Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕಟ್ಟೆಮಾಡು ದೇವಾಲಯ ಅಚ೯ಕರ ಮೇಲೆ ಹಲ್ಲೆ : ಆರೋಪಿಗಳ ಬಂಧಕ್ಕೆ 2 ದಿನಗಳ ಗಡುವು ನೀಡಿದ ಬ್ರಾಹ್ಮಣ ಸಮಾಜ*
ಇತ್ತೀಚಿನ ಸುದ್ದಿಗಳು

*ಕಟ್ಟೆಮಾಡು ದೇವಾಲಯ ಅಚ೯ಕರ ಮೇಲೆ ಹಲ್ಲೆ : ಆರೋಪಿಗಳ ಬಂಧಕ್ಕೆ 2 ದಿನಗಳ ಗಡುವು ನೀಡಿದ ಬ್ರಾಹ್ಮಣ ಸಮಾಜ*

January 28, 20253 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.28 NEWS DESK : ಕಟ್ಟೆಮಾಡು ಗ್ರಾಮದ ಶ್ರೀ ಮೃತ್ಯಂಜಯ ದೇವಾಲಯದ ಅಚ೯ಕರ ಮೇಲಿನ ಹಲ್ಲೆಯನ್ನು ತೀವ್ರವಾಗಿ ಖಂಡಿಸಿರುವ ಕೊಡಗು ಬ್ರಾಹ್ಮಣ ಸಮಾಜ, ಹಲ್ಲೆ ಆರೋಪಿಗಳ ಬಂಧನಕ್ಕೆ ಎರಡು ದಿನಗಳ ಗಡುವನ್ನು ನೀಡಿದೆ. ತಪ್ಪಿದ್ದಲ್ಲಿ ಜ.31 ರಂದು ಜಿಲ್ಲೆಯಾದ್ಯಂತ ದೇವಾಲಯಗಳಲ್ಲಿ ಬೆಳಗ್ಗಿನ ಪೂಜೆ ಪೂರೈಸಿ ಅನಂತರ ಭಕ್ತರಿಗೆ ದೇವಾಲಯವನ್ನು ಬಂದ್ ಮಾಡಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ನಗರದ ಪೊಲೀಸ್ ವರಿಷ್ಟಾಧಿಕಾರಿ ಕಚೇರಿ ಮುಂದೆ ಬ್ರಾಹ್ಣಣ ಸಮಾಜದ ನೂರಾರು ಮಂದಿ ಕೆಲ ಕಾಲ ಭಜನೆ, ದೇವರ ಕೀತ೯ನೆಗಳನ್ನು ಹೇಳುವ ಮೂಲಕ ಮನದ ನೋವನ್ನು ಹೊರಹಾಕಿದರು.  ಪೊಲೀಸ್ ವರಿಷ್ಟಾಧಿಕಾರಿ ಕೆ. ರಾಮರಾಜನ್ ಅವರನ್ನು ಭೇಟಿಯಾದ ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಕೊಡಗು ಅಧ್ಯಕ್ಷ ರಾಮಚಂದ್ರ ಮೂಗೂರು, ಪ್ರಮುಖರಾದ ಶ್ರೀಧರ್ ನೆಲ್ಲಿತ್ತಾಯ, ಜಿ.ಟಿ. ರಾಘವೇಂದ್ರ ಬಿ.ಜಿ ಅನಂತಶಯನ, ಎಸ್.ಎಸ್.ಸಂಪತ್ ಕುಮಾರ್, ವಕೀಲ ಕೃಷ್ಣಮೂತಿ೯, ಪ್ರಭಾಕರ್ ನೆಲ್ಲಿತ್ತಾಯ, ಡಾ. ರಾಜಾರಾಮ್, ರಾಜಶೇಖರ್, ನಿದೇ೯ಶಕ ಮಂಜುನಾಥ್, ಕೆ.ಕೆ.ವಿಶ್ವನಾಥ್, ಎ.