Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಅರೆಭಾಷಿಕ ಗೌಡರ ಅವಹೇಳನ : ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ : ಮಡಿಕೇರಿಯಲ್ಲಿ “ಗೌಡ ಸಮುದಾಯದ ಸ್ವಾಭಿಮಾನದ ನಡೆ” ಬೃಹತ್ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು

*ಅರೆಭಾಷಿಕ ಗೌಡರ ಅವಹೇಳನ : ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ : ಮಡಿಕೇರಿಯಲ್ಲಿ “ಗೌಡ ಸಮುದಾಯದ ಸ್ವಾಭಿಮಾನದ ನಡೆ” ಬೃಹತ್ ಪ್ರತಿಭಟನೆ*

January 20, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.20 NEWS DESK : ಕೊಡಗು ಜಿಲ್ಲೆಯ ಅರೆಭಾಷಿಕ ಗೌಡ ಜನಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿ, ಸುಳ್ಳು ಇತಿಹಾಸ ಸೃಷ್ಟಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ವಿವಿಧ ಅರೆಭಾಷಿಕ ಗೌಡ ಸಂಘಟನೆಗಳು ಮಡಿಕೇರಿಯಲ್ಲಿ ಬೃಹತ್ “ಗೌಡ ಸಮುದಾಯದ ಸ್ವಾಭಿಮಾನದ ನಡೆ” ಮೌನ ಪ್ರತಿಭಟನೆ ನಡೆಯಿತು. ಮಡಿಕೇರಿಯ ಕೊಡಗು ಗೌಡ ಯುವ ವೇದಿಕೆ, ಕೊಡಗು ಗೌಡ ಮಹಿಳಾ ಒಕ್ಕೂಟ, ಕುಶಾಲನಗರದ ಗೌಡ ಯುವಕ ಸಂಘ ಸೇರಿದಂತೆ ವಿವಿಧ ಗೌಡ ಸಂಘಟನೆಗಳ ನೇತೃತ್ವದಲ್ಲಿ ನಗರದ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಗಾಂಧಿ ಮೈದಾನದವರೆಗೆ ಸಾವಿರಾರು ಗೌಡರು ಯಾವುದೇ ಘೋಷಣೆಗಳನ್ನು ಕೂಗದೆ ಶಿಸ್ತುಬದ್ಧವಾಗಿ ಬೃಹತ್ ಮೆರವಣಿಗೆ ನಡೆಸಿದರು.
::: ಸೇನಾನಿಗಳಿಗೆ ಗೌರವ ::: ಇಂದು ಬೆಳಿಗ್ಗೆ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರು ಹಾಗೂ ಫೀಲ್ಟ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಪ್ರತಿಮೆಗೆ ಗೌರವ ನಮನ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು. ನಂತರ ಮೆರವಣಿಗೆ ಸಾಗಿ ಬರುವಾಗ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಪ್ರತಿಮೆ ಹಾಗೂ ರಾಷ್ಟ್ರ ಕವಿ ಕುವೆಂಪು ಅವರ ಪುತ್ಥಳಿಗೆ ಗೌಡ ಸಮಾಜಗಳ ಪ್ರಮುಖರು ಪುಷ್ಪ ನಮನದೊಂದಿಗೆ ಗೌರವ ಅರ್ಪಿಸಿದರು. ಸಾಂಪ್ರದಾಯಿಕ ಉಡುಪು ತೊಟ್ಟ ಅರೆಭಾಷಾ ಪುರುಷರು ಹಾಗೂ ಮಹಿಳೆಯರು ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಿದರು. ಅವರನ್ನು ಹಿಂಬಾಲಿಸಿ ಸಹಸ್ರಾರು ಗೌಡ ಜನಾಂಗ ಬಾಂಧವರು ಹೆಜ್ಜೆ ಹಾಕಿ ಜಿಲ್ಲಾಡಳಿತದ ಗಮನ ಸೆಳೆದರು. ಮೌನ ಮೆರವಣಿಗೆಯಲ್ಲಿ ಜಿಲ್ಲೆಯ ಬಹುತೇಕ ಗೌಡ ಸಮಾಜಗಳ ಪ್ರತಿನಿಧಿಗಳು ಸದಸ್ಯರು ಸೇರಿದಂತೆ, ಬೆಂಗಳೂರು, ಮೈಸೂರು, ಪಿರಿಯಾಪಟ್ಟಣ, ಹುಣಸೂರು, ಸುಳ್ಯ ಗೌಡ ಸಮಾಜದ ಪ್ರತಿನಿಧಿಗಳು, ಜಿಲ್ಲೆಯ ಗಡಿ ಭಾಗವಾದ ಸಂಪಾಜೆ, ಚೆಂಬು ವ್ಯಾಪ್ತಿಯಲ್ಲಿನ ಅರೆಭಾಷಿಕ ಗೌಡರು ಪಾಲ್ಗೊಂಡರು. ಸರದಿಯ ಸಾಲಿನಲ್ಲಿ ಸಾಗಿದ ಮೆರವಣಿಗೆ ಸರಿ ಸುಮಾರು ಒಂದೂವರೆ ಕಿ.ಮೀ ನಷ್ಟು ದೂರದ ವರೆಗೆ ವ್ಯಾಪಿಸಿತ್ತು. ಘೋಷಣೆಗಳನ್ನು ಕೂಗದ ಪ್ರತಿಭಟನಾಕಾರರು ಭಿತ್ತ್ತಿಪತ್ರಗಳ ಮೂಲಕ ಮೌನ ಧ್ವನಿಯನ್ನು ಮೊಳಗಿಸಿದರು. “ಕೊಡಗು ಒಂದು ಸಮುದಾಯದ ಸ್ವತ್ತಲ್ಲ, ಸರ್ವ ಸಮುದಾಯದ ಅಮೂಲ್ಯ ಸಂಪತ್ತು”, “ಜನಾಂಗ ಕೃಷಿಗೂ ಸೈ ಪ್ರತ್ಯುತ್ತರಕ್ಕೂ ಸೈ”, “ನಮ್ಮ ಗತ್ತು ಕೇವಲ ಉಡುಪಿನಿಂದ ಬಂದದ್ದಲ್ಲ, ಅನುವಂಶೀಯತೆ ಮತ್ತು ಸುಸಂಸ್ಕೃತಿಯಿಂದ ಬಂದ ಗತ್ತು” ಸೇರಿದಂತೆ ವಿವಿಧ ಸಂದೇಶಗಳ ಮೂಲಕ ಗಮನ ಸೆಳೆದರು.
