Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*
  • *ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*
  • *ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*
  • ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ
  • *ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*
  • *ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*
  • *ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*
  • *ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*
  • *7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*
  • *ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೇಳ ಸಮಾರೋಪ : ಚೆಂಬುವಿನಲ್ಲಿ ವಿದ್ಯಾರ್ಥಿಗಳ ಕಲರವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೇಳ ಸಮಾರೋಪ : ಚೆಂಬುವಿನಲ್ಲಿ ವಿದ್ಯಾರ್ಥಿಗಳ ಕಲರವ*

ಜನವರಿ 19, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜ.19 : ಸಂಪಾಜೆ ಸ್ಥಳೀಯ ಸಂಸ್ಥೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೇಳ ಮೂರು ದಿನಗಳ ಕಾಲ ಸಂಭ್ರಮದಿಂದ ನಡೆಯಿತು. ಚೆಂಬುವಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮದ ಹಿರಿಯರು ಹಾಗೂ ನಿವೃತ್ತ ಪ್ರಾಂಶುಪಾಲ ದಾಮೋದರ ಕೆ. ಅವರು ಮೇಳವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಹೊರಸಂಚಾರ ಕಾರ್ಯಕ್ರಮಕ್ಕೆ ಗ್ರಾ.ಪಂ ಸದಸ್ಯೆ ಹಂಸಲೇಖ ಚಾಲನೆ ನೀಡಿದರು. ಹೊರ ಸಂಚಾರದಲ್ಲಿ ಕಿಂಡಿ ಅಣೆಕಟ್ಟು, ಕೃಷಿ ಪದ್ಧತಿ ಮತ್ತು ಪರಿಸರದ ಕುರಿತು ವಿದ್ಯಾರ್ಥಿಗಳು ಮಾಹಿತಿ ಪಡೆದರು. ಎರಡನೇ ದಿನದ ಮೇಳದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಅರ್ಪಿಸಲಾಯಿತು. ವಿವೇಕ ಜಾಗೃತ ಬಳಗದ ಮೂಲಕ ಸಂಪನ್ಮೂಲ ವ್ಯಕ್ತಿಗಳಾದ ಚಂದ್ರಶೇಖರ್ ಹೊಸೂರು ಅವರು ಸ್ವಾಮಿ ವಿವೇಕಾನಂದರ ಕುರಿತು ಮಾತನಾಡಿದರು. ನಂತರ ಇದೇ ವೇದಿಕೆಯಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ರಕ್ತನಿಧಿ ಕೇಂದ್ರದ ವತಿಯಿಂದ ರಕ್ತದಾನ ಶಿಬಿರ ಮತ್ತು ಮಕ್ಕಳ ದಂತ ತಪಾಸಣಾ ಶಿಬಿರ ನಡೆಯಿತು. ಅತಿಥಿಗಳಾಗಿ ಪಾಲ್ಗೊಂಡಿದ್ದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ರವೀಂದ್ರ ರೈ ಬಿ.ಕೆ ಅವರು ರಕ್ತದಾನದ ಕುರಿತ ವಿವರಿಸಿ ಮಕ್ಕಳಲ್ಲಿ ಅರಿವು ಮೂಡಿಸಿದರು. ಶಿಬಿರವನ್ನು ನಡೆಸಿಕೊಟ್ಟ ಡಾ.ಸಾಗರ್ ಅವರು ರಕ್ತದಾನ ಮತ್ತು ದಂತ ತಪಾಸಣೆಯ ಮಹತ್ವದ ಬಗ್ಗೆ ಮಾತನಾಡಿದರು. ಈ ಕಾರ್ಯಕ್ರಮಗಳನ್ನು ಗ್ರಾ.ಪಂ ಅಧ್ಯಕ್ಷರಾದ ತೀರ್ಥರಾಮ ಪಿ.ಜಿ ಉದ್ಘಾಟಿಸಿ ಶುಭ ಹಾರೈಸಿದರು. ಸುಮಾರು 31 ದಾನಿಗಳು ರಕ್ತದಾನ ಮಾಡಿದರು. ವಿದ್ಯಾರ್ಥಿಗಳಿಗಾಗಿ ಗ್ರಾಮೀಣ ಕ್ರೀಡೆಗಳಾದ ಹಗ್ಗಜಗ್ಗಾಟ, ತೆಂಗಿನಕಾಯಿಗೆ ಕಲ್ಲು ಒಡೆಯುವ ಸ್ಪರ್ಧೆ, ವಿವಿಧ ಸಾಹಸಮಯ ಕ್ರೀಡೆಗಳು, ಜಾನಪದ ಹಾಡು ಮತ್ತು ನೃತ್ಯ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸಂಜೆ ನಡೆದ ಭವ್ಯ ಶಿಬಿರಾಗ್ನಿ ಕಾರ್ಯಕ್ರಮವನ್ನು ಶಾಲೆಯ ಮುಖ್ಯ ಶಿಕ್ಷಕಿ ಜಯಂತಿ ಎಂ.ಎನ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ ಸೂರಜ್ ಹೊಸೂರು ಭಾಗವಹಿಸಿದ್ದರು. ವಿದ್ಯಾರ್ಥಿಗಳಿಂದ ಮೂಡಿ ಬಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಗ್ರಾಮಸ್ಥರ ಗಮನ ಸೆಳೆಯಿತು. ಶ್ರೀ ದೇವಿ ಭಜನಾ ಮಂಡಳಿಯಿಂದ ಭಜನೆ ಮತ್ತು ಭಜನಾ ಕುಣಿತ ಕಾರ್ಯಕ್ರಮ ನಡೆಯಿತು.
ಸಮಾರೋಪ ಸಮಾರಂಭದಲ್ಲಿ ಮೂರು ದಿನಗಳ ಮೇಳದ ಕುರಿತು ಶಿಬಿರದ ನಾಯಕ ರಂಜಿತ್ ಕೆ.ಯು ವರದಿ ವಾಚಿಸಿದರು. ಶಿಬಿರಾರ್ಥಿಗಳಾದ ಸಹನ ಹಾಗೂ ಲಿತಿನ್ ಅನುಭವ ಹಂಚಿಕೊಂಡರು. ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ, ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ಪ್ರದಾನ ಮಾಡಲಾಯಿತು. ಸಮಗ್ರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಪಾಜೆ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಧನಂಜಯ ಎಂ. ವಹಿಸಿದ್ದರು. ಕಾರ್ಯಕ್ರಮದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು, ಪದ್ಮಶ್ರೀ ವಿಜೇತ ಕಲಾವಿದೆ ರಾಣಿ ಮಾಚಯ್ಯ, ಪ್ರಮುಖರಾದ ಜಿಮ್ಮಿ ಸಿಕ್ವೇರ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷ ಮೋಹನ್ ಪೆರುಮುಂಡ, ಪ್ರಾಥಮಿಕ ಶಾಲಾ ಎಸ್‌ಡಿಎಂಸಿಯ ಅಧ್ಯಕ್ಷ ನವೀನ್ ರಾಮಕಜೆ, ಪ್ರೌಢಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರಮೇಶ್ ಕುಮಾರ್, ಮೇಳದ ನಾಯಕಿ ಸುಲೋಚನ, ಸಹ ನಾಯಕರಾದ ಕುಮಾರಸ್ವಾಮಿ, ಸಗಾಯು ಮೇರಿ, ಮಹೇಶ್, ಸರಿತಾ ಕೆ.ಪಿ, ಸದಸ್ಯರು, ನಿವೃತ್ತ ಶಿಕ್ಷಕರು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಗ್ರಾಮಸ್ಥರು, ದಾನಿಗಳು, ಚೆಂಬು ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು, ಜಿಲ್ಲಾ ಮತ್ತು ಸ್ಥಳೀಯ ಸಂಸ್ಥೆಯ ಸರ್ವ ಪದಾಧಿಕಾರಿಗಳು, ಗ್ರಾ.ಪಂ ಉಪಾಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಅಧ್ಯಕ್ಷರು, ಸದಸ್ಯರು ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು. ನಾಪೋಕ್ಲು ಪ್ರೌಢ ಮತ್ತು ಪ್ರಾಥಮಿಕ ಶಾಲೆ, ಅಂಕುರ್ ಶಾಲೆ, ಶ್ರೀ ರಾಮ ಟ್ರಸ್ಟ್ ಶಾಲೆ, ಚೆಂಬುವಿನ ಸರಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ನೂರಕ್ಕಿಂತ ಹೆಚ್ಚು ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಮೇಳದಲ್ಲಿ ಪಾಲ್ಗೊಂಡಿದ್ದರು. ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಕೆ.ಬಿ.ಉಷಾರಾಣಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*

ಅಕ್ಟೋಬರ್ 2, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.1 NEWS DESK : ಗೋವಾದ ಚೌಗುಲೇ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ಯೂತ್ ಸ್ಪೋರ್ಟ್ಸ್ ಎಜುಕೇಷನ್ ಫೆಡರೇಷನ್ ಇಂಡಿಯಾ ವತಿಯಿಂದ…

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026

*ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*

ಅಕ್ಟೋಬರ್ 1, 2026

*ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*

ಅಕ್ಟೋಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.