Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಪತ್ತು ನಿರ್ವಹಣೆ ಸಹಾಯವಾಣಿ ಕೇಂದ್ರ ಆರಂಭ : ನೋಡಲ್ ಮತ್ತು ಸಹಾಯಕ ನೋಡಲ್ ಅಧಿಕಾರಿಗಳ ನೇಮಕ*
  • *ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*
  • *ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*
  • *ಹದಗೆಟ್ಟ ಸಂಪಿಗೆಕಟ್ಟೆ ರಸ್ತೆ : ತುರ್ತು ದುರಸ್ತಿಗೆ ಆಮ್ ಆದ್ಮಿ ಪಾರ್ಟಿ ಯುವ ಘಟಕ ಆಗ್ರಹ*
  • *ಕುಶಾಲನಗರ : ಶರಣ ಸಾಹಿತ್ಯ ಸಮ್ಮೇಳನ ಕಚೇರಿ ಉದ್ಘಾಟನೆ*
  • *ಮಿತಿ ಮೀರಿದ ವನ್ಯಜೀವಿ ದಾಳಿ : ಐದು ಜಿಲ್ಲೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ : ಬಿಜೆಪಿ ನಿರ್ಧಾರ*
  • *ಶರಣ ಸಾಹಿತ್ಯ ಸಮ್ಮೇಳನ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ*
  • *ಕೊಡಗು ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಆರ್‌ಎಫ್ ಅಡಿಯಲ್ಲಿ ರೂ.22 ಕೋಟಿ ಮಂಜೂರು : ಸಂಸದ  ಯದುವೀರ್ ಒಡೆಯರ್*
  • *ಜೂ.14ಕ್ಕೆ ಮರಾಠ-ಮರಾಟಿ ಸಮಾಜದ ವಾರ್ಷಿಕ ಮಹಾಸಭೆ*
  • *ಮಡಿಕೇರಿಯಲ್ಲಿ ಫಿಟ್ ಇಂಡಿಯಾ ಆಂದೋಲನಕ್ಕೆ ಚಾಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜ.31 ರಂದು ಮುಖ್ಯಮಂತ್ರಿಗಳಿಂದ ಭಾಗಮಂಡಲ ಸೇತುವೆ ಉದ್ಘಾಟನೆ : ಅಭಿವೃದ್ಧಿ ಪಥದತ್ತ ಕೊಡಗು : ಟಿ.ಪಿ.ರಮೇಶ್ ಬಣ್ಣನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜ.31 ರಂದು ಮುಖ್ಯಮಂತ್ರಿಗಳಿಂದ ಭಾಗಮಂಡಲ ಸೇತುವೆ ಉದ್ಘಾಟನೆ : ಅಭಿವೃದ್ಧಿ ಪಥದತ್ತ ಕೊಡಗು : ಟಿ.ಪಿ.ರಮೇಶ್ ಬಣ್ಣನೆ*

ಜನವರಿ 29, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜ.29 : ಕಾವೇರಿ ಕ್ಷೇತ್ರ ಭಾಗಮಂಡಲದಲ್ಲಿ ಸುಮಾರು 30 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಮೇಲ್ಸೆತುವೆಯನ್ನು ಜ.31 ರಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಕ್ತಾರ ಟಿ.ಪಿ.ರಮೇಶ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ಮೇಲ್ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿಗಳೊAದಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬೃಹತ್ ಕೈಗಾರಿಕಾ ಇಲಾಖಾ ಸಚಿವ ಎಂ.ಬಿ.ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು. ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ ಕ್ಷೇತ್ರಕ್ಕೆ ಭೇಟಿ ನೀಡಲಿರುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರುಗಳನ್ನು ಕೊಡಗು ಜಿಲ್ಲಾ ಕಾಂಗ್ರೆಸ್‌ನ ಪದಾಧಿಕಾರಿಗಳು, ಕಾರ್ಯಕರ್ತರು, ಭಾಗಮಂಡಲದ ಸಾರ್ವಜನಿಕರು ಅದ್ಧೂರಿಯಾಗಿ ಸ್ವಾಗತಿಸಲಿದ್ದಾರೆ ಎಂದು ತಿಳಿಸಿದರು.
ಮುಂಗಾರಿನ ಅವಧಿಯಲ್ಲಿ ವರ್ಷಂಪ್ರತಿ ಭಾಗಮಂಡಲ ಕ್ಷೇತ್ರ ಕಾವೇರಿ ನದಿ ಪ್ರವಾಹಕ್ಕೆ ಸಿಲುಕಿ, ಅಲ್ಲಿನ ನಿವಾಸಿಗಳು ಹಾಗೂ ಪುಣ್ಯ ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳು ಸಂಕಷ್ಟಕ್ಕೆ ಸಿಲುಕುತ್ತಿದ್ದರು. ಸುಮಾರು ಒಂಭತ್ತು ವರ್ಷಗಳ ಹಿಂದೆ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಕೆ.ಜೆ.ಜಾರ್ಜ್ ಅವರು ಸ್ಥಳಕ್ಕೆ ಭೇಟಿ ನೀಡಿ ಜನರ ಮೂಲಭೂತ ಸಮಸ್ಯೆಗಳನ್ನು ಆಲಿಸಿ, ಮೇಲ್ಸೇತುವೆ ನಿರ್ಮಾಣದ ಅಗತ್ಯತೆಯನ್ನು ಮನಗಂಡು ಯೋಜನೆಯನ್ನು ಘೋಷಿಸಿದರು. ಸುಮಾರು 30 ಕೋಟಿ ರೂ. ಅನುದಾನವನ್ನು ವಿವಿಧ ಹಂತಗಳಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಒದಗಿಸಲಾಗಿತ್ತು. ಆ ನಂತರದ ಬಿಜೆಪಿಯ 5 ವರ್ಷಗಳ ಅವಧಿಯಲ್ಲಿ ಮೇಲ್ಸೇತುವೆಯ ಕಾಮಗಾರಿ ಮಂದಗತಿಯಲ್ಲಿ ಸಾಗಿತು. ಇದೀಗ ಬಂದ ಕಾಂಗ್ರೆಸ್ ಸರಕಾರದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಅವರು ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಲು ವಿಶೇಷ ಕಾಳಜಿ ವಹಿಸಿ ಇದೀಗ ಉದ್ಘಾಟನೆಗೆ ಸಜ್ಜಾಗಿದೆ ಎಂದು ಟಿ.ಪಿ.ರಮೇಶ್ ವಿವರಿಸಿದರು.
ಹಿಂದೆ ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಎಸ್.ಎಂ.ಕೃಷ್ಣ ಅವರು ಕಾವೇರಿ ಕ್ಷೇತ್ರದ ಅಭಿವೃದ್ಧಿಗೆ ಕಾಳಜಿ ವಹಿಸಿ ಕಾವೇರಿ ನೀರಾವರಿ ನಿಗಮದ ಮೂಲಕ 12 ಕೋಟಿ ರೂ.ಗಳನ್ನು ಒದಗಿಸಿದ್ದರು. ಇದರ ಬಳಕೆಯ ಮೂಲಕ ಕ್ಷೇತ್ರ ಅಭಿವೃದ್ಧಿಯನ್ನು ಕಂಡಿದೆ, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಮೇಲ್ಸೇತುವೆ ಉದ್ಘಾಟನೆಗೊಳ್ಳುತ್ತಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಅವರ ಆಸಕ್ತಿಯಿಂದ 1 ಕೋಟಿ ರೂ. ವೆಚ್ಚದಲ್ಲಿ ಉದ್ಯಾನವನ ನಿರ್ಮಾಣಗೊಂಡಿದೆ ಎಂದರು. ಜಿಲ್ಲಾ ಕೇಂದ್ರ ಮಡಿಕೇರಿಯಿಂದ ಭಾಗಮಂಡಲಕ್ಕೆ ತೆರಳುವ ರಸ್ತೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಶಾಸಕರು ವಿಶೇಷ ಕಾಳಜಿ ವಹಿಸಿದ್ದು, ಈಗಾಗಲೆ ವಿಶೇಷ ಕಾರ್ಯಯೋಜನೆಯನ್ನು ಸರಕಾರದ ಮುಂದಿರಿಸಿದ್ದಾರೆ. ಅಗತ್ಯವಾದ ಅಭಿವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳುವ ಮೂಲಕ ಜಿಲ್ಲೆಯ ಸರ್ವತೋಮುಖ ಪ್ರಗತಿಯತ್ತ ಮುನ್ನಡೆಯುತ್ತಿರುವುದಾಗಿ ಹೇಳಿದರು. ಜಿಲ್ಲೆಯಲ್ಲಿ ವಿದ್ಯುತ್ ಮತ್ತು ವೋಲ್ಟೇಜ್ ಸಮಸ್ಯೆಗಳಿರುವುದನ್ನು ಮನಗಂಡು, ದಕ್ಷಿಣ ಕೊಡಗಿನ ಶ್ರೀಮಂಗಲದಲ್ಲಿ ವಿದ್ಯುತ್ ಉಪ ಕೇಂದ್ರ ಆರಂಭ ಸೇರಿದಂತೆ ವಿದ್ಯುತ್ ಮಾರ್ಗಗಳ ಬಲವರ್ಧನೆಗೆ ಸುಮಾರು 200 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ ಎಂದು ಟಿ.ಪಿ.ರಮೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸುಜು ತಿಮ್ಮಯ್ಯ, ಪ್ರಧಾನ ಕಾರ್ಯದರ್ಶಿಗಳಾದ ಮುನೀರ್ ಅಹಮ್ಮದ್, ಕೊಲ್ಯದ ಗಿರೀಶ್ ಹಾಗೂ ಕಾಂಗ್ರೆಸ್ ಸೇವಾ ದಳದ ಜಿಲ್ಲಾಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಪತ್ತು ನಿರ್ವಹಣೆ ಸಹಾಯವಾಣಿ ಕೇಂದ್ರ ಆರಂಭ : ನೋಡಲ್ ಮತ್ತು ಸಹಾಯಕ ನೋಡಲ್ ಅಧಿಕಾರಿಗಳ ನೇಮಕ*

