Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*
  • *ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*
  • *ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*
  • ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ
  • *ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*
  • *ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*
  • *ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*
  • *ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*
  • *7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*
  • *ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಲ್-ಅಮೀನ್ ಕೊಡಗು ಜಿಲ್ಲಾ ಸಮಿತಿಯಿಂದ ಉಚಿತ ಸಾಮೂಹಿಕ ವಿವಾಹ : ಅರ್ಜಿ ಸಲ್ಲಿಸಲು ಫೆ.15 ಕೊನೆ ದಿನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಲ್-ಅಮೀನ್ ಕೊಡಗು ಜಿಲ್ಲಾ ಸಮಿತಿಯಿಂದ ಉಚಿತ ಸಾಮೂಹಿಕ ವಿವಾಹ : ಅರ್ಜಿ ಸಲ್ಲಿಸಲು ಫೆ.15 ಕೊನೆ ದಿನ*

ಜನವರಿ 20, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.20 NEWS DESK : ಅಲ್-ಅಮೀನ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಫೆ.27 ರಂದು ಕೊಡಗು ಜಿಲ್ಲೆಯ ಬಡ ಮುಸ್ಲಿಂ ಯುವತಿಯರಿಗೆ ಸುಂಟಿಕೊಪ್ಪದ ಎಸ್.ಎಸ್.ಇಂಟರ್ ನ್ಯಾಷನಲ್ ಹಾಲ್‍ನಲ್ಲಿ ಉಚಿತ ಸಾಮೂಹಿಕ ವಿವಾಹವನ್ನು ನಡೆಸಲು ನಿರ್ಧರಿಸಿದ್ದು, ಇದಕ್ಕಾಗಿ ವಧುವಿನ ಪೋಷಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಬಿ.ಹೆಚ್.ಅಹ್ಮದ್ ಹಾಜಿ ಹಾಗೂ ಕಾರ್ಯದರ್ಶಿ ಎಂ.ಇ.ಮೊಹಿದ್ದೀನ್ ತಿಳಿಸಿದ್ದಾರೆ. ಕಳೆದ 21 ವರ್ಷಗಳಿಂದ ಬಡ ಮುಸ್ಲಿಂ ಯುವತಿಯರಿಗೆ ಉಚಿತ ಸಾಮೂಹಿಕ ವಿವಾಹವನ್ನು ನಡೆಸಿಕೊಂಡು ಬರತ್ತಿರುವ ಆಲ್-ಅಮೀನ್ ಕೊಡಗು ಜಿಲ್ಲಾ ಸಮಿತಿಯು ಇದೀಗ ತನ್ನ ಕಾರ್ಯ ಸಾಧನೆಯ 22ನೇ ವರ್ಷಕ್ಕೆ ಪದಾರ್ಪಣೆ ಮಾಡಿದೆ. ವರ್ಷಕ್ಕೆ ಇಪ್ಪತ್ತೈದು ಯುವತಿಯರ ವಿವಾಹವನ್ನು ಉಚಿತವಾಗಿ ನಡೆಸಿಕೊಡುವ ಗುರಿಯನ್ನು ಸಮಿತಿ ಹೊಂದಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಕಳೆದ 21 ವರ್ಷಗಳಲ್ಲಿ 463 ಮುಸ್ಲಿಂ ಯುವತಿಯರು ವೈವಾಹಿಕ ಜೀವನಕ್ಕೆ ಕಾಲಿರಿಸುವಂತೆ ಮಾಡುವಲ್ಲಿ ಸಮಿತಿಯು ಗಣನೀಯ ಸಾಧನೆಯನ್ನು ಮಾಡಿದೆ. ಈ ವರ್ಷವೂ ವಧುವಿಗೆ ತಲಾ ಒಂದು ಜೊತೆ ಉಡುಪು, ವರನಿಗೂ ಒಂದು ಜೊತೆ ಉಡುಪು ನೀಡಲಾಗುವುದು. ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳುವ ವಧು-ವರರ ಕಡೆಯವರಿಗೂ ಸೇರಿದಂತೆ ಸಾರ್ವಜನಿಕ ಬಾಂಧವರಿಗೆ ಮಧ್ಯಾಹ್ನ ಭೋಜನದ ವ್ಯವಸ್ಥೆಯನ್ನು ಸಹ ಮಾಡಲಾಗುವುದು. ಒಂದು ಜೋಡಿ ವಿವಾಹಕ್ಕೆ ಸುಮಾರು ಮೂರೂವರೆ ಲಕ್ಷಕ್ಕಿಂತ ಹೆಚ್ಚು ವೆಚ್ಚವಾಗಲಿದೆ. ಈ ವಿವಾಹ ಕಾರ್ಯಕ್ರಮಕ್ಕೆ ಅಗತ್ಯವಿರುವ ಮೊತ್ತವನ್ನು ಸಾರ್ವಜನಿಕ ದಾನಿಗಳಿಂದ ನಿರೀಕ್ಷಿಸಲಾಗಿದೆ. ಇಲ್ಲಿಯವರೆಗೆ ಬಡ ಕುಟುಂಬಗಳ ಬವಣೆಯನ್ನು ಮನಗಂಡು ಹಲವಾರು ದಾನಿಗಳು ನೆರವು ನೀಡುತ್ತಾ ಬಂದಿದ್ದು, ಈ ಬಾರಿಯೂ ಸಹಕರಿಸುವಂತೆ ಮನವಿ ಮಾಡಿದ್ದಾರೆ. ಉಚಿತ ಸಾಮೂಹಿಕ ವಿವಾಹದ ಅರ್ಜಿ ನಮೂನೆಗಳನ್ನು ಫೆ.15ರ ಒಳಗಾಗಿ ಅಗತ್ಯವಿರುವ ಎಲ್ಲಾ ಲಗತ್ತುಗಳೊಂದಿಗೆ ಭರ್ತಿ ಮಾಡಿ ಸಮಿತಿಗೆ ತಲುಪಿಸಬೇಕು. ಅರ್ಜಿಗಳನ್ನು ಮಡಿಕೇರಿಯ ಖಾಸಗಿ ಬಸ್ ನಿಲ್ದಾಣ ಸಮೀಪದ ಫೈವ್‍ಸ್ಟಾರ್ ವಾಚ್ ಅಂಗಡಿ (9844534743), ವಿರಾಜಪೇಟೆಯ ಮಟನ್ ಮಾರ್ಕೆಟ್ ರಸ್ತೆಯ ಗ್ರೀನ್ ಲ್ಯಾಂಡ್ ಬಾಳೆಮಂಡಿ ನೌಫಲ್ (9535323920), ಗೋಣಿಕೊಪ್ಪ ಮುಖ್ಯ ರಸ್ತೆಯ ಟೈಂಮಿಷಿನ್ ವಾಚ್ ಅಂಗಡಿಯ ಬಶೀರ್ ಹಾಜಿ (8289887668), ನೆಲ್ಲಿಹುದಿಕೇರಿ ಗ್ರಾ.ಪಂ ಮಾಜಿ ಅಧ್ಯಕ್ಷ ಎಂ.ಕೆ.ಹಕೀಂ (9448354568), ಸುಂಟಿಕೊಪ್ಪ 2ನೇ ಬ್ಲಾಕ್ ಕೆ.ಇ.ಬಿ ಬಳಿ ಆರ್.ಹಸನ್‍ಕುಂಞಹಾಜಿ (9886863045), ಕುಶಾಲನಗರ ಜನತಾ ಕಾಲೋನಿ ಎಂ.ಇ.ಮೊಹಿದ್ದೀನ್ (9448504282), ಕೊಡ್ಲಿಪೇಟೆ ಮಸ್ಲಿಸುನ್ನೂರ್ ಮಸೀದಿ ಮಾಜಿ ಅಧ್ಯಕ್ಷ ಸುಲೈಮಾನ್ (9448721203), ನಾಪೋಕ್ಲು ಸ್ಟಾರ್ ಸರ್ವೀಸ್ ಸ್ಟೇಷನ್ ಟಿ.ಎ.ಹನೀಫ್ (9980159825), ಕೊಟ್ಟಮುಡಿ ಪಿ.ಎ.ಹುಸೈನ್ (ಉಂದಾರು-9900750112) ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಅಧ್ಯಕ್ಷ ಬಿ.ಹೆಚ್.ಅಹ್ಮದ್ ಹಾಜಿ – 9480238535, ಉಪಾಧ್ಯಕ್ಷ ಎಂ.ಇ.ಮಹಮ್ಮದ್ – 9964076698, ಕಾರ್ಯದರ್ಶಿ ಎಂ.ಇ.ಮೊಹಿದ್ದೀನ್ -9448504282, ಖಜಾಂಚಿ ಎನ್.ಎ.ಲತೀಫ್ ಹಾಜಿ -7019095426 ಸಂಪರ್ಕಿಸಬಹುದಾಗಿದೆ ಎಂದು ಬಿ.ಹೆಚ್.ಅಹ್ಮದ್ ಹಾಜಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*

ಅಕ್ಟೋಬರ್ 2, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.1 NEWS DESK : ಗೋವಾದ ಚೌಗುಲೇ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ಯೂತ್ ಸ್ಪೋರ್ಟ್ಸ್ ಎಜುಕೇಷನ್ ಫೆಡರೇಷನ್ ಇಂಡಿಯಾ ವತಿಯಿಂದ…

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026

*ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*

ಅಕ್ಟೋಬರ್ 1, 2026

*ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*

ಅಕ್ಟೋಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.