Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*
  • *ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*
  • *ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*
  • ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ
  • *ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*
  • *ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*
  • *ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*
  • *ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*
  • *7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*
  • *ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*

ಜನವರಿ 23, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.23 NEWS DESK : ಹುತಾತ್ಮರ ದಿನಾಚರಣೆಯನ್ನು ಜ.30 ರಂದು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕಳೆದ ಬಾರಿಯಂತೆ ಹುತಾತ್ಮರ ದಿನ ಪ್ರಯುಕ್ತ ಪೂಜ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವನ್ನು ಜಿಲ್ಲಾ ಖಜಾನೆಯಿಂದ ತೆಗೆದುಕೊಂಡು ಹೋಗಿ ಮೆರವಣಿಗೆ ಮೂಲಕ ಗಾಂಧಿ ಮಂಟಪದಲ್ಲಿರಿಸಿ ಸರ್ವಧರ್ಮ ಪ್ರಾರ್ಥನೆ ಮೂಲಕ ಹುತಾತ್ಮರ ದಿನಾಚರಣೆ ಆಚರಿಸಬೇಕಿದೆ ಎಂದರು. ಜಿಲ್ಲಾ ಖಜಾನೆಯಿಂದ ಮಹಾತ್ಮ ಗಾಂಧೀಜಿಯವರ ಚಿತಾಭಸ್ಮವನ್ನು ಹೊರತೆಗೆದು ಪುಷ್ಪಾಲಂಕಾರ ಮೂಲಕ ವಿಶೇಷ ಗೌರವ ಸಲ್ಲಿಸಿ, ನಂತರ ಪೊಲೀಸ್ ಗೌರವದೊಂದಿಗೆ ಮೆರವಣಿಗೆ ಮೂಲಕ ಹೊರಟು ಮಂಗೇರಿರ ಮುತ್ತಣ್ಣ ವೃತ್ತ, ಜನರಲ್ ತಿಮ್ಮಯ್ಯ ವೃತ್ತ ಮೂಲಕ ಗಾಂಧಿ ಮಂಟಪಕ್ಕೆ ತೆರಳಿ ಅಲ್ಲಿ ಸರ್ವಧರ್ಮ ಪ್ರಾರ್ಥನೆ ನಡೆಯಲಿದೆ. ಬಳಿಕ ಪೊಲೀಸ್ ಗೌರವ ಸಲ್ಲಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದರು. ಸರ್ವೋದಯ ಸಮಿತಿ ನಿಕಟ ಪೂರ್ವ ಅಧ್ಯಕ್ಷರಾದ ಟಿ.ಪಿ.ರಮೇಶ್ ಮಾತನಾಡಿ, ಗಾಂಧಿ ಮಂಟಪ ಆವರಣದಲ್ಲಿ ಸ್ವಚ್ಛಗೊಳಿಸಬೇಕು. ಪೊಲೀಸ್ ಬ್ಯಾಂಡ್ ನಿಯೋಜಿಸುವಂತಾಗಬೇಕು. ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಮಹಾತ್ಮ ಗಾಂಧೀಜಿ ಅವರ ಕುರಿತು ಪ್ರಿಯವಾದ ಹಾಡುಗಳನ್ನು ಹಾಡಲಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಸೈರನ್ ಮೊಳಗುವಂತಾಗಬೇಕು ಎಂದು ಕೋರಿದರು. ಸೈರನ್ ಅಳವಡಿಸುವ ಸಂಬಂಧ ಸರ್ವೋದಯ ಸಮಿತಿಯವರು ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು. ಸರ್ವೋದಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್ ಮಾತನಾಡಿ ಹುತಾತ್ಮರ ದಿನಾಚರಣೆಯಂದು ಸಂಜೆ ವೇಳೆಯಲ್ಲಿ ನಗರದ ಗಾಂಧಿಭವನದಲ್ಲಿ ಕೊಡಗು ಜಿಲ್ಲಾ ಜಾನಪದ ಪರಿಷತ್ತು ವತಿಯಿಂದ ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು. ಸರ್ವೋದಯ ಸಮಿತಿಯ ಸದಸ್ಯರಾದ ಅಂಬೆಕಲ್ಲು ನವೀನ್ ಅವರು ಮಾತನಾಡಿ ಗಾಂಧಿ ಮಂಟಪದ ಆವರಣದಲ್ಲಿ ಹುತಾತ್ಮರ ದಿನದಂದು ವಿದ್ಯಾರ್ಥಿಗಳಿಗೆ ಲಘು ಉಪಾಹಾರ ಹಾಗೂ ಕುಡಿಯುವ ನೀರು ವ್ಯವಸ್ಥೆ ಮಾಡಬೇಕು ಎಂದು ಕೋರಿದರು. ಸರ್ವೋದಯ ಸಮಿತಿ ಸದಸ್ಯರಾದ ತೆನ್ನಿರಾ ಮೈನಾ ಮಾತನಾಡಿ, ಹುತಾತ್ಮರ ದಿನಾಚರಣೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಮನವಿ ಮಾಡಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ಮಾತನಾಡಿ, ಹುತಾತ್ಮರ ದಿನಾಚರಣೆಗೆ ಪೊಲೀಸ್ ಇಲಾಖೆಯಿಂದ ಅಗತ್ಯ ಸಹಕಾರ ನೀಡಲಾಗುವುದು. ಪೊಲೀಸ್ ಬ್ಯಾಂಡ್ ನಿಯೋಜಿಸಲಾಗುವುದು ಎಂದರು. ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ಸದಸ್ಯರಾದ ಚಂದ್ರಶೇಖರ್, ತಹಶೀಲ್ದಾರ್ ಪ್ರವೀಣ್ ಕುಮಾರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ, ಜಿ.ಪಂ.ಇಇ ನಾಯಕ್, ಪೌರಾಯುಕ್ತರಾದ ಎಚ್.ಆರ್.ರಮೇಶ್, ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕರಾದ ಪ್ರಸನ್ನ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಕವಿತಾ. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಗಾಯತ್ರಿ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ, ಸ್ಕೌಟ್ಸ್ ಮತ್ತು ಗೈಡ್ಸ್‍ನ ಸಮನ್ವಯಾಧಿಕಾರಿ ದಮಯಂತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ದೇವರಾಜು, ಮಣಜೂರು ಮಂಜುನಾಥ್ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*

ಅಕ್ಟೋಬರ್ 2, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.1 NEWS DESK : ಗೋವಾದ ಚೌಗುಲೇ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ಯೂತ್ ಸ್ಪೋರ್ಟ್ಸ್ ಎಜುಕೇಷನ್ ಫೆಡರೇಷನ್ ಇಂಡಿಯಾ ವತಿಯಿಂದ…

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026

*ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*

ಅಕ್ಟೋಬರ್ 1, 2026

*ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*

ಅಕ್ಟೋಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.