Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕುಟ್ಟಾದಿಂದ ಮಡಿಕೇರಿಯವರೆಗೆ ನಡೆಯಲಿದೆ ಕೊಡವರ ಬೃಹತ್ ಕಾಲ್ನಡಿಗೆ ಜಾಥಾ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಟ್ಟಾದಿಂದ ಮಡಿಕೇರಿಯವರೆಗೆ ನಡೆಯಲಿದೆ ಕೊಡವರ ಬೃಹತ್ ಕಾಲ್ನಡಿಗೆ ಜಾಥಾ

ಜನವರಿ 20, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜ.20 : ಕೊಡಗು ವಿಶಾಲ ಕರ್ನಾಟಕದೊಂದಿಗೆ ವಿಲೀನವಾಗಿ ಇಂದು ಒಂದು ಪುಟ್ಟ ಜಿಲ್ಲೆಯಾಗಿ ಉಳಿದಿದೆ.  ಕೊಡಗಿನ ಮೂಲ ನಿವಾಸಿಗಳಾದ ಕೊಡವರು ಹಾಗೂ ಕೊಡವ ಸಂಸ್ಕೃತಿಗೆ ಒಳಪಟ್ಟ ಇತರ ಜನಾಂಗಗಳ ಮೇಲೆ ಕಳೆದ ಹಲವು ದಶಕಗಳಿಂದ  ನಿರಂತರವಾಗಿ ನಡೆಯುತ್ತಿರುವ ಜನಾಂಗೀಯ ನಿಂದನೆ, ಜನಾಂಗೀಯ ತಾರತಮ್ಯ ಹಾಗೂ ಸಾಮಾಜಿಕ ದೌರ್ಜನ್ಯದ ವಿರುದ್ಧ  ಇದೇ ಫೆಬ್ರವರಿ 2ರಿಂದ 7ರವರೆಗೆ ಬ್ರಹತ್ ಕಾಲ್ನಡಿಗೆ ಜಾಥಾ ಮತ್ತು ಪ್ರತಿಭಟನೆ ನಡೆಸಲು ಇಂದು ವಿರಾಜಪೇಟೆಯ ಕೊಡವ ಸಮಾಜದ ಸಭಾಂಗಣದಲ್ಲಿ ವಿವಿಧ ಕೊಡವ ಸಮಾಜ ಹಾಗೂ ಸಂಘ ಸಂಸ್ಥೆಗಳ ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಯಿತು. ವಿರಾಜಪೇಟೆ ಕೊಡವ ಸಮಾಜದ ಅಧ್ಯಕ್ಷ ಕುಂಬೇರ ಮನು ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಖಿಲ ಕೊಡವ ಸಮಾಜದ ಅಧ್ಯಕ್ಷರು ಸೇರಿದಂತೆ ವಿವಿಧ ಕೊಡವ ಸಮಾಜ ಹಾಗೂ ಸಂಘ ಸಂಸ್ಥೆಗಳ ಪ್ರಮುಖರು ಭಾಗಿಯಾಗಿ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಕೊಡವ ಸಂಸ್ಕೃತಿಗೆ ಒಳಪಟ್ಟ ಎಲ್ಲಾ ಜನಾಂಗಗಳ ಸಹಕಾರದೊಂದಿಗೆ ದಕ್ಷಿಣ ಕೊಡಗಿನ ಗಡಿಭಾಗವಾದ ಕುಟ್ಟಾದಿಂದ ಜಿಲ್ಲಾಕೇಂದ್ರ ಮಡಿಕೇರಿಯವರೆಗೆ ಬೃಹತ್ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಕೊಡಗು ಕರ್ನಾಟಕದೊಂದಿಗೆ ವಿಲೀನವಾದಾಗ ಆಡಳಿತರೂಢ ಬಹುಸಂಖ್ಯಾತ ಸಮುದಾಯಗಳು ಭಾಷಾ ಅಲ್ಪಸಂಖ್ಯಾತ ಸಮುದಾಯಗಳ ಹಿತರಕ್ಷಣೆಯನ್ನು ಕಾಪಾಡಬೇಕೆಂಬ ಸ್ಪಷ್ಟ ಒಡಂಬಡಿಕೆ ಇತ್ತು.  