Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ : ಶ್ರದ್ಧಾಭಕ್ತಿಯಿಂದ ಜರುಗಿದ ಸಂತ ಅಂತೋಣಿ ಅವರ ವಾರ್ಷಿಕೋತ್ಸವ*
  • *ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*
  • *ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*
  • *ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*
  • *ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*
  • *ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*
  • *ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*
  • *ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*
  • *ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾವಿನಹಳ್ಳ ಹಾಡಿ ಮತ್ತು ಕಟ್ಟೆ ಹಾಡಿಯ ಅರಣ್ಯ ಹಕ್ಕು ಗ್ರಾಮಸಭೆ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾವಿನಹಳ್ಳ ಹಾಡಿ ಮತ್ತು ಕಟ್ಟೆ ಹಾಡಿಯ ಅರಣ್ಯ ಹಕ್ಕು ಗ್ರಾಮಸಭೆ* 

ಜನವರಿ 23, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.23 NEWS DESK : ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಂಗಸಮುದ್ರ ಬಳಿಯ ಚಿಕ್ಲಿಹೊಳೆ ಆವರಣದಲ್ಲಿ ಮಾವಿನಹಳ್ಳಹಾಡಿ ಹಾಗೂ ಕಟ್ಟೆಹಾಡಿಯ ಅರಣ್ಯ ಹಕ್ಕು ಸಮಿತಿಯ ವಿಶೇಷ ಗ್ರಾಮಸಭೆ ನಡೆಯಿತು. ಗಿರಿಜನ ಸಮುದಾಯದ ಹಿರಿಯ ಮುಖಂಡ ಜೆ.ಪಿ.ರಾಜು ವಿಶೇಷ ಗ್ರಾಮಸಭೆಯನ್ನು ಉದ್ಘಾಟಿಸಿದರು. ಸಭೆಯ ಆರಂಭದಲ್ಲಿ ಅರಣ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಗ್ರಾಪಂ ಪಿಡಿಒ ರಾಜಶೇಖರ್ ಮಾತನಾಡಿ, ಸಭೆಗೆ ಅಗತ್ಯ ಮಾಹಿತಿ ಒದಗಿಸಿದರು. ಗ್ರಾಮಸಭೆಗೆ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಜರಾಗಬೇಕು. ತಮ್ಮ‌ ಬದಲು ಮಾಹಿತಿ ಕೊರತೆ ಇರುವವರನ್ನು ಇಲಾಖೆಯಿಂದ ಸಭೆಗೆ ಕಳಿಸಲಾಗುತ್ತಿದೆ ಎಂದು ಸಭೆಗೆ ಗೈರಾದ ಇಲಾಖೆ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಗೊಂಡಿತು. ಅಭಿವೃದ್ಧಿ ಅಧಿಕಾರಿ ರಾಜಶೇಖರ್ ಮಾತನಾಡಿ, ಗಿರಿಜನ ಸಮಗ್ರ ಅಭಿವೃದ್ಧಿ ಯೋಜನೆಯಡಿ ಹಾಗೂ ಪಂಚಾಯತಿ ವತಿಯಿಂದಲೂ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಹಕ್ಕುಪತ್ರ ಪಡೆದ ಕುಟುಂಬಗಳು ಸರ್ಕಾರದ ವತಿಯಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಜೊತೆಗೆ ಜಾತಿ, ಆಧಾರ್ ಕಾರ್ಡ್ ಹೊಂದಿಲ್ಲದ ಕುಟುಂಬಗಳನ್ನು ಗುರುತಿಸಿ ವಿಶೇಷ ಕ್ಯಾಂಪ್ ನಡೆಸಿ ನೊಂದಾಯಿಸಿಕೊಂಡು ಜಾತಿ ಪ್ರಮಾಣ ಪತ್ರ, ಆಧಾರ ಕಾರ್ಡ್‌ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು. ಗ್ರಾ.ಪಂ ಸದಸ್ಯ ರಕ್ಷಿತ್ ಮಾವಾಜಿ ಮಾತನಾಡಿ, ಅರಣ್ಯ ಸಂರಕ್ಷಣೆಗೆ ಗಿರಿಜನ, ಆದಿವಾಸಿಗಳ ಕೊಡುಗೆ ಅಪಾರವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಗಿರಿಜನರ ಅಭಿವೃದ್ಧಿಗೆ ವಿಶೇಷ ಒತ್ತು ನೀಡುತ್ತಿದ್ದು, ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಹಕ್ಕುಪತ್ರ ವಿತರಣೆ ಮಾಡುತ್ತಿದೆ.ಜೊತೆಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಗಿರಿಜನರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುವ ಮೂಲಕ ಪಡೆದುಕೊಳ್ಳಬೇಕು. ನಿಮ್ಮ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಕೇವಲ ಭೂಮಿ ಪಡೆದುಕೊಳ್ಳುವುದಕ್ಕೆ‌ ಮಾತ್ರ ಸೀಮಿತವಾಗದೆ, ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಗಿರಿಜನರು ಪಡೆದುಕೊಂಡು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ತಮ್ಮ ಜೀವನ ಮಟ್ಟವನ್ನು ಉತ್ತಮ ಪಡಿಸಿಕೊಳ್ಳಬೇಕು ಎಂದರು. ಗಿರಿಜನ ಮುಖಂಡ ಆರ್.