Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹದಗೆಟ್ಟ ಸಂಪಿಗೆಕಟ್ಟೆ ರಸ್ತೆ : ತುರ್ತು ದುರಸ್ತಿಗೆ ಆಮ್ ಆದ್ಮಿ ಪಾರ್ಟಿ ಯುವ ಘಟಕ ಆಗ್ರಹ*
  • *ಕುಶಾಲನಗರ : ಶರಣ ಸಾಹಿತ್ಯ ಸಮ್ಮೇಳನ ಕಚೇರಿ ಉದ್ಘಾಟನೆ*
  • *ಮಿತಿ ಮೀರಿದ ವನ್ಯಜೀವಿ ದಾಳಿ : ಐದು ಜಿಲ್ಲೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ : ಬಿಜೆಪಿ ನಿರ್ಧಾರ*
  • *ಶರಣ ಸಾಹಿತ್ಯ ಸಮ್ಮೇಳನ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ*
  • *ಕೊಡಗು ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಆರ್‌ಎಫ್ ಅಡಿಯಲ್ಲಿ ರೂ.22 ಕೋಟಿ ಮಂಜೂರು : ಸಂಸದ  ಯದುವೀರ್ ಒಡೆಯರ್*
  • *ಜೂ.14ಕ್ಕೆ ಮರಾಠ-ಮರಾಟಿ ಸಮಾಜದ ವಾರ್ಷಿಕ ಮಹಾಸಭೆ*
  • *ಮಡಿಕೇರಿಯಲ್ಲಿ ಫಿಟ್ ಇಂಡಿಯಾ ಆಂದೋಲನಕ್ಕೆ ಚಾಲನೆ*
  • *ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ-ಶಿಕ್ಷಕರ ಸಭೆ*
  • *ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ : ಪ್ರಕೃತಿ, ವನ್ಯಜೀವಿಗಳ ಮೇಲೆ ಕಾಳಜಿ ಅಗತ್ಯ : ಸಂಸದ ಯದುವೀರ್ ಒಡೆಯರ್*
  • *ಬಿಜೆಪಿ ಪಕ್ಷದ ವಿರಾಜಪೇಟೆ ಮಂಡಲ ಕಚೇರಿಯನ್ನು ಉದ್ಘಾಟಿಸಿದ ಸಂಸದ ಯದುವೀರ್ ಒಡೆಯರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪದಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪದಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ*

