Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ : ಶ್ರದ್ಧಾಭಕ್ತಿಯಿಂದ ಜರುಗಿದ ಸಂತ ಅಂತೋಣಿ ಅವರ ವಾರ್ಷಿಕೋತ್ಸವ*
  • *ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*
  • *ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*
  • *ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*
  • *ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*
  • *ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*
  • *ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*
  • *ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*
  • *ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಬಹುಕಾಲ ನೆನಪಿನಲ್ಲುಳಿಯುವಂಥ ಕೃತಿ ರಚನೆಯತ್ತ ಲೇಖಕರು ಗಮನ ಹರಿಸಿ : ಸುಬ್ರಾಯ ಸಂಪಾಜೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಬಹುಕಾಲ ನೆನಪಿನಲ್ಲುಳಿಯುವಂಥ ಕೃತಿ ರಚನೆಯತ್ತ ಲೇಖಕರು ಗಮನ ಹರಿಸಿ : ಸುಬ್ರಾಯ ಸಂಪಾಜೆ*

ಜನವರಿ 29, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.29 NEWS DESK : ಇವತ್ತು ಬರೆದು ನಾಳೆ ಅಳಿದು ಹೋಗುವ ಕೃತಿಗಳನ್ನು ಬರೆಯದಿರಿ. ಅಧ್ಯಯನ ಉಸಿರಾಗಿ ಆಳವಾದ ಮತ್ತು ವಿಸ್ತ್ರತವಾದ ಓದನ್ನು ಮೈಗೂಡಿಸಿಕೊಂಡು ಹೆಚ್ಚಿನ ಕಾಲ ಮನದಲ್ಲಿ ಉಳಿಯುವ ಕೃತಿ ರಚನೆಯತ್ತ ಲೇಖಕರು ಗಮನ ಹರಿಸಬೇಕೆಂದು ಮಡಿಕೇರಿ ಆಕಾಶವಾಣಿ ಕೇಂದ್ರದ ಹಿರಿಯ ಉದ್ಘೋಷಕ, ಸಾಹಿತಿ ಸುಬ್ರಾಯ ಸಂಪಾಜೆ  ಕಿವಿಮಾತು ಹೇಳಿದ್ದಾರೆ.  ಮಡಿಕೇರಿ ಸೈಂಟ್ ಜೋಸೆಫ್ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಕೆ.ಜಯಲಕ್ಷ್ಮಿ ಅವರ ‘ಮತ್ತೆ ವಸಂತ’ ಕಥಾ ಸಂಕಲನವನ್ನು ನಗರದ ರೆಡ್ ಬ್ರಿಕ್ಸ್ ಸಭಾಂಗಣದಲ್ಲಿ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಪರಂಪರೆಯ ವಿಶೇಷತೆಗಳನ್ನು ಸೋದಾಹರಣವಾಗಿ ವಿವರಿಸಿದ ಸುಬ್ರಾಯಸಂಪಾಜೆ, ಕನ್ನಡವನ್ನು ಕೊಡಗಿನ ನೆಲದಲ್ಲಿ ಈ ಹಿಂದೆ ಶ್ರೀಮಂತಗೊಳಿಸಿದ ಹಿರಿಯರನ್ನು ನೆನಪಿಸಿಕೊಂಡರು. ಸದ್ಯದ ಪರಿಸ್ಥಿತಿಯಲ್ಲಿ ಕನ್ನಡದಲ್ಲಿ , ಕೃತಿರಚನೆಯ ಕೆಲಸ ವ್ಯಾಪಕವಾಗಿ ನಡೆಯುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ ಅವರು ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿ ಲಭಿಸಿದರೂ ಅವರಲ್ಲಿ ಕೊಡಗಿನವರು ಯಾರೂ ಇಲ್ಲ. ಎಂದು ವಿಷಾಧಿಸಿದರು. ಕೃತಿ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿ, ಕಾಯ೯ಕ್ರಮ ಉದ್ಘಾಟಿಸಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ ರಮೇಶ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಹಲವು