
ಮಡಿಕೇರಿ ಫೆ.6 NEWS DESK : ಕೊಡಗು ಜಿಲ್ಲಾ ಕಂದಾಯ ಇಲಾಖೆ ವತಿಯಿಂದ ಫೆ.8 ಮತ್ತು 9 ರಂದು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ರೆವಿನ್ಯೂ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ. ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ, ಕುಶಾಲನಗರ, ಪೊನ್ನಂಪೇಟೆ ಕಂದಾಯ ಇಲಾಖೆಗಳ 5 ತಂಡ ಹಾಗೂ ಜಿಲ್ಲಾಧಿಕಾರಿ ಮತ್ತು ಉಪವಿಭಾಗಾಧಿಕಾರಿ ಕಚೇರಿ ಸಿಬ್ಬಂದಿಗಳ 1 ತಂಡ ಸೇರಿದಂತೆ ಒಟ್ಟು 6 ತಂಡಗಳ ನಡುವೆ ಪ್ರಶಸ್ತಿಗಾಗಿ ಸೆಣಸಾಟ ನಡೆಯಲಿದೆ. 5 ಓವರ್‌ಗಳಿಗೆ ಪಂದ್ಯಾವಳಿ ನಡೆಯಲಿದ್ದು, ವಿಜೇತ ತಂಡಕ್ಕೆ ಆಕರ್ಷಕ ಬಹುಮಾನ ನೀಡಲಾಗುತ್ತದೆ. ಇದರೊಂದಿಗೆ ಉತ್ತಮ ಪ್ರದರ್ಶನ ತೋರಿದ ಆಟಗಾರರಿಗೆ ವೈಯುಕ್ತಿಕ ಬಹುಮಾನವನ್ನೂ ನೀಡಲಾಗುತ್ತದೆ ಎಂದು ಆಯೋಜಕರು ಮಾಹಿತಿ ನೀಡಿದ್ದಾರೆ.










