Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪ್ರತೀ ಜಿಲ್ಲೆಯಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ : ಸಿ.ಎಂ ಘೋಷಣೆ
ಇತ್ತೀಚಿನ ಸುದ್ದಿಗಳು ಕರ್ನಾಟಕ ವಿಡಿಯೋ ಗ್ಯಾಲರಿ

ಪ್ರತೀ ಜಿಲ್ಲೆಯಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ : ಸಿ.ಎಂ ಘೋಷಣೆ

ಜನವರಿ 24, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು NEWS DESK ಜ 24: ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜೊತೆಗೆ, ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತೀ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ರವೀಂದ್ರ ಕಲಾ ಕ್ಷೇತ್ರದಲ್ಲಿ ಕನ್ನಡ ಸೇನಾನಿ ಸಾ.ರಾ.ಗೋವಿಂದು ಅವರ ಅಭಿನಂದನ ಕಾರ್ಯಕ್ರಮದಲ್ಲಿ ಗೋವಿಂದು ಅವರನ್ನು ಸನ್ಮಾನಿಸಿ, ಅಭಿನಂದಿಸಿ ಮಾತನಾಡಿದರು. ಪಕ್ಕದ ರಾಜ್ಯಗಳಲ್ಲಿ ಪರಭಾಷಾ ಚಿತ್ರಗಳಿಗೆ ಟಿಕೆಟ್ ದರ ಎಷ್ಟಿದೆ ಎಂದು ಪರಿಶೀಲಿಸಿ ರಾಜ್ಯದಲ್ಲಿ ಅದಕ್ಕೆ ತಕ್ಕಂತೆ ನಿಯಂತ್ರಣ ತರುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವ ಪ್ರಯತ್ನ ಮಾಡುತ್ತೇನೆ ಎಂದರು. ಕನ್ನಡ ಕೆಲಸಕ್ಕೆ ಸರ್ಕಾರ ಸದಾ ಮುಂದೆ ಇರುತ್ತದೆ. ದಿನಾಂಕ 27 ರಂದು ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿ ಪುತ್ಥಳಿ ಸ್ಥಾಪಿಸಲಾಗುವುದು ಎಂದರು. ಗೋವಿಂದು ಅವರು ರಾಜ್ ಕುಮಾರ್ ಸಂಘದ ಅಧ್ಯಕ್ಷರಾಗಿ ಮಾಡಿದ ಕೆಲಸಗಳು ಸ್ಮರಣೀಯ. ರಾಜ್ ಅವರ ವಿನಯ, ಸಭ್ಯತೆ, ಸರಳತೆ ಇಡೀ ಮನುಷ್ಯ ಕುಲಕ್ಕೇ ಮಾದರಿ. ಡಾ.ರಾಜ್ ಕುಮಾರ್ ಅವರಿಗೆ ರಾಜ್ ಅವರೇ ಸಾಟಿ. ಇವರಿಗೆ ಸಾಟಿ ಆಗುವವರು ಯಾರೂ ಇನ್ನೂ ಬಂದಿಲ್ಲ ಎಂದರು. ಡಾ.ರಾಜ್ ಅವರ ಗೋಕಾಕ್ ಚಳವಳಿಯಲ್ಲಿ ನಾನೂ ಅವರ ಭಾಷಣ ಕೇಳಲು ಹೋಗಿದ್ದೆ. ರಾಜ್ ಅವರಿಂದಾಗಿ ಕನ್ನಡ ಹೆಚ್ಚು ಶಕ್ತಿಯುತವಾಗಿ ಬೆಳೆಯಿತು ಎಂದರು‌. ನಾನು ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾದಾಗ ಸಾ.ರಾ.ಗೋವಿಂದು ಮತ್ತು ಹಿರಿಯ ಪತ್ರಕರ್ತ ವೆಂಕಟೇಶ್  ಅವರ ಪರಿಚಯ ಮೊದಲ ಬಾರಿ ಆಯಿತು. ಇವರ ಕನ್ನಡ ಪರ ಹೋರಾಟದ ಬಗ್ಗೆ ಆಗಲೇ ನನಗೆ ಅಭಿಮಾನ ಇತ್ತು. ನನಗೆ ಕನ್ನಡ ನಾಡು, ನೆಲ, ಭಾಷೆ, ಸಂಸ್ಕೃತಿ ಬಗ್ಗೆ ಅಪಾರ ಪ್ರೀತಿ, ಅಭಿಮಾನ ಇದೆ. ಇದನ್ನು ಗ್ರಹಿಸಿಯೇ ಆಗಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು ನನ್ನನ್ನೇ ಕನ್ನಡ ಕಾವಲು ಸಮಿತಿಗೆ ಅಧ್ಯಕ್ಷನನ್ನಾಗಿಸಿದರು ಎಂದು ಸ್ಮರಿಸಿ, ಗೋವಿಂದು ಅವರ ಬದುಕು ಅವರ ಹೋರಾಟಗಳ ಕಾರಣದಿಂದಾಗಿ ಸಾರ್ಥಕವಾಗಿದೆ ಎಂದರು. ನಾನು ಕೇಂದ್ರ ಸರ್ಕಾರಕ್ಕೆ ಬರೆಯುವ ಪತ್ರಗಳನ್ನು ಹೊರತುಪಡಿಸಿ ಉಳಿದ ಎಲ್ಲಕ್ಕೂ ಇವತ್ತಿಗೂ ಕನ್ನಡದಲ್ಲೇ ಸಹಿ ಹಾಕ್ತೀನಿ ಎಂದರು. ಬೇರೆ ಧರ್ಮ ಮತ್ತು ಇತರೆ ಭಾಷೆಗಳ ಬಗ್ಗೆ ಸಹಿಷ್ಣತೆ ಇರಬೇಕು. ನಮ್ಮ ಭಾಷೆ ಬಗ್ಗೆ ಅಭಿಮಾನ ಹೆಚ್ಚಾಗಿರಬೇಕು. ತಾಯಿ ಭಾಷೆ, ತಾಯಿ ನೆಲದ ಬಗ್ಗೆ ಅಭಿಮಾನ ಬೆಳೆಸಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದರು. ಸಾ.ರಾ.ಗೋವಿಂದು ಅವರು ರಾಜ್ ಕುಮಾರ್ ಸಂಘದ ಅಧ್ಯಕ್ಷರಾಗಿ ಕನ್ನಡ ಪರವಾದ ಹೋರಾಟಗಳನ್ನು ನಿರಂತರವಾಗಿ ನಡೆಸಿಕೊಂಡು ಬಂದಿದ್ದಾರೆ. ಇವರ ಹೋರಾಟದ ಫಲವಾಗಿ ಕನ್ನಡ ಚಿತ್ರರಂಗದ ಅಡಿಪಾಯ ಗಟ್ಟಿ ಆಯಿತು ಎಂದು ಶ್ಲಾಘಿಸಿದರು. ಹಿರಿಯ ಸಾಹಿತಿ ಹಂಪನಾ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಗೋ.ರು.ಚನ್ನಬಸಪ್ಪ, ನಾಡೋಜ ಬರಗೂರು ರಾಮಚಂದ್ರಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ್, ಹಿರಿಯ ಪತ್ರಕರ್ತರಾದ ವೆಂಕಟೇಶ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 16: ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ಸಭಾಂಗಣದಲ್ಲಿ ಆಯೋಜಿಸಲಾದ…

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.