Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • **ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**
  • *ರಾಜ್ಯಪಾಲರನ್ನು ಭೇಟಿಯಾದ ASP*
  • *ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ*
  • *ಪರಿಸರ ಸಂರಕ್ಷಣೆ ಮತ್ತು ಜನರ ಕಲ್ಯಾಣ ಎರಡೂ ಸಮಾನಾಂತರವಾಗಿ ಸಾಗುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ : ಕೇಂದ್ರ ಪರಿಸರ ಸಚಿವಾಲಯದೊಂದಿಗೆ ಸಂಸದ ಯದುವೀರ್ ಒಡೆಯರ್ ಮಾತುಕತೆ*
  • *ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*
  • *ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 
  • *ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*
  • *ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*
  • *ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*
  • *ವಿರಾಜಪೇಟೆಯಲ್ಲಿ ವಿಶ್ವಛಾಯಾಗ್ರಹಣ ದಿನಾಚರಣೆ : ಮನಸ್ಸು ಕೇಂದ್ರೀಕರಿಸಿ ಉತ್ತಮ ಛಾಯಾಚಿತ್ರ ತೆಗೆಯಿರಿ : ಡಾ.ಎಸ್.ವಿ.ನರಸಿಂಹನ್ ಕರೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಹುತಾತ್ಮ ದಿನಾಚರಣೆ : ಗಾಂಧೀಜಿ ತತ್ವ, ಆದರ್ಶ ಮೈಗೂಡಿಸಿಕೊಳ್ಳಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಹುತಾತ್ಮ ದಿನಾಚರಣೆ : ಗಾಂಧೀಜಿ ತತ್ವ, ಆದರ್ಶ ಮೈಗೂಡಿಸಿಕೊಳ್ಳಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಕರೆ*

