
ಕುಶಾಲನಗರ ಜ.22 NEWS DESK : ವಾರ್ಷಿಕವಾಗಿ ಅತ್ಯುತ್ತಮ ಸಾಧನೆ ಮಾಡಿರುವ ಕುಶಾಲನಗರ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ತುಮಕೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 39ನೇ ಸಮ್ಮೇಳನದಲ್ಲಿ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳ ತಂಡ ತುಮಕೂರು ತೆರಳಿ ಸಮ್ಮೇಳನದಲ್ಲಿ ಪ್ರಶಸ್ತಿ ಸ್ವೀಕರಿಸಿದರು. ಜನವರಿ 2024 ರಿಂದ ಡಿಸೆಂಬರ್ ಅಂತ್ಯದ ತನಕ ತಾಲೂಕು ಸಂಘದ ಮೂಲಕ ಸುಮಾರು 60ಕ್ಕೂ ಹೆಚ್ಚು ಕಾರ್ಯಕ್ರಮಗಳು ನಡೆದಿದ್ದು, ಈ ಹಿನ್ನಲೆಯಲ್ಲಿ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿತ್ತು. ಪ್ರಶಸ್ತಿ ಪ್ರದಾನ ಸಂದರ್ಭ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗೂಡೂರು, ಪ್ರಧಾನ ಕಾರ್ಯದರ್ಶಿ ಬಿ.ಸಿ.ಲೋಕೇಶ್, ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಸಂಘದ ಜಿಲ್ಲಾಧ್ಯಕ್ಷರಾದ ಸವಿತಾ ರೈ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನು ಕಾರಿಯಪ್ಪ, ರಾಜ್ಯ ಸಮಿತಿ ಸದಸ್ಯರಾದ ಟಿ.ಎನ್.ಮಂಜುನಾಥ್, ರಾಷ್ಟ್ರೀಯ ಸಮಿತಿ ಸದಸ್ಯರಾದ ಸುನಿಲ್ ಪೊನ್ನೆಟ್ಟಿ, ತಾಲ್ಲೂಕು ಸಂಘದ ಪ್ರಧಾನ ಕಾರ್ಯದರ್ಶಿ ವನಿತಾ ಚಂದ್ರಮೋಹನ್, ಕಾರ್ಯದರ್ಶಿ ಕೆ.ಕೆ.ನಾಗರಾಜ ಶೆಟ್ಟಿ, ಜಿಲ್ಲಾ ನಿರ್ದೇಶಕ ಟಿ.ಆರ್ ಪ್ರಭುದೇವ್, ತಾಲ್ಲೂಕು ನಿರ್ದೇಶಕ ವಿನೋದ್, ಪಿ.ವಿ.ಅಕ್ಷಯ್ ಇದ್ದರು.









