Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
  • *ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*
  • *ಏ.5 ರಿಂದ ಮೇ 2 ರವರೆಗೆ ಚೇನಂಡ ಕಪ್ ಹಾಕಿ ಉತ್ಸವ : 4 ಮೈದಾನಗಳಲ್ಲಿ ಪಂದ್ಯಾವಳಿ : ಹೆಸರು ನೋಂದಣಿಗೆ ಮಾ.20 ಕೊನೆ ದಿನ*
  • *ಏಪ್ರಿಲ್ ನಿಂದಲೇ ಪೂರ್ವಾನ್ವಯವಾಗಲಿದೆ ಹೊಸ ವಿದ್ಯುತ್ ದರ: ಯಾರಿಗೆ ಲಾಭ? ಯಾರಿಗೆ ನಷ್ಟ? ಇಲ್ಲಿದೆ ಕಂಪ್ಲೀಟ್ ಚಾರ್ಟ್*
  • *ನಿಮ್ಮ ಏರಿಯಾದಲ್ಲಿ ನೀರಿಲ್ಲವೇ?: ಕೂಡಲೇ ಈ ಕೆಲಸ ಮಾಡಿ! ಮನೆ ಬಾಗಿಲಿಗೇ ಬರಲಿದೆ ಕಾವೇರಿ ನೀರು; ಹೇಗೆ ಗೊತ್ತಾ?*
  • *ಸೆಟ್ಟೇರಿತು ‘ನನ್ನ ಸೈಕಲ್ ಸವಾರಿ’*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗಾಂಧಿ ವಿಚಾರಧಾರೆಗಳು, ಮೌಲ್ಯಗಳು ಜಗತ್ತಿನಲ್ಲಿ ಇಂದಿಗೂ ಪ್ರಸ್ತುತ : ಮುಖ್ಯಮಂತ್ರಿ ಸಿದ್ದರಾಮಯ್ಯ*
ಇತ್ತೀಚಿನ ಸುದ್ದಿಗಳು ಕರ್ನಾಟಕ ವಿಡಿಯೋ ಗ್ಯಾಲರಿ

*ಗಾಂಧಿ ವಿಚಾರಧಾರೆಗಳು, ಮೌಲ್ಯಗಳು ಜಗತ್ತಿನಲ್ಲಿ ಇಂದಿಗೂ ಪ್ರಸ್ತುತ : ಮುಖ್ಯಮಂತ್ರಿ ಸಿದ್ದರಾಮಯ್ಯ*

