Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಭಾಷಣ ಇಲ್ಲ, ಘೋಷಣೆ ಇಲ್ಲ : ಶಾಂತಿಯುತವಾಗಿ ನಡೆಯಲಿದೆ ಕೊಡವರ ಪಾದಯಾತ್ರೆ : ಕಟ್ಟೆಮಾಡು ಪ್ರೇರಣೆ ಅಲ್ಲ*
ಇತ್ತೀಚಿನ ಸುದ್ದಿಗಳು

*ಭಾಷಣ ಇಲ್ಲ, ಘೋಷಣೆ ಇಲ್ಲ : ಶಾಂತಿಯುತವಾಗಿ ನಡೆಯಲಿದೆ ಕೊಡವರ ಪಾದಯಾತ್ರೆ : ಕಟ್ಟೆಮಾಡು ಪ್ರೇರಣೆ ಅಲ್ಲ*

January 30, 20253 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜ.30 : ಕೊಡವ ಹಾಗೂ ಕೊಡವ ಭಾಷಿಕ ಸಮುದಾಯಗಳ ಸಂಸ್ಕೃತಿಯ ಭದ್ರತೆಗಾಗಿ ಮತ್ತು ಹಕ್ಕುಗಳಿಗಾಗಿ ಒತ್ತಾಯಿಸಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕುಟ್ಟದಿಂದ ಮಡಿಕೇರಿಯವರೆಗೆ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಫೆ.2ರಿಂದ 7ರವರೆಗೆ ಕೊಡವರ ಶಾಂತಿಯುತ ಪಾದಯಾತ್ರೆ ನಡೆಯಲಿದೆ ಎಂದು ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡವ ಹಾಗೂ ಕೊಡವ ಭಾಷಿಕ ಸಮುದಾಯಗಳಿಗೆ ಸಂವಿಧಾನ ಬದ್ಧವಾಗಿ ದೊರಕಬೇಕಾದ, ಹಕ್ಕು ಮತ್ತು ಬೇಡಿಕೆಗೆ ಇದುವರೆಗೂ ಮನ್ನಣೆ ನೀಡದಿರುವುದು ವಿಪರ್ಯಾಸ. ಈ ಎಲ್ಲಾ ಅಂಶಗಳನ್ನು ಮುಂದಿಟ್ಟುಕೊಂಡು, ನಮ್ಮ ಸಂವಿಧಾನಿಕ ಹಕ್ಕು ಮತ್ತು ಸಂಸ್ಕöÈತಿಯ ಭದ್ರತೆಗಾಗಿ, ಜನಾಂಗೀಯ ಅಸ್ತಿತ್ವವನ್ನು ಕಾಪಾಡುವ ನಿಟ್ಟಿನಲ್ಲಿ, ಎಲ್ಲಾ ಕೊಡವ ಸಮಾಜ, ಸಂಘಟನೆಗಳು, ಭಾಷಿಕ ಸಮುದಾಯಗಳ ಸಂಘಟನೆಗಳು, ಎಲ್ಲಾ ಕೊಡವ ಅಭಿಮಾನಿಗಳು ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಕುಟ್ಟದಿಂದ ಮಡಿಕೇರಿಗೆ ಬೃಹತ್ ಪಾದಯಾತ್ರೆ ನಡೆಸುವ ಮೂಲಕ ನಮ್ಮ ಹಕ್ಕು ಪ್ರತಿಪಾದನೆ ಮಾಡುವ ಕುರಿತಂತೆ ತೀರ್ಮಾನಿಸಿದ್ದೇವೆ ಎಂದರು. ಕೊಡಗು 