Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಜ್ಯದಲ್ಲೇ ವಿನೂತನ ಪ್ರಯತ್ನ : ‘ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ’ ಉದ್ಘಾಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ರಾಜ್ಯದಲ್ಲೇ ವಿನೂತನ ಪ್ರಯತ್ನ : ‘ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ’ ಉದ್ಘಾಟನೆ*

ಜನವರಿ 27, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.27 NEWS DESK : ಸಾರ್ವಜನಿಕ ಶಾಂತಿ ಸುವ್ಯವಸ್ಥೆಗಳ ಕಾರ್ಯದಲ್ಲಿ ಸದಾ ನಿರತರಾಗಿರುವ ಪೊಲೀಸ್ ಸಿಬ್ಬಂದಿಗಳಲ್ಲಿ ಸುಪ್ತವಾಗಿ ಅಡಗಿರುವ ಕಲಾ ಪ್ರತಿಭೆಯನ್ನು ಹೊರ ತರುವ ನಿಟ್ಟಿನಲ್ಲಿ ರಾಜ್ಯದಲ್ಲೆ ಪ್ರಥಮ ಪ್ರಯೋಗವೆಂಬಂತೆ ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯಿಂದ ವಿನೂತನವಾಗಿ ಆರಂಭಿಸಿರುವ ‘ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ’ಯನ್ನು ವರ್ಣರಂಜಿತ ಸಮಾರಂಭದಲ್ಲಿ ಉದ್ಘಾಟಿಸಲಾಯಿತು. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಭಾನುವಾರ ರಾತ್ರಿ ಆಯೋಜಿತ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಪೊಲೀಸ್ ಸಾಂಸ್ಕೃತಿಕ ವೇದಿಕೆಯ ಮಹಾ ಪೋಷಕರಾದ ಕೆ.ರಾಮರಾಜನ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಪೊಲೀಸ್ ಇಲಾಖೆಯಲ್ಲಿ ಇರುವ ಪ್ರತಿಯೊಬ್ಬರು ಸದಾ ಒತ್ತಡದ ನಡುವೆ ಕಾರ್ಯನಿರ್ವಹಣೆ ಮಾಡುವುದು ಅನಿವಾರ್ಯ. ಪ್ರತಿಯೊಬ್ಬರ ಒತ್ತಡಗಳನ್ನು ಕಳೆದು, ಅವರಲ್ಲಿ ಸುಪ್ತವಾಗಿರುವ ಕಲಾ ಪ್ರತಿಭೆಯನ್ನು ಹೊರ ತರುವ ನಿಟ್ಟಿನಲ್ಲಿ ಪೊಲೀಸ್ ಸಾಂಸ್ಕೃತಿಕ ವೇದಿಕೆಯನ್ನು ಆರಂಭಿಸಲಾಗಿದ್ದು, ನಿರಂತರವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವಂತಾಗಬೇಕು