Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • **ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**
  • *ರಾಜ್ಯಪಾಲರನ್ನು ಭೇಟಿಯಾದ ASP*
  • *ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ*
  • *ಪರಿಸರ ಸಂರಕ್ಷಣೆ ಮತ್ತು ಜನರ ಕಲ್ಯಾಣ ಎರಡೂ ಸಮಾನಾಂತರವಾಗಿ ಸಾಗುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ : ಕೇಂದ್ರ ಪರಿಸರ ಸಚಿವಾಲಯದೊಂದಿಗೆ ಸಂಸದ ಯದುವೀರ್ ಒಡೆಯರ್ ಮಾತುಕತೆ*
  • *ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*
  • *ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 
  • *ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*
  • *ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*
  • *ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*
  • *ವಿರಾಜಪೇಟೆಯಲ್ಲಿ ವಿಶ್ವಛಾಯಾಗ್ರಹಣ ದಿನಾಚರಣೆ : ಮನಸ್ಸು ಕೇಂದ್ರೀಕರಿಸಿ ಉತ್ತಮ ಛಾಯಾಚಿತ್ರ ತೆಗೆಯಿರಿ : ಡಾ.ಎಸ್.ವಿ.ನರಸಿಂಹನ್ ಕರೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುಖ್ಯಮಂತ್ರಿಗಳಿಗೆ ಕೊಡಗು ಎಸ್‌ಡಿಪಿಐಯಿಂದ ಪಂಚ ಪ್ರಶ್ನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುಖ್ಯಮಂತ್ರಿಗಳಿಗೆ ಕೊಡಗು ಎಸ್‌ಡಿಪಿಐಯಿಂದ ಪಂಚ ಪ್ರಶ್ನೆ*

ಜನವರಿ 30, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜ.30 : ಕೊಡಗು ಜಿಲ್ಲೆಗೆ ಭೇಟಿ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಕೊಡಗು ಜಿಲ್ಲಾ ಘಟಕ ಪಂಚ ಪ್ರಶ್ನೆಗಳನ್ನಿಟ್ಟಿದೆ. ಈ ಕುರಿತು ಪ್ರತಿಕಾ ಪ್ರಕಟಣೆ ನೀಡಿರುವ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ 2015 ರಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಹೆಚ್.ಕಾಂತರಾಜ್ ಅವರು ವೈಜ್ಞಾನಿಕವಾಗಿ ತಯಾರಿಸಿದ ಹಿಂದುಳಿದ ವರ್ಗಗಳ ಜಾತಿ ಜನಗಣತಿ ವರದಿಯನ್ನು ಯಾಕೆ ಸಚಿವ ಸಂಪುಟ ಅಂಗೀಕರಿಸಿ, ವಿಧಾನಸಭೆ ಹಾಗೂ ಪರಿಷತ್ತಿನಲ್ಲಿ ಚರ್ಚೆಗೆ ಮಂಡಿಸಿಲ್ಲ? ರಾಹುಲ್ ಗಾಂಧಿಯವರು ಕೇಂದ್ರ ಮಟ್ಟದಲ್ಲಿ ಜಾತಿ ಜನಗಣತಿಗೆ ಒತ್ತು ನೀಡುತ್ತಿರುವಾಗ ರಾಜ್ಯದಲ್ಲಿ ಕಾಂತರಾಜ್ ಆಯೋಗದ ಶಿಫಾರಸ್ಸು ಅನುಷ್ಠಾನಗೊಳಿಸಲು ಹಿಂದೇಟು ಹಾಕುತ್ತಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ. 2023 ರ ಚುನಾವಣೆ ಪ್ರಣಾಳಿಕೆಯ ಭರವಸೆಯಂತೆ ಹಿಂದಿನ ಬಿಜೆಪಿ ಸರಕಾರ ಮುಸಲ್ಮಾನರಿಂದ ಕಿತ್ತುಕೊಂಡ ಮೀಸಲಾತಿಯನ್ನು ಮರು ಸ್ಥಾಪಿಸುವ ಬದ್ಧತೆ ಏನಾಯಿತು? ಗೆದ್ದು ಅಧಿಕಾರಕ್ಕೆ ಬಂದ ಮೊದಲನೆಯ ಮಂತ್ರಿಮಂಡಲದಲ್ಲಿ ಅನುಷ್ಠಾನಗೊಳಿಸುವ ವಾಗ್ಧಾನ ಜಾರಿಗೆ ಬರುತ್ತಿಲ್ಲ ಏಕೆ ? ಸರಕಾರಿ ಭೂಮಿಯನ್ನು ಅಕ್ರಮವಾಗಿ ಹಿಡಿದಿಟ್ಟುಕೊಂಡಿರುವ ಭೂಹಿಡುವಳಿದಾರರಿಗೆ  ರೂ.1000 ದಂತೆ 25 ಎಕರೆವರೆಗೂ 30 ವರ್ಷಕ್ಕೆ ಗುತ್ತಿಗೆ ನೀಡಲು 18.05.2023 ರಂದು ಹೊರಡಿಸಿರುವ ಕರ್ನಾಟಕ ರಾಜ್ಯ ಪತ್ರವನ್ನು ರದ್ದುಗೊಳಿಸಿ  ಶತಮಾನಗಳಿಂದ ಪಾರಂಪರಿಕ  ನಿವೇಶನ ಹಾಗೂ ಭೂ ರಹಿತ ಬಡ ಕುಟುಂಬಗಳ ಸಮೀಕ್ಷೆ ನಡೆಸಿ ಹಕ್ಕುಪತ್ರ, ಪಹಣಿ ಹಾಗೂ ಆರ್ ಟಿ ಸಿ ನೀಡಲು ಮುಂದಾಗುವಿರ  ಅಥವಾ ಭೂಹಿಡುವಳಿದಾರ ಬಲಾಢ್ಯ ಸಮಾಜದ ಪರವಾಗಿ ನಿಲ್ಲುವಿರಾ?  ಸಂಸತ್ತಿನ ಜಂಟಿ ಸಮಿತಿಯು ವಕ್ಫ್ (ತಿದ್ದುಪಡಿ) ಮಸೂದೆಗೆ ಬಹುತೇಕ ಬಿಜೆಪಿ ಸಂಸದರು ಸೂಚಿಸಿರುವ ಬದಲಾವಣೆಗಳನ್ನು ಎತ್ತಿ ಹಿಡಿದಿದ್ದು, ವಿರೋಧ ಪಕ್ಷದ ಸದಸ್ಯರ ಸಲಹೆಗಳಿಗೆ ಮನ್ನಣೆ ನೀಡದೆ ಮತದಾನದ ನಂತರ ಸದನಕ್ಕೆ ವರದಿ ಸಲ್ಲಿಸಲು ಮುಂದಾಗಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕರ್ನಾಟಕ ಸರ್ಕಾರ ಯಾವ ನಿಲುವನ್ನು ತೆಗೆದುಕೊಳ್ಳಲಿದೆ ? ಕೊಡಗು ಜಿಲ್ಲಾಧಿಕಾರಿಯವರ ಕಚೇರಿಯ ಮುಂಭಾಗದ ತಡೆಗೋಡೆ ಬೀಳುವ ಹಂತದಲ್ಲಿದ್ದಾಗ ಶಾಡೋ ಮುಖ್ಯಮಂತ್ರಿಗಳಾಗಿ ವೀಕ್ಷಣೆಗೆ ಬಂದು ತ್ವರಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸುವ ಆದೇಶ ನೀಡಿ, ಇದೀಗ ಮುಖ್ಯಮಂತ್ರಿಗಳಾಗಿ ಒಂದೂವರೆ ವರ್ಷವಾದರೂ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಈ ಕಾಮಗಾರಿ ಪೂರ್ಣಗೊಳ್ಳಬೇಕಾದರೆ ಇನ್ನೆಷ್ಟು ಬಾರಿ ಅಧಿಕಾರಿಗಳಿಗೆ ತಾವು ಆದೇಶ ನೀಡಬೇಕಾಗಿದೆ ?  ಮುಖ್ಯಮಂತ್ರಿ ಸಿದ್ದರಾಮಯ್ಯ 1.0 ಎಂದರೆ ಧೈರ್ಯ, ಸಮರ್ಥ, ಮಾತಿಗೆ ಬದ್ಧ, ನುಡಿದಂತೆ ನಡೆಯುವ ವ್ಯಕ್ತಿತ್ವ, ಸಿದ್ದರಾಮಯ್ಯ 2.0 ಬದಲಾಗಿದ್ದಾರಾ ಎಂದು ಅಮೀನ್ ಮೊಹಿಸಿನ್ ಪ್ರಶ್ನಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಆಗಷ್ಟ್ 20, 2026

