Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*
  • *ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*
  • *ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*
  • *ನಾಪಂಡ ಮುತ್ತಪ್ಪಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಒತ್ತಾಯ*
  • *ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತ*
  • *ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*
  • *ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*
  • *ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*
  • *ವಿರಾಜಪೇಟೆ : ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಕೊಡುಗೆ*
  • *ವಿರಾಜಪೇಟೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ : ವೀರಯೋಧರಿಗೆ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಫೆ.13 ರವರೆಗೆ “ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ”*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಫೆ.13 ರವರೆಗೆ “ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ”*

ಜನವರಿ 30, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.30 NEWS DESK : ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಿ.ಧನರಾಜು ಸ್ಪರ್ಶ್ ಕುಷ್ಠರೋಗ ಜಾಗೃತಿ ಆಂದೋಲನಾ ಕಾರ್ಯಕ್ರಮ-2025 ರ ಅನುಷ್ಠಾನದ ಬಗ್ಗೆ ಮಂಗಳವಾರ ಭಿತ್ತಿ ಪತ್ರಗಳು, ಕರಪತ್ರಗಳು ಹಾಗೂ ಬ್ಯಾನರ್‍ಗಳನ್ನು ಬಿಡುಗಡೆಗೊಳಿಸಿದರು. ಕರಪತ್ರಗಳನ್ನು ಬಿಡುಗಡೆ ಮಾಡಿದ ನಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಎಂ.ಕೆ.ಸತೀಶ್ ಕುಮಾರ್ ಮಾತನಾಡಿ ಕುಷ್ಠರೋಗದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಸಲುವಾಗಿ ಕಾರ್ಯಕ್ರಮ ನಡೆಸಲಾಯಿತು. ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಕುಷ್ಠರೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದು ಅಗತ್ಯ ಎಂದು ತಿಳಿಸಿದರು.   ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮಾಧಿಕಾರಿ ಡಾ.ಎನ್.ಆನಂದ್ ಮಾತನಾಡಿ ಜ.30 ರಿಂದ ಫೆ.13 ರವರೆಗೆ ಜಿಲ್ಲಾದ್ಯಂತ “ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ” ಕಾರ್ಯಕ್ರಮ ನಡೆಯಲಿದೆ. ಪ್ರತಿ ಗ್ರಾಮಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಈ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಹಾಗೂ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ಕುಷ್ಠರೋಗದ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.  ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಸಲುವಾಗಿ ರೇಡಿಯೋ ಪ್ರಸಾರವನ್ನು ಕೂಡ ಮಾಡಲಾಗುವುದು. ಕೊಡಗು ಜಿಲ್ಲೆಯಲ್ಲಿ 1 ಪಿ.ಬಿ ಮತ್ತು 3 ಎಂ.ಬಿ ಒಟ್ಟು 4 ಪ್ರಕರಣಗಳಿದ್ದು, ಇವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಸೆಲ್ಫ್‍ಕೇರ್ ಕಿಟ್ ಹಾಗೂ ಎಂಸಿಆರ್ ಫೂಟ್‍ವೇರ್‍ಗಳನ್ನು ಸಹ ನೀಡಿದ್ದೇವೆ ಎಂದು ಹೇಳಿದರು.   ವ್ಯಾಪಕ ಪ್ರಚಾರ ಕೈಗೊಳ್ಳಲು ಆರೋಗ್ಯ ಇಲಾಖೆಯ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು ಸಮುದಾಯ ಆರೋಗ್ಯಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.  ವಿವಿಧ ಇಲಾಖೆಯ ವ್ಯಾಪ್ತಿಯಲ್ಲಿ  ಸಭೆಗಳನ್ನು ನಡೆಸಿ ಕುಷ್ಠರೋಗದ ಬಗ್ಗೆ  ಅರಿವು ಮೂಡಿಸುವ ಕಾರ್ಯ ನಡೆಸಲಾಗುತ್ತಿದೆ. ಸಭೆಯಲ್ಲಿ ಡಾ.ಸತೀಶ್‍ಕುಮಾರ್ ಎಂ.ಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಡಾ.ಆನಂದ್.ಎನ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮಾಧಿಕಾರಿ, ಡಾ.ಮಧುಸೂಧನ್ ಎ.ಆರ್, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿಗಳು, ಶಾಂತಿ ಎಚ್.ಕೆ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು, ಉಪನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಯುವಜನ ಮತ್ತು ಸಬಲೀಕರಣ ಇಲಾಖೆ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಹಾಜರಾಗಿದ್ದರು.  ಕುಷ್ಠರೋಗವು ಸಾಂಕ್ರಾಮಿಕ ರೋಗವಾಗಿದ್ದು, ಸಾರ್ವಜನಿಕರು ಇದಕ್ಕೆ ಭಯ ಪಡುವ ಅಗತ್ಯವಿಲ್ಲ, ಈ ಜಾಗೃತಿ ಅಭಿಯಾನದ ಸಂದರ್ಭದಲ್ಲಿ ಶಾಲಾ ಮಕ್ಕಳ ತಪಾಸಣೆ, ಉಪ ಆರೋಗ್ಯ ಕೇಂದ್ರ ಮೂಲಕ ಗ್ರಾಮದಲ್ಲಿ ಜಾಗೃತಿ ಮೂಡಿಸುವುದಲ್ಲದೇ, ಕುಷ್ಠರೋಗ ನಿರ್ಮೂಲನೆಯ ಕುರಿತು ಎಲ್ಲರಿಗೂ ಪ್ರತಿಜ್ಞಾ ವಿಧಿ ಭೋದಿಸಲಾಗುವುದು ಎಂದರು.  ಪಾದಗಳ ದೌರ್ಬಲ್ಯ, ಬೆರಳುಗಳ ದೌರ್ಬಲ್ಯ, ಕಣ್ಣು ಮುಚ್ಚುವಲ್ಲಿ ತೊಂದರೆ, ವ್ಯಕ್ತಿಯ ದೇಹದ ಮೇಲೆ ಸ್ಪರ್ಶ ಜ್ಞಾನವಿಲ್ಲದ ಮಚ್ಚೆಗಳು, ತ್ವಚೆಯ ಮೇಲೆ ಕೆಂಪಾದ ಬಾವು, ನೋವಿನಿಂದ ಕೂಡಿದ ಹಗ್ಗದ ಹಾಗೆ ಊದಿಕೊಂಡ ನರಗಳು, ವ್ಯಕ್ತಿಯ ದೇಹದ ಯಾವುದೇ ಭಾಗಗಳಲ್ಲಿ ತಿಳಿ ಬಿಳಿ ತಾಮ್ರದ ವರ್ಣದ ಸ್ಪರ್ಶ ಜ್ಞಾನವಿಲ್ಲದ ಮಚ್ಚೆಗಳು ಕಂಡುಬಂದಲ್ಲಿ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ತೆರಳಿ ಪರೀಕ್ಷಿಸಿಕೊಳ್ಳಬೇಕು ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮಾಧಿಕಾರಿ ಡಾ.ಎನ್.ಆನಂದ್ ಸೂಚಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*