ಎಂದರು. ಪ್ರತಿಯೊಬ್ಬರಲ್ಲೂ ವಿಶಿಷ್ಟವಾದ ಕಲಾ ಪ್ರತಿಭೆ ಅಡಗಿರುತ್ತದೆ ಮತ್ತು ಎಲ್ಲರಿಗೂ ಅವರದೇ ಆದ ವೈಯಕ್ತಿಕ ಬದುಕು ಎಂಬುದಿರುತ್ತದೆ. ಇದನ್ನು ಗಮನಿಸಿ, ಪೊಲೀಸ್ ಇಲಾಖೆಯ ಸಿಬ್ಬಂದಿಗಳ ಕಲಾ ಚಟುವಟಿಕೆಗಳಿಗೆ ಒತ್ತು ನೀಡಲು ವೇದಿಕೆಯನ್ನು ಹುಟ್ಟು ಹಾಕಲಾಗಿದ್ದು, ಇದರ ಮುಖೇನ ಪೊಲೀಸ್ ಸಿಬ್ಬಂದಿಗಳು ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿ ಇಲಾಖೆಯ ಗೌರವವನ್ನು ಹೆಚ್ಚಿಸುವಂತೆ ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಶಕ್ತಿ ಪತ್ರಿಕೆಯ ಸಂಪಾದಕರಾದ ಜಿ.ಚಿದ್ವಿಲಾಸ್ ಮಾತನಾಡಿ, ಸಂಸ್ಕಾರ, ಸಂಸ್ಕೃತಿ, ಶಿಸ್ತು ಇರುವ ಮನೆಗಳು ಸುಂದರವಾಗಿರುತ್ತವೆ. ಅಂತಹ ಎಲ್ಲಾ ಅಂಶಗಳನ್ನು ಹೊಂದಿರುವ ಮನೆಯೇ ಕೊಡಗು ಪೊಲೀಸ್ ಇಲಾಖೆಯೆಂದು ಬಣ್ಣಿಸಿ, ರಾಜ್ಯದಲ್ಲೆ ಮೊಟ್ಟ ಮೊದಲ ಬಾರಿಗೆ ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಸಾಂಸ್ಕೃತಿಕ ವೇದಿಕೆಯನ್ನು ಹಟ್ಟು ಹಾಕಿರುವುದು ಅಭಿಮಾನದ ವಿಚಾರವೆಂದರು. ಬುಹುಭಾಷಾ ನಟಿ ಹರ್ಷಿಕಾ ಪೂಣಚ್ಚ ಮಾತನಾಡಿ, ಸಮಾಜದ ಶಾಂತಿ ಸುವ್ಯವಸ್ಥೆಗಳನ್ನು ಕಾಯುವಲ್ಲಿ ಪ್ರಮುಖ ಪಾತ್ರ ವಹಿಸುವ ಪೊಲೀಸರು ಸೂಪರ್ ಹೀರೋಗಳೆ ಆಗಿದ್ದಾರೆ. ಕೊಡಗು ಪೊಲೀಸರು ಮಾದಕ ದ್ರವ್ಯ ದಂಧೆಯನ್ನು ಹತ್ತಿಕ್ಕುವ ನಿಟ್ಟಿನ ಕಾರ್ಯಾಚರಣೆ ಸೇರಿದಂತೆ ವಿವಿಧ ದುಷ್ಕೃತ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ತೋರಿರುವ ಕರ್ತವ್ಯನಿಷ್ಟೆ ನಿಜಕ್ಕೂ ಶ್ಲಾಘನೀಯವಾದುದೆಂದು ಬಣ್ಣಿಸಿದರು. ಹೆಚ್ಚುವರಿ ಪೊಲಿಸ್ ವರಿಷ್ಠಾಧಿಕಾರಿಗಳು ಹಾಗೂ ವೇದಿಕೆಯ ಅಧ್ಯಕ್ಷರಾದ ಕೆ.ಸ್.