Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*
  • *ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*
  • *ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*
  • ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ
  • *ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*
  • *ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*
  • *ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*
  • *ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*
  • *7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*
  • *ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*

ಜನವರಿ 24, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜ.24 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಶುಕ್ರವಾರ ಚಾಲನೆ ನೀಡಿದರು. ರಾಜಾಸೀಟು ಉದ್ಯಾನವನದಲ್ಲಿ ನಿರ್ಮಾಣವಾಗಿರುವ ಓಂಕಾರೇಶ್ವರ ದೇವಾಲಯ ಹಾಗೂ ಕೊಡಗಿನ ಜೇನು ಸೇರಿದಂತೆ ಹಲವು ಫಲಪುಷ್ಪ ಪ್ರದರ್ಶನಗಳು ಆಕರ್ಷಣೀಯವಾಗಿದ್ದು, ನೋಡುಗರನ್ನು ಸೆಳೆಯುತ್ತಿವೆ.
ಶಾಸಕ ಡಾ.ಮಂತರ್ ಗೌಡ ಅವರು ಮಾತನಾಡಿ ಈ ಬಾರಿ ಓಂಕಾರೇಶ್ವರ ದೇವಾಲಯ ಹಾಗೂ ಕೊಡಗಿನ ಜೇನು ಆಕರ್ಷಣೀಯವಾಗಿದ್ದು, ಗಮನ ಸೆಳೆಯುತ್ತಿದೆ. ಹಾಗೆಯೇ ಫಲಪುಷ್ಪ ಪ್ರದರ್ಶನದಲ್ಲಿ ಸೆಲ್ಫಿಗೂ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು. ಪ್ರತೀ ವರ್ಷದಂತೆ ಈ ಬಾರಿಯು ಸಹ ಬಟಾಣಿ ಗಾರ್ಡನ್ ಮಾದರಿಯಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. ಈ ಬಾರಿ ನಾಲ್ಕು ದಿನಗಳ ಕಾಲ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಇದನ್ನು ಮತ್ತಷ್ಟು ವಿಸ್ತರಿಸಬೇಕು ಎಂದು ಸಲಹೆ ಮಾಡಿದರು. 35 ಲಕ್ಷ ರೂ. ವೆಚ್ಚದಲ್ಲಿ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಪ್ರವಾಸಿಗರು ಸೇರಿದಂತೆ ಎಲ್ಲರೂ ಸ್ವಚ್ಚತೆಗೆ ಒತ್ತು ನೀಡಬೇಕು ಎಂದರು. ಬಣ್ಣ ಬಣ್ಣದ ಚಿತ್ತಾರದ ಹೂವುಗಳು ನೋಡುಗರನ್ನು ಚಕಿತಗೊಳಿಸುತ್ತಿದ್ದು, ರಾಜಾಸೀಟು ಉದ್ಯಾನವನದಲ್ಲಿ ಒಂದು ತಿಂಗಳವರೆಗಾದರೂ ಪುಷ್ಪ ಪ್ರದರ್ಶನಗಳು ನಡೆಯಬೇಕು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಕಳೆದ ಬಾರಿಯಂತೆ ಈ ಬಾರಿಯೂ ಮಹಾತ್ಮ ಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್, ಜವಾಹರ್ ಲಾಲ್ ನೆಹರು, ಸರದಾರ್ ವಲ್ಲಭಬಾಯಿ ಪಟೇಲ್, ಡಾ.