Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಿಲ್ಲೆಯ ಸಮಗ್ರ ಮಾಹಿತಿ ಹೊಂದಿರುವ ಅಧಿಕೃತ ವೆಬ್‍ಸೈಟ್ ಬಿಡುಗಡೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಿಲ್ಲೆಯ ಸಮಗ್ರ ಮಾಹಿತಿ ಹೊಂದಿರುವ ಅಧಿಕೃತ ವೆಬ್‍ಸೈಟ್ ಬಿಡುಗಡೆ*

ಜನವರಿ 31, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.31 NEWS DESK :  ಕೊಡಗು ಪ್ರಯಾಣ ಅನುಭವಗಳಿಗಾಗಿ ವಿಶ್ವಾಸಾರ್ಹ ಮೂಲ- ಪ್ರವಾಸೋದ್ಯಮ ಇಲಾಖೆಯ ಅಧಿಕೃತ ವೆಬ್‍ಸೈಟ್ explorekodagu.com ನ್ನು ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ, ಕೊಡಗು ಜಿಲ್ಲೆಯ ಮುಖಾಂತರ ಕೊಡಗು ಪ್ರವಾಸೋದ್ಯಮದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜಿಲ್ಲೆಯ ಸಮಗ್ರ ಮಾಹಿತಿ ಹೊಂದಿರುವ ಅಧಿಕೃತ ವೆಬ್‍ಸೈಟ್ ಅನ್ನು ಕರ್ನಾಟಕ ಘನ ಸರ್ಕಾರದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಬಿಡುಗಡೆ ಮಾಡಿದರು. ಈ ವೆಬ್‍ಸೈಟ್‍ನಲ್ಲಿ ಕೊಡಗಿನ ಸುಂದರ ಪ್ರವಾಸಿ ತಾಣಗಳನ್ನು ಅತ್ಯುತ್ತಮವಾಗಿ ಪ್ರದರ್ಶಿಸಲು ಮೀಸಲಾಗಿರುವ ಸಮಗ್ರ ಆನ್‍ಲೈನ್ ವೇದಿಕೆಯಾಗಿದೆ ಎಂದು ಘೋಷಿಸಲು ಹೆಮ್ಮೆ ಸಂಗತಿಯಾಗಿದೆ. ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಗೆ ಉತ್ತಮ ಗುಣಮಟ್ಟದ, ವಿಶ್ವಾಸಾರ್ಹ ಪ್ರಯಾಣ ಅನುಭವವನ್ನು ಖಚಿತಪಡಿಸಿಕೊಳ್ಳಲು ವೆಬ್‍ಸೈಟ್‍ನಲ್ಲಿ ಅಧಿಕೃತವಾಗಿ ನೋಂದಾಯಿತ ಮತ್ತು ಪ್ರಮಾಣೀಕೃತ ಹೋಂಸ್ಟೇಗಳು, ರೆಸಾರ್ಟ್‍ಗಳು, ರೆಸ್ಟೋರೆಂಟ್‍ಗಳು, ಪ್ರವಾಸಿ ಮಾರ್ಗದರ್ಶಿಗಳು, ಟ್ಯಾಕ್ಸಿ ನಿರ್ವಾಹಕರು ಮತ್ತು ಜಿಲ್ಲೆಯ ಅಧೀಕೃತ ಕಾರ್ಯ ಕ್ರಮಗಳನ್ನು ಮಾತ್ರ ಪಟ್ಟಿ ಮಾಡಲಾಗಿರುತ್ತದೆ. ವೆಬ್‍ಸೈಟ್‍ನಲ್ಲಿ ಪ್ರಮುಖ ಲಕ್ಷಣಗಳು: ಜಿಲ್ಲೆಯ ನೋಂದಾಯಿತ ಹೋಂಸ್ಟೇಗಳು ಮತ್ತು ರೆಸಾರ್ಟ್‍ಗಳು ಕೊಡಗು ಪ್ರವಾಸೋದ್ಯಮ ಕಚೇರಿಯಲ್ಲಿ ಅಧಿಕೃತವಾಗಿ ನೋಂದಾಯಿಸಲಾದ ಹೋಂ-ಸ್ಟೇಗಳ ವಿವರಗಳನ್ನು ನೀಡಲಾಗಿದೆ. ಇದು ಪ್ರವಾಸಿಗರಿಗೆ ವಿಶ್ವಾಸಾರ್ಹ ಮತ್ತು ಸುರಕ್ಷಿತ ಅನುಭವವನ್ನು ಖಾತರಿಪಡಿಸುತ್ತದೆ.
FSSAI ಪ್ರಮಾಣೀಕೃತ ರೆಸ್ಟೋರೆಂಟ್ಗಳು: ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಪ್ರಮಾಣೀಕರಿಸಿದ ರೆಸ್ಟೋರೆಂಟ್ಗಳ ವಿವರವನ್ನು ಮಾತ್ರ ವೈಶಿಷ್ಟ್ಯಗೊಳಿಸಲಾಗುತ್ತದೆ.
