Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*
  • *ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*
  • ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ
  • *ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*
  • *ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*
  • *ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*
  • *ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*
  • *7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*
  • *ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*
  • *ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಿಲ್ಲಾ ಮಟ್ಟದ ಜನಸ್ಪಂದನಾ ಸಭೆ : ಸಮಸ್ಯೆಗಳ ಪರಿಹಾರಕ್ಕೆ ಸಚಿವ ಎನ್.ಎಸ್.ಭೋಸರಾಜು ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಿಲ್ಲಾ ಮಟ್ಟದ ಜನಸ್ಪಂದನಾ ಸಭೆ : ಸಮಸ್ಯೆಗಳ ಪರಿಹಾರಕ್ಕೆ ಸಚಿವ ಎನ್.ಎಸ್.ಭೋಸರಾಜು ಸೂಚನೆ*

ಜನವರಿ 26, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜ.25 : ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಸೂಕ್ತ ಪರಿಹಾರ ಒದಗಿಸುವಲ್ಲಿ ‘ಜನತಾ ದರ್ಶನ’ ಕಾರ್ಯಕ್ರಮವು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರ ಅಧ್ಯಕ್ಷತೆಯಲ್ಲಿ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಉಪಸ್ಥಿಯಲ್ಲಿ ಶನಿವಾರ ನಡೆಯಿತು. ವಿರಾಜಪೇಟೆ ತಾಲ್ಲೂಕು ಅಮ್ಮತ್ತಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ‘ಜಿಲ್ಲಾ ಮಟ್ಟದ ಜನಸ್ಪಂದನ’ ಕಾರ್ಯಕ್ರಮ ನಡೆಯಿತು. ಆರಂಭದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಾಯಿತು. ಕಂದಾಯ, ಗ್ರಾಮೀಣಾಭಿವೃದ್ಧಿ, ಸೆಸ್ಕ್, ಅರಣ್ಯ, ಸಮಗ್ರ ಗಿರಿಜನ ಕಲ್ಯಾಣ ಇಲಾಖೆ, ವಸತಿ ಯೋಜನೆ, ವಿವಿಧ ಸಾಮಾಜಿಕ ಭದ್ರತಾ ಯೋಜನೆ ಕಲ್ಪಿಸುವುದು ಸೇರಿದಂತೆ ಸುಮಾರು 74 ಅರ್ಜಿಗಳು ಸಲ್ಲಿಕೆಯಾದವು. ಅರ್ಜಿಗಳಿಗೆ ಸಂಬಂಧಿಸಿದಂತೆ ಸ್ಥಳದಲ್ಲಿಯೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಪರಿಹರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಸೂಚಿಸಿದರು. ಬಳಿಕ ಮಾತನಾಡಿದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ನಿವೇಶನ ಒದಗಿಸುವಂತೆ ಸಾಕಷ್ಟು ಅರ್ಜಿಗಳು ಸಲ್ಲಿಕೆಯಾಗಿದ್ದು, ಅರ್ಹರಿಗೆ ಆಯಾಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿವೇಶನ ಒದಗಿಸಿ ವಸತಿ ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸುಮಾರು 70 ಕ್ಕೂ ಹೆಚ್ಚು ಅರ್ಜಿಗಳು ಸಾರ್ವಜನಿಕರಿಂದ ಸಲ್ಲಿಕೆಯಾಗಿದ್ದು, ಇಲಾಖೆಯ ಅಧಿಕಾರಿಗಳು ಕೂಡಲೇ ಸ್ಪಂದಿಸಿ ಸರ್ಕಾರಕ್ಕೆ ಒಳ್ಳೆಯ ಹೆಸರು ತರಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕರನ್ನು ಅಲೆಸಬಾರದು ಎಂದು ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಈಗಾಗಲೇ ನನ್ನ(ಉಸ್ತುವಾರಿ ಸಚಿವರ) ನೇತೃತ್ವದಲ್ಲಿ 3 ಜನಸ್ಪಂದನಾ ಸಭೆಗಳು ನಡೆದಿದೆ. ಹಾಗೆಯೇ ಶಾಸಕರ ನೇತೃತ್ವದಲ್ಲಿಯೂ ಜನಸ್ಪಂದನಾ ಸಭೆಗಳು ನಡೆದಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ಕಿವಿಗೊಡಬೇಕು ಎಂದು ಸಚಿವರು ತಾಕೀತು ಮಾಡಿದರು. ‘ಕೆಲವು ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ಸೂಚಿಸಲಾಗಿದೆ. ಜನರಿಗೆ ಸ್ಪಂದಿಸುವುದು ಅಧಿಕಾರಿಗಳ ಕರ್ತವ್ಯವಾಗಿದ್ದು, ಆ ನಿಟ್ಟಿನಲ್ಲಿ ಆತ್ಮತೃಪ್ತಿಯಿಂದ ಕಾರ್ಯನಿರ್ವಹಿಸಬೇಕು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.’ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಸರ್ಕಾರ ಬಡವರು ಹಾಗೂ ಶೋಷಿತರ ಪರವಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಕಾಲಮಿತಿಯಲ್ಲಿ ತಲುಪಿಸಬೇಕು. ಸರ್ಕಾರದ ಆಶಯವನ್ನು ಅರ್ಥಮಾಡಿಕೊಂಡು ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಬೇಕು ಎಂದು ಸಲಹೆ ಮಾಡಿದರು. ‘ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಅಧಿಕಾರಿಗಳ ಕಾಳಜಿ ಮತ್ತು ಬದ್ಧತೆ ಅತಿಮುಖ್ಯವಾಗಿದೆ. ಆ ದಿಸೆಯಲ್ಲಿ ಜನಪ್ರತಿನಿಧಿಗಳು ಹೇಗೆ ಸ್ಪಂದಿಸುತ್ತಾರೆ. ಅದರಂತೆ ಅಧಿಕಾರಿಗಳು ಸಹ ಸಾರ್ವಜನಿಕರಿಗೆ ಸ್ಪಂದಿಸಬೇಕು. ಇದರಿಂದ ಉತ್ತಮ ಆಡಳಿತ ಮತ್ತು ಅಭಿವೃದ್ಧಿ ಕಾಣಲು ಸಾಧ್ಯ ಎಂದು ಎ.ಎಸ್.ಪೊನ್ನಣ್ಣ ಅವರು ಅಭಿಪ್ರಾಯಪಟ್ಟರು.’ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಸರ್ಕಾರ ಜನರ ಬಳಿಗೆ ತೆರಳಿ ಸಾರ್ವಜನಿಕರಿಗೆ ಆಗಬೇಕಿರುವ ಕಾರ್ಯಗಳನ್ನು ತಕ್ಷಣ ಬಗೆಹರಿಸಲು ಮುಂದಾಗಿದೆ. ಆ ನಿಟ್ಟಿನಲ್ಲಿ ಜನಸ್ಪಂದನಾ ಸಭೆ ಆಯೋಜಿಸಲಾಗಿದೆ ಎಂದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಪ್ರೊಬೆಷನರಿ ಎಸ್‌ಪಿ ಬೆನಕ ಪ್ರಸಾದ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷರು, ಗ್ರಾ.ಪಂ.ಅಧ್ಯಕ್ಷರು. ತಹಶೀಲ್ದಾರರು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಅಂಡರ್-19 ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕಕ್ಕೆ ಚಿನ್ನ*