ಆದರೆ ಇಂದು ಕೊಡಗಿನಲ್ಲಿ ಕೊಡವ ಜನಾಂಗದ ಪಾಲಿಗೆ ಇದು ಉಲ್ಲಂಘನೆಯಾಗುತ್ತಲೇ ಬಂದಿದೆ ಎಂದು ಪ್ರಮುಖರು ಆರೋಪಿಸಿದರು. ಕೊಡವರನ್ನು ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಮೂಲೆಗುಂಪು ಮಾಡುವ ಷಡ್ಯಂತ್ರ ಈ ಪಟ್ಟಭದ್ರ ಹಿತಾಸಕ್ತಿಗಳಿಂದ ನಿರಂತರವಾಗಿ ನಡೆಯುತ್ತಾ ಬರುತ್ತಿದೆ. ಇದೀಗ ಕೊಡವರ ಪಾರಂಪರಿಕ ಉಡುಗೆ ತೊಡುಗೆಗಳನ್ನು ಹಾಗೂ ಆಚರಣೆಗಳನ್ನು ನಿರ್ಬಂಧಿಸುವ ಮಟ್ಟಕ್ಕೆ ಬಂದಿರುವುದು ಇತ್ತೀಚಿನ ಕೆಲವು ಘಟನೆಗಳಿಂದ ಸಾಬೀತಾಗಿದೆ. ರಾಜಕೀಯ ಪ್ರಭಾವವನ್ನು ಬಳಸಿ ಕೊಡವರನ್ನೇ ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಿಸಲು ಎಲ್ಲಾ ಕುತಂತ್ರಗಳನ್ನು ಹೆಣೆಯುತ್ತಿರುವುದು ನೋಡಿದಾಗ ಈ ವ್ಯವಸ್ಥೆಯಲ್ಲಿ ಕೊಡವರಿಗೆ ಭದ್ರತೆ ಇಲ್ಲ ಎಂಬ ಭಾವನೆ ಉಂಟು ಮಾಡಿದೆ. ಇದು ಮಾತ್ರವಲ್ಲದೆ ಹಲವಾರು ಘಟನೆಗಳು ಕೊಡವ ಹಾಗೂ ಕೊಡವ ಸಂಸ್ಕೃತಿಯ ಮೇಲೆ ಜನಾಂಗೀಯ ದೌರ್ಜನ್ಯ ಮತ್ತು ತಾರತಮ್ಯಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು. ಕೊಡವ ಸಂಸ್ಕೃತಿ ಹಾಗೂ ಸಾಂಪ್ರದಾಯಿಕ ಹಕ್ಕಿನ ರಕ್ಷಣೆಯ ಹಿನ್ನೆಲೆಯಲ್ಲಿ ಕೊಡವ ಸಂಸ್ಕೃತಿ ಅಡಿಯಲ್ಲಿ ಬದುಕು ಸಾಗಿಸುತ್ತಿರುವ ಎಲ್ಲಾ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ತಮಗಾಗಿರುವ ಅನ್ಯಾಯದ ವಿರುದ್ಧ ಬ್ರಹತ್ ಪಾದಯಾತ್ರೆಯನ್ನು ನಡೆಸಲು ಸಭೆ ಒಮ್ಮತದ ನಿರ್ಧಾರ ಕೈಗೊಳ್ಳಲಾಯಿತು ಎಂದು ಪ್ರಮುಖರು ತಿಳಿಸಿದರು. ಸಭೆಯಲ್ಲಿ ಅಖಿಲ ಕೊಡವ ಸಮಾಜ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ, ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಕಾಳಿಮಾಡ ಮೋಟಯ್ಯ, ಬೆಂಗಳೂರು ಕೊಡವ ಸಮಾಜ ಅಧ್ಯಕ್ಷ ಕರವಟ್ಟೀರ ಪೆಮ್ಮಯ್ಯ ಸೇರಿದಂತೆ ವಿವಿಧ ಕೊಡವ ಸಮಾಜಗಳ ಪ್ರತಿನಿಧಿಗಳು,  ಸಂಘ ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಅ.27ರಂದು 24ನೇ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಡಾ. ಲಲಿತ ಕೆ.ಪಿ. ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 25, 2026

ವಿರಾಜಪೇಟೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ; ಸ್ವಾವಲಂಬಿ ಬದುಕಿಗೆ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಮುಖ್ಯ: ಆನಂದ ಸುವರ್ಣ

ಅಕ್ಟೋಬರ್ 25, 2026

48ನೇ ಗೋಣಿಕೊಪ್ಪ ದಸರಾ ಜನೋತ್ಸವದಲ್ಲಿ ಭರತನಾಟ್ಯ ಮತ್ತು ಸಂಗೀತ ಪ್ರದರ್ಶನ

ಅಕ್ಟೋಬರ್ 25, 2026

ವಿರಾಜಪೇಟೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ; ಸ್ವಾವಲಂಬಿ ಬದುಕಿಗೆ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಮುಖ್ಯ: ಆನಂದ ಸುವರ್ಣ

ಅಕ್ಟೋಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.25: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಜ್ಞಾನವಿಕಾಸ ಕಾರ್ಯಕ್ರಮದಡಿ ವಿರಾಜಪೇಟೆಯ…

48ನೇ ಗೋಣಿಕೊಪ್ಪ ದಸರಾ ಜನೋತ್ಸವದಲ್ಲಿ ಭರತನಾಟ್ಯ ಮತ್ತು ಸಂಗೀತ ಪ್ರದರ್ಶನ

ಅಕ್ಟೋಬರ್ 25, 2026

ಕಿವುಡ ಕ್ರೀಡಾಪಟುಗಳಿಗೆ ಪ್ರಾಯೋಜಕತ್ವದ ನೆರವಿಗೆ ಕೊಡಗು ಜಿಲ್ಲಾ ಕಿವುಡರ ಸಂಘದ ಮನವಿ; ರಾಜ್ಯಮಟ್ಟದ ಕ್ರಿಕೆಟ್, ವಾಲಿಬಾಲ್ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಸಜ್ಜು; ದಾನಿಗಳ ಸಹಕಾರಕ್ಕೆ ಅಧ್ಯಕ್ಷ ಸ್ಯಾಮ್ ಜೋಸೆಫ್ ಮನವಿ

ಅಕ್ಟೋಬರ್ 25, 2026

ನ. 2–3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ; 23 ಜಿಲ್ಲೆಗಳ ಪತ್ರಕರ್ತರ ತಂಡಗಳು ಭಾಗಿ; ಮಡಿಕೇರಿಯಲ್ಲಿ ಆಯೋಜನೆ

ಅಕ್ಟೋಬರ್ 25, 2026

ಮಾದಕ ದ್ರವ್ಯಗಳಿಂದ ದೂರವಿದ್ದು ವ್ಯಸನಮುಕ್ತ ಭಾರತ ನಿರ್ಮಾಣಕ್ಕೆ ಪಣ ತೊಡಿ: ಎ.ಎಸ್.ಐ. ಸುಮತಿ; ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್ನೆಸ್ಸೆಸ್ ಶಿಬಿರ

ಅಕ್ಟೋಬರ್ 25, 2026

ಕೊಡಗಿನಲ್ಲಿ ಶೀಘ್ರ ಸಚಿವ ಸಂಪುಟ ಸಭೆ ನಡೆಸಲು ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ

ಅಕ್ಟೋಬರ್ 25, 2026

ಮಂಗಳೂರು ವಲಯದ ಅಂಡರ್-15 ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಆಯ್ಕೆ

ಅಕ್ಟೋಬರ್ 24, 2026

ಕುಶಾಲನಗರ : ಮಳೆಯಿಂದ ಮನೆಗಳಿಗೆ ಹಾನಿ

ಅಕ್ಟೋಬರ್ 24, 2026

ಮಳೆಯಿಂದ ಕೊಡಗಿನ ವಿವಿಧೆಡೆ ಹಾನಿ : ಕುಸಿದು ಬಿದ್ದ ಮನೆಗಳ ಗೋಡೆ, ಮೇಲ್ಛಾವಣಿ, ಕೊಟ್ಟಿಗೆ

ಅಕ್ಟೋಬರ್ 24, 2026

ಮಡಿಕೇರಿಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.