


ಮಡಿಕೇರಿ ಫೆ.5 NEWS DESK : ಕರ್ನಾಟಕ ಸರ್ಕಾರ ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೈಮಗ್ಗ ಮತ್ತು ಜವಳಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಕೊಡವ ಸಮಾಜದ ಪ್ರಾಂಗಣದಲ್ಲಿ ಫೆ.11 ರವರೆಗೆ ನಡೆಯಲಿರುವ ಕಾವೇರಿ ವಸ್ತ್ರಸಿರಿ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಕೊಡಗು ಜಿಲ್ಲಾ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘದ ಅಧ್ಯಕ್ಷ ಸಿ.ವಿ.ನಾಗೇಶ್ ಚಾಲನೆ ನೀಡಿದರು. ಈ ಸಂದರ್ಭ ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎಸ್.ಗುರುಸ್ವಾಮಿ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. ಸುಮಾರು 25 ಕ್ಕೂ ಹೆಚ್ಚು ಮಳಿಗೆ ಇದೆ.