ಗೋಪಾಲಕೃಷ್ಣ, ಅಚ೯ಕರ ಸಂಘದ ಪ್ರಮುಖ ಮಹಾಬಲೇಶ್ವರ ಭಟ್, ರಾಮಕೃಷ್ಣ, ಸುದಶ೯ನ್ , ಪವನ್, ಕೊಡಗು ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಘವೇಂದ್ರ ವೈಲಾಯ, ನಿವೃತ್ತ ಮೇಜರ್ ವೆಂಕಟಗಿರಿ, ಹೆಚ್.ಎಸ್. ತಿಮ್ಮಪ್ಪಯ್ಯ, ಹಾ.ತಿ.ಜಯಪ್ರಕಾಶ್, ಡಿ.ಆರ್.ಪ್ರಶಾಂತ್ ಮಹೇಶ್ ಸಗಿ೯ತಾಯ , ಕೆ.ವಿ.ವೆಂಕಟರಮಣ, ವರುಣ್ ಶಮಾ೯, ವೀಣಾ ಪುರುಷೋತ್ತಮ, ನೀರಜ ರಮೇಶ್ ಸೇರಿದಂತೆ ಹಲವರು ಒತ್ತಾಯ ಪತ್ರವನ್ನು ಸಲ್ಲಿಸಿದರು. ಕಟ್ಟೆಮಾಡು ದೇವಾಲಯದ ಅಚ೯ಕರಾದ ವಿಘ್ನೇಷ್ ಭಟ್ ಅವರ ಮೇಲೆ ಹಲ್ಲೆ ಮಾಡಿ, ಸ್ಥಳದಲ್ಲಿದ್ದ ಅವರ ತಾಯಿ ಮೇಲೆ ಕೂಡ ಹಲ್ಲೆ ಮಾಡಿರುವುದು ಖಂಡನೀಯ ಪ್ರಕರಣದ ಪ್ರಮುಖ ಆರೋಪಿ ಮಂಡೇಟಿರ ಅನಿಲ್ ಮತ್ತು ಜತೆಗಿದ್ದವರನ್ನು ಪೊಲೀಸರು ಇನ್ನು 2 ದಿನಗಳೊಳಗೆ ಬಂಧಿಸಬೇಕು. ಬಂಧನ ಆಗದೇ ಹೋದಲ್ಲಿ ಜ. 31 ರಂದು ಶುಕ್ರವಾರ ಬೆಳಗ್ಗೆ ಬ್ರಾಹ್ಮಣ ಸಮಾಜದಿಂದ ತೀವ್ರ ಪ್ರತಿಭಟನೆ ಕೈಗೊಳ್ಳಲಾಗುತ್ತದೆ. ಅಂದು ಜಿಲ್ಲೆಯಾದ್ಯಂತಲಿನ ದೇವಾಲಯಗಳಲ್ಲಿ ಬೆಳಗ್ಗಿನ ದೇವರ ಪೂಜೆ ಮಾಡಿದ ಬಳಿಕ ದೇವಾಲಯವನ್ನು ಭಕ್ತರ ದಶ೯ನಕ್ಕೆ ಬಂದ್ ಮಾಡುವ ಮೂಲಕ ಬ್ರಾಹ್ಮಣ ಸಮಾಜಕ್ಕಾಗಿರುವ ನೋವನ್ನು ವ್ಯಕ್ತಪಡಿಸಲಾಗುತ್ತದೆ. ನಂತರ ಮಡಿಕೇರಿಯ ಪೊಸ್ ವರಿಷ್ಟಾಧಿಕಾರಿ ಕಛೇರಿ ಮುಂಬದಿ ಪ್ರತಿಭಟನೆಗೆ ಉದ್ದೇಶಿಸಲಾಗಿದೆ. ಇದಕ್ಕೆ ಆಸ್ಪದ ಮಾಡಿಕೊಡದೇ ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕೆಂದು ಬ್ರಾಹ್ಮಣ ಸಮಾಜದ ವತಿಯಿಂದ ಒತ್ತಾಯಿಸಲಾಯಿತು. ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರ ಅಪನಿಂದನೆ, ಅವಹೇಳನ ಮಾಡುತ್ತಿರುವವರ ವಿರುದ್ದವೂ ಕ್ರಮಕೈಗೊಳ್ಳುವಂತೆಯೂ ಈ ಸಂದಭ೯ ಒತ್ತಾಯ ಮಾಡಲಾಯಿತು. ಹಲ್ಲೆ ಘಟನೆಯ ಹಿಂದೆ ಯಾರೇ ಪ್ರಭಾವಿಗಳು ಇದ್ದರೂ ಅಂಥವರು ಯಾರು, ಎಂಬುದನ್ನು ಪೊಲೀಸರು ಬಹಿರಂಗಗೊಳಿಸಬೇಕು. ಆರೋಪಿಗಳನ್ನು ಹೆಡೆಮುರಿ ಕಟ್ಟುವ ಸಂದಭ೯ ಯಾರದ್ದೇ ಪ್ರಭಾವಕ್ಕೆ ಮಣಿಯಬಾರದು ಎಂದೂ ಪೊಲೀಸ್ ವರಿಷ್ಟಾಧಿಕಾರಿಗಳನ್ನು ಒತ್ತಾಯಿಸಲಾಯಿತು.  