ಸುಂದರರಾಜ್ ಮಾತನಾಡಿ, ಜಿಲ್ಲಾ ಪೊಲೀಸ್ ಇಲಾಖಾ ಸಿಬ್ಬಂದಿಗಳ ಕರ್ತವ್ಯಪರತೆಯಿಂದ ಸಮಾಜ ಘಾತುಕ ಶಕ್ತಿಗಳನ್ನು ಹತ್ತಿಕ್ಕುವ ಕಾರ್ಯವನ್ನು ಅತ್ಯಂತ ಯಶಸ್ವಿಯಾಗಿ ನಡೆಸಲಾಗುತ್ತಿದೆ. ಇಂತಹ ಸಂದರ್ಭ ಇಲಾಖಾ ಸಿಬ್ಬಂದಿಗಳಲ್ಲಿನ ಪ್ರತಿಭಾ ಅನಾವರಣಕ್ಕೊಂದು ವೇದಿಕೆಯ ಅಗತ್ಯತೆ ಇತ್ತು, ಇದೀಗ ಅದನ್ನು ಕಾರ್ಯರೂಪಕ್ಕೆ ತಂದಿರುವುದಾಗಿ ಹೇಳಿದರು. ನಟಿ ತೇಜಸ್ವಿನಿ, ಸರಿಗಮಪ ರಿಯಾಲಿಟಿ ಶೋನ ಸ್ಪರ್ಧೆಯ ಮುಖ್ಯಸ್ಥ ಸಚಿನ್ ಪ್ರಕಾಶ್ ಕುಂದನ ಕೋಡಿ, ಸಂಯುಕ್ತ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ಕೆ.ಕೆ.ನೌಶಾದ್, ಕರಾವಳಿ ಸಂಗೀತ ಕಲಾವಿದರ ಒಕ್ಕೂಟದ ಅಧ್ಯಕ್ಷ ಕೇಶವ ಕನಿಲ ಮೊದಲಾದವರು ಮಾತನಾಡಿದರು. ಮಡಿಕೇರಿ ನಗರದ ವೃತ್ತ ನಿರೀಕ್ಷಕರು ಹಾಗೂ ವೇದಿಕೆಯ ಪ್ರಧಾನ ಕಾರ್ಯದರ್ಶಿ ಪಿ.ಕೆ.ರಾಜು ಪ್ರಾಸ್ತಾವಿಕವಾಗಿ ಮಾತನಾಡಿದರು.
ಗಮನ ಸೆಳೆದ ಸಂಗೀತ ರಸ ಸಂಜೆ :: ವೇದಿಕೆ ಕಾರ್ಯಕ್ರಮಗಳ ಬಳಿಕ ಸರಿಗಮಪ ರಿಯಾಲಿಟಿ ಶೋ ವಿಜೇತರಾದ ಚನ್ನಪ್ಪ ಹುದ್ದರ್, ಕೊಡಗಿನ ಪ್ರಗತಿ ಬಡಿಗೇರ್, ಪೊಲೀಸ್ ಸಿಬ್ಬಂದಿ ಸುಬ್ರಹ್ಮಣ್ಯ, ಬಾಳೆಲೆಯ ಅನ್ವಿತ್ ಕುಮಾರ್, ಜಿಲ್ಲೆಯವರಾದ ಪಂಚಮ್ ತ್ಯಾಗರಾಜ್, ಬುಟ್ಟಿಯಂಡ ಲಿಖಿತ, ಪೊಲೀಸ್ ಸಾಂಸ್ಕೃತಿಕ ವೇದಿಕೆಯ ಗಾಯಕರು ನಡೆಸಿಕೊಟ್ಟ ಸಂಗೀತ ರಸ ಸಂಜೆ ಗಮನ ಸೆಳೆಯಿತು.
ಸನ್ಮಾನ :: ವೇದಿಕೆ ನಿರ್ಮಾಣಕ್ಕೆ ಕಾರಣರಾದ ಡಿವೈಎಸ್‍ಪಿ ಮಹೇಶ್ ಕುಮಾರ್, ಛದ್ಮವೇಷ ಕಲಾವಿದರಾದ ನಿವೃತ್ತ ಎಎಸ್‍ಐ ಪಾರ್ಥ, ಸಿನಿಮಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಇಲಾಖೆಯ ನಿಸ್ತಂತು ಘಟಕದ ಹೆಡ್ ಕಾನ್ಸ್‍ಟೇಬಲ್ ಈರಮಂಡ ವಿಜಯ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ವೃತ್ತ ನಿರೀಕ್ಷಕ ಪಿ.ಕೆ. ರಾಜು ಸ್ವಾಗತಿಸಿ, ಚನ್ನನಾಯಕ ವಂದಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಮಡಿಕೇರಿ- ಮುಕ್ಕೋಡ್ಲು- ಹಮ್ಮಿಯಾಲ ನಡುವೆ ಸಂಚರಿಸುತ್ತಿದ್ದ ಬಸ್ ನಿಯಮಿತವಾಗಿ ಬಾರದೆ ಇರುವುದರಿಂದ ಗ್ರಾಮಸ್ಥರು…

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.