
ಕುಶಾಲನಗರ ಫೆ.3 NEWS DESK : ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರ ಹುದ್ದೆಯಿಂದ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಯ ಹಿರಿಯ ಉಪನ್ಯಾಸಕ (ಎ- ದರ್ಜೆಯ ಅಧಿಕಾರ ಹುದ್ದೆ) ರಾಗಿ ಮುಂಬಡ್ತಿ ಹೊಂದಿದ ಮುಖ್ಯ ಶಿಕ್ಷಕಿ ಬಿ.ಎನ್.ಪುಷ್ಪ ಅವರಿಗೆ ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ಶಾಲೆಯ ಶಿಕ್ಷಕರು ಹಾಗೂ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪದಾಧಿಕಾರಿಗಳು ಪುಷ್ಪ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿ, ಗೌರವಿಸಿದರು. ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿ.ಟಿ.ಸೋಮಶೇಖರ್ ಮಾತನಾಡಿ, 25 ವರ್ಷಗಳ ಕಾಲ ಪ್ರೌಢಶಾಲಾ ಮುಖ್ಯ ಶಿಕ್ಷಕಿಯಾಗಿ ಉತ್ತಮ ಸೇವೆ ಸಲ್ಲಿಸಿರುವ ಪುಷ್ಪ ಮುಂದಿನ ದಿನಗಳಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತಷ್ಟು ಉತ್ತಮ ಸಾಧನೆ ಮಾಡಲಿ ಎಂದು ಶುಭಹಾರೈಸಿದರು. ಶಿಕ್ಷಕರ ಪರಿಶ್ರಮ ಮತ್ತು ವಿಶೇಷ ಕಾಳಜಿಯಿಂದ ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಪ್ರಗತಿ ಹಾಗೂ ಶಾಲೆಯ ಅಭಿವೃದ್ಧಿ ಸಾಧ್ಯ ಎಂದರು. ಸನ್ಮಾನಿತರಾದ ಬಿ.ಎನ್.ಪುಷ್ಪ ಮಾತನಾಡಿ ಶಾಲಾ ಶಿಕ್ಷಕರು ಮತ್ತು ಸಮುದಾಯದ ಸಹಭಾಗಿತ್ವದಲ್ಲಿ ಶಾಲೆಯ ಶೈಕ್ಷಣಿಕ ಪ್ರಗತಿ ಹಾಗೂ ಶಾಲೆಯ ಅಭಿವೃದ್ಧಿಗೆ ಸಹಕರಿಸಿದ ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸಿದರು. ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಪಿ.ನವೀನ್ ಕುಮಾರ್ ಮಾತನಾಡಿ, ಶಾಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಿರುವ ಪುಷ್ಪ ಅವರು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅವಿರತವಾಗಿ ಶ್ರಮಿಸುವ ಮೂಲಕ ತಮ್ಮ ಶಾಲೆಯನ್ನು ಮಾದರಿ ಪ್ರೌಢಶಾಲೆಯನ್ನಾಗಿ ರೂಪಿಸುವ ಮೂಲಕ ಮೇಲ್ಪಂಕ್ತಿ ಹಾಕಿದ್ದಾರೆ ಎಂದರು. ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ದಯಾನಂದ ಪ್ರಕಾಶ್, ಕೋಶಾಧಿಕಾರಿ ಎ.ಸಿ.ಮಂಜುನಾಥ್, ಡಯಟ್ ನ ನಿವೃತ್ತ ಹಿರಿಯ ಉಪನ್ಯಾಸಕಿ ಬಿ.ಬಿ.ಸಾವಿತ್ರಿ, ಹಾಸನ ಡಯಟ್ ಉಪನ್ಯಾಸಕಿ ಪ್ರೇಮ, ಎಸ್.ಡಿ.ಎಂ.ಸಿ.ಅಧ್ಯಕ್ಷೆ ಮುನೀರ, ಮಾಜಿ ಸದಸ್ಯ ಕೆ.ಎನ್.ದೇವರಾಜ್, ಸದಸ್ಯ ಕೆ.ಎನ್.ದೇವರಾಜ್, ಮುಖ್ಯ ಶಿಕ್ಷಕರಾದ ಎಸ್.ಎಸ್.ಗೋಪಾಲ,
ಜಫ್ರಿ ಡಿ’ಸೋಜ, ಪರಮೇಶ್ವರಪ್ಪ, ಕೆ.ಎಂ.ಐಯಚ್ಚು, ಬಾಲಕೃಷ್ಣ, ಟಿ.ಜಿ.ಪ್ರೇಮಕುಮಾರ್, ಹೆಚ್.ಎಸ್.ರಾಜೇಶ್ವರಿ, ತ್ರೀವೇಣಿ, ನಿವೃತ್ತ ಮುಖ್ಯ ಶಿಕ್ಷಕರಾದ ಬಿ.ಆರ್.ಕುಮಾರ್, ಎಚ್.ವೈ.ಶ್ರೀನಿವಾಸ್, ಜಿಲ್ಲಾ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ( ಗ್ರೇಡ್ -1) ದ ಅಧ್ಯಕ್ಷ ಡಾ ಸದಾಶಿವಯ್ಯ ಎಸ್.ಪಲ್ಲೇದ್, ನಿವೃತ್ತ ಶಿಕ್ಷಕರಾದ ಎಂ.ರಂಗಸ್ವಾಮಿ, ಉ.ರಾ.ನಾಗೇಶ್, ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಎಂ.ಎಂ.ಭಾರತಿ, ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರು ಇದ್ದರು.









