Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಆತ್ಮಹತ್ಯೆ ಬೇಡ : ಸರ್ಕಾರ ನಿಮ್ಮ ಜೊತೆಗಿದೆ : ಕಂಪ್ಲೇಂಟ್ ಕೊಡಿ : ಸಿಎಂ‌ ಸಿದ್ದರಾಮಯ್ಯ ಕರೆ*
ಇತ್ತೀಚಿನ ಸುದ್ದಿಗಳು

*ಆತ್ಮಹತ್ಯೆ ಬೇಡ : ಸರ್ಕಾರ ನಿಮ್ಮ ಜೊತೆಗಿದೆ : ಕಂಪ್ಲೇಂಟ್ ಕೊಡಿ : ಸಿಎಂ‌ ಸಿದ್ದರಾಮಯ್ಯ ಕರೆ*

January 31, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮೈಸೂರು ಜ.31  NEWS DESK :  ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಇದನ್ನು ಇಡೀ ಸಮಾಜ ಅರಿತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಮೈಸೂರು ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗದ್ದುಗೆ ದರ್ಶನ ಪಡೆದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಜಾತ್ಯತೀತ ಸಮಾಜ ನಿರ್ಮಾಣ ಸಂವಿಧಾನದ ಮೂಲ ಉದ್ದೇಶ. ಶರಣಶ್ರೇಷ್ಠರಾದ ಬಸವಾದಿ ಶರಣರ ಆಶಯವೂ ಆಗಿದೆ. ಇದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಂಡು ಬಸವಣ್ಣನವರ ಆಶಯದಂತೆ ಜಾತಿ, ಧರ್ಮದ ಹೆಸರಿನ ಮನುಷ್ಯ ತಾರತಮ್ಯ ಹಾಗೂ ಮೌಡ್ಯಗಳನ್ನು ತೊರೆಯಬೇಕು ಎಂದು ಕರೆ ನೀಡಿದರು. ನಮಗೆ ಸಿಕ್ಕಿರುವ ರಾಜಕೀಯ ಸ್ವಾತಂತ್ರ್ಯ ಆರ್ಥಿಕವಾಗಿ, ಸಮಾಜಿಕವಾಗಿ ಇಲ್ಲ . ಇದು ಸಿಗದ ಹೊರತು ಸ್ವಾತಂತ್ರ್ಯದ ಆಶಯ ಪೂರ್ತಿ ಆಗುವುದಿಲ್ಲ ಎನ್ನುವ ಮಾತನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಜಾರಿ ಸಭೆಯಲ್ಲೇ ಹೇಳಿದ್ದರು. ಅವತ್ತಿನ‌ ಅವರು ಮಾತು ಇವತ್ತಿಗೂ ಸತ್ಯ ಎಂದರು. ಬಸವಣ್ಣನವರು 850 ವರ್ಷಗಳ ಹಿಂದೆ “ಇವ ನಾರವ ಎಂದು ಪ್ರಶ್ನಿಸದೆ, ಇವ ನಮ್ಮವ” ಎಂದು ಹೇಳಿ ಅಂದಿದ್ದರು. ಆದರೂ ಇವತ್ತಿಗೂ ನಾವು ಜಾತಿ ಕೇಳುವುದನ್ನು ನಿಲ್ಲಿಸಿಲ್ಲ, ಜಾತಿ-ಧರ್ಮದ ಅನಿಷ್ಠ ತಾರತಮ್ಯವನ್ನು ಇವತ್ತಿಗೂ ಕಾಣುತ್ತೇನೆ ಎಂದರು. ನಾನು ವೈಯುಕ್ತಿಕವಾಗಿ ಬಸವಣ್ಣನವರ ಅಪ್ಪಟ ಹಿಂಬಾಲಕ. ಅದಕ್ಕೇ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೋ ಕಡ್ಡಾಯಗೊಳಿಸಿದೆ ಎಂದರು. ವಿದ್ಯಾವಂತರೂ ಕರ್ಮ‌ಸಿದ್ಧಾಂತವನ್ನು ಆಚರಿಸುವ ದುರಂತವನ್ನು ನಾವು ಕಾಣುತ್ತೇವೆ. ಯಾವ ದೇವರೂ ಬಡವನಾಗಿರು, ಹಸಿದುಕೊಂಡಿರು, ಹರಿದ ಬಟ್ಟೆಯಲ್ಲಿರು ಎಂದು ಹಣೆಬರಹ ಬರೆಯುವುದಿಲ್ಲ. ಇಂಥಾ ಮೌಡ್ಯವನ್ನು ವಿದ್ಯಾವಂತರೂ ಆಚರಿಸುತ್ತಿದ್ದಾರೆ. ಹೀಗಾದಾಗ ಅವರ ವಿದ್ಯೆಗೆ ಗೌರವ ಬರುತ್ತದಾ ಎಂದು ಪ್ರಶ್ನಿಸಿದರು. ಜಾತಿ ಆಧಾರದಲ್ಲಿ ಮನುಷ್ಯನ ಯೋಗ್ಯತೆ ಅಳೆಯುವ ಪದ್ಧತಿಯನ್ನು ನಮ್ಮ ಸಂವಿಧಾನ ವಿರೋಧಿಸಿತು. ಪ್ರತಿಭೆ ಮತ್ತು ಸಾಮರ್ಥ್ಯ ಪ್ರತಿಯೊಬ್ಬರ ಸ್ವತ್ತು. ಅವಕಾಶಗಳು ಸಿಗಬೇಕಷ್ಟೆ. ಅವಕಾಶ ಸಿಕ್ಕಾಗ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತವೆ. ಇದಕ್ಕೆ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು ಎಂದರು. ಸುತ್ತೂರು ಮಠ ಶಿಕ್ಷಣ ಮತ್ತು ಅನ್ನ ದಾಸೋಹ ನಡೆಸುತ್ತಾ ಇಡೀ ಸಮಾಜದ ಆಸ್ತಿಯಾಗಿದೆ. ಜಾತ್ಯತೀತ ಮೌಲ್ಯಗಳು ಸುತ್ತೂರು ಮಠದ ಮೌಲ್ಯಗಳೂ ಆಗಿವೆ ಎಂದರು. ಕಾಯಕ ಮತ್ತು ದಾಸೋಹ ಎರಡೂ ಬಸವಾದಿ ಶರಣರ ಆಶಯವಾಗಿತ್ತು. ಕಾಯಕ ಅಂದ್ರೆ ಉತ್ಪತ್ತಿ, ದಾಸೋಹ ಅಂದರೆ ವಿತರಣೆ ಎಂದು ವಿಶ್ಲೇಷಿಸಿದರು. ನಾವು ಉಚಿತವಾಗಿ ಅಕ್ಕಿ ಕೊಟ್ಟಿದ್ದರಿಂದ ಬಡವರು, ಶ್ರಮಿಕರು ಸೋಮಾರಿಗಳಾಗುತ್ತಿದ್ದಾರೆ ಎನ್ನುವುದು ದುಡಿಯದ ಗ್ರ ಮೈಗಳ್ಳರು, ದುಡಿಯದೆ ಬೊಜ್ಜು ಬೆಳೆಸಿಕೊಂಡವರು ಮಾತ್ರ ಹೇಳಲು ಸಾಧ್ಯ ಎಂದರು. ಬರಿ ಬಾಯಿ ಮಾತಿನಲ್ಲಿ ಬಸವಣ್ಣ ಮತ್ತು ಅಂಬೇಡ್ಕರ್ ಅವರ ಆಶಯಗಳು ಜಾರಿ ಆಗುವುದಿಲ್ಲ. ಆಶಯಗಳಿಗೆ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಬೇಕು. ಈ ಉದ್ದೇಶದಿಂದಲೇ ನಾವು ಗ್ಯಾರಂಟಿಗಳನ್ನು ಜಾರಿಗೊಳಿಸಿದೆವು ಎಂದು ಕರೆ ನೀಡಿದರು. ನಾವು ಗ್ಯಾರಂಟಿಗಳನ್ನು ಜಾರಿಗೊಳಿಸಿದಾಗ ರಾಜ್ಯದ ಬೊಕ್ಕಸ ದಿವಾಳಿ ಆಗತ್ತೆ ಎಂದು ಬೊಬ್ಬೆ ಹೊಡೆಯುತ್ತಿದ್ದ ಬಿಜೆಪಿಯವರೇ ಈಗ ನಮ್ಮ ಗ್ಯಾರಂಟಿಗಳನ್ನು ಕಾಪಿ ಹೊಡೆದು ಅವರು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಘೋಷಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಆರ್ಥಿಕ, ಸಾಮಾಜಿಕ ಚಲನೆ ಸಿಕ್ಕಾಗ ಮಾತ್ರ ಜಾತಿ ವ್ಯವಸ್ಥೆ ಹೋಗಲು ಸಾಧ್ಯ. ನಮ್ಮ ಗ್ಯಾರಂಟಿಗಳು ಪ್ರತೀ ಬಡವ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಚಲನೆ ನೀಡಿವೆ. ಜನರ ಕೊಳ್ಳುವ ಶಕ್ತಿಯನ್ನು ನಾವು ಹೆಚ್ಚಿಸಿದ್ದರಿಂದಲೇ ರಾಜ್ಯದ ಆರ್ಥಿಕ ಪರಿಸ್ಥಿತಿ ಕೂಡ ಸದೃಢವಾಗಿದೆ ಎಂದರು. ಬಡವರ ಆರ್ಥಿಕ ಅಸಹಾಯಕತೆಯನ್ನು ಶೋಷಿಸುವ ಮೈಕ್ರೋ ಫೈನಾನ್ಸ್ ಗಳ ಅತಿರೇಕದ ವಸೂಲಿ ನಿಯಂತ್ರಿಸಲು ಸುಗ್ರೀವಾಜ್ಞೆ ಮೂಲಕ ಕಠಿಣ ಕಾನೂನು ತರುತ್ತಿದ್ದೇವೆ ಎಂದರು.