::: ಸಿಎನ್‍ಸಿ ನಿಷೇಧಕ್ಕೆ ಆಗ್ರಹ ::: ಗಾಂಧಿ ಮೈದಾನದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರ ಬಳಿ ಬಂದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರಿಗೆ ಅರೆಭಾಷಿಕ ಗೌಡ ಸಂಘಟನೆಗಳ ಪ್ರಮುಖರು ಮನವಿ ಪತ್ರವನ್ನು ಸಲ್ಲಿಸಿ ಸಿಎನ್‍ಸಿ ಸಂಘಟನೆಯನ್ನು ನಿಷೇಧಿಸುವಂತೆ ಆಗ್ರಹಿಸಿದರು. ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ಮಾತನಾಡಿ, ಸಿಎನ್‍ಸಿಯ ಅಧ್ಯಕ್ಷ ಎನ್.ಯು.ನಾಚಪ್ಪ ಹಾಗೂ ಸಂಗಡಿಗರು ಅರೆಭಾಷಿಕ ಗೌಡ ಜನಾಂಗದವರು ವಲಸೆ ಬಂದವರೆಂದು ಅಪಪ್ರಚಾರ ಮಾಡಿ ನಿರಂತರವಾಗಿ ಪ್ರಚೋದನಾಕಾರಿ ಮತ್ತು ಆಕ್ಷೇಪಾರ್ಹ ನಿಂದನೆಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದನ್ನು ನಿಲ್ಲಿಸಲು ಕ್ರಮ ಕೈಗೊಳ್ಳಬೇಕು, ನಾಚಪ್ಪ ಅವರನ್ನು ಬಂಧಿಸಬೇಕು ಮತ್ತು ಸಿಎನ್‍ಸಿ ಸಂಘಟನೆಯನ್ನು ನಿಷೇಧಿಸಬೇಕು. ಪೊನ್ನಂಪೇಟೆಯಲ್ಲಿ ಅರೆಭಾಷಾ ಗೌಡ ಜನಾಂಗವನ್ನು ನಿಂದಿಸಿ ಹೇಳಿಕೆಗಳನ್ನು ನೀಡಿರುವ ಸಿಎನ್‍ಸಿಯ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು, ತಾವು ಸಲ್ಲಿಸಿರುವ ಬೇಡಿಕೆಗಳಿಗೆ ಸಂಬಂಧಿಸಿದಂತೆ ಕಾನೂನಿಗೆ ಅನುಗುಣವಾಗಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಕೊಡಗು ಗೌಡ ಯುವ ವೇದಿಕೆಯ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ, ಕಾರ್ಯದರ್ಶಿ ಪುದಿಯನೆರವನ ರಿಶಿತ್ ಮಾದಯ್ಯ, ಕಾನೂನು ಸಲಹೆಗಾರ ಕೊಂಬಾರನ ರೋಷನ್ ಗಣಪತಿ, ಕುಶಾಲನಗರ ಗೌಡ ಯುವಕ ಸಂಘದ ಅಧ್ಯಕ್ಷ ಕೊಡಗನ ಹರ್ಷ, ಕೊಡಗು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಅಮೆ ದಮಯಂತಿ, ಉಪಾಧ್ಯಕ್ಷೆ ಬೈತಡ್ಕ ಜಾನಕಿ ಬೆಳ್ಳಿಯಪ್ಪ ಸೇರಿದಂತೆ ಪದಾಧಿಕಾರಿಗಳು, ಜಿಲ್ಲೆ ಮತ್ತು ಹೊರ ಜಿಲ್ಲೆಯ ಗೌಡ ಸಮಾಜಗಳ ಪದಾಧಿಕಾರಿಗಳು, ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ವಿರಾಜಪೇಟೆ ಪಿ.ಎಲ್.ಡಿ ಬ್ಯಾಂಕ್ ನ ಅಧ್ಯಕ್ಷರಾಗಿ ವಿ.ವಿರಾಜ್, ಉಪಾಧ್ಯಕ್ಷರಾಗಿ ಬಿ.ಜೆ.ಬೋಪಣ್ಣ ಆಯ್ಕೆ*
Next Article *ವಿರಾಜಪೇಟೆ : ಜ.21 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.