ಬರಹಗಾರರು ಕೊಡಗಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಹೊಸಹೊಸ ಯೋಜನೆಗಳೊಂದಿಗೆ ಕೃತಿಕಾರರಿಗೆ ಒತ್ತಾಸೆಯಾಗಿ ನಿಂತಿದೆ. ಮುಂದಿನ ದಿನಗಳಲ್ಲಿ ಸಾಹಿತ್ಯ ವಿವಿಧ ಪ್ರಕಾರಗಳಲ್ಲಿ ಪರಿಣತರಾದ ಸಂಪನ್ಮೂಲ ವ್ಯಕ್ತಿಗಳಿಂದ ಉದಯೋನ್ಮಖ ಬರಹಗಾರರಿಗೆ ಪರಿಷತ್ತು ತರಬೇತಿ ನೀಡಲಿದೆ ಎಂದರು. ಶಕ್ತಿ ಪತ್ರಿಕೆಯ ಸಂಪಾದಕ ಜಿ. ಚಿದ್ವಿಲಾಸ್ ಮಾತನಾಡಿ, ಕೃತಿಕಾರರು ತಮ್ಮ ಕೃತಿಗಳ ಮೌಲ್ಯದ ಕಡೆಗೆ ಹೆಚ್ಚು ಗಮನ ನೀಡಬೇಕು. ಪ್ರಕಾಶನ ಪ್ರಪಂಚದ ಜಾಲದೊಳಗೆ ಸಿಕ್ಕಿಹಾಕಿಕೊಳ್ಳಬಾರದು ಎಂದು ಕಿವಿಮಾತು ಹೇಳಿದರು. ಮತ್ತೆ ವಸಂತ’ ಕೃತಿಯನ್ನು ಪತ್ರಕರ್ತ , ಮಡಿಕೇರಿ ತಾಲೂಕು ಜಾನಪದ ಪರಿಷತ್ತಿನ ಅಧ್ಯಕ್ಷ . ಅನಿಲ್ ಹೆಚ್.ಟಿ. ಪರಿಚಯಿಸಿ, 164 ಪುಟಗಳ ಮತ್ತೆ ವಸಂತ 31 ವಿಭಿನ್ನ ಕಥೆಗಳ ಗುಚ್ಚವಾಗಿ ಓದುಗರ ಮನಸ್ಸನ್ನು ಹಿಡಿದಿಡುತ್ತದೆ. ಸರಳ ಮತ್ತು ಶುದ್ದ ಭಾಷೆಯಿಂದಾಗಿ ಮತ್ತೆ ವಸಂತ ಬಹಳ ಕಾಲ ಮನಸ್ಸಿನಲ್ಲಿ ಉಳಿಯುವಂಥ ಕಥೆಗಳನ್ನು ಹೊಂದಿದೆ ಎಂದು ಶ್ಲಾಘಿಸಿದರು. ಮತ್ತೆ ವಸಂತ ಕಥಾಸಂಕಲನದಲ್ಲಿ ಪ್ರೀತಿಸಿ ಕೈ ಕೊಟ್ಟ ವಂಚಕ ಮನಸ್ಸಿವನಿದ್ದಾನೆ ಅಂತೆಯೇ ಪ್ರೀತಿ ನಂಬಿ ದಾರಿ ತಪ್ಪಿದವಳಿಗೆ ಬದುಕು ಕೊಟ್ಟ ಹೃದಯವಂತನಿದ್ದಾನೆ. ಮಮತೆ ತೋರದ ತಾಯಿ ಇದ್ದಾಳೆ. ಹೆತ್ತ ತಾಯಿ ಅಲ್ಲದಿದ್ದರೂ ಎತ್ತಿ ಮುದ್ದು ಮಾಡಿ ಪೊರೆದ ಮಾತೆ ಇದ್ದಾಳೆ. ಆಸ್ತಿಗಾಗಿ ತಮ್ಮನನ್ನು ನಿರ್ಲಕ್ಷ ಮಾಡಿದ ಅಣ್ಣ ಇದ್ದಾನೆ. ಅಣ್ಣ ಪಿತೃ ಸಮಾನ ಎಂದೇ ಕೊನೆವರೆಗೂ ನಂಬಿ ನಡೆದ ತಮ್ಮನಿದ್ದಾನೆ. ಶಿಕ್ಷಣ ಪಡೆದು ಬಾಂಧವ್ಯ ಮರೆತ ವಿದ್ಯಾವಂತನಿದ್ದಾನೆ.. ಶಿಕ್ಷಣವಿಲ್ಲದಿದ್ದರೂ ಬಾಂಧವ್ಯದ ಬೇರು ….ವಿಧೇಯತೆ ಎಂದು ನಂಬಿದ ಅವಿದ್ಯಾವಂತ ಇದ್ದಾನೆ. ಹೀಗೆ ಸಮಾಜದ ನಾನಾ ಸ್ತರಗಳ ನಾನಾ ಮುಖಗಳ , ನಾನಾ ಮನಸ್ಥಿತಿಗಳ ಚಿತ್ರಣವನ್ನು ಸಮಥ೯ವಾಗಿ ಮತ್ತೆ ವಸಂತ ಕೖತಿ ಕಟ್ಟಿಕೊಟ್ಟಿದೆ ಎಂದು ಶ್ಲಾಘಿಸಿದರು. ಬೆಳ್ತಂಗಡಿಯ ಜಯಶಂಕರ ಶರ್ಮ ಮಾತನಾಡಿ, ಕೊಡಗಿನ ಪರಿಸರ ಪರಂಪರೆಯ ಬಗ್ಗೆ ಅಭಿಮಾನದ ನುಡಿಗಳನ್ನಾಡಿ ಈ ಪರಿಸರ ಇಲ್ಲಿಯ ಸಮೃದ್ಧ ಅನುಭವ ಸಾಹಿತ್ಯ ಕೃತಿಗಳಲ್ಲಿ ಅಭಿವ್ಯಕ್ತಿ ಪಡೆಯಬೇಕು ಎಂದರು.  ಲೇಖಕಿ ಕೆ.ಜಯಲಕ್ಷ್ಮಿ ಸ್ವಾಗತಿಸಿದರು. ಬರಹಗಾರ್ತಿ ಪ್ರತಿಮಾಹರೀಶ್‌ ಹಾಗೂ ಗಾಯತ್ರಿ ಕಾರ್ಯಕ್ರಮ ನಿರೂಪಿಸಿದರು. ಚಿತ್ರ ಆರ್ಯನ್ ವಂದಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಕೇಶವ ಕಾಮತ್‌  ಉಪಸ್ಥಿತರಿದ್ದರು. ಮಕ್ಕಳಿಂದ ನೃತ್ಯ, ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಬಾಳಲೆಯ ಯುವ ಗಾಯಕ ಅನ್ವಿತ್ ಕುಮಾರ್ ಸುಗಮ ಸಂಗೀತದ ಮೂಲಕ ಪ್ರೇಕ್ಷಕರ ಮನಸೂರೆಗೊಂಡರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ : ಶ್ರದ್ಧಾಭಕ್ತಿಯಿಂದ ಜರುಗಿದ ಸಂತ ಅಂತೋಣಿ ಅವರ ವಾರ್ಷಿಕೋತ್ಸವ*

