Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*
  • *ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*
  • *ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*
  • ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ
  • *ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*
  • *ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*
  • *ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*
  • *ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*
  • *7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*
  • *ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ 22 ಅಡಿ ಎತ್ತರದ ಶ್ರೀ ಓಂಕಾರೇಶ್ವರ ದೇವಸ್ಥಾನದ ಕಲಾಕೃತಿ ಮತ್ತು 20 ಸಾವಿರ ವಿವಿಧ ಜಾತಿಯ ಹೂವುಗಳ ಆಕರ್ಷಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ 22 ಅಡಿ ಎತ್ತರದ ಶ್ರೀ ಓಂಕಾರೇಶ್ವರ ದೇವಸ್ಥಾನದ ಕಲಾಕೃತಿ ಮತ್ತು 20 ಸಾವಿರ ವಿವಿಧ ಜಾತಿಯ ಹೂವುಗಳ ಆಕರ್ಷಣೆ*

ಜನವರಿ 23, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜ.23 : ತೋಟಗಾರಿಕೆ ಇಲಾಖೆಯು ಜಿಲ್ಲಾ, ಆಡಳಿತ, ಜಿಲಾ, ಪಂಚಾಯತ್ ಹಾಗೂ ಇತರೆ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಭಾರತ ದೇಶದ ಗಣರಾಜ್ಯೋತ್ಸವದ ಪ್ರಯುಕ್ತ ಜ.24 ರಿಂದ 27 ರವರೆಗೆ ಮಡಿಕೇರಿಯ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಫಲಪುಷ್ಪ ಪ್ರದರ್ಶನದ ಉದ್ಘಾಟನೆಯನ್ನು24 ರಂದು ಮಧ್ಯಾಹ್ನ 3 ಗಂಟೆಗೆ ಕೊಡಗು ಉಸ್ತುವಾರಿ ಸಚಿವರು ಮಾಡಿಲಿದ್ದು, ಜಿಲ್ಲೆಯ ಶಾಸಕರುಗಳು ಹಾಗೂ ಇತರೆ ಗಣ್ಯರು ಭಾಗವಹಿಸಲಿದ್ದಾರೆ. ಫಲಪುಷ್ಪ ಪ್ರದರ್ಶನದ ಅಂಗವಾಗಿ ಈಗಾಗಲೇ ರಾಜಾಸೀಟು ಉದ್ಯಾನವನದಲಿ.. ಸುಮಾರು 7000 ಸಾವಿರ ಕುಂಡಗಳಲ್ಲಿ ವಿವಿಧ ಜಾತಿಯ ಹೂವುಗಳು ಹಾಗೂ ಬೆಡ್ ಗಳಲ್ಲಿ ಸುಮಾರು 20000 ವಿವಿಧ ಜಾತಿಯ ಹೂವುಗಳಾದ ಸಾಕ್ಷಿಯ, ಸೇವಂತಿಗೆ, ಚಂಡು ಹೂ, ಜೀನಿಯಾ, ಡಯಾಂಥಸ್, ಇಂಪೇಷಿಯನ್ಸ್, ವಿಂಕಾ ರೋಸಿಯಾ, ಕಾಕ್ಸ್, ಕೋಂಬ್, ಡೇಲಿಯಾ, ಇತ್ಯಾದಿಗಳನ್ನು ಪಾತಿಯಲ್ಲಿ ಹಾಗೂ ಕುಂಡಗಳಲ್ಲಿ ಬೆಳೆಯಲಾಗಿದೆ. ::: ಈ ವರ್ಷದ ಫಲಪುಷ್ಪ ಪ್ರದರ್ಶನದ ಪ್ರಮುಖ ಆಕರ್ಷಣೆಗಳು::: 1. ಕೊಡಗಿನ ಪ್ರಸಿದ್ದ ಶ್ರೀ ಓಂಕಾರೇಶ್ವರ ದೇವಸ್ಥಾನದ ಕಲಾಕೃತಿಯನ್ನು 22 ಅಡಿ ಎತ್ತರದಲ್ಲಿ 30 ಅಡಿ ಉದ್ದ, 38 ಅಡಿ ಅಗಲದಲ್ಲಿ ವಿವಿಧ ಬಣ್ಣಗಳ ಗುಲಾಬಿ, ಸೇವಂತಿಗೆ, ಆಸ್ಮರ್ ಜಾತಿಯ ಸುಮಾರು 5 ಲಕ್ಷ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗುವುದು. 2. ಕರ್ನಾಟಕ ಸರ್ಕಾರದ, ತೋಟಗಾರಿಕೆ ಇಲಾಖೆಯಿಂದ ಕರ್ನಾಟಕ ರಾಜ್ಯದಲ್ಲಿ ಉತ್ಪತ್ತಿಯಾಗುವ ಜೇನು ತುಪ್ಪವನ್ನು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿಗೊಳಿಸಿ ಮಾರಾಟ ಮಾಡುವ ಉದ್ದೇಶದಿಂದ “ಝೇಂಕಾರ (JHENKARA)” ಬ್ರಾಂಡ್ ಅಡಿಯಲ್ಲಿ ನೊಂದಾಯಿಸಲ್ಪಟಿದ್ದು, “ಝೇಂಕಾರ (JHENKARA)” ಬ್ರಾಂಡ್ ಹಾಗೂ ಕೊಡಗು ಜೇನಿನ “ಕೂರ್ಗ್ ಹನಿ” ಮಾರಾಟ ಬ್ರಾಂಡ್ ಗಳ ವಿವಿಧ ಕಲಾಕೃತಿಗಳನ್ನು ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗುವುದು. 3. ಹೂ ಹಾಗೂ ಜೇನು ಹುಳುವಿನ ಕಲಾಕೃತಿಯನ್ನು ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗುವುದು.  4. ಗಣರಾಜ್ಯೋತ್ಸವದ ಅಂಗವಾಗಿ ಯೋಧ, ಪಿರಂಗಿ ಹಾಗೂ ರಾಷ್ಟ್ರಧ್ವಜದ ಕಲಾಕೃತಿಯನ್ನು ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗುವುದು. ವಿಂಟೇಜ್ ಕಾರ್ ನ ಕಲಾಕೃತಿಯನ್ನು ವಿವಿಧ ಬಣ್ಣದ ಹೂವಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗುವುದು. 6. Butterfly wings, ಪ್ರವೇಶದಾರ, ಪ್ರಾಣಿ ಮುಖದ ಕಲಾಕೃತಿಯನ್ನು ಹೂವುಗಳಿಂದ ನಿರ್ಮಾಣ ಮಾಡಲಾಗುವುದು. 7. ಮಕ್ಕಳಿಗೆ ಮನರಂಜನೆ ನೀಡುವಂತಹ ಬಾರ್ಬಿ ಡಾಲ್, ಡೊರೆಮಾನ್, ಮೋಟು ಪಟು. ಕಲಾಕೃತಿಗಳನ್ನು ವಿವಿಧ ಹೂವುಗಳಿಂದ ಅಲಂಕರಿಸಿ ಫೋಟೋ ಫ್ರೆಮ್, Selfy Zone ಮಾದರಿಯನ್ನು ನಿರ್ಮಿಸಲಾಗುವುದು. 8. ವಿವಿಧ ಕ್ಷೇತ್ರಗಳ ಗಣ್ಯರು ಗಳ ಕಲಾಕೃತಿಗಳನ್ನು ಹಣ್ಣು/ತರಕಾರಿಗಳಿಂದ ಕೆತ್ತನೆ ಮಾಡಿ ಪ್ರದರ್ಶಿಸಲಾಗುವುದು. ವಿವಿಧ ಅಲಂಕಾರಿಕ ಗಿಡಗಳು ಬೋನ್ಸಾಯ್ ಗಿಡಗಳ ಪ್ರದರ್ಶನ, ಇಕೆಬಾನೆ ಹೂವಿನ ಜೋಡನೆಯ ಪ್ರದರ್ಶನಗಳನ್ನು ಏರ್ಪಾಡಿಸಲಾಗುವುದು. ಈ ರೀತಿಯಾಗಿ ಹದಿನಾರು ವಿವಿಧ ರೀತಿಯ ಹೂವಿನ ಕಲಾಕೃತಿಗಳನ್ನು ಒಟ್ಟು 8.00 ರಿಂದ 10.00 ಲಕ್ಷ ಸಂಖ್ಯೆಯ ಸೇವಂತಿಗೆ, ಆರ್ಕಿಡ್, ಡೆಸ್ಸಿ ಹಾಗೂ ವಿವಿಧ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗುವುದು. ಮುಂದುವರೆದು