ಜೂನ್ 10, 2026

*ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*

ಜೂನ್ 10, 2026

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*

ಜೂನ್ 10, 2026

*ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಿ : ಪ್ರೊ.ಅಶೋಕ ಸಂಗಪ್ಪ ಆಲೂರು*

ಜೂನ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಜೂ.10 NEWS DESK : ವಿದ್ಯಾರ್ಥಿಗಳು ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.…

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ : ಗಿಡಗಳನ್ನು ನೆಟ್ಟು ಪರಿಸರಕ್ಕೆ ಕೊಡಗೆ ನೀಡಿ : ರಾಜಯೋಗಿನಿ ಬಿ.ಕೆ.ಧನಲಕ್ಷ್ಮಿ*

ಜೂನ್ 10, 2026

*ಹದಗೆಟ್ಟ ಸಂಪಿಗೆಕಟ್ಟೆ ರಸ್ತೆ : ತುರ್ತು ದುರಸ್ತಿಗೆ ಆಮ್ ಆದ್ಮಿ ಪಾರ್ಟಿ ಯುವ ಘಟಕ ಆಗ್ರಹ*

ಜೂನ್ 10, 2026

*ಕುಶಾಲನಗರ : ಶರಣ ಸಾಹಿತ್ಯ ಸಮ್ಮೇಳನ ಕಚೇರಿ ಉದ್ಘಾಟನೆ*

ಜೂನ್ 10, 2026

*ಮಿತಿ ಮೀರಿದ ವನ್ಯಜೀವಿ ದಾಳಿ : ಐದು ಜಿಲ್ಲೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ : ಬಿಜೆಪಿ ನಿರ್ಧಾರ*

ಜೂನ್ 10, 2026

*ಶರಣ ಸಾಹಿತ್ಯ ಸಮ್ಮೇಳನ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ*

ಜೂನ್ 10, 2026

*ಕೊಡಗು ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಆರ್‌ಎಫ್ ಅಡಿಯಲ್ಲಿ ರೂ.22 ಕೋಟಿ ಮಂಜೂರು : ಸಂಸದ  ಯದುವೀರ್ ಒಡೆಯರ್*

ಜೂನ್ 10, 2026

*ಜೂ.14ಕ್ಕೆ ಮರಾಠ-ಮರಾಟಿ ಸಮಾಜದ ವಾರ್ಷಿಕ ಮಹಾಸಭೆ*

ಜೂನ್ 9, 2026

*ಮಡಿಕೇರಿಯಲ್ಲಿ ಫಿಟ್ ಇಂಡಿಯಾ ಆಂದೋಲನಕ್ಕೆ ಚಾಲನೆ*

ಜೂನ್ 9, 2026

*ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ-ಶಿಕ್ಷಕರ ಸಭೆ*

ಜೂನ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.