ಮೇ 11, 2026

*ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*

ಮೇ 11, 2026

*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*

ಮೇ 11, 2026

*ಕೊಡಗು ಬ್ಲಡ್ ಡೋನರ್ಸ್ ನಿಂದ ಪಿ.ಕೆ.ರಾಜುಗೆ ಬೀಳ್ಕೊಡುಗೆ*

ಮೇ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 11 NEWS DESK :  ಮಡಿಕೇರಿ ನಗರ ಠಾಣೆ ವೃತ್ತ ನಿರೀಕ್ಷರಾಗಿದ್ದ ಟಿ.ಕೆ.ರಾಜು ಅವರಿಗೆ ಆತ್ಮೀಯ ಬೀಳ್ಕೊಡುಗೆ…

*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ*

ಮೇ 11, 2026

*ಪೊನ್ನಂಪೇಟೆ : ಮೇ 12 ರಂದು ವಿವಿಧೆಡೆಯಿಂದ ವಿದ್ಯುತ್ ವ್ಯತ್ಯಯ*

ಮೇ 11, 2026

*ಮೇ 13 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಮೇ 11, 2026

*ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*

ಮೇ 11, 2026

*ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*

ಮೇ 11, 2026

*ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*

ಮೇ 11, 2026

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*

ಮೇ 11, 2026

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.