ಜುಲೈ 29, 2026

*ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*

ಜುಲೈ 29, 2026

*ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*

ಜುಲೈ 29, 2026

*ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*

ಜುಲೈ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜು.29 : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ಎರಡು ತಿಂಗಳಿನಿ0ದ ಕ್ಷೀಣಿಸಿದ್ದ ಮಳೆ ಚೇತರಿಕೆ ಕಂಡಿದೆ.…

*ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*

ಜುಲೈ 29, 2026

*ನಾಪಂಡ ಮುತ್ತಪ್ಪಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಒತ್ತಾಯ*

ಜುಲೈ 29, 2026

*ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತ*

ಜುಲೈ 29, 2026

*ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*

ಜುಲೈ 29, 2026

*ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*

ಜುಲೈ 28, 2026

*ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*

ಜುಲೈ 28, 2026

*ವಿರಾಜಪೇಟೆ : ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಕೊಡುಗೆ*

ಜುಲೈ 27, 2026

*ವಿರಾಜಪೇಟೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ : ವೀರಯೋಧರಿಗೆ ನಮನ*

ಜುಲೈ 27, 2026

*ಕರಾಟೆ ಪಂದ್ಯಾವಳಿ : 22 ವಿದ್ಯಾರ್ಥಿಗಳಿಗೆ ಪದಕಗಳ ಗರಿ : ಚೈತನ್ಯ ಅತ್ಯುತ್ತಮ ಸಾಧನೆ*

ಜುಲೈ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.