ಜನವರಿ 30, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ಜ.30 NEWS DESK : ಮತಾಂಧ ನಾಥೂರಾಮ್ ಗೋಡ್ಸೆ ಮಹಾತ್ಮಾ ಗಾಂಧಿಯವರನ್ನು ಗುಂಡಿಟ್ಟು ಕೊಂದು, ಅವರು ಇಹಲೋಕ ತ್ಯಜಿಸಿರಬಹುದು. ಆದರೆ ಮಹಾತ್ಮಾ ಗಾಂಧೀಜಿಯವರ ಮೌಲ್ಯಗಳನ್ನು ಕೊಲ್ಲಲು ಗೋಡ್ಸೆಯಾಗಲಿ ಅಥವಾ ಇನ್ಯಾರಿಂದಾಗಲಿ ಕೊಲ್ಲಲು ಸಾಧ್ಯವಿಲ್ಲ. ಇಂದಿಗೂ ಅವರ ವಿಚಾರಧಾರೆಗಳು , ಮೌಲ್ಯಗಳು ಭಾರತದಲ್ಲಿ ಮಾತ್ರವಲ್ಲ ಜಗತ್ತಿನಲ್ಲಿಯೇ ಪ್ರಸ್ತುತವಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹುತಾತ್ಮರ ದಿನಾಚರಣೆ ಅಂಗವಾಗಿ ವಿಧಾನಸೌಧದ ಮಹಾತ್ಮಾ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಜನವರಿ 30, 1948 ರಂದು ಮಹಾತ್ಮಾ ಗಾಂಧೀಜಿಯವರನ್ನು ಹತ್ಯೆ ಮಾಡಿದ ದಿನ. ಗಾಂಧೀಜಿಯವರು ನನ್ನ ಜೀವನವೇ ನನ್ನ ಸಂದೇಶ ಎಂದು ಹೇಳಿದ್ದರು. ಅವರ ಹೋರಾಟಡ ಬದುಕು, ಅಹಿಂಸೆ, ಸತ್ಯಾಗ್ರಹ, ಇವು ನಮಗೆ ಪ್ರೇರಣೆ. ಜಗತ್ತಿನಲ್ಲಿ ಸತ್ಯ, ಅಹಿಂಸೆ, ಸತ್ಯಾಗೃಹದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ದೇಶದಲ್ಲಿ ಬಹಳ ದೀರ್ಘ ಕಾಲ ನಡೆದ ಹೋರಾಟದ ನಾಯಕತ್ವವನ್ನು ಗಾಂಧೀಜಿ ವಹಿಸಿದ್ದರು. 1915 ರಲ್ಲಿ ದಕ್ಷಿಣ ಆಫ್ರಿಕಾ ದಿಂದ ಭಾರತಕ್ಕೆ ಬಂದು ಮೊದಲು ದೇಶ, ದೇಶದ ಜನ, ಸಮಾಜ, ಬದುಕನ್ನು ಅರ್ಥಆಡಿಕೊಳ್ಳುವ ಪ್ರಯತ್ನ ಮಾಡಿ, ನಂತರ ಹೋರಾಟವನ್ನು ಪ್ರಾರಂಭಿಸಿದರು. ಸತ್ಯ ಅಹಿಂಸೆಗಳಿಂದ ಕೂಡಿದ್ದ ಹೋರಾಟದಲ್ಲಿ ಸಾವಿರಾರು ಜನ ಪಾಲ್ಗೊಂಡರು. ಅವರ ಹೋರಾಟದ ಫಲವಾಗಿ ನಮಗೆ ಸ್ವಾತಂತ್ರ್ಯ ದೊರೆತು, ಬ್ರಿಟಿಷರ ದಾಸ್ಯದಿಂದ ಬಿಡುಗಡೆ ದೊರೆಯಿತು ಎಂದು ವಿವರಿಸಿದರು. ಮಹಾತ್ಮಾ ಗಾಂಧಿ ಅವರು ಒಮ್ಮೆ ಮಾತ್ರ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 25,26,27 ರಂದು 1924 ನಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನ ನಡೆಯಿತು. ಅದರ ಸವಿನೆನಪಿಗಾಗಿ ಬೆಳಗಾವಿಯಲ್ಲಿ ಶತಮಾನೋತ್ಸವವನ್ನು ಆಚರಿಸಲಾಯಿತು. 26 ಮತ್ತು 27 ರಂದು ಕಾರ್ಯಕ್ರಮ ಜರುಗಿತು ಎಂದು ಮುಖ್ಯಮಂತ್ರಿಗಳು ತಿಳಿಸಿದರು. 26 ರಂದು ನಡೆದ ರಾಷ್ಟ್ರೀಯ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಕಾರ್ಯಕಾರಿ ಸಮಿತಿ ಸದಸ್ಯರು, ಮುಖಂಡರು ಭಾಗವಹಿಸಿದ್ದರು.
ಮೊದಲ ದಿನ ಮಹಾತ್ಮಾ ಗಾಂಧಿ ಅವರನ್ನು ನೆನಪುಾಡಿಕೊಳ್ಳಲಾಯಿತು. ಭಾರತದ ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಅವರ ನಿಧನದಿಂದಾಗಿ ಕಾರ್ಯಕ್ರಮ ಮುಂದೂಡಲ್ಪಟ್ಟಿತು. 27 ರಂದು ಗಾಂಧಿ ಭಾರತ ಹೆಸರಿನಲ್ಲಿ ನಡೆದು, ಘೋಷವಾಕ್ಯ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಎಂದಾಗಿತ್ತು. ಅಂದೆ ಮಹಾತ್ಮಾ ಗಾಂಧಿ ಅವರ ಕಂಚಿನ ಪ್ರತಿಮೆಯನ್ನು ಸುವರ್ಣ ಸೌಧದಲ್ಲಿ ಅನಾವರಣ ಮಾಡಲಾಯಿತು. ವಿಧಾನ ಸಭಾ ಅಧ್ಯಕ್ಷರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಲ್ಲಾ ಮಂತ್ರಿ ಮಂಡಲದ ಸದಸ್ಯರು, ಭಾಗವಹಿಸಿದ್ದರು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಗಾಂಧಿ ಭಾರತ ಕಟ್ಟಲು ಪ್ರಾಮಾಣಿಕ ಪ್ರಯತ್ನ ಅಗತ್ಯ :: ಮಹಾತ್ಮಾ ಗಾಂಧೀಜಿಯವರು ಕೇವಲ ಸ್ವಾತಂತ್ರ್ಯ ಹೋರಾಟ ಮಾಡಲಿಲ್ಲ, ಈ ದೇಶಕ್ಕೆ ಸ್ವಾತಂತ್ರ್ಯ ದೊರೆತ ಮೇಲೆ ಹೇಗಿರಬೇಕೆಂದು ಪರಿಹಾರಗಳನ್ನು ನೀಡಿದ್ದರು. ಭಾರತ ದೇಶ ಗ್ರಾಮಗಳ ದೇಶ. ಗ್ರಾಮಗಳ ಅಭಿವೃದ್ಧಿಯಾಗದೆ ದೇಶ ಅಭಿವೃದ್ಧಿ ಆಗುವುದಿಲ್ಲ ಎಂದು ಹೇಳಿದ್ದರು. ಅದಕ್ಕಾಗಿಯೇ ಗ್ರಾಮ ಸ್ವರಾಜ್ಯ ಎಂಬಾ ಪರಿಕಲ್ಪನೆಯನ್ನು ಪ್ರತಿಪಾದಿಸಿದ್ದರು. ಗ್ರಾಮಗಳು ಸ್ವಾವಲಂಬಿಗಳಾಗಬೇಕು.ಆಗ ಮಾತ್ರ ಜನ, ದೇಶ ಸ್ವಾವಲಂಬಿಗಳಾಗಿ ಸಾಧ್ಯ. ಭಾರತದಲ್ಲಿ ಗುಡಿ ಕೈಗಾರಿಕೆಗಳು, ಅತಿ ಸಣ್ಣ ಕೈಗಾರಿಕೆಗಳು ಆರ್ಥಿಕತೆಯ ತಳಹದಿ. ಅದಕ್ಕೆ ಉತ್ತೇಜನ ನೀಡಬೇಕು ಎಂದು ಕರೆ ನೀಡಿದ್ದರು. ಗಾಂಧಿ ಭಾರತ ಕಟ್ಟುವ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡಬೇಕು. ಅವರ ಮೌಲ್ಯಗಳನ್ನು ರೂಢಿಸಿಕೊಂಡು ಅದರಂತೆ ನಡೆಯುವ ಪ್ರಯತ್ನ ಮಾಡಬೇಕು.

