನ ಭತ್ಯೆ, ವೈದ್ಯಕೀಯ ಸಹಾಯಧನ, ಮದುವೆಗೆ ಧನಸಹಾಯ, ಹೀಗೆ ವಿವಿಧ ಯೋಜನೆಗಳಡಿ ಸುಮಾರು 41 ಲಕ್ಷ ರೂ. ಭರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಮಡಿಕೇರಿ ತಾಲ್ಲೂಕಿನಲ್ಲಿ 7,19,492, ಸೋಮವಾರಪೇಟೆ ತಾಲ್ಲೂಕಿನಲ್ಲಿ 22,66,293, ವಿರಾಜಪೇಟೆ ತಾಲ್ಲೂಕಿನಲ್ಲಿ 12 ಲಕ್ಷ ರೂ. ಭರಿಸಲಾಗಿದೆ ಎಂದು ಜಿಲ್ಲಾ ಕಾರ್ಮಿ ಅಧಿಕಾರಿ ಅವರು ವಿವರಿಸಿದ್ದಾರೆ. ಈ ನೋಂದಾಯಿತ ಕಟ್ಟಡ ಹಾಗೂ ನಿರ್ಮಾಣ ಕಾರ್ಮಿಕರಿಗೆ ಮೂರು ವರ್ಷದ ಸದಸ್ಯತದೊಂದಿಗೆ 60 ವರ್ಷ ಪೂರೈಸಿದ ಫಲಾನುಭವಿಗೆ ಮಾಸಿಕ ಪಿಂಚಣಿ ಸೌಲಭ್ಯ, ಮೃತ ಪಿಂಚಣಿದಾರರ ಪತಿ/ಪತ್ನಿಗೆ ಮಾಸಿಕ ಪಿಂಚಣಿ, ನೋಂದಾಯಿತ ಫಲಾನುಭವಿಯು ಖಾಯಿಲೆಗಳಿಂದ ಅಥವಾ ಕಟ್ಟಡ ಕಾಮಗಾರಿಗಳ ಅಪಘಾತದಿಂದ ಶಾಶ್ವತ/ಭಾಗಶಃ ಅಂಗವಿಕಲತೆ ಹೊಂದಿದ್ದರೆ ಮಾಸಿಕ ಪಿಂಚಣಿ ಸೌಲಭ್ಯ ಹಾಗೂ ಶೇಕಡವಾರು ದುರ್ಬಲತೆಯನ್ನಾಧರಿಸಿ ಅನುಗ್ರಹ ರಾಶಿ ಸಹಾಯಧನ ನೀಡಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ. ನೋಂದಾಯಿತ ಫಲಾನುಭವಿಗೆ ವೃತ್ತಿಯಾಧಾರಿತ ಟೂಲ್‍ಕಿಟ್ ಸೌಲಭ್ಯ ನೀಡಲಾಗುತ್ತದೆ. ಮಹಿಳಾ ಫಲಾನುಭವಿಯ ಮೊದಲ ಎರಡು ಹೆರಿಗೆಗೆ ಸಹಾಯಧನ ನೀಡಲಾಗುತ್ತದೆ. ಹೆಸರು ನೋಂದಾಯಿತ ಫಲಾನುಭವಿಯು ಮರಣ ಹೊಂದಿದ್ದಲ್ಲಿ ಅಂತ್ಯಕ್ರಿಯೆ ವೆಚ್ಚ ಹಾಗೂ ಅನುಗ್ರಹ ರಾಶಿ ಸಹಾಯಧನ ನೀಡುವ ಯೋಜನೆ ಇದೆ ಎಂದರು. ನೋಂದಾಯಿತ ಕಟ್ಟಡ ನಿರ್ಮಾಣ ಕಾರ್ಮಿಕರ ಮೊದಲ ಇಬ್ಬರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ನರ್ಸರಿಯಿಂದ ಸ್ನಾತಕೋತ್ತರ ಪದವಿಯವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ನೋಂದಾಯಿತ ಫಲಾನುಭವಿ ಹಾಗೂ ಅವರ ಅವಲಂಬಿತರಿಗೆ ವೈದ್ಯಕೀಯ ಸಹಾಯಧನ ನೀಡುವ ಯೋಜನೆ ಇದೆ ಎಂದು ಕಾವೇರಿ ತಿಳಿಸಿದರು. ನೋಂದಾಯಿತ ಫಲಾನುಭವಿಯು ಮರಣ ಹೊಂದಿದ್ದಲ್ಲಿ, ಸಂಪೂರ್ಣ ಶಾಶ್ವತ ದುರ್ಬಲತೆಯಾದಲ್ಲಿ ಅಥವಾ ಭಾಗಶಃ ಶಾಶ್ವತ ದುರ್ಬಲತೆಯಾದಲ್ಲಿ ಅಪಘಾತ ಪರಿಹಾರ ಸಹಾಯಧನ ನೀಡಲಾಗುತ್ತದೆ. ಫಲಾನುಭವಿ ಅಥವಾ ಅವರ ಇಬ್ಬರು ಮಕ್ಕಳ ಮದುವೆಗೆ ಧನ ಸಹಾಯ ನೀಡಲಾಗುತ್ತದೆ. ಮಹಿಳಾ ಫಲಾನುಭವಿಯು ಮಗುವಿಗೆ ಜನ್ಮ ನೀಡಿದ ಸಂದರ್ಭದಲ್ಲಿ ಆಕೆಯ ಮಗುವಿನ ಶಾಲಾ ಪೂರ್ವ ಶಿಕ್ಷಣ ಮತ್ತು ಪೌಷ್ಟಿಕತೆಗಾಗಿ ಮಗುವಿಗೆ ಮೂರು ವರ್ಷಗಳು ತುಂಬುವವರೆಗೆ ತಾಯಿ ಮಗು ಸಹಾಯಧನ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಜೊತೆಗೆ ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಪ್ರಧಾನಮಂತ್ರಿ ಶ್ರಮಯೋಗಿ ಮಾನ್‍ಧನ್ ಯೋಜನೆ, ಇ-ಶ್ರಮ ಯೋಜನೆ, ಹೀಗೆ ಹಲವು ಯೋಜನೆಗಳು ಇವೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಕಾವೇರಿ ಅವರು ಮಾಹಿತಿ ನೀಡಿದ್ದಾರೆ. ಹೃದ್ರೋಗ, ಕಿಡ್ನಿ ಜೋಡಣೆ, ಕ್ಯಾನ್ಸರ್ ಶಸ್ತ್ರಚಿಕಿತ್ಸೆ, ಕಣ್ಣಿನ ಶಸ್ತ್ರಚಿಕಿತ್ಸೆ, ಪಾಶ್ರ್ವವಾಯು, ಮೂಳೆ ಶಸ್ತ್ರಚಿಕಿತ್ಸೆ, ಗರ್ಭಕೋಶ ಶಸ್ತ್ರಚಿಕಿತ್ಸೆ, ಅಸ್ತಮ ಚಿಕಿತ್ಸೆ, ಗರ್ಭಪಾತ ಪ್ರಕರಣಗಳು, ಪಿತ್ತಕೋಶದ ತೊಂದರೆಗೆ ಸಂಬಂಧಿಸಿದ ಚಿಕಿತ್ಸೆ, ಮೂತ್ರ ಪಿಂಡದಲ್ಲಿನ ಕಲ್ಲು ತೆಗೆಯುವ ಚಿಕಿತ್ಸೆ, ಮೆದುಳಿನ ರಕ್ತಸ್ರಾವದ ಚಿಕಿತ್ಸೆ, ಅಲ್ಸರ್ ಚಿಕಿತ್ಸೆ, ಡಯಾಲಿಸಿಸ್ ಚಿಕಿತ್ಸೆ, ಕಿಡ್ನಿ ಶಸ್ತ್ರಚಿಕಿತ್ಸೆ, ವ್ಯಾಸ್ಕ್ಯೂಲರ್ ಶಸ್ತ್ರಚಿಕಿತ್ಸೆ, ಅನ್ನನಾಳದ ಚಿಕಿತ್ಸೆ ಮತ್ತು ಕರುಳಿನ ಶಸ್ತ್ರಚಿಕಿತ್ಸೆ, ಸ್ತನ ಸಂಬಂಧಿತ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ, ಹರ್ನಿಯ ಶಸ್ತ್ರಚಿಕಿತ್ಸೆ, ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆ, ಮೂಳೆ ಮುರಿತ ಡಿಸ್‍ಲೊಕೇಶನ್ ಚಿಕಿತ್ಸೆ ಇತರ ಔದ್ಯೋಗಿಕ ಖಾಯಿಲೆಗಳಿಗೆ ನೋಂದಾಯಿತ ಫಲಾನುಭವಿ ಅಥವಾ ಅವರ ಅವಲಂಬಿತರು ಒಳಗಾದಲ್ಲಿ ವೈದ್ಯಕೀಯ ಚಿಕಿತ್ಸೆಗಳಿಗೆ ಸಹಾಯಧನ ನೀಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*

ಮೇ 11, 2026

*ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*

ಮೇ 11, 2026

*ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಮೇ 11, 2026

*ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*

ಮೇ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 11 NEWS DESK : ವಿದ್ಯುತ್ ವಿತರಣಾ 66/11 ಕೆ.ವಿ ಉಪಕೇಂದ್ರ ಪೊನ್ನಂಪೇಟೆಯಿಂದ ಹೊರಹೊಮ್ಮುವ ಎಫ್10 ಹೈಸೊಡ್ಲೂರು…

*ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಮೇ 11, 2026

*ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*

ಮೇ 11, 2026

*ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*

ಮೇ 11, 2026

*ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*

ಮೇ 11, 2026

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*

ಮೇ 11, 2026

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.