Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಫೆ.5 ರಿಂದ ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಧ್ಯಾಪಕರ ಕೌಶಲಾಭಿವೃದ್ಧಿ ಕಾರ್ಯಾಗಾರ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಫೆ.5 ರಿಂದ ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಧ್ಯಾಪಕರ ಕೌಶಲಾಭಿವೃದ್ಧಿ ಕಾರ್ಯಾಗಾರ

ಫೆಬ್ರವರಿ 3, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು ಫೆ.3 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲವಿಜ್ಞಾನ ಮತ್ತು ಮಾನವಿಕ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಅಧ್ಯಾಪಕ ಮಾರ್ಗದರ್ಶಕರಿಗೆ ಉತ್ತಮ ಬೋಧನಾ ಮತ್ತು ಕಲಿಕಾ ಅಭ್ಯಾಸಗಳು ಎನ್ನುವ ವಿಷಯದ ಬಗ್ಗೆ 3 ದಿನಗಳ ಅಧ್ಯಾಪಕರ ಕೌಶಲಾಭಿವೃದ್ಧಿ ಕಾರ್ಯಾಗಾರ ನಡೆಯಲಿದೆ. ಬೋಧಕರಲ್ಲಿ ನವೀನ ಶಿಕ್ಷಣ ಕೌಶಲ್ಯಗಳನ್ನು ಹೆಚ್ಚಿಸುವುದು, ಉತ್ತಮ ಬೋಧನಾ ಪದ್ದತಿಗಳನ್ನು ಅಳವಡಿಸುವ ಮೂಲಕ ಫಲಿತಾಂಶ ಅಧಾರಿತ ಶಿಕ್ಷಣದ ಪರಿಷ್ಕರಣೆ, ಪರಿಣಾಮಕಾರೀ ಮಾರ್ಗದರ್ಶನ ಕೌಶಲಗಳನ್ನು ಅಳವಡಿಸುವುದು, ಸಂವಾದಾತ್ಮಕ ಬೋಧನೆಗಾಗಿ ಡಿಜಿಟಲ್ ಉಪಕರಣಗಳು ಮತ್ತು ತಂತ್ರಜ್ಞಾನದ ಬಳಕೆ ಮತ್ತು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗಾಗಿ ಉತ್ತಮ ಅಭ್ಯಾಸಗಳನ್ನು ಉತ್ತೇಜಿಸುವುದು ಇದೇ ಮುಂತಾದ ವಿಷಯಗಳ ಬಗ್ಗೆ ಪದವಿಪೂರ್ವ, ಪದವಿ, ಇಂಜಿನಿಯರಿಂಗ್, ಬಿ.ಎಡ್ ಉಪನ್ಯಾಸಕರಿಗೆ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ಮಾಹಿತಿಯನ್ನು ನೀಡುವುದಕ್ಕಾಗಿ ಇದನ್ನು ಆಯೋಜಿಸಲಾಗಿದೆ. ಫೆ.5 ರಿಂದ 7ರ ವರೆಗೆ ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ಈ ಕಾರ್ಯಕ್ರಮವು ನಡೆಯಲಿದ್ದು, ರಾಜ್ಯಾದ್ಯಂತ ವಿವಿಧ ಕಾಲೇಜುಗಳ ಪ್ರಾಧ್ಯಾಪಕರು ಮತ್ತು ಪ್ರೌಢ ಶಾಲಾ ಶಿಕ್ಷಕರು ಪಾಲ್ಗೊಳ್ಳಲಿದ್ದಾರೆ. ಫೆ.5 ರಂದು ಬೆಳಿಗ್ಗೆ 9.30ಕ್ಕೆ ಉದ್ಘಾಟನೆ ನಡೆಯಲಿದ್ದು, ಮಂಗಳೂರು ವಿಶ್ವವಿದ್ಯಾನಿಲಯದ ಇಂಡಸ್ಟ್ರಿಯಲ್ ಕೆಮಿಸ್ಟ್ರಿ ವಿಭಾಗದ ಪ್ರೊಫೆಸರ್ ಡಾ.