ಜನವರಿ 27, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಜ.27 NEWS DESK : ಸಮಾಜದ ಕಟ್ಟಕಡೆಯ ವ್ಯಕ್ತಿಕೂಡ ರಾಜ್ಯ ಅಥವಾ ರಾಷ್ಟ್ರಮಟ್ಟದ ಅಧಿಕಾರದ ಚುಕ್ಕಾಣಿಯನ್ನು ಹಿಡಿಯುವ ಅವಕಾಶವನ್ನು ಭಾರತದ ಸಂವಿಧಾನ ನೀಡಿರುವುದು ನಮ್ಮ ಸಂವಿಧಾನದ ಹೆಗ್ಗಳಿಕೆಯಾಗಿದೆ ಎಂದು ಕಾಫಿ ಬೆಳೆಗಾರ ಮತ್ತು ಸಮಾಜ ಸೇವಕ ಟಿ.ಕೆ.ಸಾಯಿಕುಮಾರ್ ಹೇಳಿದ್ದಾರೆ. ಸುಂಟಿಕೊಪ್ಪ ಗ್ರಾ.ಪಂ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸುಂಟಿಕೊಪ್ಪ ಜಿ.ಯಂ.ಪಿ.ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿ ಮಾತನಾಡಿದ ಅವರು, ವಿಶ್ವದ ಶ್ರೇಷ್ಠ ಸಂವಿಧಾನಗಳಲ್ಲಿ ನಮ್ಮ ದೇಶದ ಸಂವಿಧಾನ ಒಂದಾಗಿದ್ದು, ಇದನ್ನು ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ್ದಾರೆಂದು ಸ್ಮರಿಸಿದರು. 1947 ರ ಆಗಸ್ಟ್ 15 ರಂದು ಸ್ವಾತಂತ್ರ್ಯ ಬಂದಿದ್ದರೂ ಕೂಡ ನಮಗೆ ನಮ್ಮದೆಯಾದ ಮತ್ತು ಆಡಳಿತ ವ್ಯವಸ್ಥೆಗಳು ಇರಲಿಲ್ಲ. ಇದನ್ನು ಮನಗಂಡು ಮೊದಲ ರಾಷ್ಟ್ರಪತಿಗಳಾಗಿದ್ದ ಬಾಬು ರಾಜೇಂದ್ರ ಪ್ರಸಾದ್ ಅಧ್ಯಕ್ಷತೆಯಲ್ಲಿ ಸಂವಿಧಾನ ರಚನಾ ಸಮಿತಿಯನ್ನು ಮಾಡಿ ಕರಡು ಸಮಿತಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಯಿತು ಎಂದು ಸಾಯಿಕುಮಾರ್ ಸ್ಮರಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ನೇತೃತ್ವದ ಸಂವಿಧಾನ ರಚನಾ ಸಮಿತಿಯು 2 ವರ್ಷಕ್ಕೂ ಹೆಚ್ಚು ಕಾಲ ಸಂವಿಧಾನ ರಚನೆಯ ಬಗ್ಗೆ ಆಧ್ಯಾಯನ ನಡೆಸಿ ಸಂವಿಧಾನವನ್ನು 1949ರಲ್ಲಿ ಪೂರ್ಣಗೊಳಿಸಲಾಯಿತು ಈ ಸಂವಿಧಾನವನ್ನು 1950 ರ ಜನವರಿ 26 ರಂದು ಅಧಿಕೃತವಾಗಿ ಜಾರಿಗೆ ತರಲಾಯಿತು. ಸಂವಿಧಾನದ ಅಡಿಯಲ್ಲಿ ನಮ್ಮದೆಯಾದ ಆಡಳಿತ ವ್ಯವಸ್ಥೆ ಮತ್ತು ಪಂಚವಾರ್ಷಿಕ ಯೋಜನೆಗಳಿಂದ ದೇಶ ಅಭಿವೃದ್ಧಿಯ ಕಡೆಗೆ ಹೊರಳಿತು ಇಂದು ದೇಶ ವಿದೇಶಗಳಲ್ಲಿ ಭಾರತೀಯರು ಆಡಳಿತ ಹಿಡಿಯುವ ಮಟ್ಟಿಗೆ ಪ್ರಗತಿ ಸಾಧಿಸಿದ್ದಾರೆಂದು ಟಿ.ಕೆ.ಸಾಯಿಕುಮಾರ್ ವಿಶ್ಲೇಷಿದರು. ಸುಂಟಿಕೊಪ್ಪ ವಿವಿಧ ಜನಾಂಗಗಳು ಆನೇಕತೆಯಲ್ಲಿ ಏಕಾತೆ ಮತ್ತು ಸರ್ವಜನಾಂಗದ ಶಾಂತಿಯ ತೋಟವಾಗಿ ಬಾಳುತ್ತಿದ್ದಾರೆ ಇದು ಸಂವಿಧಾನಕ್ಕೆ ಅತ್ಯುತ್ತಮ ಉದಾಹರಣೆಯಾಗಿರುವ ಪ್ರದೇಶವು ಹೌದೆಂದು ಸಾಯಿಕುಮಾರ್ ಬಣ್ಣಿಸಿದರು. ಪೊಲೀಸ್ ಇಲಾಖೆ ವತಿಯಿಂದ ರಾಷ್ಟ್ರಧ್ವಜಕ್ಕೆ ಗೌರವ ರಕ್ಷೆ ಸಮರ್ಪಿಸಿದರು. ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ಧ್ವಜಾರೋಹಣ ನೇರವೇರಿಸಿದರು. ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು. ಅಧ್ಯಕ್ಷೆಯನ್ನು ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ವಹಿಸಿ ದಿನದ ಮಹತ್ವದ ಕುರಿತು ಮಾತನಾಡಿ ಶುಭಹಾರೈಸಿದರು. ಪುಟಾಣಿ ವಿದ್ಯಾರ್ಥಿಗಳ ಭಾರತಾಂಬೆಗೆ ನಮನ ಸಲ್ಲಿಸುವ ಅಂಗಸಾಧನೆಯ ನೃತ್ಯ ಜನಮನ ರಂಜಿಸಿತು, ಹಾಗೂ ದೇಶಭಕ್ತಿ ಗೀತೆಗಳನ್ನು ಹಾಡುವ ಮೂಲಕ ವಿವಿಧ ಶಾಲೆಗಲ ಮಕ್ಕಳು ನೇರೆದಿದ್ದವರನ್ನು ಮನರಂಜಿಸಿದರು. ಇದೇ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರನ್ನು,ಪೌರಕಾರ್ಮಿಕರು ಹಾಗೂ ಪಂಚಾಯಿತಿ ಸಿಬ್ಬಂದಿಗಳನ್ನು ಮತ್ತು ಸ್ತ್ರೀಶಕ್ತಿ ಸಂಘದ ಪದಾಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಉಪಾಧ್ಯಕ್ಷ ಶಿವಮ್ಮ ಮಹೇಶ್,ಸದಸ್ಯರುಗಳಾದ ಪಿ.ಎಫ್.ಸಬಾಸ್ಟೀನ್, ಶಬ್ಬೀರ್, ರಫೀಕ್‍ಖಾನ್, ಮಂಜುನಾಥ್, ವಸಂತಿ, ಶಾಂತಿ, ನಾಗರತ್ನ, ಗ್ರಾ.ಪಂ.ಮಾಜಿ ಅಧ್ಯಕ್ಷ ಕೆ.ಇ.ಕರೀಂ, ಮಾಜಿ ಉಪಾಧ್ಯಕ್ಷ ಬಿ.ಕೆ.ಮೋಹನ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಕಾರ್ಯದರ್ಶಿ ರಹೆನಾ ಫೈರೋಜ್, ಸಂತ ಮೇರಿ ಆಂಗ್ಲ ಮಾದ್ಯಮ ಶಾಲೆಯ ಮುಖ್ಯೋಪಾದ್ಯಾಯ ಸೇಲ್ವರಾಜ್, ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯನಿ ಗೀತಾ, ಸರಕಾರಿ ಪ್ರೌಢಶಾಲೆಯ ಮುಖ್ಯೋಪಾದ್ಯಾಯರಾದ ಬಾಲಕೃಷ್ಣ, ಪಂಚಾಯಿತಿ ಲೆಕ್ಕ ಪರಿಶೋಧಕಿ ಚಂದ್ರಕಲಾ, ಸಿಬ್ಬಂದಿ ಸಂಧ್ಯಾ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಪದಾಧಿಕಾರಿಗಳು, ಸ್ತ್ರೀಶಕ್ತಿ ಸಂಘದ ಸದಸ್ಯರು ಮತ್ತಿತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹದಗೆಟ್ಟ ಸಂಪಿಗೆಕಟ್ಟೆ ರಸ್ತೆ : ತುರ್ತು ದುರಸ್ತಿಗೆ ಆಮ್ ಆದ್ಮಿ ಪಾರ್ಟಿ ಯುವ ಘಟಕ ಆಗ್ರಹ*