ಆತ್ಮಹತ್ಯೆ ಬೇಡ: ಸರ್ಕಾರ ನಿಮ್ಮ ಜೊತೆಗಿದೆ: ಕಂಪ್ಲೇಂಟ್ ಕೊಡಿ ::  ಮೈಕ್ರೋ ಫೈನಾನ್ಸ್ ಗಳ ವಸೂಲಿ ಕ್ರಮಕ್ಕೆ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಸರ್ಕಾರ ನಿಮ್ಮ ಜೊತೆಗಿದೆ. ತೊಂದರೆ ಕೊಟ್ಟರೆ ಕಂಪ್ಲೇಂಟ್ ಕೊಡಿ. ಕಾನೂನು ಕ್ರಮ ತಗೊತೀವಿ ಎಂದು ಸಿದ್ದರಾಮಯ್ಯ  ಕರೆ ನೀಡಿದರು.

Share. Facebook Twitter Pinterest LinkedIn Tumblr Email WhatsApp
Previous Article*ಸುತ್ತೂರು ಮಠದ ಮಹದೇಶ್ವರ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ*
Next Article *ಮಡಿಕೇರಿಯಲ್ಲಿ ಗೀತ ನಮನದ ಮೂಲಕ ಗಾಂಧೀಜಿ ಸ್ಮರಣೆ* 

Recommended: Website design development company services in Mangalore Forex Trading Teacher in India

Related Posts

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

ಬೆಂಗಳೂರು ಫೆ.12: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಈಗ ಮತ್ತೊಂದು ಆರ್ಥಿಕ ಹೊರೆ ಬೀಳುವ…

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.