ಜನವರಿ 30, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.30 NEWS DESK : ಜಿಲ್ಲಾಡಳಿತ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸರ್ವೋದಯ ಸಮಿತಿ ವತಿಯಿಂದ `ಹುತಾತ್ಮರ ದಿನಾಚರಣೆ’ಯು ನಗರದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿತು. ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆಯಲ್ಲಿರಿಸಲಾಗಿದ್ದ ಮಹಾತ್ಮ ಗಾಂಧೀಜಿಯವರ `ಚಿತಾಭಸ್ಮ’ವನ್ನು ಹೊರತೆಗೆದು ಪುಷ್ಪಮಾಲೆಗಳಿಂದ ಶೃಂಗರಿಸಿ ಗೌರವ ಸಮರ್ಪಿಸಲಾಯಿತು. ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ಸದಸ್ಯರ ನೇತೃತ್ವದಲ್ಲಿ ಪೊಲೀಸ್ ವಾದ್ಯದೊಂದಿಗೆ ನಗರದ ಮಂಗೇರಿರ ಮುತ್ತಣ್ಣ ಹಾಗೂ ಜನರಲ್ ಕೆ.ಎಸ್. ತಿಮ್ಮಯ್ಯ ವೃತ್ತದ ಮುಖ್ಯ ರಸ್ತೆ ಮೂಲಕ ಗಾಂಧೀಜಿಯವರ ಚಿತಾಭಸ್ಮವನ್ನು ಕೊಂಡೊಯ್ದು ಗಾಂಧಿ ಮಂಟಪ ಬಳಿ ಇರಿಸಿ ಪೊಲೀಸ್ ಗೌರವದೊಂದಿಗೆ ಗೌರವ ಸಲ್ಲಿಸಲಾಯಿತು. ಬಳಿಕ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಾಯಿತು. ಇದೇ ವೇಳೆ ಪೊಲೀಸ್ ಮೀಸಲು ಪಡೆಯ ಸಬ್ ಇನ್ಸ್‍ಪೆಕ್ಟರ್ ಹನುಮಂತ ಕೌಜಲಗಿ ಮತ್ತು ತಂಡದವರು ಮೂರು ಸುತ್ತುಗಳ ಕುಶಾಲತೋಪು ಹಾರಿಸುವ ಮೂಲಕ ರಾಷ್ಟ್ರಪಿತರಿಗೆ ಪೊಲೀಸ್ ಗೌರವಾರ್ಪಣೆ ಸಲ್ಲಿಸಲಾಯಿತು. ನಂತರ ಮೌನಾಚರಣೆ ನಡೆಯಿತು. ಪೊಲೀಸ್ ವಾದ್ಯವು ವೆಂಕಟೇಶ್ ಅವರ ನೇತೃತ್ವದಲ್ಲಿ ಪೊಲೀಸ್ ತಂಡದವರು ರಾಷ್ಟ್ರಗೀತೆ ಹಾಡಿ ಗಮನ ಸೆಳೆದರು. ಬಳಿಕ ಸರ್ವಧರ್ಮ ಪ್ರಾರ್ಥನೆ ನಡೆಯಿತು, ಗಾಂಧೀಜಿಯವರ ಮೆಚ್ಚಿನ ಭಜನಾ ಗಾಯನವನ್ನು ಸಂತ ಮೈಕಲರ ಶಾಲೆ, ಭಾರತ್ ಸೇವಾ ದಳ ಹಾಗೂ ಕ್ರೆಸೆಂಟ್ ಶಾಲೆಯ ಗೈಡ್ಸ್ ವಿದ್ಯಾರ್ಥಿಗಳು ನಡೆಸಿಕೊಟ್ಟರು. ಸರ್ವಧರ್ಮ ಗುರುಗಳಿಂದ ಭಗವದ್ಗೀತೆ(ಸಂತೋಷ್ ಭಟ್), ಬೈಬಲ್(ರೆವೆರಂಡ್ ಫಾದರ್ ದೀಪಕ್), ಕುರಾನ್(ಇಸಾಕ್ ಅಹ್ಮದ್) ಸಂದೇಶಗಳನ್ನು ಬೋಧಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಹಾತ್ಮ ಗಾಂಧೀಜಿ ಅವರು `ನನ್ನ ಜೀವನವೇ ನನ್ನ ಸಂದೇಶ’ವೆಂದು ಹೇಳಿದ್ದಾರೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರ ಜೀವನವು ಗಾಂಧೀಜಿಯವರಂತೆ ಸಂದೇಶವಾಗಬೇಕು ಎಂದರು. ಶಾಂತಿ, ಏಕತೆ, ಭ್ರಾತೃತ್ವ, ಸಮಾನತೆ, ಇವುಗಳು ಗಾಂಧೀಜಿಯವರ ತತ್ವ ಸಂದೇಶಗಳಾಗಿದ್ದು, ಮಹಾತ್ಮ ಗಾಂಧೀಜಿ ಅವರ ಆದರ್ಶಗಳನ್ನು ಜೀವನದಲ್ಲಿ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು ಎಂದರು. ಮಡಿಕೇರಿಯಲ್ಲಿ ಗಾಂಧಿ ಭವನ ನಿರ್ಮಾಣವಾಗಿದ್ದು, ವಿವಿಧ ಚಟುವಟಿಕೆಗಳು ನಡೆಯುತ್ತಿವೆ. ಹಾಗೆಯೇ ಗಾಂಧಿ ಸ್ಮಾರಕ ಉದ್ಯಾನದ ಮುಂದುವರಿದ ಕಾಮಗಾರಿ ಶೀಘ್ರ ಆರಂಭವಾಗಲಿದೆ. ಆ ನಿಟ್ಟಿನಲ್ಲಿ ಮಡಿಕೇರಿಯಲ್ಲಿ ಗಾಂಧೀಜಿಯವರ ಸಂದೇಶಗಳು ಎಲ್ಲೆಡೆ ಫಸರಿಸಲಿವೆ ಎಂದು ಜಿಲ್ಲಾಧಿಕಾರಿ ಹೇಳಿದರು. ಕೊಡಗು ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಹುತಾತ್ಮರ ದಿನಾಚರಣೆ ಪ್ರಯುಕ್ತ ಮಹಾತ್ಮ ಗಾಂಧೀಜಿಯವರ ಚಿತಾಭಸ್ಮವನ್ನು ಮೆರವಣಿಗೆ ಮೂಲಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಗಾಂಧೀ ಸ್ಮಾರಕ ಉದ್ಯಾನವನ ಕಾಮಗಾರಿ ಪೂರ್ಣಗೊಂಡ ನಂತರ ಚಿತಾಭಸ್ಮವನ್ನು ಇಡಲಾಗುತ್ತದೆ ಎಂದರು.