ಅಕ್ಟೋಬರ್ 1, 2026

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026

ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ

ಅಕ್ಟೋಬರ್ 1, 2026

*ಪೊನ್ನಂಪೇಟೆಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ*

ಅಕ್ಟೋಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.1 NEWS DESK : ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿ ಸ್ವಚ್ಛತಾ ಹೀ ಸೇವಾ-2026 ಪಾಕ್ಷಿಕ ಕಾರ್ಯಕ್ರಮಕ್ಕೆ…

ಕೊಡಗು : ಹೋಟೆಲ್, ಬೇಕರಿಗಳಿಗೆ ಅನಿರೀಕ್ಷಿತ ದಾಳಿ

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಹಿರಿಯರನ್ನು ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ : ಶುಭ*

ಅಕ್ಟೋಬರ್ 1, 2026

*ಮಡಿಕೇರಿಯಲ್ಲಿ ಅಂತರ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡಾಕೂಟ*

ಅಕ್ಟೋಬರ್ 1, 2026

*ವಕ್ಫ್ ಅಧ್ಯಕ್ಷ ಸ್ಥಾನ ಕೈತಪ್ಪಿದ್ದಕ್ಕೆ ಕಲೀಲ್ ಬಾಷಾ ಅಸಮಾಧಾನ*

ಅಕ್ಟೋಬರ್ 1, 2026

*ಸಿದ್ಧಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ; ಕೊಡವಲ್ಯಾಂಡ್ ಸ್ವಾಯತ್ತತೆಗೆ ಸಾಂವಿಧಾನಿಕ ರಕ್ಷಣೆ ನೀಡಬೇಕು: ಎನ್.ಯು. ನಾಚಪ್ಪ; 2027ರ ಜನಗಣತಿಯಲ್ಲಿ ಕೊಡವರನ್ನು ವಿಶಿಷ್ಟ ಜನಾಂಗೀಯ ಸಮುದಾಯವಾಗಿ ದಾಖಲಿಸಲು ಆಗ್ರಹ*

ಅಕ್ಟೋಬರ್ 1, 2026

*7ನೇ ಹೊಸಕೋಟೆ ದೀಪ್ತಿ ಶಾಲೆಯಲ್ಲಿ ಅಜ್ಜ– ಅಜ್ಜಿಯರ ದಿನಾಚರಣೆ*

ಅಕ್ಟೋಬರ್ 1, 2026

*ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಕೊಡಗು ಬಿಜೆಪಿ ಅಸಮಾಧಾನ*

ಅಕ್ಟೋಬರ್ 1, 2026

*ಅ.4ರಂದು ಮಡಿಕೇರಿಯಲ್ಲಿ “ಓಣಾ ಘೋಷಂ ಓಣಂ ಸಧ್ಯ” ಕಾರ್ಯಕ್ರಮ*

ಅಕ್ಟೋಬರ್ 1, 2026

*ಅ.6ರಂದು ಪೊನ್ನಂಪೇಟೆಯಲ್ಲಿ ರಾಜ್ಯ ಮಟ್ಟದ ಜೇನು ಕೃಷಿಕರ ಸಮಾವೇಶ*

ಅಕ್ಟೋಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.