ಪ್ರಯಾಗ್ ರಾಜ್ ನಲ್ಲಿ ಕಾಲ್ತುಳಿತಕ್ಕೆ ಸಿಕ್ಕು ಮೃತಪಟ್ಟವರ ದೇಹಗಳನ್ನು ತರಲು ಏರ್ ಆಂಬ್ಯುಲೆನ್ಸ್ ::  ಪ್ರಯಾಗ್ ರಾಜ್ ನಲ್ಲಿ ನಡೆದಿರುವ ಕಾಲ್ತುಳಿತದಲ್ಲಿ ಕರ್ನಾಟಕದ ನಾಲ್ವರು ಮೃತ ಪಟ್ಟಿದ್ದು, ಮೃತ ದೇಹಗಳನ್ನು ರಾಜ್ಯಕ್ಕೆ ತರಲು ಏರ್ ಆಂಬ್ಯುಲೆನ್ಸ್ ಕಳುಹಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಳಗಾವಿ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ವ್ಯವಸ್ಥೆ ಮಾಡಿದ್ದು, ಇನ್ನೂ ಎಂಟು ಜನ ನಾಪತ್ತೆಯಾಗಿರುವ ಬಗ್ಗೆ  ಮಾಹಿತಿಯಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಮೃತ ಪಟ್ಟವರ ಕುಟುಂಬಕ್ಕೆ ಪರಿಹಾರವನ್ನು ಘೋಷಣೆ ಮಾಡಲಿದ್ದಾರೆ ಎಂದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.5 : ಕೊಡಗು ಮುಸ್ಲಿಂ ಸ್ಟೋಟ್ಸ್ ಟ್ರಸ್ಟ್ ವತಿಯಿಂದ 21ನೇ ವರ್ಷದ ಕೊಡಗು ಮುಸ್ಲಿಂ ಕಪ್…

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026

*ಏ.5 ರಿಂದ ಮೇ 2 ರವರೆಗೆ ಚೇನಂಡ ಕಪ್ ಹಾಕಿ ಉತ್ಸವ : 4 ಮೈದಾನಗಳಲ್ಲಿ ಪಂದ್ಯಾವಳಿ : ಹೆಸರು ನೋಂದಣಿಗೆ ಮಾ.20 ಕೊನೆ ದಿನ*

ಮಾರ್ಚ್ 5, 2026

*ಏಪ್ರಿಲ್ ನಿಂದಲೇ ಪೂರ್ವಾನ್ವಯವಾಗಲಿದೆ ಹೊಸ ವಿದ್ಯುತ್ ದರ: ಯಾರಿಗೆ ಲಾಭ? ಯಾರಿಗೆ ನಷ್ಟ? ಇಲ್ಲಿದೆ ಕಂಪ್ಲೀಟ್ ಚಾರ್ಟ್*

ಮಾರ್ಚ್ 5, 2026

*ನಿಮ್ಮ ಏರಿಯಾದಲ್ಲಿ ನೀರಿಲ್ಲವೇ?: ಕೂಡಲೇ ಈ ಕೆಲಸ ಮಾಡಿ! ಮನೆ ಬಾಗಿಲಿಗೇ ಬರಲಿದೆ ಕಾವೇರಿ ನೀರು; ಹೇಗೆ ಗೊತ್ತಾ?*

ಮಾರ್ಚ್ 5, 2026

*ಸೆಟ್ಟೇರಿತು ‘ನನ್ನ ಸೈಕಲ್ ಸವಾರಿ’*

ಮಾರ್ಚ್ 5, 2026

*ರಾಜ್ಯ ಬಜೆಟ್ ಕೊಡಗಿನ ಅಭಿವೃದ್ಧಿಗೆ ಪೂರಕವಾಗಿರಲಿ : ಬಿಜೆಪಿ ಒತ್ತಾಯ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.