Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*
  • *ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*
  • *ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*
  • ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ
  • *ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*
  • *ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*
  • *ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*
  • *ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*
  • *7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*
  • *ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು : 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ*

ಜನವರಿ 22, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಜ.22 NEWS DESK : ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು, ಡೆಹರಾಡೂನ್ ಇಲ್ಲಿಗೆ 8 ನೇ ತರಗತಿ ಪ್ರವೇಶ ಬಯಸುವ ಬಾಲಕ ಬಾಲಕಿಯರಿಗಾಗಿ 2025 ರ ಜೂ.1 ರಂದು ಬೆಂಗಳೂರಿನ ಕೇಂದ್ರದಲ್ಲಿ ಅರ್ಹತಾ ಪರೀಕ್ಷೆ ನಡೆಯಲಿದೆ. ಜನವರಿ 2026 ನೇ ಅಧಿವೇಶನಕ್ಕಾಗಿ ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಲಿಮಿಟರಿ ಕಾಲೇಜ್ ನಲ್ಲಿ 8 ನೇ ತರಗತಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ 2025 ರ ಜೂನ್, 01 ರಂದು ನಡೆಯಲಿದೆ. ಅಭ್ಯರ್ಥಿಗಳು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ಶಾಲೆಯಲ್ಲಿ 7 ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ ದಿನಾಂಕ 01-01-2026 ರಂತೆ 11 1/2 ವರ್ಷದಿಂದ 13 ವರ್ಷದೊಳಗಿರುವ (ಅಂದರೆ ದಿನಾಂಕ 02-01-2013 ರಿಂದ 01-07-2014 ರೊಳಗೆ ಜನಿಸಿರುವ) ಬಾಲಕರು ಮತ್ತು ಬಾಲಕಿಯರು ಮಾತ್ರ ಸದರಿ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ. ಈ ಸಂಸ್ಥೆಯ ಮುಖ್ಯ ಗುರಿ ಯುವಕ ಮತ್ತು ಯುವತಿಯರನ್ನು ದೇಶದ ಸಶಸ್ತ್ರ ಪಡೆಗೆ ಸೇರಲು ಸಿದ್ದಗೊಳಿಸುವುದು ಹಾಗೂ ಈ ನಿಟ್ಟಿನಲ್ಲಿ ಯುವಕ ಮತ್ತು ಯುವತಿಯರಿಗೆ ಸರ್ವ ರೀತಿಯ ವಿದ್ಯಾಭ್ಯಾಸ/ ತರಬೇತಿ ನೀಡುವುದು. ಕಾಲೇಜಿನಲ್ಲಿ ವರ್ಷವೊಂದಕ್ಕೆ ಪ್ರಸಕ್ತ ವಿಧ್ಯಾಭ್ಯಾಸ ಶುಲ್ಕ ರೂ.98,650 ಗಳು ಹಾಗೂ ರೂ 81,850 (ಎಸ್.