ಗಾಂಧೀಜಿಯವರ ಪ್ರಿಯವಾದ ಭಜನಾ ಹಾಡುಗಳನ್ನು ವಿವಿಧ ಸಭಾ ಕಾರ್ಯಕ್ರಮಗಳಲ್ಲಿ ಹಾಡುವಂತಾಗಬೇಕು. ಇದರಿಂದ ಗಾಂಧೀಜಿ, ತತ್ವಗಳು, ಆದರ್ಶಗಳನ್ನು ಪ್ರತಿಯೊಬ್ಬರಿಗೂ ತಿಳಿಸಿದಂತಾಗುತ್ತದೆ ಎಂದರು. ಪ್ರತಿಯೊಬ್ಬರ ಶಾಂತಿ ನೆಮ್ಮದಿಗೆ ಗಾಂಧೀಜಿಯವರ ಸಂದೇಶಗಳು ಸ್ಪೂರ್ತಿಯಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಮಾತನಾಡಿ ಮಹಾತ್ಮ ಗಾಂಧೀಜಿಯವರ ಶಾಂತಿ ಸಂದೇಶವು ಸಾರ್ವಕಾಲೀಕವಾಗಿವೆ. ಆ ನಿಟ್ಟಿನಲ್ಲಿ ಗಾಂಧೀಜಿಯವರ ಸಂದೇಶಗಳು ಪ್ರತಿಯೊಬ್ಬರಿಗೂ ತಲುಪಬೇಕು ಎಂದರು. ಪ್ರತಿಯೊಬ್ಬರೂ ಮತ್ತೊಬ್ಬರನ್ನು ಗೌರವಿಸಬೇಕು. ಯಾರೂ ಸಹ ಅಶಾಂತಿ ಉಂಟು ಮಾಡಬಾರದು. ಶಾಂತಿ, ಸೌರ್ಹಾಧತೆ ಕಾಪಾಡಿದಲ್ಲಿ ಗಾಂಧೀಜಿಯವರನ್ನು ಗೌರವಿಸಿದಂತೆ ಎಂದು ಅಭಿಪ್ರಾಯಪಟ್ಟರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ ಮಹಾತ್ಮ ಗಾಂಧೀಜಿಯವರು ಶತಮಾನದ ಮಹಾನ್ ವ್ಯಕ್ತಿ ಎಂದರೆ ತಪ್ಪಾಗಲಾರದು ಎಂದು ಬಣ್ಣಿಸಿದರು. ಗಾಂಧೀಜಿಯವರು ಸಮಾನತೆ, ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದಾರೆ. ಹಾಗೆಯೇ ಪರಿಸರ ಶುಚಿತ್ವಕ್ಕೆ ಒತ್ತು ನೀಡಿದ್ದರು. ಇವರು ವಿಶಾಲ ಮನೋಭಾವ ಹೊಂದಿ ಸಮಾಜದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ಸರ್ವೋದಯ ಸಮಿತಿಯ ನಿಕಟ ಪೂರ್ವ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಗಾಂಧಿ ಸ್ಮಾರಕ ಉದ್ಯಾನವನ ನಿರ್ಮಾಣವಾದ ನಂತರ ಚಿತಾಭಸ್ಮವನ್ನು ಇಟ್ಟು ಗೌರವಿಸಲಾಗುತ್ತದೆ ಎಂದು ಹೇಳಿದರು. ಸರ್ವೋದಯ ಸಮಿತಿ ಪ್ರಧಾನ ಕಾರ್ಯದರ್ಶಿ ಮುನಿರ್ ಅಹ್ಮದ್ ಮಾತನಾಡಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಪದ್ಮಶ್ರೀ ಪ್ರಶಸ್ತಿ ಪುರಸ್ಕøತರಾದ ರಾಣಿ ಮಾಚಯ್ಯ, ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ಸರ್ವೋದಯ ಸಮಿತಿ ಸದಸ್ಯರಾದ ತೆನ್ನಿರಾ ಮೈನಾ, ಚಂದ್ರಶೇಖರ್, ಪ್ರಕಾಶ್ ಆಚಾರ್ಯ, ಕಾನಹಿತ್ಲು ಮೊಣ್ಣಪ್ಪ, ತೋರೇರ ಮುದ್ದಯ್ಯ, ರೇವತಿ ರಮೇಶ್, ಪ್ರಭು ರೈ, ಕೆ.ಎಂ.ವೆಂಕಟೇಶ್, ಭಾರತ್ ಸೇವಾದಳದ ಕಾರ್ಯದರ್ಶಿ ಮೋಂತಿ ಗಣೇಶ್, ಅಂಬೆಕಲ್ಲು ನವೀನ್, ಎಸ್.ಪಿ.ವಾಸುದೇವ, ಎಂ.ಎನ್.ಸುಬ್ರಮಣಿ, ಜಿ.ಸಿ.ರಮೇಶ್, ಸದಾ ಮುದ್ದಪ್ಪ, ಜಗದೀಶ್, ಚುಮ್ಮಿ ದೇವಯ್ಯ, ಮೀನಾಜ್, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಪಶುಪಾಲನೆ ಇಲಾಖೆ ಉಪ ನಿರ್ದೆಶಕರಾದ ಲಿಂಗರಾಜ ದೊಡ್ಡಮನಿ, ಐಟಿಡಿಪಿ ಇಲಾಖೆ ಅಧಿಕಾರಿ ಎಸ್.ಹೊನ್ನೇಗೌಡ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳಾ, ತಹಶೀಲ್ದಾರ್ ಪ್ರವೀಣ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಿ.ಪಿ.ಕವಿತಾ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಗಾಯತ್ರಿ, ಕೃಷ್ಣಪ್ಪ, ಸ್ಕೌಟ್ಸ್ ಮತ್ತು ಗೈಡ್ಸ್ ದಮಯಂತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ಮಣಜೂರು ಮಂಜುನಾಥ್ ಮತ್ತಿತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಆಗಷ್ಟ್ 20, 2026

