Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪುತ್ತೂರಿನಲ್ಲಿ ಅಧ್ಯಾಪಕರ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ : ಕಲಿಕೆ ಒಂದು ನಿರಂತರ ಪ್ರಕ್ರಿಯೆ : ಡಾ.ಸರೋಜಿನಿ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಪುತ್ತೂರಿನಲ್ಲಿ ಅಧ್ಯಾಪಕರ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ : ಕಲಿಕೆ ಒಂದು ನಿರಂತರ ಪ್ರಕ್ರಿಯೆ : ಡಾ.ಸರೋಜಿನಿ

ಫೆಬ್ರವರಿ 5, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು ಫೆ.5 NEWS DESK : ಕಲಿಕೆ ಒಂದು ನಿರಂತರ ಪ್ರಕ್ರಿಯೆ. ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ವಿಷಯಗಳನ್ನು ಕಲಿತುಕೊಂಡು ಅದನ್ನು ವಿದ್ಯಾರ್ಥಿಗಳಿಗೆ ಬೋಧಿಸುವುದು ಪ್ರತಿಯೊಬ್ಬ ಅಧ್ಯಾಪಕನ ಕರ್ತವ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಇಂಡಸ್ಟ್ರಿಯಲ್ ಕೆಮಿಸ್ಟ್ರಿ ವಿಭಾಗದ ಪ್ರೊಫೆಸರ್ ಡಾ.ಸರೋಜಿನಿ.ಬಿ.ಕೆ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಶ್ರೀರಾಮ ಸಭಾಭವನದಲ್ಲಿ ನಡೆಯುತ್ತಿರುವ 3 ದಿನಗಳ ಅಧ್ಯಾಪಕರ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸೂಕ್ಶ್ಮ ಸನ್ನಿವೇಶದಲ್ಲಿ ಸಮಾಜದಲ್ಲಿ ಬರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡುವುದು ಆವಶ್ಯಕವಾಗಿದೆ ಎಂದರು. ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದರ್ಶನವನ್ನು ನೀಡಿ ವಿದ್ಯೆಯ ಜತೆ ನೈತಿಕ ಶಿಕ್ಷಣವನ್ನೂ ನೀಡಿ ಎಂದರು. ಪ್ರಭಾರ ಪ್ರಾಂಶುಪಾಲ ಡಾ.ಶ್ರೀಕಾಂತ್ ರಾವ್ ಮಾತನಾಡಿ ಜ್ಞಾನವನ್ನರಸಿ ಬರುವ ವಿದ್ಯಾರ್ಥಿಗಳ ಭವಿಷ್ಯವನ್ನು ಪುನರ್ರಚಿಸುವ ಮಹತ್ತರ ಜವಾಬ್ಧಾರಿ ಶಿಕ್ಷಕರ ಮೇಲಿದೆ. ವಿದ್ಯಾರ್ಥಿಯ ಆಸಕ್ತಿಯನ್ನು ಗಮನಿಸಿ ಸರಿಯಾದ ಪಥವನ್ನು ನಿರ್ದೇಶಿಸಬೇಕು ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿ ಮುರಳೀಧರ ಭಟ್ ಬಂಗಾರಡ್ಕ ಮಾತನಾಡಿ ಪ್ರತಿಫಲಾಪೇಕ್ಷೆ ಇಲ್ಲದೆ ದುಡಿಯುವವನು ಗುರು. ವಿದ್ಯಾರ್ಥಿಗಳು ಕಲಿತು ಶ್ರೇಷ್ಟರಾದಾಗ ಸಂತೋಷಪಡುವವನು ಅಧ್ಯಾಪಕ ಅಂತಹ ಶ್ರೇಷ್ಟವಾದ ವೃತ್ತಿಯನ್ನು ಆಯ್ಕೆ ಮಾಡಿಕೊಂಡಿದ್ದೀರಿ ಎಂದರು. ಬದಲಾದ ಕಾಲಘಟ್ಟದಲ್ಲಿ ಎಲ್ಲರೂ ತಂತ್ರಜ್ಞಾನದೊಂದಿಗೆ ಹೆಜ್ಜೆ ಹಾಕುವ ಅನಿವಾರ್ಯತೆ ಇದೆ ಹಾಗಾಗಿ ಇಂತಹ ಕೌಶಲ್ಯಾಭಿವೃದ್ಧಿ ಕಾರ್ಯಾಗಾರದಲ್ಲಿ ಭಾಗವಹಿಸಿ ತಮ್ಮ ಜ್ಞಾನವನ್ನು ಒರೆಗೆ ಹಚ್ಚಬೇಕಾಗುತ್ತದೆ ಎಂದರು. ಸಂಪನ್ಮೂಲ ವ್ಯಕ್ತಿ ವಿವೇಕಾನಂದ ಪದವಿ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಡಾ.ಮಾಧವ ಭಟ್, ಸಲಹಾ ಸಮಿತಿಯ ಸದಸ್ಯ ಸಂತ ಫಿಲೋಮಿನಾ ಕಾಲೇಜಿನ ವಿಶ್ರಾಂತ ಪ್ರೊಫೆಸರ್ ಡಾ.ಎ.ಪಿ.ರಾಧಾಕೃಷ್ಣ, ಮೂಲ ವಿಜ್ಞಾನ ವಿಭಾಗ ಮುಖ್ಯಸ್ಥ ಪ್ರೊ.ರಮಾನಂದ ಕಾಮತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೌಢ ಶಾಲೆ, ಪದವಿಪೂರ್ವ, ಪದವಿ, ಇಂಜಿನಿಯರಿಂಗ್ ಮತ್ತು ಬಿಎಡ್ ಕಾಲೇಜುಗಳ 73 ಉಪನ್ಯಾಸಕರು ಇದರಲ್ಲಿ ಭಾಗವಹಿಸುತ್ತಿದ್ದಾರೆ. ವಿದ್ಯಾರ್ಥಿನಿಯರಾದ ಜಾಹ್ನವಿ.ಡಿ.ಐ, ಅರುಂಧತಿ ಮತ್ತು ಶ್ರದ್ಧಾ ಪ್ರಾರ್ಥಿಸಿದರು. ಕಾರ್ಯಕ್ರಮ ಸಂಯೋಜಕಿ ಡಾ.ಶ್ವೇತಾಂಬಿಕ.ಪಿ ಸ್ವಾಗತಿಸಿ ಪ್ರಾಸ್ತಾವನೆಗೈದರು. ಇನ್ನೋರ್ವ ಸಂಯೋಜಕಿ ಪ್ರೊ.ಲತಾ ಮೋಹನ್ ಶೆಟ್ಟಿ ವಂದನಾರ್ಪಣೆಗೈದರು. ಪ್ರೊ.ಮಾದವಿ ಪೈ ಕಾರ್ಯಕ್ರಮ ನಿರ್ವಹಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 16: ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ಸಭಾಂಗಣದಲ್ಲಿ ಆಯೋಜಿಸಲಾದ…

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.