ಸಿ/ಎಸ್‍ಟಿ) ಗಳಾಗಿರುತ್ತದೆ. ಇದು ಕಾಲ ಹೆಚ್ಚಾಗಬಹುದು. ವಿಧ್ಯಾರ್ಥಿ ಮತ್ತು ವಿಧ್ಯಾರ್ಥಿನಿಯು ಪ್ರವೇಶ ಸಮಯದಲ್ಲಿ ರೂ. 50,000 ಭದ್ರತಾ ಠೇವಣೆ ನೀಡಬೇಕಾಗುತ್ತದೆ. ಈ ಮೊತ್ತವನ್ನು ವಿಧ್ಯಾರ್ಥಿಯು ಪದವೀಧರನಾದ ಮತ್ತು ವಿಧ್ಯಾರ್ಥಿನಿ ಪದವೀಧರೆಯಾದ ಬಳಿಕ ಹಿಂತಿರುಗಿಸಲಾಗುವುದು. ಅರ್ಜಿ ನಮೂನೆಗಳನ್ನು ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕವನ್ನು ರಾಷ್ಟ್ರೀಯ ಭಾರತೀಯ ಮಿಲಿಟಿರಿ ಕಾಲೇಜು, ಗರಹಿ ಕ್ಯಾಂಟ್, ಡೆಹರಾಡೂನ್, ಉತ್ತರಾಖಂಡ್, ಪಿನ್-248003 ಮೂಲಕ ಪಡೆಯಬಹುದು. ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600 ಗಳು ಎಸ್.ಸಿ /ಎಸ್‍ಟಿ ಅಭ್ಯರ್ಥಿಗಳಿಗೆ ರೂ. 555 ಗಳು ಆನ್‍ಲೈನ್ ಪಾವತಿ ಮಾಡುವ ಮೂಲಕ ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರು ಪುಸ್ತಕಗಳನ್ನು ಸಹ ಪಡೆಯಬಹುದು. ವೆಬ್‍ಸೈಟ್ ಪಾವತಿ ಸ್ವೀಕರಿಸಿದ ನಂತರ ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರು ಪುಸ್ತಕಗಳನ್ನು ಸ್ಪೀಡ್ ಪೋಸ್ಟ್ ಮೂಲಕ ರವಾನಿಸಲಾಗುತ್ತದೆ. ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರು ಪುಸ್ತಕಗಳನ್ನು ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600 ಗಳ ಬೇಡಿಕೆಯ ಕರಡು ಮತ್ತು ಎಸ್.ಸಿ /ಎಸ್‍ಟಿ ಅಭ್ಯರ್ಥಿಗಳಿಗೆ ರೂ. 555 ಗಳ ಬೇಡಿಕೆಯ ಕರಡು ಕಳುಹಿಸಿ ಲಿಖಿತ ವಿನಂತಿಯ ಪರವಾಗಿ ಜಾತಿ ಪ್ರಮಾಣಪತ್ರದೊಂದಿಗೆ ಕಳುಹಿಸಬಹುದು. ‘ದಿ ಕಮಾಂಡೆಂಟ್ ರಿಮ್ಕ್ ಫಂಡ್ ಪೇಯೇಬಲ್ ಅಟ್ ಹೆಚ್‍ಡಿಎಫ್‍ಸಿ ಬ್ಯಾಂಕ್, ಬಲ್ಲೂಪುರ್ ಚೌಕಿ, ಡೆಹರಾಡೂನ್(ಬ್ಯಾಂಕ್ ಕೋಡ್, 1399), ಉತ್ತರಾಖಂಡ(THE COMMANDANI RIMC FUND PAYABLE AT HDFC BANK BALLUPUR CHOWK, DEHRADUN ( BANK CODE.1399 UTTARAKHAND) ವಿಳಾಸ, ಪಿನ್ ಕೋಡ್ ಮತ್ತು ಸಂಪರ್ಕ ಸಂಖ್ಯೆಯೊಂದಿಗೆ ದೊಡ್ಡ ಅಕ್ಷರಗಳಲ್ಲಿ ಟೈಪ್ ಮಾಡಿ ಬರೆಯಬೇಕು. ಕಾನೂನು ಬಾಹಿರ ಅಥವಾ ಅಪೂರ್ಣ ವಿಳಾಸದಿಂದ ಉಂಟಾಗುವ ಪ್ರಾಸ್ಪೆಕ್ಟಸ್ ಸಾಗಾಣಿಕೆಯಲ್ಲಿ ಯಾವುದೇ ಅಂಚೆ ವಿಳಂಬ ಅಥವಾ ನಷ್ಟಕ್ಕೆ ಆರ್‍ಎಲ್‍ಎಂಸಿ ಸಂಸ್ಥೆಯು ಜವಾಬ್ದಾರರಾಗಿರುವುದಿಲ್ಲ. ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಯನ್ನು ದ್ವಿಪ್ರತಿಯಲ್ಲಿ ಮುನ್ಸಿಪಾಲಿಟಿ/ ಗ್ರಾಮ ಪಂಚಾಯತ್ ಪ್ರಾಧಿಕಾರ ವತಿಯಿಂದ ಆಂಗ್ಲ ಭಾಷೆಯಲ್ಲಿ ಅಭ್ಯರ್ಥಿಯ ಜನ್ಮ ಪ್ರಮಾಣ ಪತ್ರದ ಧೃಡೀಕೃತ ಪ್ರತಿ. 5 ಪಾಸ್‍ಪೋರ್ಟ್ ಸೈಜಿನ ಭಾವಚಿತ್ರಗಳು.(ಅರ್ಜಿಗಳಲ್ಲಿ ಅಂಟಿಸಿದ ಭಾವಚಿತ್ರವನ್ನು ಸೇರಿಸಿ, ಎಸ್.ಸಿ/ ಎಸ್‍ಟಿ ಅಭ್ಯರ್ಥಿಗಳಾಗಿದ್ದಲ್ಲಿ, ಸಕ್ಷಮ ಪ್ರಾಧಿಕಾರದಿಂದ ನೀಡಿದ ಜಾತಿ ಪ್ರಮಾಣ ಧೃಢೀಕೃತ ಪ್ರತಿ (ಆಂಗ್ಲ ಭಾಷೆಯಲ್ಲಿ ಇರುವಂತೆ ಮಾತ್ರ). ಪರೀಕ್ಷಾ ಪ್ರವೇಶ ಪತ್ರವನ್ನು ತ್ವರಿತ/ ನೋಂದಾಯಿತ ಅಂಚೆ ಮೂಲಕ ರವಾನಿಸಲು ರೂ.4 ಅಂಚೆ ಚೀಟಿ ಅಂಟಿಸಿದ ಸ್ವವಿಳಾಸ ಲಕೋಟೆ. ಶಾಲಾ ಪ್ರಾಚಾರ್ಯರು/ ಮುಖ್ಯೋಪಾಧ್ಯಾಯರಿಂದ ಅಭ್ಯರ್ಥಿಯ ಜನ್ಮ ದಿನಾಂಕ ಓದುತ್ತಿರುವ ತರಗತಿ ಬಗ್ಗೆ ಪಡೆದ ಪ್ರಮಾಣ ಪತ್ರದ ಮೂಲ ಪ್ರತಿ (ಧೃಢೀಕರಿಸಿದ ಅಭ್ಯರ್ಥಿಯ ಚಿತ್ರದೊಂದಿಗೆ) ಕರ್ನಾಟಕ ರಾಜ್ಯದ ಮೂಲವಾಸಸ್ಥಾನ ಧೃಡೀಕರಣ ಪತ್ರ (ತಹಶೀಲ್ದಾರರಿಂದ), ಆಧಾರ್ ಕಾರ್ಡ್ ಪ್ರತಿ(ಕಡ್ಡಾಯ) ಯೊಂದಿಗೆ 2025 ರ ಮಾರ್ಚ್, 31 ರೊಳಗೆ ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಎಮ್ ಕಾರ್ಯಪ್ಪ ಭವನ್, ನಂ.58 ಫೀಲ್ಡ್ ಮಾರ್ಷಲ್ ಕೆ ಎಮ್ ಕಾರ್ಯಪ್ಪ ರಸ್ತೆ, ಬೆಂಗಳೂರು ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080-25589459 ಅಥವಾ ಸಮೀಪದಲ್ಲಿರುವ ತಮ್ಮ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಾರ್ಯಾಲಯ ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*

ಅಕ್ಟೋಬರ್ 2, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.1 NEWS DESK : ಗೋವಾದ ಚೌಗುಲೇ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ಯೂತ್ ಸ್ಪೋರ್ಟ್ಸ್ ಎಜುಕೇಷನ್ ಫೆಡರೇಷನ್ ಇಂಡಿಯಾ ವತಿಯಿಂದ…

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026

*ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*

ಅಕ್ಟೋಬರ್ 1, 2026

*ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*

ಅಕ್ಟೋಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.