*ರಾಜ್ಯಪಾಲರನ್ನು ಭೇಟಿಯಾದ ASP*

ಆಗಷ್ಟ್ 20, 2026

*ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ*

ಆಗಷ್ಟ್ 20, 2026

*ರಾಜ್ಯಪಾಲರನ್ನು ಭೇಟಿಯಾದ ASP*

ಆಗಷ್ಟ್ 20, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು NEWS DESK ಆ.20 : ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್  ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು…

*ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ*

ಆಗಷ್ಟ್ 20, 2026

*ಪರಿಸರ ಸಂರಕ್ಷಣೆ ಮತ್ತು ಜನರ ಕಲ್ಯಾಣ ಎರಡೂ ಸಮಾನಾಂತರವಾಗಿ ಸಾಗುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ : ಕೇಂದ್ರ ಪರಿಸರ ಸಚಿವಾಲಯದೊಂದಿಗೆ ಸಂಸದ ಯದುವೀರ್ ಒಡೆಯರ್ ಮಾತುಕತೆ*

ಆಗಷ್ಟ್ 20, 2026

*ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 

ಆಗಷ್ಟ್ 19, 2026

*ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*

ಆಗಷ್ಟ್ 19, 2026

*ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*

ಆಗಷ್ಟ್ 19, 2026

*ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*

ಆಗಷ್ಟ್ 19, 2026

*ವಿರಾಜಪೇಟೆಯಲ್ಲಿ ವಿಶ್ವಛಾಯಾಗ್ರಹಣ ದಿನಾಚರಣೆ : ಮನಸ್ಸು ಕೇಂದ್ರೀಕರಿಸಿ ಉತ್ತಮ ಛಾಯಾಚಿತ್ರ ತೆಗೆಯಿರಿ : ಡಾ.ಎಸ್.ವಿ.ನರಸಿಂಹನ್ ಕರೆ*

ಆಗಷ್ಟ್ 19, 2026

*ಆ.21 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮ*

ಆಗಷ್ಟ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.