
ನಾಪೋಕ್ಲು ಫೆ.3 NEWS DESK : ಚೇರಂಬಾಣೆ ಕೋಪಟ್ಟಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕಳೆದ 13 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಬಿ.ಎನ್.ಜಯಂತಿ ಅವರನ್ನು ಶಾಲೆಯ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಕರು ಹಾಗೂ ಆಡಳಿತ ಮಂಡಳಿ ಪದಾಧಿಕಾರಿಗಳು ಸನ್ಮಾನಿಸಿ, ಗೌರವಿಸಿದರು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮೋಹನ್ ಪೆರಾಜೆ, ಸದಸ್ಯರಾದ ಮೀನಾಕ್ಷಿ, ಶಾಂತಿ, ನಂದ ಕುಮಾರ್ ಹಾಗೂ ನಿವತ್ತ ಶಿಕ್ಷಕಿಯವರಾದ ಡಿ.ಕೆ.ಶಾಂತ, ದಾಯನ ಸರೋಜ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ನಿಶಾ ಸೇರಿದಂತೆ ಮಕ್ಕಳ ಪೋಷಕರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು. ಶಿಕ್ಷಕಿ ರೇಖಾ ಸ್ವಾಗತಿಸಿ, ನಿವೃತ್ತ ಶಿಕ್ಷಕಿಯ ಪರಿಚಯವನ್ನು ಮಾಡಿದರು. ವಿದ್ಯಾರ್ಥಿನಿ ಎನ್.ಪಿ.ಇಂಚರಾ ವಂದಿಸಿದರು.
ವರದಿ : ದುಗ್ಗಳ ಸದಾನಂದ.