ಅಂತೆಯೇ, ಜಿಲ್ಲೆಯಾದ್ಯಂತಲಿನ ದೇವಾಲಯಗಳಲ್ಲಿ ನೂರಾರು ಬ್ರಾಹ್ಮಣರು ಅಚ೯ಕರಾಗಿ ದೇವರ ಸೇವೆ ಸಲ್ಲಿಸುತ್ತಿದ್ದಾರೆ. ಬಹುತೇಕರು ಗ್ರಾಮದ ಒಂಟಿ ಮನೆಗಳಲ್ಲಿ ವಾಸಮಾಡುತ್ತಾ ಪೂಜಾ ಕೈಂಕಯ೯ ಕೈಗೊಳ್ಳುತ್ತಿದ್ದಾರೆ. ಕಟ್ಟೆಮಾಡು ದೇವಾಲಯದ ಅಚ೯ಕ ವಿಘ್ನೇಶ್ ಭಟ್ ಮೇಲಿನ ಹಲ್ಲೆಯು ಜಿಲ್ಲೆಯ ಅಚ೯ಕ ಸಮುದಾಯದಲ್ಲಿ ನೋವನ್ನುಂಟು ಮಾಡಿದೆ. ಹೀಗಾಗಿ ಜಿಲ್ಲೆಯಾದ್ಯಂತಲಿನ ದೇವಾಲಯಗಳ ಅಚ೯ಕರಿಗೆ ಸೂಕ್ತ ಭದ್ರತೆ ಕಲ್ಪಿಸುವಲ್ಲಿ ಪೊಲೀಸ್ ವರಿಷ್ಟಾಧಿಕಾರಿಗಳು ಆಯಾ ದೇವಾಲಯಗಳ ವ್ಯಾಪ್ತಿಯ ಪೊಲೀಸ್ ಠಾಣಾಧಿಕಾರಿಗಳಿಗೆ ಸೂಚನೆ ನೀಡಬೇಕೆಂದೂ ಮನವಿ ಮಾಡಿದರು. ಈ ಸಂದಭ೯ ಮಾತನಾಡಿದ ಪೊಲೀಸ್ ವರಿಷ್ಟಾಧಿಕಾರಿ ರಾಮರಾಜನ್, ಆರೋಪಿಗಳ ಪತ್ತೆಗೆ ಈಗಾಗಲೇ ಪೊಲೀಸ್ ತಂಡ ಕಾಯ೯ಪ್ರವೃತ್ತವಾಗಿದೆ. ಈವರೆಗೂ ಯಾವುದೇ ಒತ್ತಡ ಬರಲಿಲ್ಲ. ಯಾವುದೇ ಪ್ರಭಾವಕ್ಕೂ ಮಣಿಯದೇ ಪೊಲೀಸರು ಆರೋಪಿಗಳ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ಭರವಸೆ ನೀಡಿದರು. ಎರಡು ಸಮುದಾಯಗಳ ನಡುವಿನ ಭಿನ್ನಾಭಿಪ್ರಾಯದ ಲಾಭ ಪಡೆದು ಸಮಾಜದಲ್ಲಿ ಅಶಾಂತಿ ಸೃಷ್ಟಿಸಿದರೆ ಅಂಥವರ ವಿರುದ್ದ ಪೊಲೀಸ್ ಇಲಾಖೆ ಕಾನೂನು ಕ್ರಮ ಕೈಗೊಳ್ಳುವುದು ಖಂಡಿತಾ ಎಂದು ರಾಮರಾಜನ್ ಎಚ್ಚರಿಸಿದರು. ಒತ್ತಾಯ ಪತ್ರ ಸಲ್ಲಿಕೆಗೂ ಮುನ್ನ ಮಡಿಕೇರಿಯ ಲಕ್ಷ್ಮಿ ನರಸಿಂಹ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಸಭೆ ನಡೆಸಿದ ಬ್ರಾಹ್ಣಣ ಸಮಾಜದ ಮುಖಂಡರು ಮುಂದಿನ ಹೋರಾಟದ ಹಾದಿಯ ಬಗ್ಗೆ ಚಚಿ೯ಸಿದರು. ಜಿಲ್ಲೆಯಾದ್ಯಂತಲಿನಿಂದ ನೂರಾರು ಬ್ರಾಹ್ಣಣರು ಸಭೆಯಲ್ಲಿ ಹಾಜರಿದ್ದರು.

