
ಮಡಿಕೇರಿ ಫೆ.3 NEWS DESK : ಭಾರತದ ಮಹಾನ್ ಸ್ವಾತಂತ್ರ್ಯ ಯೋಧ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128ನೇ ಜನ್ಮ ದಿನಾಚರಣೆ ಹಾಗೂ ನೇತಾಜಿ ಯುವಕ ಹಾಗೂ ಯುವತಿ ಮಂಡಲದ 33ನೇ ವಾರ್ಷಿಕೋತ್ಸವವು ತಾಳತ್ತಮನೆಯಲ್ಲಿ ಸಂಭ್ರಮದಿಂದ ಆಚರಿಯಲಾಯಿತು. ನೇತಾಜಿ ಯುವಕ ಹಾಗೂ ಯುವತಿ ಮಂಡಳಿ, ಮಡಿಕೇರಿ ನೆಹರು ಯುವ ಕೇಂದ್ರ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಡಗು ಮತ್ತು ಮಡಿಕೇರಿ ತಾಲೂಕು ಯುವ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ತಾಳತ್ತಮನೆಯ ಆಟದ ಮೈದಾನದಲ್ಲಿ ನಡೆದ ಕಾರ್ಯಕ್ರಮವನ್ನು ಆಕ್ಷಿರಿಚ್ ಮಾಲೀಕ ಪಿ.ಟಿ.ಉಣ್ಣಿ ಕೃಷ್ಣ ಉದ್ಘಾಟಿಸಿದರು. ನೇತಾಜಿ ಮಂಡಳಿಯ ಅಧ್ಯಕ್ಷ ಕೊಂಡಿರ ಪಿ.ಕಾರ್ಯಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮಡಿಕೇರಿ ತಾಲ್ಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ರಾಜೀವ್ ಲೋಚನ, ಮದೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೆಚ್.ಜೆ.ಯಾದವ್, ಉದ್ಯಮಿ ಮುದ್ಯನ ಕಿಶನ್, ಮದೆ ಪಂಚಾಯತ್ ಅಧ್ಯಕ್ಷೆ ವಿಮಲಾಕ್ಷಿ, ನಾಪೋಕ್ಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಕೆ.ಎ.ಇಸ್ಮಾಯಿಲ್, ಗುತ್ತಿಗೆದಾರರು ಹಾಗೂ ಮದೆ ಪಂಚಾಯತ್ ಸದಸ್ಯರುಗಳಾದ ಬಿ.ಆರ್.ಸದಾಶಿವ ರೈ ಹಾಜರಿದ್ದರು. ನೇತಾಜಿ ಯವಕ-ಯುವತಿ ಮಂಡಲದ ವಾರ್ಷಿಕೋತ್ಸವದ ಅಂಗವಾಗಿ ಸಂಜೆ ಯುವತಿ ಮಂಡಳಿ ಅಧ್ಯಕ್ಷರಾದ ಸಿಂಧು ಸುದೇವ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಎಂ.ಎಸ್. ಪೈ ಮಲೀಕ ಬಿ.ಕೆ.ಸೀತಾರಾಮ ರೈ, ಹೊಟೇಲ್ ಸಮುದ್ರ ಮಾಲಿಕ ಶರತ್ ಶೆಟ್ಟಿ, ಉದ್ಯಮಿ ಪ್ರಿಯಾ ದಿನೇಶ್ ಹಾಜರಿದ್ದರು. ಭಾರತದ ಮಹಾನ್ ಸ್ವಾತಂತ್ರ್ಯ ಯೋಧ ನೇತಾಜಿ ಸುಭಾಷ್ ಚಂದ್ರ ಬೋಸ್ ಇವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು. ನೇತಾಜಿ ಯವಕ ಮಂಡಲದ ವಾರ್ಷಿಕೋತ್ಸವದ ಅಂಗವಾಗಿ ಮೈಸೂರಿನ ನಾರಾಯಣ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ನಂತರ ಜಿಲ್ಲಾ ಮಟ್ಟದ ಪುರುಷರ ಹಾಗು ಮಹಿಳೆಯರ ಹಗ್ಗ ಜಗ್ಗಾಟ ನಡೆಸಲಾಯಿತು.