1956 ರವರೆಗೂ ಪ್ರತ್ಯೇಕ ‘ಸಿ’ ರಾಜ್ಯದ ಸ್ಥಾನಮಾನ ಹೊಂದಿ, ತನ್ನದೇ ಆದ ಕಟ್ಟುಪಾಡು ಅಚರಣೆಯನ್ನು ಹೊಂದಿತ್ತು. ನಂತರ ವಿಶಾಲ ಮೈಸೂರು ಸಂಸ್ಥಾನದೊಂದಿಗೆ ವಿಲೀನವಾಗಿ, ಆ ನಂತರ ಕರ್ನಾಟಕದೊಂದಿಗೆ ಸೇರಿಕೊಂಡು ಕೇವಲ ಒಂದು ಜಿಲ್ಲೆಯಾಗಿ ಇಂದು ಉಳಿದುಕೊಂಡಿದೆ. ಪುರಾಣಕಾಲದಿAದಲೂ, ಆನಂತರದ ಕಾಲಮಾನದಲ್ಲೂ ಕೂಡ ಕೊಡವ ಮತ್ತು ಕೊಡವ ಭಾಷಿಕ ಸಮುದಾಯಗಳು ಕೊಡವ ಭಾಷೆ ಮತ್ತು ಸಂಸ್ಕöÈತಿಯನ್ನು ಚಾಚೂತಪ್ಪದೆ ಪಾಲಿಸುತ್ತಿದ್ದು, ಇಂದಿಗೂ ಕೂಡ ಅದು ಮುಂದುವರೆದಿದೆ. ಅಂತೆಯೆ ನಾವು ಇತರ ಎಲ್ಲಾ ಭಾಷೆ ಮತ್ತು ಸಂಸ್ಕöÈತಿಯನ್ನು ಕೂಡ ಗೌರವಿಸಿ ಕಾಲಕ್ಕೆ ತಕ್ಕಂತೆ ಅನುಸರಿಸುತ್ತಾ ಬಂದಿದ್ದೇವೆ. ಆದರೆ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಮತ್ತು ಕಾಣದ ಕೈಗಳು ಕೆಲವರ್ಷಗಳಿಂದ ನಿರಂತರವಾಗಿ ನಮ್ಮ ಸಂಸ್ಕöÈತಿಯ ಮೇಲೆ ದಬ್ಬಾಳಿಕೆ, ದಾಳಿಯನ್ನು ನಡೆಸುತ್ತಾ, ನಮ್ಮ ಆಚರಣೆ ಮತ್ತು ಉಡುಪುಗಳನ್ನು ಉದ್ದೇಶ ಪೂರ್ವಕವಾಗಿ ವಿರೂಪಗೊಳಿಸುತ್ತಿರುವ ಹಲವು ಪ್ರಕರಣಗಳು ನಮ್ಮ ಕಣ್ಣಮುಂದೆ ಇವೆ ಎಂದು ಆರೋಪಿಸಿದರು. ಕೊಡವರ ಹಕ್ಕುಗಳಿಗಾಗಿ ಫೆ.2 ರಂದು ಕುಟ್ಟದಲ್ಲಿ ಪಾದಯಾತ್ರೆ ಪ್ರಾರಂಭವಾಗಲಿದೆ. ಅಂದು ಬೆಳಿಗ್ಗೆ, ಎಲ್ಲಾ ದೇಶತಕ್ಕರು, ಕೊಡವ ಸಮಾಜ, ಭಾಷಿಕ ಸಮುದಾಯಗಳ ಸಮಾಜದ ಮುಖ್ಯಸ್ಥರ ಸಮ್ಮುಖದಲ್ಲಿ ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಗುವುದು. ಕುಟ್ಟ, ಹುದಿಕೇರಿ, ಪೊನ್ನಂಪೇಟೆ, ಗೋಣಿಕೊಪ್ಪ, ವಿರಾಜಪೇಟೆ, ಮೂರ್ನಾಡು ಮೂಲಕ ನಡೆಯುವ ಈ ಬೃಹತ್ ಪಾದಯಾತ್ರೆ ಅಂತಿಮವಾಗಿ ಫೆ.7ರಂದು ಮೇಕೇರಿಯಿಂದ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತ ತಲುಪಲಿದೆ.
