Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೆಸ್ಟೋಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ ಗೆದ್ದ ಅಲ್ಬಿನ್ ಗೆ ಸನ್ಮಾನ*
  • *ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಅರಸು ಜನ್ಮ ದಿನಾಚರಣೆ*
  • **ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**
  • *ರಾಜ್ಯಪಾಲರನ್ನು ಭೇಟಿಯಾದ ASP*
  • *ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ*
  • *ಪರಿಸರ ಸಂರಕ್ಷಣೆ ಮತ್ತು ಜನರ ಕಲ್ಯಾಣ ಎರಡೂ ಸಮಾನಾಂತರವಾಗಿ ಸಾಗುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ : ಕೇಂದ್ರ ಪರಿಸರ ಸಚಿವಾಲಯದೊಂದಿಗೆ ಸಂಸದ ಯದುವೀರ್ ಒಡೆಯರ್ ಮಾತುಕತೆ*
  • *ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*
  • *ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 
  • *ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*
  • *ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶುಂಠಿ ಬೆಳೆಗಾರರ ಹಿತ ಕಾಪಾಡಲು ಶುಂಠಿ ಕೃಷಿಕರ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶುಂಠಿ ಬೆಳೆಗಾರರ ಹಿತ ಕಾಪಾಡಲು ಶುಂಠಿ ಕೃಷಿಕರ ಆಗ್ರಹ*

ಜನವರಿ 28, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.28 NEWS DESK : ಬೆಳೆದ ಬೆಳೆಗೆ ಸಮರ್ಪಕವಾದ ಬೆಲೆ ಸಿಗದ ಕಾರಣ ಶುಂಠಿ ಬೆಳೆದ ಕೃಷಿಕರು ಕಂಗಾಲಾಗಿದ್ದು, ಆರ್ಥಿಕವಾಗಿ ಸಾಕಷ್ಟು ನಷ್ಟಕ್ಕೆ ತುತ್ತಾಗುತ್ತಿರುವುದರಿಂದ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಿ ಶುಂಠಿ ಬೆಳೆಗಾರರ ಹಿತ ಕಾಪಾಡಬೇಕೆಂದು ಕೊಡಗು ಜಿಲ್ಲಾ ಶುಂಠಿ ಕೃಷಿಕರು ಕೊಡಗು ಜಿಲ್ಲಾಡಳಿತದ ಮೂಲಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಸಂಬಂಧ ಸಹಾಯಕ ಜಿಲ್ಲಾಧಿಕಾರಿಗಳಿಗೆ ಬೇಡಿಕೆ ಪತ್ರವನ್ನು ನೀಡಿರುವ ಬೆಳೆಗಾರರು, ಶುಂಠಿ ಬೆಳೆಯಲು ತಗಲುವ ಉತ್ಪಾದಕ ವೆಚ್ಚ ಅಧಿಕವಾಗಿದೆ. ಬೆಲೆ ಹಾಗೂ ಬೆಳೆಯ ಇಳುವರಿ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಶುಂಠಿ ಬೆಳೆಗಾರರಿಗೆ ಕ್ವಿಂಟಾಲ್ ಗೆ ಕನಿಷ್ಠ 7000 ರೂಗಳ ಬೆಂಬಲ ಬೆಲೆಯನ್ನು ನೀಡುವ ಮೂಲಕ ಕೃಷಿಕರನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಬೇಕೆಂದು ಒತ್ತಾಯಿಸಿದ್ದಾರೆ. ಮಾರುಕಟ್ಟೆಯಲ್ಲಿ ಪ್ರಸ್ತುತ ಶುಂಠಿಯ ಬೆಲೆ 60 ಕೆಜಿ ತೂಕದ ಚೀಲವೊಂದಕ್ಕೆ 1000 ರೂಗಳಿಂದ 1100 ರೂಗಳಿದ್ದು, ವರ್ಷವಿಡೀ ಲಕ್ಷಾಂತರ ರೂ.ಹಣ ಖರ್ಚು ಮಾಡಿ ಬೆಳೆ ಬೆಳೆವ ರೈತರಿಗೆ ಏನೇನು ಸಾಲದಾಗಿದೆ.
ಅಂದರೆ ಬೆಳೆಗೆ ಖರ್ಚು ಮಾಡಿದ ಹಣವೂ ಕೂಡ ಸಿಗಲಾರದೇ ಆತ್ಮಹತ್ಯೆಯತ್ತ ಚಿಂತೆ ಮಾಡುವಷ್ಟು ಸಂಕಷ್ಟದಲ್ಲಿ ಶುಂಠಿ ಬೆಳೆದ ರೈತರಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರವೇ ರಾಜ್ಯದಾದ್ಯಂತ ಶುಂಠಿ ಖರೀದಿ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಅಥವಾ ಈಗ ಇರುವ ಖಾಸಗಿ ಶುಂಠಿ ಖರೀದಿ ಘಟಕಗಳ ಬೆಂಬಲ ನೀಡಿ ರೈತರಿಂದ ನೇರವಾಗಿ ಖರೀದಿಸುವ ಯೋಜನೆ ಜಾರಿಗೊಳಿಸಬೇಕು. 2012-13ನೇ ಸಾಲಿನಲ್ಲಿ ರೈತರು ಬೆಳೆವ ಅರಿಶಿಣ
ಬೆಳೆಯ ಬೆಲೆ ಕುಸಿತವಾದಾಗ ರೈತರ ಬೇಡಿಕೆಗೆ ಮಣಿದ ರಾಜ್ಯ ಸರ್ಕಾರ ಮಧ್ಯಪ್ರವೇಶ ( MIS ) ಯೋಜನೆಯಡಿ ರೈತರಿಗೆ ಬೆಂಬಲ ಬೆಲೆ ನೀಡಿ ರೈತರಿಂದ ಅರಿಶಿಣ ಖರೀದಿಸಿತ್ತು. ಹಾಗೆಯೇ ಅರುಣಾಚಲ ಪ್ರದೇಶದಲ್ಲಿ 2016 -17 ನೇ ಸಾಲಿನಲ್ಲಿ ಶುಂಠಿ ದರ ಕುಸಿತವಾದಾಗ ಮಧ್ಯ ಪ್ರವೇಶ ಯೋಜನೆ ಜಾರಿ ಮಾಡಿದೆ. ಮಿಜೋರಾಂ ನಲ್ಲಿಯೂ 2024 ರಿಂದ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಶುಂಠಿ ಕೃಷಿಕರಿಂದ ಚೀಲವೊಂದಕ್ಕೆ 5000 ರೂ ಬೆಲೆ ನೀಡಿ ಖರೀದಿಸುವ ಯೋಜನೆ ಜಾರಿ ಮಾಡಿದೆ. ಹಾಗಾಗಿ ರಾಜ್ಯದಲ್ಲಿಯೂ ಸಾಕಷ್ಟು ಮಂದಿ ಶುಂಠಿ ಕೃಷಿಕರಿರುವುದರಿಂದ ಬೆಳೆಗಾರರ ಹಿತ ಕಾಪಾಡಲು ರಾಜ್ಯ ಸರ್ಕಾರ ಕೂಡಲೇ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆ ಜಾರಿಗೊಳಿಸಿ ರೈತರ ಹಿತ ಕಾಯಬೇಕೆಂದು ಮನವಿ ಪತ್ರದಲ್ಲಿ ರೈತರು ಒತ್ತಾಯಿಸಿದ್ದಾರೆ. ಈ ಸಂದರ್ಭ ಕೊಡಗು ಶುಂಠಿ ಕೃಷಿಕರ ಪರವಾಗಿ ಹೆರೂರು ಅರುಣ್ ಚೆಂಗಪ್ಪ, ಏಳನೇ ಹೊಸಕೋಟೆ ಅಶೋಕ್, ವಿರಾಜಪೇಟೆ ಲವ, ನಾಕೂರು ಶಿರಂಗಾಲದ ಚೇತನ್ ಪೊನ್ನಪ್ಪ, ಕಲ್ಲೂರು ಪ್ರಶಾಂತ್, ದೊಡ್ಡತ್ತೂರು ನಾರಾಯಣ, ಮಳೂರು ಪ್ರವೀಣ ಕುಮಾರ್, ಹೆರೂರು ಧನಪಾಲ್, ಮಾದಾಪಟ್ಟಣ ಮಹದೇವ, ಗುರುಮಲ್ಲೇಶ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೆಸ್ಟೋಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ ಗೆದ್ದ ಅಲ್ಬಿನ್ ಗೆ ಸನ್ಮಾನ*