ಸಮಾರೋಪ ಸಮಾರಂಭ :: ಸಂಜೆ ತಾಳತ್ತಮನೆ ಶ್ರೀ ದುರ್ಗಾಭಗವತಿ ದೇವಸ್ಥಾನದ ಅಧ್ಯಕ್ಷ ಚೆಟ್ಟೋಳಿರ ಗಿರೀಶ್ ಅಪ್ಪಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಬಿ.ಸಿ. ದೊಡ್ಡೇಗೌಡ ಮಾತನಾಡಿದರು. ಆಡಳಿತ ಮಂಡಳಿ ಮಾಜಿ ಸದಸ್ಯ ಜೆ.ಜಿ.ಕಾವೇರಪ್ಪ, ಬೆಂಗಳೂರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಮದೆ ಗ್ರಾಮ ಪಂಚಾಯತ್ ಸದಸ್ಯೆ ಬಿ.ಎಸ್.ನವಿನ ಹಾಜರಿದ್ದರು. ಕಾರ್ಯಕ್ರಮದಲ್ಲಿ ಇದೇ ಸಂದರ್ಬದಲ್ಲಿ ವಿಶೇಷ ಸನ್ಮಾನಿತರಾಗಿ ಕುಮಾರಿ ಬಿ.ಕೆ. ಸಿಂಚನ, ಗೋಲ್ಡನ್ ಬುಕ್ ಆಫ್ ವಲ್ರ್ಡ್ ರೆಕಾರ್ಡ್ ಪ್ರಶಸ್ತಿ ವಿಜೇತೆ ಬಿ.ಕೆ. ಸಿಂಚನ ಹಾಗೂ ನೇತಾಜಿ ಯುವಕ ಮಂಡಲದ ಮಾಜಿ ಅಧ್ಯಕ್ಷ ಕೆ.ಆರ್.ಕುಶಾಲಪ್ಪ, ನೇತಾಜಿ ಯುವಕ ಮಂಡಲದ ಮಾಜಿ ಅಧ್ಯಕ್ಷೆ ಎ.ಆರ್.ನೇತ್ರಾವತಿ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ನಂತರ ಜಿಲ್ಲಾ ಮಟ್ಟದ ಹಗ್ಗ ಜಗ್ಗಾಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಅಲ್ಲದೇ ತಾಳತ್ತಮನೆಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು. ಸಂಜೆ ನಡೆದ ಅಂತರರಾಜ್ಯ ಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ನಡೆಸಲಾಯಿತು. ಫೈನಲ್ ಪಂದ್ಯಾವಳಿಯಲ್ಲಿ ಮಡಿಕೇರಿ ಭಗವತಿ ಫ್ರಂಡ್ಸ್ ಚಾಂಪಿಯನ್‍ಶಿಪ್ ಪಡೆದುಕೊಂಡರೆ, ಕಾಟಕೇರಿ ಭಗವತಿ ಕಾಫಿ ಲಿಂಕ್ಸ್ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. ಜಿಲ್ಲಾ ಮಟ್ಟದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು. ಹಾಜರಿದ್ದ ಎಲ್ಲಾ ಕ್ರೀಡಾ ಪಟುಗಳು ಹಾಗೂ ಸಾರ್ವಜನಿಕರಿಗೆ ಮಧ್ಯಾಹ್ನ ಮತ್ತು ರಾತ್ರಿಯ ಊಟದ ವ್ಯವಸ್ಥೆಯನ್ನು ಯುವಕ ಮಂಡಲದ ವತಿಯಿಂದ ಕಲ್ಪಿಸಲಾಗಿತ್ತು.










