
ಮಡಿಕೇರಿ ಫೆ.7 NEWS DESK : ಬಿಟ್ಟಂಗಾಲದಲ್ಲಿರುವ ಕೊಡಗು ಹೆಗ್ಗಡೆ ಸಮಾಜದ ಕಟ್ಟಡ ಅಭಿವೃದ್ಧಿಯ ಮುಂದುವರಿದ ಕಾಮಗಾರಿಗೆ ಅನುದಾನ ಕೋರಿ ಕೊಡಗು ಹೆಗ್ಗಡೆ ಸಮಾಜದ ನಿಯೋಗವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ಎಸ್.ತಂಗಡಗಿ ಅವರನ್ನು ಭೇಟಿ ಮಾಡಿತು. ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಿದ ನಿಯೋಗದ ಪ್ರಮುಖರು, ತಮ್ಮ ಬೇಡಿಕೆಗಳ ಮನವಿಯನ್ನು ಸಚಿವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೊಡಗು ಹೆಗ್ಗಡೆ ಸಮಾಜದ ಅಧ್ಯಕ್ಷ ಪಡಿಞರಂಡ ಅಯ್ಯಪ್ಪ, ಉಪಾಧ್ಯಕ್ಷ ಕೊರಕುಟ್ಟಿರ ಸರಚಂಗಪ್ಪ, ನಿರ್ದೇಶಕ ಕೊರಂಡ ಪ್ರಕಾಶ್ ನಾಣಯ್ಯ, ಪ್ರಮುಖರಾದ ಪಡಿಞರಂಡ ಗಿರೀಶ್, ಕಾಕೇರ ರವಿ ಮತ್ತಿತರರು ಹಾಜರಿದ್ದರು.