*ರಾಜ್ಯಪಾಲರನ್ನು ಭೇಟಿಯಾದ ASP*

ಆಗಷ್ಟ್ 20, 2026

*ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ*

ಆಗಷ್ಟ್ 20, 2026

*ರಾಜ್ಯಪಾಲರನ್ನು ಭೇಟಿಯಾದ ASP*

ಆಗಷ್ಟ್ 20, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು NEWS DESK ಆ.20 : ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್  ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು…

*ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ*

ಆಗಷ್ಟ್ 20, 2026

*ಪರಿಸರ ಸಂರಕ್ಷಣೆ ಮತ್ತು ಜನರ ಕಲ್ಯಾಣ ಎರಡೂ ಸಮಾನಾಂತರವಾಗಿ ಸಾಗುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ : ಕೇಂದ್ರ ಪರಿಸರ ಸಚಿವಾಲಯದೊಂದಿಗೆ ಸಂಸದ ಯದುವೀರ್ ಒಡೆಯರ್ ಮಾತುಕತೆ*

ಆಗಷ್ಟ್ 20, 2026

*ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 

ಆಗಷ್ಟ್ 19, 2026

*ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*

ಆಗಷ್ಟ್ 19, 2026

*ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*

ಆಗಷ್ಟ್ 19, 2026

*ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*

ಆಗಷ್ಟ್ 19, 2026

*ವಿರಾಜಪೇಟೆಯಲ್ಲಿ ವಿಶ್ವಛಾಯಾಗ್ರಹಣ ದಿನಾಚರಣೆ : ಮನಸ್ಸು ಕೇಂದ್ರೀಕರಿಸಿ ಉತ್ತಮ ಛಾಯಾಚಿತ್ರ ತೆಗೆಯಿರಿ : ಡಾ.ಎಸ್.ವಿ.ನರಸಿಂಹನ್ ಕರೆ*

ಆಗಷ್ಟ್ 19, 2026

*ಆ.21 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮ*

ಆಗಷ್ಟ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.