ಅನುಮೋದಿತ ಪ್ರವಾಸಗಳು: ಪ್ರವಾಸೋದ್ಯಮ ನೀತಿ 2025-29 ಅಡಿಯಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಗುರುತಿಸಲ್ಪಟ್ಟ 778 ಪ್ರವಾಸಿ ತಾಣಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಗುರುತಿಸಿದ 23 ಪ್ರವಾಸಿ ತಾಣಗಳನ್ನು ಹಾಗೂ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ, ಕೊಡಗು ಜಿಲ್ಲೆಯ ಮುಖಾಂತರ ಗುರುತಿಸಿರುವ ಪ್ರವಾಸಿ ತಾಣಗಳನ್ನು ಮಾತ್ರ ಪಟ್ಟಿ ಮಾಡಲಾಗಿದೆ.
ಪ್ರವಾಸಿ ಮಾಹಿತಿ: explorekodagu.com  ಅಧಿಕೃತ ವೆಬ್‍ಸೈಟ್ ಕೊಡಗು ಜಿಲ್ಲೆಯಲ್ಲಿ ಭೇಟಿ ನೀಡಬೇಕಾದ ಪ್ರವಾಸಿ ತಾಣಗಳ ಬಗ್ಗೆ ಅಮೂಲ್ಯವಾದ ಮಾಹಿತಿಯನ್ನು ನೀಡುತ್ತದೆ. ಪ್ರಯಾಣಿಕರು ತಮ್ಮ ಪ್ರವಾಸವನ್ನು ಆಯೋಜಿಸಲು ಅಗತ್ಯವಿರುವ ಎಲ್ಲಾ ವಿವರಗಳನ್ನು ಹೊಂದಿದೆ.
ಪ್ರವಾಸಿ ಮಾರ್ಗದರ್ಶಿಗಳು: ಪ್ರವಾಸೋದ್ಯಮವನ್ನು ಅಭಿವೃದ್ಧಿ ಹಾಗೂ ಪ್ರಚಾರ ಪಡಿಸುವ ಉದ್ದೇಶದಿಂದ ಜಿಲ್ಲೆಯ ಪ್ರವಾಸಿ ತಾಣಗಳ ಐತಿಹಾಸಿಕ, ಧಾರ್ಮಿಕ, ಸಾಹಿತ್ಯಕ, ಸಾಂಸ್ಕøತಿಕ ಹಾಗೂ ಕಲಾವೈವಿಧ್ಯತೆಗಳನ್ನು ಒಳಗೊಂಡ ಸೃಜನಶೀಲತೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ದೇಶ/ವಿದೇಶಿ ಪ್ರವಾಸಿಗರಿಗೆ ನೀಡಲು ಅಂದರೆ ‘ಒಂದು ರಾಜ್ಯ-ಹಲವು ವಿಸ್ಮಯಗಳು’ ಎಂಬುದನ್ನು ಪರಿಚಯಿಸುವುದರ ಮೂಲಕ ಜಿಲ್ಲೆಯ ಸಮಗ್ರತೆಯ ಬಗ್ಗೆ ವಿವಿಧ ಆಯಾಮಗಳ ಮೂಲಕ ಪ್ರವಾಸಿಗರನ್ನು ಕೊಡಗು ಜಿಲ್ಲೆಗೆ ಸೆಳೆಯಲು ಸ್ಥಳೀಯ ಪ್ರವಾಸಿ ಸಂಪನ್ಮೂಲಗಳ ಬಗ್ಗೆ ಜ್ಞಾನ ಮತ್ತು ಅನುಭವವಿರುವ ಪ್ರವಾಸಿ ಮಾರ್ಗದರ್ಶಿಗಳಿಗೆ ಪ್ರವಾಸೋದ್ಯಮ ಕೇಂದ್ರ ಕಚೇರಿಯಿಂದ ತರಭೇತಿ ನೀಡಲಾದ ಪ್ರವಾಸಿ ಮಾರ್ಗದರ್ಶಿಗಳ ಪಟ್ಟಿಯನ್ನು ಮಾತ್ರ ಪ್ರಕಟಿಸಲಾಗುವುದು.
ಅನುಮೋದಿತ ಟೂರ್ ಅಂಡ್ ಟ್ರಾವೆಲ್ ಆಪರೇಟರ್‍ಗಳು: ಸುರಕ್ಷಿತ ಮತ್ತು ವಿಶ್ವಾಸರ್ಹ ಸಾರಿಗೆ ಆಯ್ಕೆಗಳನ್ನು ನೀಡುವ ಸ್ಥಾಪಿತ ಪ್ರಯಾಣ ಮಾರ್ಗಸೂಚಿಗಳನ್ನು ಪಾಲಿಸುವ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಾಯಿಸಿರುವ ಅನುಮೋದಿತ ಟೂರ್ ಅಂಡ್ ಟ್ರಾವೆಲ್ ಆಪರೇಟರ್ಗಳ ವಿವರಗಳನ್ನು ನೀಡಲಾಗಿದೆ.