ಉಳಿದಂತೆ ಕ್ರಮವಾಗಿ ಗಾಳಿಬೀಡು ಮಾರ್ಗವಾಗಿ ಒಂದು, ತಾಳತ್ತಮನೆ ಮಾರ್ಗವಾಗಿ ಎರಡು ತಂಡಗಳು ತಿಮ್ಮಯ್ಯ ವೃತ್ತ ತಲುಪಲಿದೆ. ಕುಶಾಲನಗರ ಸುಂಟಿಕೊಪ್ಪ, ಸಂಪಿಗೆಕಟ್ಟೆ ಮಾರ್ಗವಾಗಿ ಒಂದು ತಂಡ, ಮಕ್ಕಂದೂರು ಸಂಪಿಗೆಕಟ್ಟೆ ಮಾರ್ಗವಾಗಿ ಒಂದು ತಂಡ, ಸಿದ್ದಾಪುರ ಚೆಟ್ಟಳ್ಳಿ ಮಾರ್ಗವಾಗಿ ಮತ್ತೊಂದು ತಂಡ ಬಂದು ಫೀ.ಮಾ.ಕಾರ್ಯಪ್ಪ ವೃತ್ತವನ್ನು ತಲುಪಲಿದೆ. ಫೀ.ಮಾ.ಕಾರ್ಯಪ್ಪ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಜನರಲ್ ತಿಮ್ಮಯ್ಯ ವೃತ್ತದ ಬಳಿ ಯಾತ್ರೆ ಸೇರಿಲಿದೆ. ಜನರಲ್ ತಿಮ್ಮಯ್ಯ ವೃತ್ತದಲ್ಲಿ ಸಮಾಗಮವಾಗುವ ಎಲ್ಲಾ ತಂಡಗಳು ಒಟ್ಟಾಗಿ ಸೇರಿ ಮಡಿಕೇರಿಯ ಮಂಗೇರಿರ ಮುತ್ತಣ್ಣ ವೃತ್ತ, ಅಜ್ಜಮಾಡ ದೇವಯ್ಯ ವೃತ್ತ ಕೊಹಿನೂರ್ ರಸ್ತೆ, ಎಸ್.ಬಿ.ಐ. ಚೌಕಿ, ಜೂನಿಯರ್ ಕಾಲೇಜು ರಸ್ತೆ ಮೂಲಕ ಸಾಗಿ, ಮಡಿಕೇರಿ ಜ.ತಿಮ್ಮಯ್ಯ ಕ್ರೀಡಾಂಗಣದ ಬಳಿ ಇರುವ ಕೊಡವ ಸಮಾಜ ಮಂದ್’ನಲ್ಲಿ ಸಮಾವೇಶಗೊಳ್ಳಲಿದೆ. ಸಾಗುವ ಮಾರ್ಗದಲ್ಲಿ ನಮ್ಮ ಎಲ್ಲಾ ಮಹಾನ್ ನಾಯಕರುಗಳ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಲಾಗುತ್ತದೆ. ಮಂದ್‌ನಲ್ಲಿ ನಿಂತು ಸರಕಾರದ ಪ್ರತಿನಿಧಿಗೆ ನಮ್ಮ ಬೇಡಿಕೆಯ ಮನವಿ ಪತ್ರವನ್ನು ಸಲ್ಲಿಸುತ್ತೇವೆ. ಸಂವಿಧಾನ ಬದ್ಧವಾಗಿರುವ ನಮ್ಮ ಹಕ್ಕನ್ನು ಪ್ರತಿಪಾದಿಸುವ ಮೂಲಕ ಬೇಡಿಗಳ ಈಡೇರಿಕೆಗೆ ಒತ್ತಾಯಿಸಲಾಗುತ್ತದೆ ಎಂದರು. ಪಾದಯಾತ್ರೆಗೆ ಈಗಾಗಲೇ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಅನುಮತಿ ನೀಡಿದ್ದು, ನಮ್ಮ ಯಾತ್ರೆಯು ಸಂಪೂರ್ಣ ಶಾಂತಿಯುತವಾಗಿ ಹಾಗೂ ಸಂವಿಧಾನಬದ್ಧವಾಗಿ ನಡೆಯಲಿದೆ.
ಪಾದಯಾತ್ರೆಯನ್ನು ಅತ್ಯಂತ ಶಿಸ್ತುಬದ್ಧವಾಗಿ, ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಯಾವುದೇ ಘೋಷಣೆಗಳಿಲ್ಲದೆ ಭಾಷಣಗಳನ್ನು ಮಾಡದೆ, ಸಮುದಾಯಗಳ ಭಾವನೆಗಳಿಗೆ ಆಗಿರುವ ವೇದನೆಗಳಿಗೆ ಒತ್ತುಕೊಟ್ಟು ಶಾಂತಿಯುತವಾಗಿ ನಡೆಸಲು ತೀರ್ಮಾನ ಮಾಡಲಾಗಿದೆ. ಮಾರ್ಗದುದ್ದಕ್ಕೂ ಶುಚಿತ್ವಕ್ಕೆ ಒತ್ತು ನೀಡಿದ್ದು, ಆಹಾರ, ನೀರು, ಪಾನೀಯಗಳ ವ್ಯವಸ್ಥೆಗಳಿಗಾಗಿ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಕೊಡವ ಮತ್ತು ಭಾಷಿಕ ಸಮುದಾಯಗಳ ಸಂಸ್ಕöÈತಿ, ಭದ್ರತೆ, ಸಂವಿಧಾನಬದ್ದ ಹಕ್ಕಿಗಾಗಿ ಎಲ್ಲೆಲ್ಲೂ ವ್ಯಾಪಕ ಅಗ್ರಹ ಕೇಳಿ ಬರುತ್ತಿದೆ. ಸುಮಾರು 12 ರಿಂದ 15 ಸಾವಿರ ಜನರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಇದಕ್ಕೆ ಪೂರಕ ಎಂಬಂತೆ ಪ್ರತೀ ನಾಡ್, ಊರ್, ಒಕ್ಕಗಳಲ್ಲಿ ಸ್ವಯಂಪ್ರೇರಿತ ತಯಾರಿಯಲ್ಲಿ ಜನರೇ ತೊಡಗಿದ್ದು, ನಮ್ಮ ಹಕ್ಕಿಗಾಗಿ ಹೋರಾಡಲು ಸದಾ ಸಿದ್ಧ ಎಂಬ ಸಂದೇಶವನ್ನು ಸಾರುತ್ತಿರುವುರದು ವಿಶೇಷವೆನಿಸಿದೆ ಎಂದು ಪರದಂಡ ಸುಬ್ರಮಣಿ ಕಾವೇರಪ್ಪ ವಿವರಿಸಿದರು. ಈ ಹೋರಾಟಕ್ಕೆ ಎಲ್ಲಾ ಜನಪ್ರತಿನಿಧಿಗಳನ್ನು ಆಹ್ವಾನಿಸುತ್ತಿದ್ದು, ಸರ್ವರೂ ನಮ್ಮ ನ್ಯಾಯಸಮ್ಮತ ಹಕ್ಕು ಮತ್ತು ಬೇಡಿಕೆಗಾಗಿ ನಮ್ಮೊಂದಿಗೆ ಕೈಜೋಡಿಸಬೇಕೆಂದು ಮನವಿ ಮಾಡಿದರು. ::: ಕಟ್ಟೆಮಾಡು ಪ್ರೇರಣೆ ಅಲ್ಲ ::: ಕೊಡವರ ಪಾದಯಾತ್ರೆಗೆ ಕಟ್ಟೆಮಾಡು ದೇವಾಲಯ ಪ್ರಕರಣ ಪ್ರೇರಣೆಯಲ್ಲ, ಮನವಿ ಪತ್ರದಲ್ಲಿ ಕಟ್ಟೆಮಾಡಿಗೆ ಸಂಬಂಧಿಸಿದ ಯಾವುದೇ ಬೇಡಿಕೆ ಇರುವುದಿಲ್ಲ. ಸರಕಾರಗಳು ಕೊಡವರ ಹಕ್ಕುಗಳು ಮತ್ತು ಬೇಡಿಕೆಗಳಿಗೆ ಇಲ್ಲಿಯವರೆಗೆ ಮನ್ನಣೆ ನೀಡದೆ ಇರುವುದರಿಂದ ಆಡಳಿತ ವ್ಯವಸ್ಥೆಯ ಗಮನ ಸೆಳೆಯುವುದಕ್ಕಾಗಿ ಪಾದಯಾತ್ರೆ ನಡೆಸುತ್ತಿರುವುದಾಗಿ ಪರದಂಡ ಸುಬ್ರಮಣಿ ಕಾವೇರಪ್ಪ ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಅಖಿಲ ಕೊಡವ ಸಮಾಜದ ಕಾರ್ಯದರ್ಶಿ ಕೀತಿಯಂಡ ವಿಜಯ ಕುಮಾರ್ ಉಪಸ್ಥಿತರಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ಗಾಂಧಿ ವಿಚಾರಧಾರೆಗಳು, ಮೌಲ್ಯಗಳು ಜಗತ್ತಿನಲ್ಲಿ ಇಂದಿಗೂ ಪ್ರಸ್ತುತ : ಮುಖ್ಯಮಂತ್ರಿ ಸಿದ್ದರಾಮಯ್ಯ*
Next Article *ಕೊಡಗು ಕಾಂಗ್ರೆಸ್ ಕಚೇರಿಯಲ್ಲಿ ಹುತಾತ್ಮರ ದಿನಾಚರಣೆ : ದೇಶದ ಸ್ವಾತಂತ್ರ್ಯಕ್ಕಾಗಿ ಮಹಾತ್ಮ ಗಾಂಧಿ ನೀಡಿದ ಕೊಡುಗೆ ಅಪಾರ : ಧರ್ಮಜ ಉತ್ತಪ್ಪ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.