ಸರೋಜಿನಿ.ಬಿ.ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಾರೆ. ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿ ಶ್ರೀ.ಮುರಳೀಧರ ಭಟ್.ಬಿ ಸಮಾರಂಭದ ಅಧ್ಯಕ್ಷತೆ ವಹಿಸುತ್ತಾರೆ. ಫೆ.7 ರಂದು ಅಪರಾಹ್ನ 3 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಎಂಐಟಿ ಮಣಿಪಾಲದ ಅಸೋಸಿಯೇಟ್ ಪ್ರೊಫೆಸರ್ ಡಾ.ಮಹೇಶ.ಎಂ.ಜಿ ಸಮಾರೋಪದ ನುಡಿಗಳನ್ನಾಡಲಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ಶ್ರೀಮತಿ.ವಿದ್ಯಾ.ಆರ್.ಗೌರಿ ಅಧ್ಯಕ್ಷತೆ ವಹಿಸಲಿದ್ದಾರೆ. ಎಂಐಟಿ ಮಣಿಪಾಲದ ಡಾ.ಮಹೇಶ.ಎಂ.ಜಿ, ಎಸ್‍ಜೆಇಸಿ ಮಂಗಳೂರಿನ ಡಾ.ವಿಜಯ್.ವಿ.ಎಸ್, ವಿವೇಕಾನಂದ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಡಾ.ಮಾಧವ ಭಟ್.ಎಚ್, ದೇರಳಕಟ್ಟೆಯ ಯೇನಪೋಯ ಮೆಡಿಕಲ್ ಕಾಲೇಜಿನ ಡಾ.ರವಿಚಂದ್ರ.ಎಸ್.ಕಾರ್ಕಳ್, ಆರ್ಟ್ ಆಫ್ ಲಿವಿಂಗ್‍ನ ತರಬೇತುಗಾರ್ತಿ ಶ್ರೀಮತಿ ಶರಾವತಿ ರವಿನಾರಾಯಣ, ಆಪ್ತ ಸಲಹೆಗಾರ್ತಿ ಶ್ರೀಮತಿ ಪ್ರೀತಿ ಶೆಣೈ, ವಿಸಿಇಟಿ ಪುತ್ತೂರಿನ ಎಲೆಕ್ಟ್ರಾನಿಕ್ಸ್ ವಿಭಾಗದ ಡಾ.ಮಹಾಂತೇಶ್ ಚೌಧರಿ ಮತ್ತು ಎಐಎಂಎಲ್ ವಿಭಾಗ ಮುಖ್ಯಸ್ಥ ಡಾ.ಗೋವಿಂದರಾಜ್.ಪಿ ಸಂಪನ್ಮೂಲ ವ್ಯಕ್ತಿಗಳಾಗಿದ್ದು ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ. ಕಾಲೇಜಿನ ಮೂಲವಿಜ್ಞಾನ ವಿಭಾಗ ಮುಖ್ಯಸ್ಥ ಪ್ರೊ.ರಮಾನಂದ ಕಾಮತ್ ಅವರ ಮುಂದಾಳುತ್ವದಲ್ಲಿ ನಡೆಯುವ ಈ ಕಾರ್ಯಾಗಾರದಲ್ಲಿ ಭಾಗವಹಿಸುವುದಕ್ಕಾಗಿ ಮತ್ತು ಹೆಚ್ಚಿನ ಮಾಹಿತಿಗೆ ಕಾರ್ಯಕ್ರಮ ಸಂಯೋಜಕರಾದ ಡಾ.ಶ್ವೇತಾಂಬಿಕ.ಪಿ 9449215221 ಅಥವಾ ಪ್ರೊ.ಲತಾ ಮೋಹನ್ ಶೆಟ್ಟಿ 9164609576 ಅವರನ್ನು ಸಂಪರ್ಕಿಸಬಹುದು ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 16: ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ಸಭಾಂಗಣದಲ್ಲಿ ಆಯೋಜಿಸಲಾದ…

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.