ಅಧಿಕೃತ ಕಾರ್ಯಕ್ರಮಗಳು: ಜಿಲ್ಲಾಧಿಕಾರಿಗಳು ಕೊಡಗು ಜಿಲ್ಲೆಯವರು ಅನುಮೋದಿಸಲಾದ ಕಾರ್ಯಕ್ರಮಗಳನ್ನು ಮಾತ್ರ ವೆಬ್ಸೈಟ್ನಲ್ಲಿ ಪಟ್ಟಿ ಮಾಡಲಾಗುತ್ತದೆ, ಪ್ರಚಾರ ಮಾಡಲಾದ ಕಾರ್ಯಕ್ರಮಗಳ ವಿವರವು ಕಾನೂನುಬದ್ಧತೆ ಮತ್ತು ಗುಣಮಟ್ಟವನ್ನು ಖಾತರಿಪಡಿಸುತ್ತದೆ.
ಕಸ್ಟಮೈಸ್ ಗೊಳಿಸಬಹುದಾದ ಪಟ್ಟಿಗಳು: ಜಿಲ್ಲೆಯ ಹೋಂಸ್ಟೇಗಳು, ರೆಸಾರ್ಟ್‍ಗಳು, ರೆಸ್ಟೋರೆಂಟ್‍ಗಳು ಹಾಗೂ ಇತರೆ ಪ್ರವಾಸಿ ಉತ್ಪನ್ನಗಳನ್ನು ಮಾಲೀಕರು ಪೆÇೀಟೋ, ಪೆÇೀನ್ ನಂಬರ್ ಇತರೇ ಅಗತ್ಯ ವಿವರಗಳನ್ನು ತಮ್ಮ ಹಂತದಲ್ಲಿ ವೆಬ್‍ಸೈಟ್‍ಗೆ ಸೇರಿಸಲು ಅವಕಾಶ ಕಲ್ಪಿಸಲಾಗಿದೆ. ನಂತರ, ಬದಲಾವಣೆಗಳನ್ನು ಪ್ರವಾಸೋದ್ಯಮ ಇಲಾಖೆಯು ವೆಬ್‍ಸೈಟ್‍ನಲ್ಲಿ ಪ್ರದರ್ಶಿಸುವ ಮೊದಲು ಇಲಾಖೆಯಿಂದ ಪರಿಶೀಲಿಸಿ ವಿವರಗಳನ್ನು ಅನುಮೋದನೆಗೊಳಿಸಲಾಗುತ್ತದೆ.
exploreKodagu.com  ಕೊಡಗಿನ ಪ್ರವಾಸಿಗರು ಮತ್ತು ಸ್ಥಳೀಯ ವ್ಯವಹಾರಗಳಿಗೆ ವಿಶ್ವಾಸಾರ್ಹ, ಪಾರದರ್ಶಕ ಮತ್ತು ಸುಸಂಘಟಿತ ಸಂಪನ್ಮೂಲವನ್ನು ಒದಗಿಸುವ ಗುರಿಯನ್ನು ಹೊಂದಿದೆ, ಎಲ್ಲಾ ಪ್ರಯಾಣಿಕರಿಗೆ ಆನಂದದಾಯಕ ಮತ್ತು ಸುರಕ್ಷಿತ ಭೇಟಿಯನ್ನು ಖಚಿತಪಡಿಸಿಕೊಳ್ಳುವಾಗ ಸುಸ್ಥಿರ, ಜವಾಬ್ದಾರಿಯುತ ಹಾಗೂ ಪರಿಸರ ಪ್ರವಾಸೋದ್ಯಮ ವ್ಯವಸ್ಥೆಯನ್ನು ಬೆಳೆಸಲು ಸಹಕಾರಿಯಾಗಿದೆ.
ನೂತನ ಸಾಮಾಜಿಕ ಜಾಲತಾಣ ಉದ್ಘಾಟನೆ: ಜಿಲ್ಲೆಯ ಸಮಗ್ರ ಮಾಹಿತಿ ಹೊಂದಿರುವ ಅಧಿಕೃತ Facebook  ಹಾಗೂ instagram ಗಳನ್ನು ಉದ್ಘಾಟಿಸಿಲಾಯಿತು. https://www.instagram.com/kodagutourismofficial igsh=OGh2M25mb3A1a3Zyhttps://www.facebook.com/profile.php?id=61572412061627
ಹೆಚ್ಚಿನ ಮಾಹಿತಿಗೆ www.explorekodagu.com ಗೆ ಭೇಟಿ ನೀಡಿ ಅಥವಾ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ಪ್ರವಾಸೋದ್ಯಮ, ಅಭಿವೃದ್ಧಿ ಸಮಿತಿ, ಕೊಡಗು ಜಿಲ್ಲೆ, ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ 571201 ದೂರವಾಣಿ ಸಂಖ್ಯೆ: 08272-200519 ಅಥವಾ ಈ-ಮೇಲ್ ddkodagutourism@gmail.com ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರಾದ ಅನಿತಾ ಭಾಸ್ಕರ್ ಅವರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.30 NEWS DESK : ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಗೆ ಅಲ್ಲಲ್ಲಿ ಬೆಂಕಿ ರೋಗದ ಬಾಧೆ ಕಂಡುಬಂದಿದ್ದು,…

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.