ಜಿಲ್ಲಾಧಿಕಾರಿಗಳ ಭೇಟಿ  ::  ಜಿಲ್ಲಾಧಿಕಾರಿ ವೆಂಕಟರಾಜಾ ಅವರನ್ನೂ ಭೇಟಿಯಾದ ಬ್ರಾಹ್ಮಣ ವಿಧ್ಯಾಭಿವೃದ್ಧಿ ನಿಧಿ ಕೊಡಗು ಪ್ರಮುಖರು, ಅಚ೯ಕರ ಮೇಲೆ ಹಲ್ಲೆ ಮಾಡಿದವರನ್ನು ಶೀಘ್ರವೇ ಬಂಧಿಸುವಂತೆ ಒತ್ತಾಯಿಸಿದರು. ಬ್ರಾಹ್ಮಣ ವಿಧ್ಯಾಭಿವೃದ್ಧಿ ನಿಧಿ ಕೊಡಗು ಅಧ್ಯಕ್ಷ ರಾಮಚಂದ್ರಮೂಗೂರು ರಾಘವೇಂದ್ರ ವೈಲಾಯ, ಜಿ. ಆರ್.ರವಿಶಂಕರ್ ರಿಸೇರಿದಂತೆ ಪ್ರಮುಖರು ಹಾಜರಿದ್ದರು. ಪೊಲೀಸರು ಈಗಾಗಲೇ ತನಿಖೆ ಕೈಗೊಂಡಿದ್ದು, ಶೀಘ್ರದಲ್ಲಿಯೇ ಆರೋಪಿಗಳ ಬಂಧನದ ಭರವಸೆ ಇದೆ. ಕೊಡಗು ಶಿಕ್ಷಣವಂತರು, ಪ್ರಜ್ಞಾವಂತರ ಜಿಲ್ಲೆ ಎನಿಸಿದ್ದು ಈ ಜಿಲ್ಲೆಯಲ್ಲಿ ಎರಡು ಸಮುದಾಯಗಳ ಜನರು ಶಾಂತಿ ಸುವ್ಯವಸ್ಥೆ ಕಾಪಾಡಲ ಸೌಹಾಧ೯ಯುುತವಾಗಿ ಮುಂದಾಗುವ ನಿಟ್ಟಿನಲ್ಲಿ ಜಿಲ್ಲಾಡಳಿತ ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತಿದೆ ಎಂದೂ ಜಿಲ್ಲಾಧಿಕಾರಿ ವೆಂಕಟರಾಜಾ ತಿಳಿಸಿದರು.

ಅಚ೯ಕರಿಗೆ ಸಾಂತ್ವನ  ::  ಬ್ರಾಹ್ಮಣ ವಿಧ್ಯಾಭಿವೃದ್ಧಿ ನಿಧಿ ಕೊಡಗು ಪ್ರಮುಖರು ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಚ೯ಕ ವಿಘ್ನೇಷ್ ಅವರನ್ನು ಭೇಟಿಯಾಗಿ ಆರೋಗ್ಯದ ಬಗ್ಗೆ ಮಾಹಿತಿ ಪಡೆದು ಸಾಂತ್ವನ ಹೇಳಿದರು. ಹಲ್ಲೆಕೋರರ ಬಂಧನ ವಿಳಂಭರಹಿತವಾಗಿ ಆಗುವ ಭರವಸೆಯಿದ್ದು ಧೈಯ೯ದಿಂದ ಇರುವಂತೆಯೂ ಕುಟುಂಬ ವಗ೯ಕ್ಕೆ ಸಾಂತ್ವನ ಹೇಳಲಾಯಿತು.

Share. Facebook Twitter Pinterest LinkedIn Tumblr Email WhatsApp
Previous Article*ಹಲ್ಲೆ, ದೌರ್ಜನ್ಯ ಪ್ರಕರಣಗಳು ಹೇಡಿತನದ ಕೃತ್ಯ : ಭಯ ಅಥವಾ ತಾರತಮ್ಯವಿಲ್ಲದ ಸಹಬಾಳ್ವೆ ಅಗತ್ಯ : ಸಿಎನ್‍ಸಿ ಪ್ರತಿಪಾದನೆ*
Next Article *ಚೆಟ್ಟಳ್ಳಿ ಗ್ರಾ.ಪಂ ವ್ಯಾಪ್ತಿಯ ವಿವಿಧ ಕಾಮಗಾರಿಗೆ ಚಾಲನೆ : ಸಾರ್ವಜನಿಕ ಸಮಸ್ಯೆ ಪರಿಹಾರಕ್ಕೆ ಆದ್ಯತೆ : ಶಾಸಕ ಡಾ.ಮಂತರ್ ಗೌಡ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.