ಜೂನ್ 10, 2026

*ಕುಶಾಲನಗರ : ಶರಣ ಸಾಹಿತ್ಯ ಸಮ್ಮೇಳನ ಕಚೇರಿ ಉದ್ಘಾಟನೆ*

ಜೂನ್ 10, 2026

*ಮಿತಿ ಮೀರಿದ ವನ್ಯಜೀವಿ ದಾಳಿ : ಐದು ಜಿಲ್ಲೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ : ಬಿಜೆಪಿ ನಿರ್ಧಾರ*

ಜೂನ್ 10, 2026

*ಕುಶಾಲನಗರ : ಶರಣ ಸಾಹಿತ್ಯ ಸಮ್ಮೇಳನ ಕಚೇರಿ ಉದ್ಘಾಟನೆ*

ಜೂನ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಜೂ.10 NEWS DESK : ಕುಶಾಲನಗರದಲ್ಲಿ ಜೂ.23 ರಂದು ಹಮ್ಮಿಕೊಂಡಿರುವ ಕೊಡಗು ಜಿಲ್ಲಾ ಶರಣ ಸಾಹಿತ್ಯ ಪ್ರಥಮ ಸಮ್ಮೇಳನದ…

*ಮಿತಿ ಮೀರಿದ ವನ್ಯಜೀವಿ ದಾಳಿ : ಐದು ಜಿಲ್ಲೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ : ಬಿಜೆಪಿ ನಿರ್ಧಾರ*

ಜೂನ್ 10, 2026

*ಶರಣ ಸಾಹಿತ್ಯ ಸಮ್ಮೇಳನ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ*

ಜೂನ್ 10, 2026

*ಕೊಡಗು ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಆರ್‌ಎಫ್ ಅಡಿಯಲ್ಲಿ ರೂ.22 ಕೋಟಿ ಮಂಜೂರು : ಸಂಸದ  ಯದುವೀರ್ ಒಡೆಯರ್*

ಜೂನ್ 10, 2026

*ಜೂ.14ಕ್ಕೆ ಮರಾಠ-ಮರಾಟಿ ಸಮಾಜದ ವಾರ್ಷಿಕ ಮಹಾಸಭೆ*

ಜೂನ್ 9, 2026

*ಮಡಿಕೇರಿಯಲ್ಲಿ ಫಿಟ್ ಇಂಡಿಯಾ ಆಂದೋಲನಕ್ಕೆ ಚಾಲನೆ*

ಜೂನ್ 9, 2026

*ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ-ಶಿಕ್ಷಕರ ಸಭೆ*

ಜೂನ್ 9, 2026

*ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ : ಪ್ರಕೃತಿ, ವನ್ಯಜೀವಿಗಳ ಮೇಲೆ ಕಾಳಜಿ ಅಗತ್ಯ : ಸಂಸದ ಯದುವೀರ್ ಒಡೆಯರ್*

ಜೂನ್ 9, 2026

*ಬಿಜೆಪಿ ಪಕ್ಷದ ವಿರಾಜಪೇಟೆ ಮಂಡಲ ಕಚೇರಿಯನ್ನು ಉದ್ಘಾಟಿಸಿದ ಸಂಸದ ಯದುವೀರ್ ಒಡೆಯರ್*

ಜೂನ್ 9, 2026

*ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ ಆಚರಣೆ : ಮಾದಕ ವ್ಯಸನದಿಂದ ದೂರವಿರಲು ಎನ್.ಜೆ.ಲತಾ ಕರೆ*

ಜೂನ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.