ಆಗಷ್ಟ್ 20, 2026

*ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಅರಸು ಜನ್ಮ ದಿನಾಚರಣೆ*

ಆಗಷ್ಟ್ 20, 2026

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಆಗಷ್ಟ್ 20, 2026

*ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಅರಸು ಜನ್ಮ ದಿನಾಚರಣೆ*

ಆಗಷ್ಟ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.20 : ಯುವಶಕ್ತಿಗೆ ಸ್ಫೂರ್ತಿಯಾಗಿದ್ದ ದೇಶದ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಅವರ ನಿಲುವು ಸ್ಪಷ್ಟವಾಗಿತ್ತು.…

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಆಗಷ್ಟ್ 20, 2026

*ರಾಜ್ಯಪಾಲರನ್ನು ಭೇಟಿಯಾದ ASP*

ಆಗಷ್ಟ್ 20, 2026

*ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ*

ಆಗಷ್ಟ್ 20, 2026

*ಪರಿಸರ ಸಂರಕ್ಷಣೆ ಮತ್ತು ಜನರ ಕಲ್ಯಾಣ ಎರಡೂ ಸಮಾನಾಂತರವಾಗಿ ಸಾಗುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ : ಕೇಂದ್ರ ಪರಿಸರ ಸಚಿವಾಲಯದೊಂದಿಗೆ ಸಂಸದ ಯದುವೀರ್ ಒಡೆಯರ್ ಮಾತುಕತೆ*

ಆಗಷ್ಟ್ 20, 2026

*ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 

ಆಗಷ್ಟ್ 19, 2026

*ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*

ಆಗಷ್ಟ್ 19, 2026

*ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*

ಆಗಷ್ಟ್ 19, 2026

*ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*

ಆಗಷ್ಟ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.