Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*
  • *ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*
  • *ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*
  • ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ
  • *ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*
  • *ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*
  • *ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*
  • *ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*
  • *7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*
  • *ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಮಿತಿ ಮೀರಿದ ವನ್ಯಜೀವಿ ಉಪಟಳ : ಅನಾಹುತ ಸಂಭವಿಸಿದರೆ ಅರಣ್ಯ ಅಧಿಕಾರಿಗಳೇ ನೇರ ಹೊಣೆ : ಬಿಜೆಪಿ ಎಚ್ಚರಿಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಮಿತಿ ಮೀರಿದ ವನ್ಯಜೀವಿ ಉಪಟಳ : ಅನಾಹುತ ಸಂಭವಿಸಿದರೆ ಅರಣ್ಯ ಅಧಿಕಾರಿಗಳೇ ನೇರ ಹೊಣೆ : ಬಿಜೆಪಿ ಎಚ್ಚರಿಕೆ*

ಜನವರಿ 22, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.22 NEWS DESK : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ವನ್ಯಜೀವಿಗಳ ಉಪಟಳ ಮಿತಿ ಮೀರಿದೆ. ಮುಂದಿನ ದಿನಗಳಲ್ಲಿ ಜೀವಹಾನಿ ಸಂಭವಿಸಿದರೆ ಅದಕ್ಕೆ ಅರಣ್ಯ ಅಧಿಕಾರಿಗಳೇ ನೇರ ಹೊಣೆಗಾರರಾಗಬೇಕಾಗುತ್ತದೆ ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ ನೀಡಿದ್ದಾರೆ. ಕಾಡಾನೆಗಳ ಹಿಂಡು ಮರಿಯಾನೆಗಳೊಂದಿಗೆ ಕಾಫಿ ತೋಟಗಳಲ್ಲೇ ಬೀಡು ಬಿಟ್ಟಿದ್ದು, ಬೆಳೆಗಾರರು ಹಾಗೂ ಕಾರ್ಮಿಕರು ಆತಂಕಗೊಂಡಿದ್ದಾರೆ. ಇದು ಕಾಫಿ ಕೊಯ್ಲಿನ ಸಮಯವಾಗಿದ್ದು, ಕಾಡಾನೆಗಳ ದಾಳಿಯ ಆತಂಕದಲ್ಲಿ ಕಾರ್ಮಿಕರು ತೋಟಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ, ಇದರಿಂದ ಬೆಳೆಗಾರರಿಗೆ ನಷ್ಟವಾಗುತ್ತಿದೆ. ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ನಿತ್ಯ ಜೀವಭಯದಿಂದಲೇ ಓಡಾಡುತ್ತಿದ್ದಾರೆ. ಗ್ರಾಮಸ್ಥರ ಕಣ್ಣೊರೆಸಲು ಅರಣ್ಯ ಇಲಾಖೆ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಕೈಗೊಳ್ಳುತ್ತದೆ. ಆದರೆ ತಿತಿಮತಿ ಮತ್ತು ಪೊನ್ನಂಪೇಟೆ ವಿಭಾಗದ ಅರಣ್ಯ ಸಿಬ್ಬಂದಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸದೆ ಇರುವುದರಿಂದ ಕಾಡಾನೆಗಳು ಕಾಡಿಗೆ ಮರಳದೆ ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಸ್ಥಳಾಂತರಗೊಳ್ಳುತ್ತಿವೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಎರಡೂ ವಿಭಾಗಗಳ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಜಂಟಿ ಕಾರ್ಯಾಚರಣೆಯ ಮೂಲಕ ಕಾಡಾನೆಗಳನ್ನು ಅಭಯಾರಣ್ಯಕ್ಕೆ ಓಡಿಸುವ ಕಾರ್ಯವನ್ನು ತ್ವರಿತವಾಗಿ ಮಾಡಬೇಕು. ಇದೇ ರೀತಿ ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಆನೆಗಳ ಸಂತತಿ ತೋಟಗಳಲ್ಲಿಯೇ ಮಿತಿ ಮೀರಿ ಮತ್ತಷ್ಟು ಆತಂಕವನ್ನು ಸೃಷ್ಟಿಸಬಹುದು ಎಂದು ಗಮನ ಸೆಳೆದಿದ್ದಾರೆ. ನೆಲ್ಲಿಹುದಿಕೇರಿಯ ಅತ್ತಿಮಂಗಲದಲ್ಲಿ ಕ್ಯಾಂಟೀನ್ ಮತ್ತು ಕಾರಿನ ಮೇಲೆ ಹಾಡಹಗಲೇ ಕಾಡಾನೆ ದಾಳಿ ಮಾಡಿದೆ. ಪೊನ್ನಂಪೇಟೆ ಸಮೀಪ ಕೋಣನಕಟ್ಟೆ ಭಾಗದಲ್ಲಿ ಕಾಡಾನೆ ಕಾಣಿಸಿಕೊಂಡಿದ್ದು, ಇಂದು ನಸುಕಿನ ವೇಳೆ ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಸ್.ಅರುಣ್ ಮಾಚಯ್ಯ ಅವರ ನಿವಾಸಕ್ಕೆ ಲಗ್ಗೆ ಇಟ್ಟು ಹಾನಿ ಮಾಡಿದೆ. ಕೆಲವು ದಿನಗಳ ಹಿಂದೆ ಬಾಳೆಲೆಯಲ್ಲಿ ವನ್ಯ ಜೀವಿದಾಳಿ ಮಾಡಿದೆ. ಗಾಯಾಳುವಿಗೆ ಚಿಕಿತ್ಸೆ ನೀಡುವ ವಿಚಾರದಲ್ಲಿ ಆರೋಗ್ಯ ಕೇಂದ್ರದಲ್ಲಿ ಪ್ರತಿಭಟನೆಯೂ ನಡೆದಿತ್ತು. ವಿರಾಜಪೇಟೆಯಿಂದ ಮೈಸೂರಿಗೆ ಪ್ರಯಾಣ ಬೆಳೆಸಿದ್ದ ಕಾರಿನ ಮೇಲೆ ತಿತಿಮತಿಯ ಮಜ್ಜಿಗೆ ಹಳ್ಳದ ಬಳಿ ಕಾಡಾನೆ ದಾಳಿ ಮಾಡಿ ಕಾರನ್ನು ನಜ್ಜುಗುಜ್ಜುಗೊಳಿಸಿತ್ತು. ಕಾರಿನಲ್ಲಿದ್ದ ಆರು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದರು. ಈ ಘಟನೆಗಳು ಕೆಲವೇ ದಿನಗಳ ಅಂತರದಲ್ಲಿ ನಡೆದಿದ್ದು, ಆತಂಕ ಹೆಚ್ಚಾಗಿದೆ. ವಾಹನ ಸವಾರರು ನಿರ್ಭಯವಾಗಿ ರಸ್ತೆಯಲ್ಲಿ ಸಂಚರಿಸಲು ಸಾಧ್ಯವಾಗುತ್ತಿಲ್ಲ. ಮಡಿಕೇರಿಯಲ್ಲಿರುವ ಹಿರಿಯ ಅರಣ್ಯ ಅಧಿಕಾರಿಗಳು ಹವಾನಿಯಂತ್ರಿತ ಕೊಠಡಿಯಿಂದ ಹೊರ ಬಂದು ವನ್ಯಜೀವಿಗಳ ದಾಳಿಯಿಂದ ಗ್ರಾಮಸ್ಥರು ಅನುಭವಿಸುತ್ತಿರುವ ಕಷ್ಟನಷ್ಟಗಳನ್ನು ಪರಿಶೀಲಿಸಿ ಶಾಶ್ವತ ಪರಿಹಾರಕ್ಕೆ ಯೋಜನೆ ರೂಪಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಅರಣ್ಯ ಅಧಿಕಾರಿಗಳ ವಿಶೇಷ ಸಭೆ ನಡೆಸಿ ತುರ್ತು ಕ್ರಮಕ್ಕೆ ಸ್ಪಷ್ಟ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಕಾಡಾನೆ ದಾಳಿ ನಡೆಸಿ ಜೀವಹಾನಿ ಮಾಡಿದಾಗಲೆಲ್ಲ ಸರಕಾರದ ಪ್ರತಿನಿಧಿ ಸ್ಥಳಕ್ಕೆ ಭೇಟಿ ನೀಡಿ ಕಣ್ಣೊರೆಸುವ ತಂತ್ರವನ್ನಷ್ಟೇ ಮಾಡುತ್ತಿದ್ದಾರೆ. ವನ್ಯಜೀವಿಯಿಂದ ಆಗುತ್ತಿರುವ ತೊಂದರೆಗಳ ಕುರಿತು ಅಧ್ಯಯನ ನಡೆಸುತ್ತಿಲ್ಲ ಮತ್ತು ಶಾಶ್ವತ ಪರಿಹಾರಕ್ಕೆ ಯೋಜನೆ ರೂಪಿಸುತ್ತಿಲ್ಲ. ಶಾಸಕರುಗಳು ಕೂಡ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಣಿಸಿಲ್ಲವೆಂದು ರಾಕೇಶ್ ದೇವಯ್ಯ ಆರೋಪಿಸಿದ್ದಾರೆ.
::: ಹುಲಿ, ಚಿರತೆ ಆತಂಕ ::: ಕಿರುಗೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಹುಲಿ ಮತ್ತು ಚಿರತೆಗಳು ಕೂಡ ಆತಂಕವನ್ನು ಸೃಷ್ಟಿಸಿದ್ದು, ಇವುಗಳ ಸಂಚರಿಸುತ್ತಿರುವ ದೃಶ್ಯ ಈಗಾಗಲೇ ಸೆರೆಯಾಗಿದೆ. ಹುಲಿ, ಚಿರತೆಗಳಿಂದ ಹಸುಗಳು ಬಲಿಯಾಗುತ್ತಿವೆ. ಅಕ್ಕಪಕ್ಕದ ಗ್ರಾಮಗಳಲ್ಲಿ ವನ್ಯಜೀವಿಗಳಿಂದ ಜೀವಭಯವಿದ್ದರೂ ಅರಣ್ಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಕೆಲವು ದಿನಗಳಿಂದ ಕಿರುಗೂರು ಭಾಗದಲ್ಲಿ ಹುಲಿಯೊಂದು ಸಂಚರಿಸುತ್ತಿದೆ, ಆದರೆ ಇದು ಹುಲಿಯೇ ಅಥವಾ ಚಿರತೆಯೇ ಎನ್ನುವ ಬಗ್ಗೆ ಅರಣ್ಯ ಇಲಾಖೆಗೇ ಖಾತ್ರಿಯಾಗಿಲ್ಲ. ಕೊಡಗು ಹೊರತು ಪಡಿಸಿದಂತೆ ಇತರ ಜಿಲ್ಲೆಗಳಲ್ಲಿ ದಾಳಿ ಮಾಡುವ ಕಾಡುಪ್ರಾಣಿಗಳನ್ನು ಜನರ ಸುರಕ್ಷತೆಯ ದೃಷ್ಟಿಯಿಂದ ತಕ್ಷಣ ಸೆರೆ ಹಿಡಿಯುವ ಕಾರ್ಯಾಚರಣೆ ನಡೆಯುತ್ತದೆ. ಆದರೆ ಕೊಡಗಿನಲ್ಲಿ ಮಾತ್ರ ವನ್ಯಜೀವಿಗಳ ಉಪಟಳವನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*

ಅಕ್ಟೋಬರ್ 2, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.1 NEWS DESK : ಗೋವಾದ ಚೌಗುಲೇ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ಯೂತ್ ಸ್ಪೋರ್ಟ್ಸ್ ಎಜುಕೇಷನ್ ಫೆಡರೇಷನ್ ಇಂಡಿಯಾ ವತಿಯಿಂದ…

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026

*ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*

ಅಕ್ಟೋಬರ್ 1, 2026

*ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*

ಅಕ್ಟೋಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.