ಗಾಂಧಿ ಮೈದಾನದಲ್ಲಿ 60 ಸಂಖ್ಯೆಯ ವಿವಿಧ ಇಲಾಖೆಗಳು/ಏಜೆನ್ಸಿಗಳು/ಸಂಸ್ಥೆಗಳು ಮಳಿಗೆಯನ್ನು ನಿರ್ಮಿಸಲಾಗುವುದು ಇದರಲ್ಲಿ 10 ಮಳಿಗೆಯನ್ನು ತೋಟಗಾರಿಕೆ, ಕಾಫಿ ಮಂಡಳಿ, ಕೃಷಿ, ಪಶುಪಾಲನೆ, ಮೀನುಗಾರಿಕೆ, Hopcoms, ಕೈಗಾರಿಕೆ ವಾಣಿಜ್ಯ ಇಲಾಖೆ ಹಾಗೂ ಇತರೆ ಇಲಾಖೆಗಳಿಗೆ ಕಾಯ್ದಿರಿಸಲಾಗಿದೆ. 50 ಮಳಿಗೆಯಲ್ಲಿ ನರ್ಸರಿ ಗಿಡಗಳ ಮಾರಾಟ ಮಳಿಗೆ, ಕೃಷಿ ಪರಿಕರಗಳ ಪ್ರದರ್ಶನ ಹಾಗೂ ಯಂತ್ರೋಪಕರಣಗಳ ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು. ರೈತರು ಬೆಳೆದಿರುವಂತಹ ವಿಶೇಷವಾದ ಹಣ್ಣುಗಳು, ತರಕಾರಿ, ತೋಟದ ಬೆಳೆಗಳು, ಸಾಂಬಾರು ಬೆಳೆಗಳ ಪ್ರದರ್ಶಿಕೆಗಳನ್ನು ಪ್ರದರ್ಶಿಸಲು ಉದ್ದೇಶಿಸಲಾಗಿದೆ. ಅತ್ಯುತ್ತಮ ಪ್ರದರ್ಶಿಕೆಗಳಿಗೆ ಬಹುಮಾನ ನೀಡಲಾಗುವುದು. ಆಸಕ್ತರು ದಿನಾಂಕ: 23.01.2025 ರಿಂದಲೇ, ತೋಟಗಾರಿಕೆ ಇಲಾಖೆಗೆ ಪ್ರದರ್ಶಿಕೆಗಳನ್ನು ತಂದು ಹೆಸರನ್ನು ನೋಂದಾಯಿಸಿಕೊಳ್ಳುವುದು. ತೋಟಗಾರಿಕೆಯಲ್ಲಿ ಆಸಕ್ತಿಯಿರುವ ಮಹಿಳೆಯರಿಗೆ ಹಾಗೂ ಸಾರ್ವಜನಿಕರಿಗೆ ಒಣ ಹೂ ಜೋಡಣೆ, ಬಿಡಿ ಹೂಗಳ ಜೋಡಣೆ, ಇಕೆಬಾನ, ರಂಗೋಲಿ ಸ್ಪರ್ಧೆಗಳನ್ನು ರಾಜಾಸೀಟಿನ ಒಳಭಾಗದಲ್ಲಿ ಆಯೋಜಿಸಲಾಗುವುದು. ಆಸಕ್ತರು ಇಂದಿನಿಂದಲೇ ಅಥವಾ ನೇರವಾಗಿ ದಿನಾಂಕ: 24.01.2025 ಬೆಳಿಗ್ಗೆ 8.00 ಗಂಟೆಗೆ ರಾಜಾಸೀಟು ಉದ್ಯಾನವನದಲ್ಲಿ (ದೂರವಾಣಿ ಸಂಖ್ಯೆ: 9448613355) ಹೆಸರನ್ನು ನೊಂದಾಯಿಸಿಕೊಂಡು ಸ್ಪರ್ಧೆಗಳಲ್ಲಿ ಭಾಗವಹಿಸಬಹುದು. ಶಾಲೆಯಿಂದ ಶಾಲಾ ಸಮವಸ್ತ್ರದಲ್ಲಿ ಭಾಗವಹಿಸುವ ಶಾಲಾ ಮಕ್ಕಳಿಗೆ ಉಚಿತವಾಗಿ ಪ್ರವೇಶ ನೀಡಲು ತೀರ್ಮಾನಿಸಲಾಗಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*

ಅಕ್ಟೋಬರ್ 2, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.1 NEWS DESK : ಗೋವಾದ ಚೌಗುಲೇ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ಯೂತ್ ಸ್ಪೋರ್ಟ್ಸ್ ಎಜುಕೇಷನ್ ಫೆಡರೇಷನ್ ಇಂಡಿಯಾ ವತಿಯಿಂದ…

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026

*ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*

ಅಕ್ಟೋಬರ್ 1, 2026

*ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*

ಅಕ್ಟೋಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.