Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 
  • *ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*
  • *ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*
  • *ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*
  • *ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*
  • *ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*
  • *ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*
  • *ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*
  • *ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*
  • *ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಾಕಿ ಉಳಿದ ಜಲಜೀವನ್ ಕುಡಿಯುವ ನೀರಿನ ಯೋಜನೆ ಪೂರ್ಣಗೊಳಿಸಲು ಸಿದ್ಧತೆ : ವೀರೇಂದ್ರ ಕುಮಾರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಾಕಿ ಉಳಿದ ಜಲಜೀವನ್ ಕುಡಿಯುವ ನೀರಿನ ಯೋಜನೆ ಪೂರ್ಣಗೊಳಿಸಲು ಸಿದ್ಧತೆ : ವೀರೇಂದ್ರ ಕುಮಾರ್*

ಫೆಬ್ರವರಿ 3, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.3 NEWS DESK : ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಜಲಜೀವನ್ ಮಿಷನ್ ಕುಡಿಯುವ ನೀರಿನ ಸರಬರಾಜು ಯೋಜನೆಯ ಕಾಮಗಾರಿಗಳನ್ನು ಪೈಪ್ ಲೈನ್ ಅಳವಡಿಕೆ, ಟ್ಯಾಂಕ್ ನಿರ್ಮಾಣದ ಕಾಮಗಾರಿಗೆ ಕೊಳವೆ ಬಾವಿಯಿಂದ ನೀರು ಎತ್ತಲು ವಿದ್ಯುತ್ ಸೌಲಭ್ಯಗಳ ಜೋಡಣೆ ಸೇರಿದಂತೆ ಇತರೆ ಕಾಮಗಾರಿಗಳನ್ನು ಸಧ್ಯದಲ್ಲಿ ಪೂರ್ಣಗೊಳಿಸಲಾಗುವುದು ಎಂದು ತಾಲ್ಲೂಕು ಗ್ರಾಮಾಂತರ ಕುಡಿಯುವ ನೀರು ಸರಬರಾಜು ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ವೀರೇಂದ್ರ ಕುಮಾರ್ ತಿಳಿಸಿದ್ದಾರೆ. ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸಣ್ಣ ಪ್ರಮಾಣದ ಬಾಕಿ ಉಳಿದ ಕಾಮಗಾರಿಯನ್ನು ವೀಕ್ಷಣೆ ಮಾಡಿ ಮಾತನಾಡಿದ ಅವರು ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಗುತ್ತಿಗೆದಾರನಿಗೆ ಸೂಚನೆ ನೀಡಿದರು. ಗ್ರಾಮಾಂತರ ಪ್ರದೇಶದ ಜಲಜೀವನ್ ಕುಡಿಯುವ ನೀರಿನ ಸರಬರಾಜು ಮಾಡುವ ಯೋಜನೆಯು ಇದೀಗ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಚುರುಕುಗೊಂಡಿದೆ.  ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಮುಖೇನ ಕಳೆದ ಮೂರು ವರ್ಷಗಳಿಂದ ಗ್ರಾಮಾಂತರ ಪ್ರದೇಶಗಳಿಗೆ ಕುಡಿಯುವ ನೀರನ್ನು ಒದಗಿಸುವ ಮಹತ್ವಾಕಾಂಕ್ಷೆಯ ಯೋಜನೆಯು ಇದ್ದಾಗಿದ್ದು, ಇದರ ಅನ್ವಯ ತಾಲ್ಲೂಕು ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಪಂಚಾಯತಿ ಆಡಳಿತ ಮಂಡಳಿಯ ಸಹಕಾರದೊಂದಿಗೆ ಗ್ರಾಮದ ಎಲ್ಲಾ ಕುಟುಂಬಗಳಿಗೆ ಸಮರ್ಪಕವಾಗಿ ಕುಡಿಯುವ ನೀರನ್ನು ಒದಗಿಸುವ ಈ ಯೋಜನೆ ಇದೀಗ ಸಂಪೂರ್ಣವಾಗಿ ಪೂರ್ಣಗೊಳಿಸುವಲ್ಲಿ ಸಂಬಂಧಿಸಿದ ಇಲಾಖೆಯು ಕಾರ್ಯೋನ್ಮಖರಾಗಿರುತ್ತದೆ ಎಂದು ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳುವ ಬಗ್ಗೆ ಮಾಹಿತಿಯನ್ನು ನೀಡಿದರು. ತಾಲ್ಲೂಕು ವ್ಯಾಪ್ತಿಯಲ್ಲಿ ಇಲಾಖೆಯ ನಿಯಮಾನುಸಾರ ಕಾಮಗಾರಿ ಕ್ರಿಯಾ ಯೋಜನೆಯ ಅನುಗುಣವಾಗಿ ಕಾಮಗಾರಿಯನ್ನು ಹಂತ ಹಂತವಾಗಿ ಕೈಗೊಳ್ಳುವ ಮೂಲಕ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಮನೆ ಮನೆಗೆ ಕುಡಿಯುವ ನೀರಿನ ಸರಬರಾಜು ಮಾಡುವ ಪೈಪ್ ಲೈನ್ ವ್ಯವಸ್ಥೆ, ಮತ್ತು ಅದಕ್ಕೆ ಸಂಬಂಧಿಸಿದ ದೊಡ್ಡ ಪ್ರಮಾಣದ ನೀರು ಸಂಗ್ರಹ ಟ್ಯಾಂಕ್ ಗಳ ನಿರ್ಮಾಣ ಕಾರ್ಯವು ಸಹ ಅಯಾ ವ್ಯಾಪ್ತಿಯ ಗ್ರಾಮಗಳಲ್ಲಿ ಪೂರ್ಣಗೊಂಡು ಈಗಾಗಲೇ ಕೊಳವೆ ಬಾವಿಯಿಂದ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ವಾರ್ಡ್ ಗಳಿಗೆ ಸಮರ್ಪಕವಾಗಿ ಕುಡಿಯುವ ನೀರನ್ನು ಒದಗಿಸುವ ಕಾರ್ಯ ನಡೆಯಲಿದೆ ಎಂದರು. ಗ್ರಾಮಾಂತರ ಕುಡಿಯುವ ನೀರು ಸರಬರಾಜು ಇಲಾಖೆಯವರು ಇನ್ನೂ ಬಾಕಿ ಇರುವ ಜಲಜೀವನ್ ಮಿಷನ್ ಕುಡಿಯುವ ನೀರಿನ ಯೋಜನೆಯ ಅನುಷ್ಠಾನದ ನಿಯಮಾನುಸಾರ ಎಲ್ಲಾ ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸುವ ಕಾರ್ಯ ವನ್ನು ಚುರುಕುಗೊಳಿಸುವಂತೆ ಅನೇಕ ಗ್ರಾಮ ಸಭೆಗಳಲ್ಲಿ ಚರ್ಚೆಗಳು ನಡೆದಿದ್ದವು. ಅದರಂತೆ ಗ್ರಾಮೀಣ ಕುಡಿಯುವ ನೀರಿನ ಸರಬರಾಜು ಇಲಾಖೆಯ ಅಧಿಕಾರಿ ವರ್ಗದವರ ಸೂಚನೆಯ ಮುಖೇನ ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವ ಉದ್ದೇಶದಿಂದ ಇಲಾಖೆಯ ನಿಯಮಾನುಸಾರ ಟೆಂಡರ್ ಪ್ರಕ್ರಿಯೆಯ ಅಡಿಯಲ್ಲಿ ಕಾಮಗಾರಿಗಳು ಚುರುಕುಗೊಂಡಿವೆ.  ಈಗಾಗಲೇ ತಾಲ್ಲೂಕು ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತಿ ಗಳಲ್ಲಿ ಚಾಲನೆಗೊಂಡಿರುವ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆಯನ್ನು ಗ್ರಾಮಾಂತರ ಪ್ರದೇಶದ ಕುಟುಂಬಗಳಿಗೆ ಕುಡಿಯುವ ನೀರನ್ನು ಒದಗಿಸುವ ಕಾರ್ಯದಲ್ಲಿ ಸಂಬಂಧಿಸಿದ ಇಲಾಖೆಯವರು ಇದೀಗ ಮುಂದಾಗಿರುವುದು ಅಲ್ಲದೆ ವಿವಿಧ ಕಾಮಗಾರಿಗಳು ಚುರುಕುಗೊಂಡಿವೆ ಎಂದು ಹೇಳಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕೆದಮುಳ್ಳುರು–ತೋರ–ಪಾಲಂಗಾಲ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ* 

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಭತ್ತದ ಬೆಳೆಗೆ ಬೆಂಕಿ ರೋಗ : ತುರ್ತು ನಿರ್ವಹಣೆಗೆ ಕೃಷಿ ಇಲಾಖೆ ಮನವಿ*

ಸೆಪ್ಟೆಂಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.30 NEWS DESK : ಮುಂಗಾರು ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಗೆ ಅಲ್ಲಲ್ಲಿ ಬೆಂಕಿ ರೋಗದ ಬಾಧೆ ಕಂಡುಬಂದಿದ್ದು,…

*ಕೊಡ್ಲಿಪೇಟೆಯಲ್ಲಿ ಕರವೇ ನೂತನ ಸದಸ್ಯರ ಸೇರ್ಪಡೆ : ಪದಗ್ರಹಣ*

ಸೆಪ್ಟೆಂಬರ್ 30, 2026

*ಆರ್ಥಿಕ ವಂಚನೆ ಮತ್ತು ಸೈಬರ್ ಬೆದರಿಕೆಗಳಿಂದ ಎಚ್ಚರ ವಹಿಸಿ: ಠಾಣಾಧಿಕಾರಿ ಕಾಳೇಗೌಡ; ತಿತಿಮತಿಯಲ್ಲಿ ಆರ್ಥಿಕ ಜಾಗೃತಿ ಸಾಕ್ಷರತಾ ಸಂವಾದ ಕಾರ್ಯಕ್ರಮ*

ಸೆಪ್ಟೆಂಬರ್ 30, 2026

*ಕೊಡಗಿನ ಶಮಾ ಅಪ್ಪಣ್ಣ ‘ಮಿಸೆಸ್ ಇಂಡಿಯಾ ವುಮೆನ್ ಆಫ್ ಸಬ್‌ಸ್ಟೆನ್ಸ್’ ಜಯಭೇರಿ*

ಸೆಪ್ಟೆಂಬರ್ 30, 2026

*ವಿರಾಜಪೇಟೆಯಲ್ಲಿ ಅಕ್ಷರ ದಾಸೋಹ ನೌಕರರ ತಾಲೂಕು ಸಮ್ಮೇಳನ ಯಶಸ್ವಿ; ಮಹಿಳಾ ಕಾರ್ಮಿಕರ ಹಕ್ಕುಗಳಿಗಾಗಿ ಧ್ವನಿ, ನೂತನ ಪದಾಧಿಕಾರಿಗಳ ಆಯ್ಕೆ*

ಸೆಪ್ಟೆಂಬರ್ 30, 2026

*ಸ್ವಉದ್ಯೋಗ ಮಾಹಿತಿ ಕಾರ್ಯಕ್ರಮ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗದ ಹಲವು ಅವಕಾಶಗಳ ಪರಿಚಯ*

ಸೆಪ್ಟೆಂಬರ್ 30, 2026

*ಕ್ರಿಶ್ಚಿಯನ್ ಮುಖಂಡರಿಂದ ಸಚಿವ ಯು.ಟಿ. ಖಾದರ್ ಭೇಟಿ*

ಸೆಪ್ಟೆಂಬರ್ 30, 2026

*ಕೊಡಗು ಜೆಡಿಎಸ್ ಸಂಘಟನೆ ಬಲವರ್ಧನೆಗೆ ಒತ್ತು: ಕುಮಾರಸ್ವಾಮಿಗೆ ಮನವಿ*

ಸೆಪ್ಟೆಂಬರ್ 30, 2026

*ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಶಾಸಕ ಡಾ. ಮಂತರ್ ಗೌಡ ಸ್ವಾಗತ: ರೈತರ ಪರ ಇರುವ ಭರವಸೆ*

ಸೆಪ್ಟೆಂಬರ್ 30, 2026

*ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ*

ಸೆಪ್ಟೆಂಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.