ಎಪಿಜೆ ಅಬ್ದುಲ್ ಕಲಾಂ, ಸರ್.ಎಂ.ವಿಶ್ವೇಶ್ವರಯ್ಯ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ, ಗುಡ್ಡೆಮನೆ ಅಪ್ಪಯ್ಯಗೌಡ, ನಾಲ್ವಡಿ ಕೃಷ್ಣರಾಜ ಒಡೆಯರ್, ಸುಭಾಷ್‌ಚಂದ್ರ ಬೋಸ್, ಡಾ.ಮನಮೋಹನ್ ಸಿಂಗ್, ಕುವೆಂಪು, ಡಾ.ರಾಜಕುಮಾರ್, ಪುನೀತ್ ರಾಜ್‌ಕುಮಾರ್, ರೋಹನ್ ಬೋಪಣ್ಣ, ಸಚಿನ್ ತಂಡೂಲ್ಕರ್ ಹೀಗೆ ಸುಮಾರು 50 ಕ್ಕೂ ಹೆಚ್ಚು ಮಹನೀಯರ ಕಲಾಕೃತಿಗಳು ಗಮನ ಸೆಳೆಯುತ್ತಿರುವುದು ವಿಶೇಷವಾಗಿದೆ. ಮಡಿಕೇರಿಯ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಸ್ಥಾನದ ಹೂವಿನ ಕಲಾಕೃತಿ, ಕರ್ನಾಟಕ ಜೇನಿನ ಹಾಗೂ ಕೊಡಗು ಜೇನಿನ ‘ಕೂರ್ಗ್ ಹನಿ’ ಬ್ರಾö್ಯಂಡ್‌ಗಳ ವಿವಿಧ ಕಲಾಕೃತಿಗಳು, ಮಕ್ಕಳು, ಮಹಿಳೆಯರಿಗೆ ಆಕರ್ಷಣೀಯ ಮನೋರಂಜನಾತ್ಮಕ ಹಾಗೂ ಫೋಟೋ ಪಾಯಿಂಟ್‌ಗಳ ಹೂವಿನ ವಿವಿಧ ಕಲಾಕೃತಿಗಳು, ವಿವಿಧ ಕಲಾಕೃತಿಗಳ ತರಕಾರಿ ಕೆತ್ತನೆ, ವಿವಿಧ ಹೂವಿನ ಕುಂಡಗಳ ಪ್ರದರ್ಶನ, ವಿವಿಧ ಸರ್ಕಾರಿ ಇಲಾಖೆಗಳು ಹಾಗೂ ಖಾಸಗಿ ಕಂಪನಿಗಳ ಮಳಿಗೆಗಳು, ವಿವಿಧ ನರ್ಸರಿಗಳ ಗಿಡಗಳ ಮಾರಾಟ ಮಳಿಗೆಗಳು ಆಕರ್ಷಿಸುತ್ತಿವೆ. ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹಾಪ್ ಕಾಮ್ಸ್ ಅಧ್ಯಕ್ಷರಾದ ಬಿದ್ದಾಟಂಡ ರಮೇಶ್ ಚಂಗಪ್ಪ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಎಸ್.ಪಿ.ಪೊನ್ನಪ್ಪ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಎಚ್.ಆರ್.ಯೋಗೇಶ್, ಹಿರಿಯ ಸಹಾಯಕ ನಿರ್ದೇಶಕರಾದ ಪಣೀಂದ್ರ ಎನ್.ಎಸ್., ಸಹಾಯಕ ನಿರ್ದೇಶಕರಾದ ಮುತ್ತಪ್ಪ, ನಗರಸಭೆ ಸದಸ್ಯರು, ವಿವಿಧ ಸಂಘಟನೆಗಳ ಪ್ರಮುಖರು ಇದ್ದರು.
::: 20 ಸಾವಿರ ಹೂವುಗಳು :::
ಭಾರತ ದೇಶದ ಗಣರಾಜ್ಯೋತ್ಸವದ ಪ್ರಯುಕ್ತ ಜನವರಿ, 27 ರವರೆಗೆ ಮಡಿಕೇರಿ ನಗರದ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಫಲಪುಷ್ಪ ಪ್ರದರ್ಶನದ ಅಂಗವಾಗಿ ಈಗಾಗಲೇ ರಾಜಾಸೀಟು ಉದ್ಯಾನವನದಲ್ಲಿ ಸುಮಾರು 7,000 ಸಾವಿರ ಕುಂಡಗಳಲ್ಲಿ ವಿವಿಧ ಜಾತಿಯ ಹೂವುಗಳು ಹಾಗೂ ಬೆಡ್‌ಗಳಲ್ಲಿ ಸುಮಾರು 20,000 ವಿವಿಧ ಜಾತಿಯ ಹೂವುಗಳಾದ ಸಾಲ್ವಿಯ, ಸೇವಂತಿಗೆ, ಚಂಡು ಹೂ, ಜೀನಿಯಾ, ಡಯಾಂಥಸ್, ಇಂಪೇಷಿಯನ್ಸ್, ವಿಂಕಾ ರೋಸಿಯಾ, ಕಾಕ್ಸ್ ಕೋಂಬ್, ಡೇಲಿಯಾ, ಇತ್ಯಾದಿಗಳನ್ನು ಪಾತಿಯಲ್ಲಿ ಹಾಗೂ ಕುಂಡಗಳಲ್ಲಿ ಬೆಳೆಯಲಾಗಿದೆ.
