Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಗೀತ ನಮನದ ಮೂಲಕ ಗಾಂಧೀಜಿ ಸ್ಮರಣೆ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಗೀತ ನಮನದ ಮೂಲಕ ಗಾಂಧೀಜಿ ಸ್ಮರಣೆ* 

ಜನವರಿ 31, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.31 NEWS DESK :  ಅಲ್ಲಿ ಭಾಷಣ ಇರಲಿಲ್ಲ. ವೇದಿಕೆಯೂ ಇರಲಿಲ್ಲ, ಅಲ್ಲಿ ಕೇಳಿ ಬಂದದ್ದು ಸುಮಧುರ ಭಜನೆ, ಕೀತ೯ನೆಗಳು ಮಾತ್ರ. ಎರಡೂವರೆ ಗಂಟೆ ಕಾಲ ಕಲಾಪ್ರೇಮಿಗಳ ಮನಸೂರೆಗೊಂಡ ಈ ಕಾಯ೯ಕ್ರಮದ ಮೂಲಕ ಮಡಿಕೇರಿ ತಾಲ್ಲೂಕು ಜಾನಪದ ಪರಿಷತ್ ವತಿಯಿಂದ ಗಾಂಧೀಜಿಯವರಿಗೆ ಗೀತನಮನ ಸಮಪಿ೯ಸಲಾಯಿತು. ಇಂಥದ್ದೊಂದು ವಿಶಿಷ್ಟ ಕಾಯ೯ಕ್ರಮಕ್ಕೆ ಮಡಿಕೇರಿಯ ಗಾಂಧಿ ಭವನ ಸಾಕ್ಷಿಯಾಯಿತು. ಗಾಂದೀಜಿಯವರಿಗೆ ಹಾಡುಗಳ ಮೂಲಕ ಗೌರವ ನಮನ ಸಲ್ಲಿಸುವ ನಿಟ್ಟಿನಲ್ಲಿ ಮಡಿಕೇರಿ ತಾಲ್ಲೂಕು ಜಾನಪದ ಪರಿಷತ್, ಸಂಸ್ಥೆಯು ಕೊಡಗು ಜಾನಪದ ಪರಿಷತ್, ಜಿಲ್ಲಾ ವಾತಾ೯ ಮತ್ತು ಸಾವ೯ಜನಿಕ ಸಂಪಕ೯ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 2 ನೇ ವಷ೯ದ ಗಾಂಧೀಜಿ ಗೀತ ನಮನ ಸತ್ಯಂ ಶಿವಂ ಸುಂದರಂ ಕಾಯ೯ಕ್ರಮ ಅನೇಕ ಕಲಾವಿದರ ಕಲಾಪ್ರೆತಿಬೆ ಬೆಳಕಿಗೆ ತರಲು ಸಹಕಾರಿಯಾಯಿತು.  ಕಾಯ೯ಕ್ರಮವನ್ನು ಹಿರಿಯ ಲೇಖಕಿ ರಾಜಲಕ್ಷ್ಮಿ ಗೋಪಾಲಕೃಷ್ಣ, ಅಂಬೆಕಲ್ ಸುಶೀಲಾ ಕುಶಾಲಪ್ಪ, ಅಲೆಮಾಡ ಚಿತ್ರಾ ನಂಜಪ್ಪ ದೀಪಬೆಳಗಿಸಿ ಉದ್ಘಾಟಿಸಿದರು. ನಂತರ ಎರಡೂವರೆ ಗಂಟೆ ಕಾಲ ಅನೇಕ ಗಾಯಕ, ಗಾಯಕಿಯರು ದೇಶಭಕ್ತಿಗೀತೆ, ಭಜನೆ, ಕೀತ೯ನೆಗಳ ಮೂಲಕ ಕೇಳುಗರನ್ನು ಸಮ್ಮೋಹನಗೊಳಿಸಿದರು. ಶೃತಿ,  ಲಯ ತಂಡದ ವೀಣಾ ಹೊಳ್ಳ, ಮಮತಾ ಶಾಸ್ತ್ರೀ, ಗೀತಾ ಸಂಪತ್ ಕುಮಾರ್, ಸುಧಾ ಎಸ್ ಪ್ರಸಾದ್, ತನುಶ್ರೀ, ಆರತಿ, ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರಾದ ಬಿ.