Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಇತ್ತೀಚಿನ ಸುದ್ದಿಗಳು ಕರ್ನಾಟಕ ವಿಡಿಯೋ ಗ್ಯಾಲರಿ

ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಜನವರಿ 23, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು, ಜನವರಿ 23 NEWS DESK : ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ, ಮೈಸೂರು ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರೈತರ ಹಲವು ದಿನಗಳ ಬೇಡಿಕೆಯಾದ ಎಂಎಸ್ ಪಿ (ಕನಿಷ್ಟ ಬೆಂಬಲ ಬೆಲೆ) ಯೋಜನೆಯನ್ನು ಜಾರಿಗೆ ತರಬೇಕೆಂದು ಕೇಂದ್ರಸರ್ಕಾರವನ್ನು ಒತ್ತಾಯಿಸಿದರು.

ರಾಗಿ ತಿಂದವನು ನಿರೋಗಿ ಸಿರಿಧಾನ್ಯಗಳ ಸೇವೆನೆ ಆರೋಗ್ಯಕ್ಕೆ ಉತ್ತಮ ::  ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಿದ್ದೇವೆ. ದೇಶಕ್ಕೆ ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ಆಹಾರದ ಕೊರತೆಯಿತ್ತು. ಆದರೆ ಈಗ ಹಲವಾರು ಆಹಾರಧಾನ್ಯಗಳನ್ನು ಭಾರತ ರಫ್ತು ಮಾಡುತ್ತಿರುವುದು ಹೆಮ್ಮೆಯ ವಿಷಯ. ವಿರಳ ಮಳೆಯಿರುವ ಪ್ರದೇಶಗಳಲ್ಲಿ ಹೆಚ್ಚಾಗಿ ಸಾವಯವ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತದೆ. ಕೃಷಿ ಕುಟುಂಬಕ್ಕೆ ಸೇರಿದ ತಮ್ಮ ಕುಟುಂಬದವರೂ ಕೂಡ ಸಿರಿಧಾನ್ಯಗಳ ಕೃಷಿ ಮಾಡುತ್ತಿದ್ದುದನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ರಾಗಿ ತಿಂದವನು ನಿರೋಗಿ ಎಂಬಂತೆ, ಸಿರಿಧಾನ್ಯಗಳ ಸೇವೆನೆ ಆರೋಗ್ಯಕ್ಕೆ ಉತ್ತಮವಾಗಿದೆ ಎಂದು ತಿಳಿಸಿದರು.

ಸಿರಿಧಾನ್ಯ ಉತ್ಪಾದನ-ಕರ್ನಾಟಕ 3ನೇ ಸ್ಥಾನ :: ಭಾರತದಲ್ಲಿ ಸಿರಿಧಾನ್ಯಗಳ ಉತ್ಪಾದನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಚ್ಚಿನ ಒತ್ತು ನೀಡಿದೆ. ಸಾವಯವ ಕೃಷಿ ವಿಸ್ತೀರ್ಣದಲ್ಲಿ ಭಾರತವು ವಿಶ್ವದಲ್ಲಿ 2ನೇ ಸ್ಥಾನ ಹಾಗೂ ಒಟ್ಟು ಸಾವಯವ ಉತ್ಪಾದಕರಲ್ಲಿ ಮೊದಲನೇ ಸ್ಥಾನದಲ್ಲಿದೆ. ವಿಶ್ವದಲ್ಲಿ ಅಂದಾಜು 903.61 ಲಕ್ಷ ಟನ್‌ಗಳಷ್ಟು ಸಿರಿಧಾನ್ಯಗಳ ಉತ್ಪಾದನೆಯಾಗುತ್ತಿದ್ದು, ಇದರಲ್ಲಿ ಶೇ.38.50 ರಷ್ಟು ಪಾಲು ನಮ್ಮ ಭಾರತ ದೇಶದ್ದಾಗಿದ್ದು, ವಿಶ್ವದ ಅತಿದೊಡ್ಡ ಸಿರಿಧಾನ್ಯ ಉತ್ಪಾದನೆಯಲ್ಲಿ ಮುಂಚೂಣಿ ರಾಷ್ಟ್ರವಾಗಿದೆ. ನಮ್ಮ ರಾಜ್ಯವು ಸಿರಿಧಾನ್ಯಗಳ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ದೇಶದಲ್ಲಿಯೇ 3ನೇ ಸ್ಥಾನದಲ್ಲಿರುತ್ತದೆ ಎಂದರು.