ಕೊಡಗಿನ ಪ್ರಸಿದ್ದ ಶ್ರೀ ಓಂಕಾರೇಶ್ವರ ದೇವಸ್ಥಾನದ ಕಲಾಕೃತಿಯನ್ನು 22 ಅಡಿ ಎತ್ತರದಲ್ಲಿ 30 ಅಡಿ ಉದ್ದ, 38 ಅಡಿ ಅಗಲದಲ್ಲಿ ವಿವಿಧ ಬಣ್ಣಗಳ ಗುಲಾಬಿ, ಸೇವಂತಿಗೆ, ಆಸ್ಟರ್ ಜಾತಿಯ ಸುಮಾರು 5 ಲಕ್ಷ ಹೂವುಗಳಿಂದ ಅಲಂಕರಿಸಿ ನಿರ್ಮಿಸಿರುವುದು ವಿಶೇಷವಾಗಿದೆ. ಹೂ ಹಾಗೂ ಜೇನು ಹುಳುವಿನ ಕಲಾಕೃತಿಯನ್ನು ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ. ಗಣರಾಜ್ಯೋತ್ಸವದ ಅಂಗವಾಗಿ ಯೋಧ, ಪಿರಂಗಿ ಹಾಗೂ ರಾಷ್ಟ್ರದ್ವಜದ ಕಲಾಕೃತಿಯನ್ನು ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಿರುವುದು ಗಮನ ಸೆಳೆಯುತ್ತಿವೆ.
ವಿಂಟೇಜ್ ಕಾರಿನ ಕಲಾಕೃತಿಯನ್ನು ವಿವಿಧ ಬಣ್ಣದ ಹೂವಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ. ಬಟರ್ ಪ್ಲೆöÊ ವಿಂಗ್ಸ್, ಪ್ರವೇಶದ್ವಾರ, ಪ್ರಾಣಿ ಮುಖದ ಕಲಾಕೃತಿಯನ್ನು ಹೂವುಗಳಿಂದ ನಿರ್ಮಾಣ ಮಾಡಲಾಗುವುದು. ಮಕ್ಕಳಿಗೆ ಮನರಂಜನೆ ನೀಡುವಂತಹ ಬಾರ್ಬಿ ಡಾಲ್, ಡೊರೆಮಾನ್, ಮೋಟು ಪಟ್ಲು ಕಲಾಕೃತಿಗಳನ್ನು ವಿವಿಧ ಹೂವುಗಳಿಂದ ಅಲಂಕರಿಸಿ ಫೋಟೋ ಫ್ರೆಮ್, ಸೆಲ್ಫಿ ಜೋನ್ ಮಾದರಿಯನ್ನು ನಿರ್ಮಿಸಲಾಗುವುದು. ವಿವಿಧ ಕ್ಷೇತ್ರಗಳ ಗಣ್ಯರು ಗಳ ಕಲಾಕೃತಿಗಳನ್ನು ಹಣ್ಣು/ತರಕಾರಿಗಳಿಂದ ಕೆತ್ತನೆ ಮಾಡಿ ಪ್ರದರ್ಶಿಸಿರುವುದು ಎದ್ದು ಕಾಣುತ್ತಿದೆ.
ವಿವಿಧ ಅಲಂಕಾರಿಕ ಗಿಡಗಳು ಬೋನ್ಸಾಯ್ ಗಿಡಗಳ ಪ್ರದರ್ಶನ, ಇಕೆಬಾನೆ ಹೂವಿನ ಜೋಡನೆಯ ಪ್ರದರ್ಶನಗಳನ್ನು ಏರ್ಪಾಡಿಸಲಾಗಿದೆ. ಈ ರೀತಿಯಾಗಿ ಹದಿನಾರು ವಿವಿಧ ರೀತಿಯ ಹೂವಿನ ಕಲಾಕೃತಿಗಳನ್ನು ಒಟ್ಟು 8 ರಿಂದ 10 ಲಕ್ಷ ಸಂಖ್ಯೆಯ ಸೇವಂತಿಗೆ, ಆರ್ಕಿಡ್, ಡೆಸ್ಸಿ ಹಾಗೂ ವಿವಿಧ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಿರುವುದು ವಿಶೇಷವಾಗಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಮೂರು ರಾಷ್ಟ್ರೀಯ ಹಾಗೂ ಒಂದು ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ಸನ್ಮಾನ*

ಅಕ್ಟೋಬರ್ 2, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.1 NEWS DESK : ಗೋವಾದ ಚೌಗುಲೇ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ಯೂತ್ ಸ್ಪೋರ್ಟ್ಸ್ ಎಜುಕೇಷನ್ ಫೆಡರೇಷನ್ ಇಂಡಿಯಾ ವತಿಯಿಂದ…

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026

*ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*

ಅಕ್ಟೋಬರ್ 1, 2026

*ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*

ಅಕ್ಟೋಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.