ಜಿ.ಅನಂತಶಯನ, ಹಿರಿಯ ಕಲಾವಿದ ಜಿ. ಚಿದ್ವಿಲಾ್ಸ್, ಪ್ರತಿಭಾ ಮಧುಕರ್, ಸ್ಕಂದ, ಸಪ್ನಾ ಮಧುಕರ್, ಕೆ.ಜಯಲಕ್ಷ್ಮಿ, ಕಾವ್ಯಶ್ರೀ ಕಪಿಲ್, ಸಂಧ್ಯಾಚಿದ್ವಿಲಾಸ್, ಚಿತ್ರಾ ನಂಜಪ್ಪ, ವಂದನಾ ಪೊನ್ನಪ್ಪ, ಜಾನಪದ ಯುವಬಳಗದ ಸಂಚಾಲಕಿ ಗಾಯತ್ರಿ ಚೆರಿಯಮನೆ, ಪ್ರತಿಮಾರೈ, ಚಿತ್ರಾ ಆಯ೯ನ್, ಪ್ರಜ್ಞ ಕಲಾಕೇಂದ್ರದ ಜೀವಿಕ, ಮಿನುಗು, ಲಷಿತ, ರೈ, ಪೂವಿ೯, ಸಂಜನಾ, ವಷ೯ ಬಿ.ಡಿ., ಇಂತರ, ಸಾಂಚಿ, ಮೀನಾಕ್ಷಿ, ರೇಷ್ಮಾ ಸೇರಿದಂತೆ ಅನೇಕರು ವಿಭಿನ್ನವಾದ ಹಾಡುಗಳ ಮೂಲಕ ಮನ ಸೆಳೆದರು. ಕಾಯ೯ಕ್ರಮ ಸಂಘಟಕ ಮಡಿಕೇರಿ ತಾಲ್ಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಹೆಚ್.ಟಿ. ಮಾತನಾಡಿ, ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರನ್ನು ಗಾಂಧಿ ಭವನದಲ್ಲಿಯೇ ಸ್ಮರಿಸಿಕೊಳ್ಳುವ ನಿಟ್ಟಿನಲ್ಲಿ ಅವರಿಗೆ ಇಷ್ಟವಾಗಿದ್ದ ಹಾಡುಗಳ ಮೂಲಕ ವಿಭಿನ್ನ ರೀತಿಯಲ್ಲಿ ಗೀತ ನಮನ ಸಲ್ಲಿಸಲಾಗುತ್ತಿದೆ. ಜತೆಗೇ ಮಡಿಕೇರಿಯಲ್ಲಿರುವ ಹಾಡುಗಾರರ ಸಮ್ಮಿಲನವೂ ಈ ಕಾಯ೯ಕ್ರಮದ ಮೂಲಕ ಆಗಿದೆ ಎಂದರು. ಜಿಲ್ಲಾ ವಾತಾ೯ ಮತ್ತು ಸಾವ೯ಜನಿಕ ಸಂಪಕ೯ ಇಲಾಖಾಧಿಕಾರಿ ಚಿನ್ನಸ್ವಾಮಿ, ಮಡಿಕೇರಿ ತಾಲ್ಲೂಕು ಜಾನಪದ ಪರಿಷತ್ ಖಜಾಂಚಿ ಎ.ಕೆ. ನವೀನ್, ಜಿಲ್ಲಾ ಜಾನಪದ ಪರಿಷತ್ ಪ್ರಧಾನ ಕಾಯ೯ದಶಿ೯ ಎಸ್.ಐ. ಮುನೀರ್ ಅಹಮ್ಮದ್, ಖಜಾಂಜಿ ಎಸ್.ಎಸ್.ಸಂಪತ್ ಕುಮಾರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ. ಪಿ. ರಮೇಶ್, ಸೇರಿದಂತೆ ಅನೇಕರು ಕಾಯ೯ಕ್ರಮದಲ್ಲಿ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.