ಕೆ.ಚಂದ್ರು ಮಾತನಾಡಿ, 42 ವರ್ಷ ಗಳಿಂದ ನಿರಂತರ ಅನ್ಯಾಯ ಸಹಿಸಿಕೊಂಡು ಬರುತ್ತಿದ್ದೇವೆ. ಗಿರಿಜನರ ಹೆಸರಿನಲ್ಲಿ‌ ಸುಳ್ಳು ಜಾತಿ ಪ್ರಮಾಣ ಪಡೆದು ಹಲವರು ಸರಕಾರದ ಸೌಲಭ್ಯಗಳನ್ನು ಕಬಳಿಸಿಕೊಂಡಿದ್ದಾರೆ. ಆದರೆ ನೈಜ ಫಲಾನುಭವಿಗಳು ಇದರಿಂದ ವಂಚಿತರಾಗಿದ್ದಾರೆ. ನಮಗೆ ದೊರಕಬೇಕಾದ ಹಕ್ಕುಗಳನ್ನು ಒದಗಿಸುವುದು ಅಧಿಕಾರಿಗಳ ಕರ್ತವ್ಯ. ಆದರೆ ನಮ್ಮ‌ ಬಗ್ಗೆ‌ ಅಧಿಕಾರಿ ವರ್ಗ ನಿರ್ಲಕ್ಷ್ಯ ತಾಳಿದ್ದಾರೆ.ಕಾಡಿನಲ್ಲಿರುವ ವಸ್ತುಗಳು ನಮ್ಮದು, ಮರ ಕಡಿದು ಸಾಗಿಸುವವರನ್ನು ಬಿಡುವ ಅರಣ್ಯ ಅಧಿಕಾರಿಗಳು ಕಾಡಿನಲ್ಲಿ ಜೇನು, ನಲ್ಲಿ, ಸೀಗೆ ಕುಯ್ಯುವ ಗಿರಿಜನರ ಮೇಲೆ ಕೇಸು ಹಾಕುತ್ತ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶೀಘ್ರದಲ್ಲೇ ಜಿಲ್ಲಾಡಳಿತದ ಮುಂದೆ ಅರೆಬೆತ್ತಲೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಆರ್.ಕೆ.ಚಂದ್ರು ಎಚ್ಚರಿಕೆ ನೀಡಿದರು.  ಗಿರಿಜನ ಮುಖಂಡ ಜೆ.ಟಿ.ಕಾಳಿಂಗ ಮಾತನಾಡಿ, ಅರಣ್ಯ ಹಕ್ಕು ಕಾಯ್ದೆ ಅಡಿ ವೈಯಕ್ತಿಕ ಹಕ್ಕು, ಸಮುದಾಯ ಹಕ್ಕು ನೀಡಬೇಕು.ಅನುಭವದಲ್ಲಿದ್ದ ಅಷ್ಟೂ ಪ್ರಮಾಣದ ಜಮೀನಿಹೆ ಹಕ್ಕುಪತ್ರ ನೀಡಬೇಕು. ಗ್ರಾಮ ಅರಣ್ಯ ಸಮಿತಿ ಗಮನಕ್ಕೆ ತಾರದೆ ನಮ್ಮ ಸಮುದಾಯದ ಅಭಿವೃದ್ದಿ ಯೋಜನೆಗಳು ಹಾಗೂ ಹಾಡಿಯ ಅಭಿವೃದ್ಧಿ ಕಾಮಗಾರಿಗಳನ್ನು ‌ನಡೆಸಕೂಡದು. ಒಂದು ವೇಳೆ ನಡೆಸಿದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಸಿದರು. ಮಾವಿನಹಳ್ಳ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಜೆ.ಎಂ. ನಾಗೇಶ್ ಅಧ್ಯಕ್ಷತೆ ವಹಿಸಿದ್ದರು. ಕಟ್ಟೆಹಾಡಿ ಸಮಿತಿಯ ಅಧ್ಯಕ್ಷ ಅಪ್ಪು, ವಿರೂಪಾಕ್ಷಪುರ ಗ್ರಾಮ ಅರಣ್ಯ ಸಮಿತಿ ಗಿರಿ, ಸಜ್ಜಹಳ್ಳಿ ಸಮಿತಿ ಅಧ್ಯಕ್ಷ ವಿಶ್ವ, ಮುಖಂಡ ಧರ್ಮ, ಗ್ರಾ.ಪಂ.ಕಾರ್ಯದರ್ಶಿ ಶೇಷಗಿರಿ ಉಪಸ್ಥಿತರಿದ್ದರು. ಜೆ.ಪಿ.ಮುತ್ತಮ್ಮ ಸ್ವಾಗತಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ : ಶ್ರದ್ಧಾಭಕ್ತಿಯಿಂದ ಜರುಗಿದ ಸಂತ ಅಂತೋಣಿ ಅವರ ವಾರ್ಷಿಕೋತ್ಸವ*

ಮೇ 11, 2026

*ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*

ಮೇ 11, 2026

*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*

ಮೇ 11, 2026

*ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*

ಮೇ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 11 NEWS DESK :  ಮಡಿಕೇರಿ ನಗರ ಠಾಣೆ ವೃತ್ತ ನಿರೀಕ್ಷರಾಗಿದ್ದ ಟಿ.ಕೆ.ರಾಜು ಅವರಿಗೆ ಆತ್ಮೀಯ ಬೀಳ್ಕೊಡುಗೆ…

*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*

ಮೇ 11, 2026

*ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*

ಮೇ 11, 2026

*ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಮೇ 11, 2026

*ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*

ಮೇ 11, 2026

*ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*

ಮೇ 11, 2026

*ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*

ಮೇ 11, 2026

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*

ಮೇ 11, 2026

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.