“ಸಾವಯವ ಕೃಷಿ ನೀತಿ” ::  ಭಾರತದ ಒಟ್ಟು ಸಾವಯವ ರಫ್ತು ಪ್ರಮಾಣವು 2.61 ಲಕ್ಷ ಟನ್ ಆಗಿದ್ದು, ಈ ಪೈಕಿ ಸಾವಯವದ ಆಹಾರ ರಫ್ತಿನಿಂದ ಸುಮಾರು 4008 ಕೋಟಿ ರೂ.ಗಳಷ್ಟು ಆದಾಯವಾಗಿರುತ್ತದೆ. ಸಾವಯವ ಮತ್ತು ಸಿರಿಧಾನ್ಯಗಳಿಗೆ ವ್ಯವಸ್ಥಿತ ಮಾರುಕಟ್ಟೆ ಮತ್ತು ಸರಬರಾಜು ಸರಪಳಿಯನ್ನು ಕಲ್ಪಿಸುವ ಉದ್ದೇಶದೊಂದಿಗೆ ಪರಿಷ್ಕೃತ “ಸಾವಯವ ಕೃಷಿ ನೀತಿ” ಯನ್ನು ನಮ್ಮ ಸರ್ಕಾರವು 2017ರಲ್ಲಿ ಹೊರತಂದಿದೆ. ರಾಜ್ಯದ ರೈತರಲ್ಲಿ ಸಾವಯವ ಕೃಷಿ ಪದ್ಧತಿಯ ಬಗ್ಗೆ ಅರಿವು ಮೂಡಿಸಲು”ಸಾವಯವ ಭಾಗ್ಯ ಯೋಜನೆಯನ್ನು” 2013 ನೇ ಸಾಲಿನಲ್ಲಿ ಹೊರತಂದು ಹೋಬಳಿಮಟ್ಟದಲ್ಲಿ ಮಾದರಿ ಸಾವಯವ ಗ್ರಾಮಗಳನ್ನು ಸ್ಥಾಪಿಸಿ ರೈತರನ್ನು ಒಗ್ಗೂಡಿಸಿ ಉತ್ತೇಜಿಸಲಾಗಿದೆ ಎಂದರು.

ಸಂಶೋಧನಾ ಕೇಂದ್ರ ::  ರಾಜ್ಯದ ಸಿರಿಧಾನ್ಯ ಕ್ಷೇತ್ರವನ್ನು ವಿಸ್ತರಿಸುವ ನಿಟ್ಟಿನಲ್ಲಿ “ರೈತ ಸಿರಿ” ಯೋಜನೆಯಡಿ ಪ್ರಮುಖ ಸಿರಿಧಾನ್ಯಗಳಾದ ಊದಲು, ನವಣೆ, ಹಾರಕ, ಕೊರಲೆ, ಸಾಮೆ ಮತ್ತು ಬರಗು ಬೆಳೆಗಳನ್ನು ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್ ಗೆ ರೂ. 10,000/- ಗಳಂತೆ ಗರಿಷ್ಠ 2 ಹೆಕ್ಟೇರ್ ಗಳಿಗೆ ಪ್ರೋತ್ಸಾಹಧನವನ್ನು ಪಾವತಿಸಲಾಗುತ್ತಿದೆ. ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಸೂಕ್ತ ಮಾರುಕಟ್ಟೆ ಹಾಗೂ ಉತ್ತಮ ಧಾರಣೆ ದೊರಕಿಸಿಕೊಡಲು ರಾಜ್ಯದ ಸಾವಯವ ಕೃಷಿಕರ ಸಂಘಗಳನ್ನು ಒಗ್ಗೂಡಿಸಿ 15 ಪ್ರಾಂತೀಯ ಸಾವಯವ ಒಕ್ಕೂಟಗಳನ್ನು ರಚಿಸಲಾಗಿದೆ. ಸಾವಯವ ಹಾಗೂ ಸಿರಿಧಾನ್ಯಗಳ ಕೃಷಿಗೆ ಸಂಬಂಧಿಸಿದ ಸಂಶೋಧನಾ ಕೇಂದ್ರಗಳನ್ನು ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಸ್ಥಾಪಿಸಲಾಗಿದೆ. ಸಿರಿಧಾನ್ಯಗಳ ಉತ್ತೇಜನದಲ್ಲಿ ಕರ್ನಾಟಕ ಸರ್ಕಾರವು ಕೈಗೊಂಡಿರುವ ವಿಶೇಷ ಪ್ರಯತ್ನಗಳನ್ನು ಗುರುತಿಸಿ ಕೇಂದ್ರ ಸರ್ಕಾರವು ಪ್ರಶಂಸನಾ ಪತ್ರ ವನ್ನು ಕರ್ನಾಟಕ ಸರ್ಕಾರದ ಕೃಷಿ ಇಲಾಖೆಗೆ ನೀಡಿರುತ್ತದೆ ಎಂದರು.

ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ ::  ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು. ಕರ್ನಾಟಕ ಸರ್ಕಾರ ಸಿರಿಧಾನ್ಯಗಳ ಕೃಷಿ, ಮಾರುಕಟ್ಟೆ ಹಾಗೂ ಇತರೆ ಸೌಲಭ್ಯಗಳನ್ನು ನೀಡುವ ಮೂಲಕ ಸಿರಿಧಾನ್ಯ ಕೃಷಿಯ ಅಭಿವೃದ್ಧಿಗೆ ಪ್ರೋತ್ಸಾಹ ನೀಡಲು ಬದ್ಧವಾಗಿದೆ ಎಂದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.